Author: admin

ಒಂದು ವಾರದಲ್ಲಿ ಮಳೆ ಬರದೇ ಇದ್ರೆ ಬೆಳಗಾವಿಯಲ್ಲಿ ಕುಡಿಯುವ ನೀರು ಸಂಪೂರ್ಣ ಖಾಲಿ‌ಯಾಗಲಿದೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಎಂದು ಈಗಾಗಲೇ ಸಾರ್ವಜನಿಕರಿಗೆ ಜಲಮಂಡಳಿ ಎಚ್ಚರಿಕೆ ಕೊಟ್ಟಿದೆ. ಸದ್ಯ ರಕ್ಕಸಕೊಪ್ಪ ಡ್ಯಾಂನ ಡೆಡ್ ಸ್ಟೋರೇಜ್ ನೀರು ನಗರಕ್ಕೆ ಪೂರೈಕೆ ಮಾಡಲಾಗುತ್ತಿದೆ. ವರ್ಷ ಇಡೀ ಬೆಳಗಾವಿಗೆ ನೀರು ಪೂರೈಕೆ ಮಾಡೋ ರಕ್ಕಸಕೊಪ್ಪ ಜಲಾಶಯದ ಡೆಡ್ ಸ್ಟೋರೆಜ್ ನೀರನ್ನ ಪಂಪ್ ಸೆಟ್ ಮೂಲಕ ಹೊರಕ್ಕೆ ತೆಗೆದು ಪೂರೈಸಲಾಗುತ್ತಿದೆ. ಈ ವರೆಗೂ ಪಂಪ್ ಹೌಸ್ ನಿಂದ ಸುಲಭವಾಗಿ ಸಪ್ಲೈ ಆಗ್ತಿದ್ದ ನೀರು ಈಗ ಕಷ್ಟ ಆಗುತ್ತಿದೆ. ಸದ್ಯ ನಗರದಲ್ಲಿ 10ರಿಂದ 15 ದಿನಕ್ಕೆ ಒಮ್ಮೆ ನೀರು ಪೂರೈಕೆ ಮಾಡಲಾಗುತ್ತಿದ್ದು ಮುಂಗಾರು ಮಳೆ ಕೈಕೊಟ್ಟಿದ್ದು ಬಹುತೇಕ ಜಲಾಶಯ ಬರಿದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

2023-24ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ದಾಖಲಾತಿಗೆ ನೀಡಲಾಗಿದ್ದ ದಂಡ ಶುಲ್ಕ ರಹಿತ ಕಾಲಾವಕಾಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಜೂನ್ 30 ರವರೆಗೆ ವಿಸ್ತರಿಸಿದೆ. ದಂಡ ಶುಲ್ಕ ಸಹಿತವಾಗಿ ಜು.10 ರವರೆಗೆ, ವಿಶೇಷ ದಂಡ ಶುಲ್ಕ ಪಾವತಿಸಿ ಜು. 20 ರವರೆಗೆ ದಾಖಲಾತಿ ಪಡೆಯಲು ಅವಕಾಶ ನೀಡಿದೆ. ಈ ಮೊದಲು ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಲು ಜೂ. 15 ಕೊನೆಯ ದಿನವಾಗಿತ್ತು. ದಂಡ ಶುಲ್ಕದೊಂದಿಗೆ ದಾಖಲಾತಿಗೆ ಜೂ. 22ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ದಾಖಲಾತಿ ಬಯಸಿ ಬರುವ ಬಡ ವಿದ್ಯಾರ್ಥಿಗಳಿಗೆ ದಂಡ ಶುಲ್ಕ ಕಟ್ಟುವುದು ಕಷ್ಟವಾಗಲಿದೆ, ಹಾಗಾಗಿ ದಂಡ ಶುಲ್ಕ ರಹಿತ ದಾಖಲಾತಿಗೆ ಜೂ. 27 ರವರೆಗೆ ಕಾಲಾವಕಾಶ ವಿಸ್ತರಿಸುವಂತೆ ಮನವಿ ಮಾಡಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಇಲಾಖೆಗೆ ಪತ್ರ ಬರದಿತ್ತು. ಇದನ್ನು ಪರಿಗಣಿಸಿದ ಇಲಾಖೆ ಇದೀಗ ಜೂ. 30 ರವರೆಗೆ ದಂಡ ಶುಲ್ಕ…

Read More

ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ ನೋಂದಣಿಗೆ ಹೊಸ ಲಿಂಕ್ ಕೂಡ ನೀಡಲಾಗಿದೆ. ಜೂನ್. 18ರಂದು ಗೃಹ ಜ್ಯೋತಿಗಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಸಿದಾಗ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆಗೆ ಸಾಧ್ಯವಾಗಿರಲಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಹಾಗೂ ಗ್ರಾಮ ಒನ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಜನರು ಕ್ಯೂ ನಿಂತೂ ನಿಂತು ಬೇಸತ್ತಿದ್ದರು. ಮೊದಲ ದಿನ ಕೇವಲ 55 ಸಾವಿರಕ್ಕೂ ಹೆಚ್ಚು ಅರ್ಜಿಗಳು ಮಾತ್ರ ಸಲ್ಲಿಕೆಯಾಗಿತ್ತು. ಆ…

Read More

ನಾಲ್ಕು ವರ್ಷಗಳ ನಂತರ ಬಿಬಿಎಂಪಿಯು ಜೂನ್ ಅಂತ್ಯದೊಳಗೆ ಬೀದಿ ನಾಯಿ ಗಣತಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. 2019ರ ಹಿಂದಿನ ಸಮೀಕ್ಷೆಯಲ್ಲಿ ಸುಮಾರು ಮೂರು ಲಕ್ಷ  ಬೀದಿ ನಾಯಿಗಳನ್ನು ಗುರುತಿಸಲಾಗಿತ್ತು. ಗಣತಿಯು ಬಿಬಿಎಂಪಿ ತನ್ನ ಲಸಿಕೆ ಮತ್ತು ಸಂತಾನಶಕ್ತಿ ಹರಣ ಕಾರ್ಯಕ್ರಮಗಳು ನಾಯಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆಯೇ ಎಂಬುದನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಗಣತಿ ನಡೆಸಲು ಬಿಬಿಎಂಪಿ ಹಾಗೂ ರಾಜ್ಯ ಪಶುಸಂಗೋಪನಾ ಇಲಾಖೆಯಿಂದ ತಲಾ ಅರ್ಧದಷ್ಟು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ‘ನಾವು 50 ತಂಡಗಳನ್ನು ರಚಿಸಿದ್ದೇವೆ. ಪ್ರತಿ ತಂಡದಲ್ಲೂ ಇಬ್ಬರು ಸದಸ್ಯರು ಇರುತ್ತಾರೆ. ಒಬ್ಬರು ವಾಹನವನ್ನು ಓಡಿಸುತ್ತಾರೆ. ಇನ್ನೊಬ್ಬರು ಬೀದಿ ನಾಯಿಗಳ ಡೇಟಾವನ್ನು ಗುರುತಿಸಿ ಅಪ್ಲೋಡ್ ಮಾಡುತ್ತಾರೆ’ ಎಂದು ಬಿಬಿಎಂಪಿಯ ಜಂಟಿ ನಿರ್ದೇಶಕ (ಪಶುಸಂಗೋಪನೆ) ಡಾ. ಕೆಪಿ ರವಿ ಕುಮಾರ್ ಹೇಳುತ್ತಾರೆ. ಪ್ರತಿ ನಾಯಿಯ ಜಿಯೋಟ್ಯಾಗ್ ಮಾಡಲಾದ ಚಿತ್ರವನ್ನು ಅಪ್ಲಿಕೇಶನ್ ಅಪ್ಲೋಡ್ ಮಾಡಲಾಗುತ್ತದೆ. ಜೊತೆಗೆ ಲಿಂಗ, ಸಂತಾನಶಕ್ತಿ ಹರಣಗೊಳಿಸಲಾಗಿದೆಯೇ (ಕಿವಿಯ ಕ್ಲಿಪಿಂಗ್ ಆಧರಿಸಿ) ಇತ್ಯಾದಿಗಳನ್ನು ಗಣತಿಯಲ್ಲಿ ಕಂಡುಕೊಳ್ಳಲಾಗುತ್ತದೆ.  ಪ್ರತಿ…

Read More

ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಆದೇಶ ಹೊರಡಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ ಐಆರ್ ದಾಖಲಾಗಿದ್ದವು. ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್  ಶೀಟ್‌…

Read More

ತಾವು ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸಿದ್ದರಾಮಯ್ಯ, ವರುಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್‌ ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು,  ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಿದ್ದಾರೆ. ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕಂದಾಯ ವಿಭಾಗವಾರು ಜವಾಬ್ದಾರಿ ಹಂಚಿಕೆ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಸಂಸದರು, ಶಾಸಕರ ಕುಂದುಕೊರತೆ, ಅನುದಾನಕ್ಕೆ ಸಂಬಂಧಪಟ್ಟಂತೆ ನಿರ್ವಹಣೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಕಲಬುರಗಿ, ಮೈಸೂರು, ಬೆಳಗಾವಿ, ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಭಾಗದ ಶಾಸಕರು ಹಾಗೂ ಸಂಸದರ ಕುಂದುಕೊರತೆಗಳನ್ನು, ಕ್ಷೇತ್ರದ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಅಧಿಕಾರಿಗಳಿಗೆ…

Read More

ಕಾಂಗ್ರೆಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದ ನಂತರ  ಕಾರ್ಯಕರ್ತರು ಹುಮ್ಮಸದಲ್ಲಿ ಇದ್ದಾರೆ. ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಯಾವಾಗ ನಿಗಮ ಮಂಡಳಿಗಳನ್ನು ನೀಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಕಾರ್ಯಕರ್ತರಿದ್ದಾರೆ.  ಈಗಾಗಲೇ ತಮಗೆ ಇಚ್ಛೆ ಇರುವ ನಿಗಮಗಳ ಮೇಲೆ ಕಣ್ಣಿಟ್ಟಿರುವ ಕಾರ್ಯಕರ್ತರು, ನಾಯಕರುಗಳು ಹಾಗೂ ಸಚಿವರುಗಳು ಎದುರು ತಮ್ಮ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ )ನಿಗಮ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ಹಾಗೂ ಸಮುದಾಯದ ಮುಖಂಡರಾದ ಮಲ್ಲೇಶ್ ಜೋಗುಲೆ ಅವರ ಬೆಂಬಲಿಗರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರು ಹಾಗೂ ಅವರ ಬೆಂಬಲರಿಗೆ ಮನವಿಯನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ರಾಜ್ಯ ಸಂಚಾಲಕರು ಮಾತನಾಡುತ್ತಾ ಉನ್ನತ ಹುದ್ದೆಗಳ ದಲಿತ ಸಮುದಾಯಕ್ಕೆ ಇಲ್ಲಿವರೆಗೂ ಸಿಕ್ಕಿಲ್ಲ ಈಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಮಲ್ಲೇಶ್ ಜೋಗುಲೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ನಾವು…

Read More

ಬಾಗಲಕೋಟೆ: ಸಂಗೀತ ಮತ್ತು ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಏಕಾಗ್ರತೆಯನ್ನು ಬೆಳಸಿಕೊಳ್ಳಲು ಸಾಧ್ಯ ಎಂದು ಡಾ. ಪುಟ್ಟರಾಜ ಗವಾಯಿ ಸ್ಕೂಲ್ ಆಫ್ ಮ್ಯೂಸಿಕ್ ಸಂಯೋಜಕರಾದ ಪಂ.ಸಿದ್ದರಾಮಯ್ಯ ಮಠಪತಿ ಹೇಳಿದರು. ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ.ಪುಟ್ಟರಾಜ ಗವಾಯಿ ಸ್ಕೂಲ್ ಆಫ್ ಮ್ಯೂಜಿಕ್, ಐಕ್ಯೂಎಸಿ ಮತ್ತು ಸಂಸ್ಕೃತಿಕ ವಿಭಾಗ ಹಾಗೂ ಸಂಗೀತ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಸಂಗೀತ ಮತ್ತು ಯೋಗ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಕರ್ನಾಟಕದಲ್ಲಿಯೇ ಮೊದಲ ಭಾರಿಗೆ ಅಂತರಾಷ್ಟ್ರೀಯ ಸಂಗೀತ ದಿನಾಚರಣೆ ಮಾಡಿದ ಹೆಮ್ಮೆ ಬಾಗಲಕೋಟೆಯ ಜಿಲ್ಲಾ ಸಂಗೀತಗಾರರಿಗೆ ಸಲ್ಲುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೇರಳ ಅವಕಾಶಗಳಿದ್ದು ವಿದ್ಯಾರ್ಥಿಗಳು ಸಂಗೀತ ಕ್ಷೇತ್ರದತ್ತ ಒಲವು ತೋರಬೇಕು. ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಸಂಗೀತ ವಿಭಾಗಗಳು ಮುಚ್ಚುತ್ತಿರುವುದು ಖೇದಕರ ಸಂಗತಿ ಎಂದರು. ಸಂಗೀತವು ಸರ್ವವ್ಯಾಪಿಯಾಗಿದ್ದು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಸಂಗೀತಾಸಕ್ತರು ಕಾರ್ಯತಪ್ತರಾಗಬೇಕು. ಪದವಿ ಮತ್ತು ಸ್ನಾತಕ ಮಟ್ಟದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸಂಗೀತ ವಿಭಾಗಗಳನ್ನು ಪ್ರಾರಂಭಿಸಬೇಕು.…

Read More

ಬೆಂಗಳೂರು: ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಬಾಯಿ ಚಪಲಕ್ಕೆ ಮಾತನಾಡ್ತಾರೆ ಅಷ್ಟೇ. ಸರ್ವರ್ ಸ್ಟ್ರಾಂಗ್ ಮಾಡಿಕೊಳ್ಳಬೇಕೆಂದು ಇವರಿಗೆ ಗೊತ್ತಿಲ್ವಾ?  ಕೇಂದ್ರ  ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. 35 ಲಕ್ಷ ಬಿಲ್ ಕಟ್ಟಬೇಕೆಂದು VTU ವಿಸಿ ಬಾಯಿ ಬಡ್ಕೊತ್ತಿದ್ದಾರೆ. ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್ನಲ್ಲಿ ಗಲಾಟೆ ಆಗಿದೆ. ತನಿಖೆ ನಡೆದರೆ ಯಾರ ಯಾರು ಜೈಲಿಗೆ ಹೋಗುತ್ತಾರೆ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಪುಟ ತೀರ್ಮಾನಕ್ಕೆ ಸಂಬಂಧಿಸಿದಂತೆ ಮಕ್ಕಳ ಬದುಕಿನ ಜೊತೆಗೆ 2 ಪಕ್ಷದವರು ಚೆಲ್ಲಾಟ ಆಡುತ್ತಿದ್ದಾರೆ. ಯಾರ ಬಗ್ಗೆ ಓದಬೇಕು ಅನ್ನುವ ಗೊಂದಲ ಮಕ್ಕಳಲ್ಲಿ ಇದೆ. ಮಕ್ಕಳ ಮನಸ್ಸಲ್ಲಿ ಇಂತಹ ವಾತಾವರಣ ನಿರ್ಮಾಣ ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು:ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂಬ ಆರೋಪ ವಿಚಾರ ಸತೀಶ್ ಜಾರಕಿಹೊಳಿ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂಥಾ ಸಚಿವರು ಇದ್ದಾರೆ? ಸಚಿವರಿಗೆ ಓರಿಯಂಟಿಯೇಶನ್ ಅಗತ್ಯವಿದೆ. ಅವರಿಗೆ ಯಾವದರೂ ಬಗ್ಗೆಯೂ ಅರಿವಿಲ್ಲದೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಅವಮಾನ. ಸಾರ್ವಜನಿಕವಾಗಿ ಏನು ಮಾತನಾಡಬೇಕು ? ಅನ್ನೋದು ಗೊತ್ತಿಲ್ಲ. ಈ ರೀತಿ ಅಸಂಬದ್ಧವಾದ ಹೇಳಿಕೆ ಕೊಟ್ಟರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಸರ್ವರ್‌ ಅನ್ನು ಯಾರು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ. ಈ ರೀತಿ ಹೇಳಿಕೆ ಕೊಟ್ಟು ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More