Author: admin

ಬೆಳಗಾವಿ: ಇಂದು ವಾಣಿಜ್ಯ ಉದ್ಯಮಿ ಕೈಗಾರಿಕಾ ಸಂಸ್ಥೆಗಳಿಂದ ಬೆಳಗಾವಿ ಕೈಗಾರಿಕಾ ಉದ್ಯಮ 30,000 ಕ್ಕಿಂತ ಹೆಚ್ಚು ನೋಂದಾಯಿತ ಕೈಗಾರಿಕೆಗಳು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಗಳು ಬಂದ್ ಮಾಡಿ, ನಗರದ ಬೋಗಾರ್ ವೆಸ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ವಿದ್ಯುತ್ ದರ ವಾಪಸ್ ಪಡೆಯಬೇಕೆಂದು ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೆ ಇ ಆರ್‌ ಸಿ ನಿರ್ಣಯ ಧನ್ವಯ ಶೇ. 30 ರಿಂದ 60 ರಷ್ಟು ವಿದ್ಯುತ್ ದರ ಏರಿಕೆಯಾಗಿದೆ, ಆದ್ದರಿಂದ ಸಣ್ಣ ಮತ್ತು ಮಾಧ್ಯಮ ಕೈಗಾರಿಕಗಳು ಸಂಕಟಕ್ಕೆ ಸಿಲುಕಿವೆ. ಹೀಗಾಗಿ ವಿದ್ಯುತ್ ಶುಲ್ಕ ಇಳಿಕೆ ಮಾಡುವಂತೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘಟನೆ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಸಂಘಟನೆಗಳು, ಕೈಗಾರಿಕಾ ಉದ್ಯಮಗಳ ಒಕ್ಕೂಟಗಳು, ಬೃಹತ್ ಪ್ರತಿಭಟನೆ ಭಾಗವಹಿಸಿ ಸಂಘಟನೆಗಳು ಎಲೆಕ್ಟ್ರಿಕಲ್ ಬೈಕ್ ಶವ ಶವಸಂಸ್ಕಾರ ರೂಪಕವಾಗಿ…

Read More

ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ IT & ESDM ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಅವರ ಅಹವಾಲು ಸ್ವೀಕರಿಸಿದ ನಂತರ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮಗಳ ಜತೆ ಮಾತನಾಡಿದರು. ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಕುಕಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ ಎಂದರು. ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರಕಾರ, ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತದೆ. ಎರಡು ಪಟ್ಟು, ಮೂರು ಪಟ್ಟು ಹೆಚ್ಚು ದರ ವಿಧಿಸಿರುವ…

Read More

ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಇಂದು  ಪಾವಗಡ  ತಾಲ್ಲೂಕಿನ ಲಿಂಗದಹಳ್ಳಿಯ ಗ್ರಾಮದಲ್ಲಿ ಅರ್ಹ ಫಲಾನುಭವಿ ರೈತರಿಗೆ 2023-24 ನೇ ಸಾಲಿನ ಉಚಿತ ಶೇಂಗಾ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿದರು. ಈ ವೇಳೆ ಜಿಲ್ಲಾ ಜಂಟಿಕೃಷಿ ನಿರ್ದೇಶಕರಾದ ರವಿ, ಕೆಪಿಸಿಸಿ ಸದಸ್ಯರಾದ ಕೆ.ಎಸ್. ಪಾಪಣ್ಣ,ತಾಲ್ಲೂಕು ಕೃಷಿ ಅಧಿಕಾರಿ ವಿಜಯ ಮೂರ್ತಿ, ಮುಖಂಡರುಗಳಾದ ಸಣ್ಣ ರಾಮರೆಡ್ಡಿ, ಕರಿಯಣ್ಣ, ಕರಿಯಪ್ಪ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಾರಣ್ಣ, ಮದನ್ ರೆಡ್ಡಿ, ಹನುಮೇಶ್, ಚಿಟ್ಟಿ, ವೇಣು ಗೋಪಾಲ್ ರೆಡ್ಡಿ ಸೇರಿ ಇನ್ನೂ ಮುಂತಾದ ಪ್ರಮುಖ ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪಾವಗಡ: ಮನಸ್ಸು ತೃಪ್ತಿಗಾಗಿ ಈ ಚಿಕ್ಕ ಅಳಿಲು ಸೇವೆ ಮಾಡಲಾಗುತ್ತದೆ ಎಂದು ಮಾತೃಶ್ರೀ ಸೇವಾ   ಸಂಸ್ಥಾಪಕ ಜಂಗಮರಹಳ್ಳಿ  ಲಕ್ಷ್ಮೀನಾರಾಯಣ ಎಚ್. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ  ಹೇಳಿದರು. ತಾಲೂಕಿನ  ಹರಿಹರಪುರ ಗ್ರಾಮದ  ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯ ಆವರಣದಲ್ಲಿ  ಮಾತೃಶ್ರೀ ಸೇವಾ ಸಂಸ್ಥೆ ವತಿಯಿಂದ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕ ಮತ್ತು ಇತರೆ ಸಲಕರಣೆಗಳನ್ನು  ನೀಡುವ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು ನಮ್ಮ ಮಾತೃಶ್ರೀ ಸೇವಾ ಸಂಸ್ಥೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ನೋಟ್ ಪುಸ್ತಕ ಮತ್ತು ಇತರೆ ಸಲಕರಣಗಳನ್ನು ವಿತರಿಸಲು ನಿರ್ಧರಿಸಿದ್ದು, ತಾಲೂಕಿನಿಂದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆದರೆ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಬಹುದೆಂದು ಎಂದ ಅವರು ಸಮಾಜ ಸೇವೆಗೆ ಎಲ್ಲರೂ ಒಗ್ಗೂಡಿ  ಎಂದು ಸಲಹೆ ನೀಡಿದರು. ಪ್ರತಿಯೊಬ್ಬರೂ ಸಮಾಜ ಸೇವಾ ಕಾರ್ಯಗಳಿಗೆ ಕೆಲ ಸಮಯವನ್ನು ಮೀಸಲಿಡಬೇಕು. ಉಳ್ಳವರು ಇಲ್ಲದವರಿಗೆ ಅಗತ್ಯ ನೆರವು…

Read More

ಬೆಳಗಾವಿ: ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಬಲ ಬಂದಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮಂಜೂರಾದ 3.52 ಕೋಟಿ ರೂ,ಗಳ ವೆಚ್ಚದಲ್ಲಿ ಗ್ರಾಮದ 1541 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಹಾಗೂ ನಳಮಾಪಕ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದಾಗಿನಿಂದ ಇಡೀ ಗ್ರಾಮೀಣ ಕ್ಷೇತ್ರವನ್ನು ತಮ್ಮ ಕುಟುಂಬ ಎನ್ನುವಂತೆ ನೋಡಿಕೊಳ್ಳುತ್ತಿದ್ದಾರೆ. ಮನೆ ಮಗಳಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಸಚಿವರಾಗಿರುವುದರಿಂದ ಇನ್ನಷ್ಟು ಬಲ ಬಂದಿದ್ದು, ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ. ನಾವೆಲ್ಲರೂ ಸೇರಿ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡೋಣ ಎಂದು ಅವರು ಹೇಳಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಭಾರತಿ ಹಿರೇಮಠ, ಗ್ರಾಮ ಪಂಚಾಯತಿ ಸದಸ್ಯರಾದ ಶೇಖರಗೌಡ ಪಾಟೀಲ, ಸುರೇಶ ಕಂಬಿ,…

Read More

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ಮಹತ್ವದ ತೀರ್ಪು ನೀಡಿದೆ. ಜತೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ, 417 ಅಡಿಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ. ವಿವಾಹವಾಗಿರುವವರು ವಿಚ್ಛೇದನ ಪಡೆಯದೇ ಇದ್ದಂಥ ಸಂದರ್ಭದಲ್ಲಿ ಮತ್ತೊಬ್ಬ ವ್ಯಕ್ತಿಯ ವಿರುದ್ಧ ವಿವಾಹವಾಗುವುದಾಗಿ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗದು ಎಂದು ಕೋರ್ಟ್ ಹೇಳಿದೆ. ವಿವಾಹಿತೆಯೊಂದಿಗೆ ಸ್ನೇಹ ಬೆಳೆಸಿ ಹಣಕಾಸಿನ ನೆರವು ನೀಡಿದ್ದ ಆರೋಪಿ ಪ್ರಜೀತ್, ವಿದೇಶಕ್ಕೆ ತೆರಳಿದ ನಂತರ ಸಂಪರ್ಕ ಕಡಿತಗೊಳಿಸಿದ್ದರು. ವಿವಾಹವಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತ ಮಹಿಳೆ ಆರೋಪಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ವಿವಾಹಿತೆಯು ಪತಿಯಿಂದ ವಿಚ್ಛೇದನ ಪಡೆದಿಲ್ಲ. ವಿಚ್ಛೇದನವಾಗದೇ ಮತ್ತೊಬ್ಬನನ್ನು ಪತಿಯಾಗಿ ಹೊಂದುವುದು ಸಾಧ್ಯವಿಲ್ಲ. ಹೀಗಾಗಿ ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಹೂಡುವಂತಿಲ್ಲ ಎಂದು ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಗೃಹಜ್ಯೋತಿ ಯೋಜನೆಗೆ ನಿನ್ನೆ(ಜೂನ್ 21) 1,89,945 ಗ್ರಾಹಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ 4 ದಿನಗಳಲ್ಲಿ ಒಟ್ಟು 10,85,320 ಗ್ರಾಹಕರಿಂದ ಅರ್ಜಿ ಸಲ್ಲಿಕೆಯಾಗಿದೆ. ಇಂದಿನಿಂದ ಸರಾಗವಾಗಿ ಜನರು ಅರ್ಜಿ ಸಲ್ಲಿಸಲು ಪ್ರತ್ಯೇಕ ಲಾಗಿನ್ ಐಡಿಯನ್ನು ವಿದ್ಯುತ್ ಕಚೇರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಪ್ರತ್ಯೇಕ ಲಿಂಕ್ ಮೂಲಕ ಬೆಸ್ಕಾಂ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಾಲಾ ವಿದ್ಯಾರ್ಥಿಗಳ ಬೆನ್ನಿನ ಭಾರ ಇಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಮಹತ್ವದ ಆದೇಶವನ್ನು ಹೊರಡಿಸಿದೆ. ಅದರ ಪ್ರಕಾರ 1 ಮತ್ತು 2 ನೇ ತರಗತಿ ಮಕ್ಕಳು 1. 5 ರಿಂದ 2 ಕೆಜಿ ತೂಕದವರೆಗೆ ಪುಸ್ತಕ ತೆಗೆದುಕೊಂಡು ಹೋಗಬಹುದು. ಅದೇ ರೀತಿ 3-5 ನೇ ತರಗತಿಯ ವಿದ್ಯಾರ್ಥಿಗಳು 2 ರಿಂದ 3 ಕೆಜಿ, 6 ರಿಂದ 8 ನೇ ತರಗತಿ ಮಕ್ಕಳು 3 ರಿಂದ 4 ಕೆಜಿ, 9-10 ನೇ ತರಗತಿ 4 ರಿಂದ 5 ಕೆಜಿಯಷ್ಟು ತೂಕವಿರುವ ಪುಸ್ತಕದ ಬ್ಯಾಗ್ ಅನ್ನು ತೆಗೆದುಕೊಂಡು ಹೋಗಲಷ್ಟೇ ಅನುಮತಿ ನೀಡಲಾಗಿದೆ. ಈ ಮೊದಲು ಸರಿಯಾದ ಟೈಮ್ ಟೇಬಲ್ ಪಾಲಿಸದೇ ಬೆನ್ನುಮುರಿಯುವಂತೆ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಶಿಕ್ಷಣ ಸಂಸ್ಥೆಗಳು ಹೊರಿಸುತ್ತಿದ್ದವು ಎಂಬ ಆರೋಪವಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾಂಗ್ರೆಸ್ನವರು ಕೇಂದ್ರ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ರೆ, ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೇ ಕಾರಣಕ್ಕೆ ಧಾರವಾಡ ಬಂದ್ ಗೆ ಬಿಜೆಪಿ ಕರೆ ಕೊಟ್ಟಿದ್ದು ಬಹುತೇಕ ಎಲ್ಲ ವಲಯಗಳಿಂದ ಬೆಂಬಲ ವ್ಯಕ್ತವಾಗಿದೆ. ವರ್ತಕರು, ಎಪಿಎಂಸಿ, ಬಟ್ಟೆ ವ್ಯಾಪಾರ, ಸ್ಟೇಷನರಿ, ಹೋಟೆಲ್, ಬೇಕರಿ ಮಾಲೀಕರು, ಹಾರ್ಡ್ವೇರ್ ವ್ಯಾಪಾರಿಗಳ ಸಂಘ, ಬೇಲೂರು ಕೈಗಾರಿಕಾ ಪ್ರದೇಶದ ಉದ್ಯಮಿಗಳು ಬೆಂಬಲ ಸೂಚಿಸಿವೆ. ಇಂದು ಬೆಳಗ್ಗೆ 11 ಗಂಟೆಗೆ ಅಂಗಡಿ‌ ಮುಂಗಟ್ಟು ಬಂದ್ ಮಾಡಿ ಕೆಸಿಸಿ ಬ್ಯಾಂಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್ಗಳನ್ನು ಇವಿಎಂ ಮಾದರಿಯಲ್ಲಿ ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ. ಇದು ನನ್ನ ಹೇಳಿಕೆ ಕೇವಲ ರಾಜಕೀಯ ಸ್ಟೇಟಮೆಂಟ್‌ ಅಷ್ಟೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿ ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಗೆ ಬಿಜೆಪಿಯವರು ಸಾಕಷ್ಟು ತಿರುಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರ ಹೇಳಿಕೆಗಳೂ ಬಹಳಷ್ಟಿವೇ. ಬಿಜೆಪಿಯವರು ಕೂಡಾ ಅನೇಕ ಭಾರಿ ವಿವಿಧ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಇಂಥಹ ಹೇಳಿಕೆಗಳನ್ನು ನೋಡುತ್ತಾ ಹೋದರೆ ನಾವು ಬಿಜೆಪಿಯವರದು ಲಿಸ್ಟ್‌ ಕೋಡಬೇಕಾಗುತ್ತದೆ ಎಂದು ಬಿಜೆಪಿ ವಿರುದ್ಧ ಚಾಟಿ ಬೀಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More