Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ನಮ್ಮ ಮೆಟ್ರೋ ರೈಲುಗಳಲ್ಲಿ ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಪ್ರಸಾರ ಮಾಡುವುದನ್ನು ಬಿಎಂಆರ್‌ಸಿಎಲ್ ನಿಷೇಧಿಸಿದೆ. ಇಯರ್ ಫೋನ್ ಬಳಸಿ ಸಂಗೀತ ಆಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ. ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಕೇಳುವುದರಿಂದ, ಇತರೆ ಪ್ರಯಾಣಕರಿಗೆ ಇದು ಕಿರಿಕಿರಿ ಉಂಟುಮಾಡುತ್ತದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ರಯಾಣಿಸುವಾಗ ಓದುತ್ತಿರುತ್ತಾರೆ. ಕೆಲವರು ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಇನ್ನು ಹಲವರು ಕೆಲಸಕ್ಕೆ ಸಂಬಂಧಿಸಿದಂತೆ ದೂರವಾಣಿಯಲ್ಲಿ ಮಾತನಾಡುತ್ತಾರೆ.ಹೀಗಾಗಿ ದೊಡ್ಡದಾಗಿ ಮ್ಯೂಸಿಕ್ ಹಾಕಿದ್ರೆ ಸಹಜವಾಗಿ ತೊಂದರೆ ಆಗುತ್ತೆ ಅಂತ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ ಪ್ರತಿನಿಧಿಗಳ ಸಮಸ್ಯೆಗಳನ್ನ ಆಲೀಸಿದ ಸಚಿವರು, ಸಮಸ್ಯೆಗಳನ್ನ ಒಂದೊಂದಾಗಿ ಬಗೆಹರಿಸುವುದಾಗಿ ಹೇಳಿದರು. ರಾಜ್ಯದಾದ್ಯಂತ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಪ್ರತಿನಿಧಿಗಳು ಇಂದು ಸಚಿವರನ್ನ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನ ಹೇಳಿಕೊಂಡರು. ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ದೊರೆಯುತ್ತಿಲ್ಲ. ಅಲ್ಲದೇ ಹೆಚ್ಚುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಇದೆ. ಇಲ್ಲಿಯವರೆಗೂ ಏಜನ್ಸಿಯವರಿಂದ ಪಿ. ಎಫ್ ಪಾವತಿಯಾಗಿಲ್ಲ. ಎಂದು ತಮ್ಮ ಕಷ್ಟಗಳನ್ನ ಹೇಳಿಕೊಂಡರು. ಸಮಸ್ಯೆ ಹೀಗೆ ಮುಂದುವರಿದರೆ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 800 ಸಿಬ್ಬಂದಿಗಳು ನಿರ್ಧರಿಸಿದ್ದಾರೆ ಎಂದರು. ಸಿಬ್ಬಂದಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ಸ್ಥಗಿತವಾಗಬಾರದು. ಏಜನ್ಸಿಯವರೊಂದಿಗೆ ಮಾತುಕತೆ ನಡೆಸಿ ಬಾಕಿ ವೇತನ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ…
ಮಹಾರಾಷ್ಟ್ರದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಿನುದ್ದೀನ್ ಅಲಿಯಾಸ್ ಶೇಕ್ (25), ಉಸ್ಮಾನ್ ರೆಹಮಾನ್ (28) ಹಾಗೂ ತನ್ನೀಶ್ (38)ನನ್ನು ಬಂಧಿಸಿ, 13 ಕೆ. ಜಿ. ಗಾಂಜಾ, 1 ಕೆ. ಜಿ ಹಶೀಷ್ ಹಾಗೂ 2 ಕಾರು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಜೂನ್ 21ರಂದು ಬಿಎಚ್ ಇಎಲ್ ಉದ್ಯಾನ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಗ್ರಾಹಕರಿಗೆ ಗಾಂಜಾ ಮಾರಲು ಯತ್ನಿಸುತ್ತಿದ್ದರು. ಬಂಧಿತರ ಪೈಕಿ ಒಬ್ಬ ಮಹಾರಾಷ್ಟ್ರದವ, ಆಗಾಗ ಊರಿಗೆ ಹೋಗಿ ಗಾಂಜಾ ಖರೀದಿಸಿ ಬಸ್ ಗಳಲ್ಲಿ ನಗರಕ್ಕೆ ತರುತ್ತಿದ್ದ. ಇತರೆ ಆರೋಪಿಗಳ ಜೊತೆ ಸೇರಿ ಗ್ರಾಹಕರಿಗೆ ಮಾರುತ್ತಿದ್ದ. ಅದರಿಂದ ಬಂದ ಹಣವನ್ನು ಮೂವರು ಹಂಚಿಕೊಳ್ಳುತ್ತಿದ್ದರು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಅಂತಾರಾಷ್ಟ್ರೀಯ ಶಸ್ತ್ರಚಿಕಿತ್ಸಾ ತಜ್ಞರ ದಿನವನ್ನು ಇದೇ 26ಕ್ಕೆ ಆಚರಿಸಲಾಗುವುದು. ಇದರ ಪ್ರಯುಕ್ತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 150 ರೋಗಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಶಸ್ತ್ರ ಚಿಕಿತ್ಸಕರ ಅಸೋಸಿಯೇಶನ್ (ಕೆಎಸ್ ಸಿಎಎಸ್‌ಐ) ಅಧ್ಯಕ್ಷ ಡಾ. ಎಚ್. ವಿ. ಶಿವರಾಮ್ ತಿಳಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಶಸ್ತ್ರಚಿಕಿತ್ಸಕರು ಕನಿಷ್ಠ ಒಬ್ಬರಿಗೆ ಉಚಿತ ಚಿಕಿತ್ಸೆ ನೀಡಿದರೆ ಹಲವಾರು ರೋಗಿಗಳಿಗೆ ಚಿಕಿತ್ಸೆ ದೊರೆಯಲಿದೆ. ಸದ್ಯ 150 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಿದ್ದೇವೆ. ಜತೆಗೆ 20 ಕಡೆ ಆರೋಗ್ಯ ಸೇವೆ ಒದಗಿಸಲಾಗುವುದು. ಸರ್ಜನ್‌ಗಳ ಆರೋಗ್ಯ ಸಹ ಮುಖ್ಯ ಆಗಿರುವುದರಿಂದ ಅವರಿಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಗೋಮಾಂಸ ಸಾಗಿಸುತ್ತಿದ್ದ ಸ್ಕಾರ್ಫಿಯೊ ವಾಹನ ಅಡ್ಡಗಟ್ಟಿ ಅಪಘಾತದ ನೆಪದಲ್ಲಿ ಸುಲಿಗೆ ಮಾಡಿದ್ದ ಆರೋಪದಡಿ ಪ್ರಶಾಂತ್ ಹಾಗೂ ಸೋಮುಗೌಡ ಅವರನ್ನು ಆರ್. ಎಂ. ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಬಂಧಿತ ಪ್ರಶಾಂತ್, ಕಾಂಗ್ರೆಸ್ ಪಕ್ಷದ ಸುಂಕದಕಟ್ಟೆ ವಾರ್ಡ್ ಸದಸ್ಯ. ಸಹಚರ ಸೋಮುಗೌಡ ಜೊತೆ ಸೇರಿ ಕೃತ್ಯ ಎಸಗಿದ್ದ’ ಎಂದು ಪೊಲೀಸರು ಹೇಳಿದರು. ಮಾಗಡಿ ಗಂಗೊಂಡನಹಳ್ಳಿಯ ಉಮೇಶ್ ಹಾಗೂ ಖಾಜಾ ಮೊಹಿನ್, ಸ್ಕಾರ್ಫಿಯೊ ವಾಹನದಲ್ಲಿ ಗೋಮಾಂಸ ಇಟ್ಟುಕೊಂಡು ಶಿವಾಜಿನಗರಕ್ಕೆ ಜೂನ್ 21ರಂದು ಹೊರಟಿದ್ದರು. ಇನ್ನೊವಾ ಕ್ರಿಸ್ಟಾ ವಾಹನದಲ್ಲಿ ಬಂದಿದ್ದ ಆರೋಪಿಗಳು, ಬೆಳಿಗ್ಗೆ 8. 30ರ ಸುಮಾರಿಗೆ ಎಂ. ಇ. ಐ ರಸ್ತೆಯಲ್ಲಿ ಸ್ಕಾರ್ಫಿಯೊ ವಾಹನ ಅಡ್ಡಗಟ್ಟಿದ್ದರು.’ ಮಾರ್ಗಮಧ್ಯೆ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದ್ದಿರಾ. ಇದರಿಂದ ವಾಹನ ಜಖಂಗೊಂಡಿದ್ದು, ದುರಸ್ತಿಗೆ ಹಣ ನೀಡಿ’ ಎಂದು ಆರೋಪಿಗಳು ಒತ್ತಾಯಿಸಿದ್ದರು. ಯಾವುದೇ ಅಪಘಾತ ಮಾಡಿಲ್ಲವೆಂದು ಉಮೇಶ್ ಹಾಗೂ ಖಾಜಾ ಮೊಹೀನ್ ಹೇಳಿದ್ದರು. ಸುಮ್ಮನಾಗದ ಆರೋಪಿಗಳು, ಇಬ್ಬರ ಮೇಲೆ ಹಲ್ಲೆ ಮಾಡಿದ್ದರು. ವಾಹನ ಸಮೇತ ಇಬ್ಬರನ್ನು ಅಪಹರಿಸಿ, 15…
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದರು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಸಿಎಂ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ಯೋಜನೆ ಜಾರಿಗೆ ಬರುತ್ತೆ. ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ. ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ ಎಂದು ಸಚಿವರಾದ ಲಕ್ಷ್ಮಿ…
ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿರುವ ಬೆಂಗಳೂರು ಪೊಲೀಸರು ನಗರದಾದ್ಯಂತ 30 ಎಮರ್ಜೆನ್ಸಿ SOS ಬೂತ್ ಗಳನ್ನು ನಿರ್ಮಾಣ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿರುವ ಬೆಂಗಳೂರು ಪೊಲೀಸರು ನಗರದಾದ್ಯಂತ 30 ಎಮರ್ಜೆನ್ಸಿ SOS ಬೂತ್ ಗಳನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗೆ 30 ಎಮರ್ಜೆನ್ಸಿ SOS ಬೂತ್ ನಿರ್ಮಾಣ ಮಾಡಲಾಗಿದ್ದು, ಈ ಬೂತ್ ನಲ್ಲಿರುವ ಕಿಯೋಸ್ಕ್ ನ ಎಸ್ ಒಎಸ್ ಬಟನ್ ಒತ್ತಿದರೆ ಹತ್ತೇ ನಿಮಿಷದಲ್ಲಿ ಪೊಲೀಸರು ಹಾಜರಿದ್ದು ಮಹಿಳೆಯರಿಗೆ ನೆರವು ನೀಡುತ್ತಾರೆ. ಮೊದಲ ಹಂತದಲ್ಲಿ ಪ್ರಯೋಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಹಿಳೆಯರಿಗಾಗಿ 30 ಸುರಕ್ಷತಾ ದ್ವೀಪಗಳನ್ನು ಪೊಲೀಸರು ಸ್ಥಾಪಿಸಿದ್ದಾರೆ. ‘ನಿರ್ಭಯಾ ಫಂಡ್’ ಯೋಜನೆಯಡಿ ಯೋಜನೆಗಾಗಿ ಇತರ 20 ಕಿಯೋಸ್ಕಳನ್ನು ಎರಡನೇ ಹಂತದಲ್ಲಿ ಕೊಳೆಗೇರಿಗಳು, ಮಾಲ್ಗಳ ಬಳಿ ಮತ್ತು ಐಟಿ ಕಂಪನಿಗಳಿರುವ ಪ್ರದೇಶಗಳಂತಹ ದುರ್ಬಲ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಸೇಫ್ಟಿ ಐಲ್ಯಾಂಡ್ ಬೂತ್ SOS ಅಥವಾ…
ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು. ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಶುಕ್ರವಾರ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಮನವಿ ಮಾಡಿತು. ‘ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ’ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ತಿಳಿಸಿದರು. ಈ ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ. ಎನ್. ನರಸಿಂಹಮೂರ್ತಿ ಅವರ ನೇತೃತ್ವದ ನಿಯೋಗದ ಜತೆಗೆ ಚರ್ಚಿಸಿದ ಬಳಿಕ ಈ ವಿಷಯ ತಿಳಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ. ಇ. ಆರ್. ಸಿ ವಿದ್ಯುತ್ ಬೆಲೆ ಏರಿಸಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಸರ್ಕಾರದ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಗಳು ಸ್ಪಷ್ಟಪಡಿಸಿದರು. ಹಿಂದಿನ ಸರ್ಕಾರ 11000 ಕೋಟಿ ರೂ. ಗಳ ಮೊತ್ತವನ್ನು ಎಸ್ಕಾಂ ಗಳಿಗೆ ಬಾಕಿ ಉಳಿಸಿದೆ. ಅವರು ಉಳಿಸಿ ಹೋದ ಹೊರೆಯನ್ನು ನಾವು ಭರಿಸಬೇಕಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಆಗಿರುವ ಅನಾಹುತಗಳನ್ನು ನಾವು ಸರಿಪಡಿಸಬೇಕಿದೆ ಎಂದು ಹೇಳಿದರು. ವಿದ್ಯುತ್ ದರ ಏರಿಸಿದ ಕೆ. ಇ. ಆರ್.…
ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ. ಟೆಸ್ಲಾ ಕಂಪನಿಯು ತನ್ನ ಉದ್ಯಮವನ್ನು ಭಾರತದಲ್ಲಿ ವಿಸ್ತರಿಸಲು ಇಷ್ಟಪಡುವುದಾದರೆ ಕರ್ನಾಟಕ ರಾಜ್ಯವು ಅದಕ್ಕೆ ಪ್ರಶಸ್ತ ತಾಣವಾಗಿದೆ ಎಂದು ಅವರು ಟ್ವಿಟ್ ಮಾಡಿದ್ದಾರೆ. ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೇ, ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ. ಈ ಕಂಪನಿಗಳನ್ನು ಮುನ್ನಡೆಸುತ್ತಿರುವ ಉದ್ಯಮಿ ಎಲಾನ್ ಮಸ್ಕ್ ಅವರು ಕರ್ನಾಟಕದಲ್ಲಿ ಯಾವುದೇ ಉದ್ಯಮ ಸ್ಥಾಪಿಸುವುದಾದರೆ ಸಹಕಾರ ಕೊಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ರಾಜ್ಯವು ತಂತ್ರಜ್ಞಾನ ಮತ್ತು ತಯಾರಿಕಾ ಕ್ಷೇತ್ರದಲ್ಲಿ 5.0 ಪ್ರಮಾಣೀಕೃತ ಮಟ್ಟ…