Author: admin

ಮಾಜಿ ಸಿಎಂ ಬೊಮ್ಮಾಯಿ ಮನೆ ಬಳಿ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿದ್ದ ಪುಡಿ ರೌಡಿಯನ್ನ ಆರ್ ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸಿಫ್ (22) ಬಂಧಿತ ಆರೋಪಿಯಾಗಿದ್ದು, ಚಾಕುವಿನಿಂದ ಸೆಕ್ಯುರಿಟಿ ಆಲ್ಬರ್ಟ್ ಮುಖಕ್ಕೆ ಗಂಭೀರವಾಗಿ ಹಲ್ಲೆ ನಡೆಸಿದ್ದ. ತನಿಖೆ ವೇಳೆ  ಆರೋಪಿಯ ಕರಾಳ ಮುಖ ಅನಾವರಣಗೊಂಡಿದ್ದು, ಸೆಕ್ಯುರಿಟಿಗಾರ್ಡ್ ಗಳಿಗೆ ಹಲ್ಲೆ ಮಾಡೋದೆ ಕಾಯಕ ಮಾಡ್ಕೊಂಡಿದ್ದ ಆರೋಪಿ, ಇಲ್ಲಿವರೆಗೂ ನಾಲ್ಕು ಬಾರಿ ಸೆಕ್ಯರಿಟಿ ಗಾರ್ಡ್ ಗಳಿಗೆ ಹಲ್ಲೆ ಮಾಡಿದ್ದಾನೆ. ಸಂಜಯನಗರ, ರಾಮಮೂರ್ತಿನಗರ ಸೇರಿದಂತೆ ನಾಲ್ಕು ಕಡೆ ಸೆಕ್ಯುರಿಟಿಗಳ ಮೇಲೆ ಹಲ್ಲೆ ನಡೆಸಿರೋದು ತನಿಖೆ ವೇಳೆ ಬಯಲಾಗಿದೆ. ಸಂಜಯ್ ನಗರದಲ್ಲಿ ಇತ್ತಿಚೆಗೆ ಸೆಕ್ಯೂರಿಟಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ಸಂಬಂಧ ಸಂಜಯ್ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಕಳೆದ 18ರಂದು ರಾತ್ರಿ ಆರ್ ಟಿ ನಗರದ ಎಂಎಲ್‌ಎ ಲೇಔಟ್ ನಲ್ಲಿ ಮತ್ತೆ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ ಸಂತ ಹತ್ತನೇ ಭಕ್ತಿನಾಥ ಚರ್ಚ್‌ನ ಮುಖ್ಯದ್ವಾರದ ಬಾಗಿಲಿಗೆ ಹಾಕಿದ್ದ ಬೀಗವನ್ನು ಸುತ್ತಿಗೆಯಿಂದ ಒಡೆದು ಒಳನುಗ್ಗಿದ ಆರೋಪಿಯೊಬ್ಬ ಬಲಿಪೀಠ (ಗರ್ಭಗುಡಿ), ವಚನಾಸ್ತಂಭ, ಮೇಣದ ಬತ್ತಿ ಹಾಗೂ ಹೂವಿನ ಕುಂಡಗಳನ್ನು ಧ್ವಂಸಗೊಳಿಸಿದ್ದಾನೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಮ್ಮನಹಳ್ಳಿಯ ಟಾಮ್ ಮ್ಯಾಥ್ಯು (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು ಮಾಹಿತಿ ತಿಳಿದ ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈತ ಕಳೆದ 20 ವರ್ಷದಿಂದ ಕಮ್ಮನಹಳ್ಳಿ ಭಾಗದಲ್ಲಿ ನೆಲೆಸಿದ್ದ. ನಾಲ್ಕು ವರ್ಷದಿಂದ ಹಿಂದೆ ಈತನ ತಂದೆ ಮನೆ ಬಿಟ್ಟು ಹೋಗಿದ್ದರು. ಆ ವಿಷಯವನ್ನು ಆರೋಪಿ ಭಾವನಾತ್ಮಕವಾಗಿ ಹಂಚಿಕೊಂಡು ದುಃಖಿತನಾಗಿದ್ದ. ಅದೇ ಕೊರಗಿನಲ್ಲಿದ್ದ. ಆತನ ತಾಯಿ ಇದೇ ಚರ್ಚ್‌ಗೆ ಬಂದು ನಿತ್ಯ ಪ್ರಾರ್ಥನೆ ಸಲ್ಲಿಸುತ್ತಿದ್ದರು. ತಾಯಿ ಎದುರು ‘ನಾನೇ ದೇವರು. ‘ ಎಂದು ಹೇಳಿಕೊಳ್ಳುತ್ತಿದ್ದ. ವಾಸ ಮಾಡುತ್ತಿದ್ದ ಕೊಠಡಿಯಲ್ಲೂ ಮದ್ಯದ ಬಾಟಲಿಗಳು ದೊರೆತಿವೆ. ಆರೋಪಿಯನ್ನು ವಶಕ್ಕೆ ಪಡೆದು ಎಸಿಪಿ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ’ ಎಂದು…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಣಗಳಲ್ಲಿ  ಸುಳ್ಳು ಸುದ್ದಿಗಳನ್ನ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ವಿಚಾರಗಳಿಗೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದೆ. ಇದೇ ನಿಟ್ಟಿನಲ್ಲಿ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರಾಜ್ಯ ಡಿಜಿ ಐಜಿಪಿ ಅಲೋಕ್ ಮೋಹನ್, ಕಮಿಷನರ್ ಬಿ. ದಯಾನಂದ್ ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾಮಾಜಿಕ ಜಾಲತಾಣದಲ್ಲಿ ಫೇಕ್ ನ್ಯೂಸ್ ಹಬ್ಬಿಸುವವರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು. ಸೈಬರ್ ವಂಚಕರ ಮೇಲೂ ಗಮನ ಹರಿಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಡಿಸಿಪಿ, ಎಸಿಪಿಗಳು ತಮ್ಮ ತಮ್ಮ ವ್ಯಾಪ್ತಿಯ ಒಂದು ಠಾಣೆಗಾದರೂ ಉನ್ನತ ಅಧಿಕಾರಿ ಭೇಟಿ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಸಿಬ್ಬಂದಿ ಬಂದೋಬಸ್ತ್  ಕಾರ್ಯದಲ್ಲಿದ್ದರೆ ಅಧಿಕಾರಿಗಳು ಸಂಪರ್ಕದಲ್ಲಿರಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ರಾಜ್ಯದಲ್ಲಿ ಅಧಿಕಾರ ಹಿಡಿದ ಬಳಿಕ, ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಬಿಜೆಪಿಯ ಒಬ್ಬೊಬ್ಬ ನಾಯಕರನ್ನು ಪರಿಗಣನೆಗೆ ತೆಗೆದುಕೊಂಡು ಉನ್ನತ ಹುದ್ದೆ ಸಂಪಾದಿಸಲು ಅಣಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಉಪ-ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ. ಕೆ. ಶಿವಕುಮಾರ್ ಕಳೆದ ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಿ. ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಸಮಯ ನಿಗದಿಪಡಿಸಿಕೊಂಡಿದ್ದಾರೆ. ಇಂದು ಸಂಜೆ 6 ಘಂಟೆಗೆ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸ ಆರ್‌ಟಿನಗರಕ್ಕೆ ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ನೀಡಲಿದ್ದು, ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮೆಜೆಸ್ಟಿಕ್‌ ನಲ್ಲಿ ಪರಿಚಯ ವಾಗಿದ್ದ ಮಹಿಳೆ, ಸಿನಿಮಾ ನೋಡಲು ಕರೆದೊಯ್ದು – 3 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾಳೆ’ ಎಂದು ಆರೋಪಿಸಿ ನಟರಾಜ್ (70) ಅವರು ಮಲ್ಲೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಕಂಪನಿಯೊಂದರ ನಿವೃತ್ತ ಉದ್ಯೋಗಿ ನಟರಾಜ್  ದೂರು ನೀಡಿದ್ದಾರೆ. ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೂರಿನ ವಿವರ: ‘ಜೂನ್ 12ರ ಮಧ್ಯಾಹ್ನ ಮೆಜೆಸ್ಟಿಕ್ ಬಳಿ ಹೋಗಿದ್ದೆ. ಅಲ್ಲಿಯೇ ಮಹಿಳೆಯೊಬ್ಬರ ಪರಿಚಯ ವಾಗಿತ್ತು. ನನ್ನ ಜೊತೆ ಸಲುಗೆಯಿಂದ ಮಾತನಾಡಿದ್ದಳು. ಹಣ ಕೊಟ್ಟರೆ ನನ್ನೊಂದಿಗೆ ಬರುವುದಾಗಿ ಹೇಳಿದ್ದಳು’ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ. ಇಬ್ಬರೂ ಸಿನಿಮಾ ನೋಡಲು ಮಂತ್ರಿ ಮಾಲ್‌ಗೆ ಹೋಗಿದ್ದೆವು. ನನ್ನ ಮೈ ಮೇಲೆ ಚಿನ್ನಾಭರಣವಿತ್ತು. ಮತ್ತು ಬರುವ ಔಷಧಿ ಬೆರೆಸಿದ್ದ ಪಾನೀಯವನ್ನು ಮಹಿಳೆ ನನಗೆ ಕುಡಿಸಿದ್ದಳು. ಇದಾದ ನಂತರ, ಚಿನ್ನಾಭರಣ ಬಿಚ್ಚಿಕೊಂಡು ಪರಾರಿಯಾಗಿದ್ದಾಳೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ವೃದ್ಧನ ಮೇಲೆ ಅನುಮಾನ: ‘ಮಂತ್ರಿ ಮಾಲ್ ಸಿನಿಮಂದಿರದಲ್ಲಿರುವ ಸಿ. ಸಿ. ಟಿ. ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ.…

Read More

ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ಸಂಘಟನೆ ಹಾಗೂ ಆಡಳಿತಾತ್ಮಕವಾಗಿ ಸಾಕಷ್ಟು ಬದಲಾವಣೆಗಳನ್ನು ತೆರೆಮರೆಯಲ್ಲಿ ಮಾಡಿಕೊಳ್ಳುತ್ತಿದ್ದು, ಇದರ ಮುಂದುವರೆದ ಭಾಗವಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣರಿಗೆ ಮಣೆ ಹಾಕುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈಗಾಗಲೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಕಣಕ್ಕಿಳಿದು ಹಿನ್ನಡೆ ಅನುಭವಿಸಿರುವ, ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ವಿ. ಸೋಮಣ್ಣರಿಗೆ ಖುದ್ದು ಅಮಿತ್ ಶಾ ಅವರೇ ಕರೆ ಮಾಡಿದ್ದು, ರಾಜ್ಯಾಧ್ಯಕ್ಷರಾಗುವಂತೆ, ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದೆರಡು ದಿನಗಳ ಹಿಂದೆ ಅಮಿತ್ ಶಾ ವಿ. ಸೋಮಣ್ಣ ರಿಗೆ ಕರೆ ಮಾಡಿದ್ದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದು, ರಾಜ್ಯಾಧ್ಯಕ್ಷರಾಗಿ ಎಂದಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ವಿ. ಸೋಮಣ್ಣ ಒಪ್ಪುತ್ತಾರಾ?  ಕಾದು ನೋಡಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ ಗೆ 5 ರೂಪಾಯಿ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿದೆ’ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ ತಿಳಿಸಿದರು. ಕೆಎಂಎಫ್ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿ- ಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಹಾಲಿನ ದರವನ್ನು ಹೆಚ್ಚಿಸುವಂತೆ ಬಹುದಿನಗಳಿಂದ ಒತ್ತಾಯಿಸುತ್ತಿವೆ. ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳ- ಲಾಗುವುದು’ ಎಂದರು. ರೈತರು ನೀಡುವ ಹಾಲಿಗೆ ಮುಂದಿನ ದಿನಗಳಲ್ಲಿ ಖಾಸಗಿಗಿಂತ ಹೆಚ್ಚಿನ ದರ ನೀಡುತ್ತೇವೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಸುಗಳಿಗೆ ಚರ್ಮಗಂಟು ರೋಗ ಬಂದ ನಂತರ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಕುಸಿದಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು, ಹಾಲಿನ ಉತ್ಪಾದನೆ ಹೆಚ್ಚುತ್ತಿದೆ ಎಂದರು. ಎಸ್ಎಎನ್ಎಫ್ ಮಾನದಂಡಕ್ಕೆ ಅನುಗುಣವಾಗಿ ಇಲ್ಲದ ಹಾಲನ್ನು ಖಾಸಗಿ ಡೇರಿಯವರು ಖರೀದಿಸುತ್ತಿದ್ದಾರೆ. ರೈತರಿಗೆ ಮುಂದಿನ ದಿನಗಳಲ್ಲಿ ಖಾಸಗಿಯವರಿಗಿಂತ ಹೆಚ್ಚಿನ ದರ ಕೊಡುತ್ತೇವೆ…

Read More

ಐಫೋನ್ ತಯಾರಿಸುವ ವಿಸ್ಟಾನ್ ಕಂಪನಿಗೆ ರಾಜ್ಯ ಮಟ್ಟದ ಪರಿಸರ ಪರಿಣಾಮ ನಿರ್ವಹಣಾ ಪ್ರಾಧಿಕಾರವು(ಎಸ್‌ಇಐಎಎ) 1.6 ಕೋಟಿ ರೂ. ದಂಡ ವಿಧಿಸಿದೆ. ಕಂಪನಿಯು ದಂಡದ ಮೊತ್ತವನ್ನು ಪಾವತಿಸಿದೆ. ತೈವಾನ್ ದೇಶದ ಐಫೋನ್ ತಯಾರಿಕಾ ಕಂಪನಿಗಳಲ್ಲಿ ಒಂದಾಗಿರುವ ವಿಸ್ಮಾನ್, ಬೆಂಗಳೂರಿನಲ್ಲಿ 650 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಉತ್ಪಾದನೆ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಿದೆ. ದೊಡ್ಡ ಮೊತ್ತವನ್ನು ನಗರದಲ್ಲಿ ಹೂಡಿಕೆ ಮಾಡಿದ್ದರೂ ಪರಿಸರ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ (ಎನ್‌ಸಿ) ಪಡೆದುಕೊಂಡಿರಲಿಲ್ಲ. ಹೀಗಾಗಿ ದಂಡ ವಿಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ವಿಸ್ಮಾನ್ ಕಂಪನಿಯನ್ನು ಟಾಟಾ ಗ್ರೂಪ್‌ ನವರು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ವೇಳೆ ಎನ್‌ಒಸಿ ಪಡೆದುಕೊಳ್ಳದೇ ಉತ್ಪಾದನೆ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಕಂಪನಿಯು ಮೇ 2023ರಲ್ಲಿ ದಂಡವನ್ನು ಪಾವತಿಸಿದೆ ಎಂದು ಮೂಲಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಸರ್ಕಾರದ ಮಹತ್ವಕಾಂಕ್ಷಿ ‘ಶಕ್ತಿ’ ಯೋಜನೆಯನ್ನು ವ್ಯವಸ್ಥಿತವಾಗಿ ನಡೆಯುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಸುಕುಮಾರ್ ಅವರು 16 ವಿಭಾಗೀಯ ನಿಯಂತ್ರಣಾಧಿಕಾರಿಗಳು, 83 ಘಟಕ ವ್ಯವಸ್ಥಾಪಕರೊಂದಿಗೆ ಮಂಗಳವಾರ ವೀಡಿಯೊ ಸಂವಾದದಲ್ಲಿ ಸೂಚನೆ ನೀಡಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿರ್ದೇಶನದಂತೆ  ‘ಜನಸಂದಣಿ ಹೆಚ್ಚಿರುವ 10 ಸ್ಥಳಗಳು, ಜಾತ್ರೆ, ಹಬ್ಬಗಳಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ ಗಳನ್ನು ನಿಯೋಜನೆ ಮಾಡಬೇಕು. ಗುರುತಿಸಿರುವ ಸ್ಥಳಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು. ಬಸ್‌ ಗಳ ನಿಯೋಜನೆ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಕ್ಕೆ ಅವಕಾಶ ನೀಡಬಾರದು. ನಿಗಮದ ಚಾಲನಾ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಕೇಂದ್ರ ಕಚೇರಿ ಹಿರಿಯ ಅಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು ಪ್ರತಿವಾರ ತಪ್ಪದೇ ವಿಭಾಗಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹೆಚ್ಚುವರಿ ಟ್ರಿಪ್‌ ಗಳ ವ್ಯವಸ್ಥೆ ಮಾಡಬೇಕು’ ಎಂದು ಸಂವಾದದಲ್ಲಿ ಸೂಚಿಸಿದರು. ನಮ್ಮತುಮಕೂರು.ಕಾಂನ…

Read More

ಜನಸಾಮಾನ್ಯರು, ವಿದ್ಯಾವಂತ ನಿರುದ್ಯೋಗಿಗಳು, ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಕೃಷಿಕರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸರ್ಕಾರ ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿವೆ. ಆದಕಾರಣ ಬಾಕಿಯಿರುವ ಎಲ್ಲ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಬೇಕು ಎಂದು ಸಂಸದ ಈರಣ್ಣ ಕಡಾಡಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಜೂ.22) ನಡೆದ ವಿವಿಧ ಬ್ಯಾಂಕ್ ಅಧಿಕಾರಿಗಳ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಸಮೀಕ್ಷೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು 16 ಗ್ರಾಮಗಳಲ್ಲಿ ಹೊಸ ಬ್ಯಾಂಕ್ ಶಾಖೆ ತೆರೆಯುವ ಕುರಿತು ಸಾರ್ವಜನಿಕರಿಂದ ಮನವಿಗಳು ಬಂದಿದ್ದು, ಈ ಬಗ್ಗೆ ಹಲವಾರು ಬಾರಿ ಚರ್ಚಿಸಿಲಾಗಿದೆ. ಆದರೆ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಕೂಡಲೇ ಹೊಸ ಶಾಖೆಗಳ ಪ್ರಾರಂಭಕ್ಕೆ ಕ್ರಮ ವಹಿಸಲು ಸೂಚಿಸಿದರು. ಗ್ರಾಮೀಣ ಪ್ರದೇಶದ ಜನರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇವುಗಳ ಬಗ್ಗೆ ಕಳೆದ ಬಾರಿ ಸಭೆ…

Read More