Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದು, ಕಳೆದ ಎರಡು ದಿನಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ವೈದ್ಯರು ಆಸ್ಪತ್ರೆಯಲ್ಲಿ ಇನ್ನಷ್ಟು ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ: ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಅಸುನೀಗಿದ್ದಾನೆ. ಈತ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದರು. ಡ್ಯಾನ್ಸ್, ಸ್ಟಂಟ್ ಗಳನ್ನು ರೀಲ್ಸ್ ಮಾಡಿ ಗಮನ ಸೆಳೆಯುತ್ತಿದ್ದರು. ಯಳಂದೂರು ಪೊಲೀಸರು ಸದ್ಯ ಶವವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಕ್ಟೋಬರ್ 03,2021 ರಲ್ಲಿ ರೈತರ ಐತಿಹಾಸಿಕ ದೆಹಲಿ ಹೋರಾಟದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಕೇರಿಯಲ್ಲಿ ರೈತರು ನಡೆಸಿದ ಹೋರಾಟವನ್ನು ಹತ್ತಿಕ್ಕಲು, ಗ್ರಹ ವ್ಯವಹಾರಗಳ ಕೇಂದ್ರ ಸಚಿವ ಅಜಯ್ ಮಿಶ್ರಾ ಹೋರಾಟಗಾರರಿಗೆ ಬೆದರಿಕೆ ಒಡ್ಡಿದ ಬೆನ್ನಲ್ಲೇ, ಅಜಯ್ ಮಿಶ್ರ ಮಗ ಆಶಿಷ್ ಮಿಶ್ರ ರೈತ ಹೋರಾಟಗಾರರ ಮೇಲೆ ಕಾರು ಹರಿಸಿ ನಾಲ್ಕು ರೈತರು ಹಾಗೂ ಒಬ್ಬ ಪತ್ರಿಕಾ ವರದಿಗಾರನ ಕೊಲೆಗೆ ಕಾರಣವಾದ ದಿನವನ್ನು, ಸಿಐಟಿಯು ಹಾಗೂ ರೈತ ಸಂಘಟನೆಗಳು ದೇಶದಾದ್ಯಂತ ಕಪ್ಪು ದಿನ ಆಚರಿಸಿ ಹತ್ಯೆಗೆ ಕಾರಣಕರ್ತರಾದ ಸಚಿವ ಅಜಯ್ ಮಿಶ್ರಾನನ್ನು ಸಂಪುಟದಿಂದ ಕೈ ಬಿಟ್ಟು ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಉಡುಪಿ ಅಜ್ಜರಕಾಡುವಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ರೈತ ಮುಖಂಡ ಚಂದ್ರಶೇಖರ ಮಾತನಾಡಿದರು, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕವಾಗಿ ಮಾತನಾಡಿ; ‘ಅಮಾನವೀಯ ಕೃತ್ಯ ಎಸಗಿದವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ’ ಎಂದು ದೂರಿದರು.…
ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡವರು. 78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆಗೆ ಮನೆಗೆ ತೆರಳಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜಗನ್ನಾಥ ಭಂಡಾರಿ ಮನೆಗೆ ತೆರಳಿದಾಗ ಮನೆಯ ಬಾಗಿಲು ಮುಚ್ಚಲ್ಪಟ್ಟಿತ್ತು. ಕಿಟಕಿಯಿಂದ ನೋಡಿದಾಗ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದು, ತನಿಖೆ ನಡೆಯುತ್ತಿದೆ.
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕಳೆದ 28 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದ್ದು ಇಂದು ಕೂಡ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಿವಿಗೆ ಚೆಂಡು ಹೂ ಇಟ್ಟುಕೊಂಡು ರಸ್ತೆ ತಡೆ ನಡೆಸಿದರು. ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಕನ್ನಡಿಗರಿಗೆ ಹೂವು ಮುಡಿಸಿದೆ, ಕರ್ನಾಟಕ ಸರ್ಕಾರ ನಿರಂತರವಾಗಿ ನೀರು ಹರಿಸುವ ಮೂಲಕ ರೈತರು, ಜನರ ಕಿವಿಗೆ ಹೂವು ಮುಡಿಸಿದೆ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸ್ಟಾಲಿನ್ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಎಎಪಿ ಸಂಸದ ಸಂಜಯ್ ಸಿಂಗ್ ಅವರ ದೆಹಲಿ ಮನೆ ಮೇಲೆ ಇಡಿ ದಾಳಿ ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಇಡಿ ತಂಡ ಸಿಂಗ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದ ದಿನವೇ ಸಂಸದರ ಮನೆ ಮೇಲೆ ದಾಳಿ ನಡೆದಿದೆ. 2020 ರಲ್ಲಿ ಮದ್ಯದ ಅಂಗಡಿಗಳು ಮತ್ತು ವ್ಯಾಪಾರಿಗಳಿಗೆ ಪರವಾನಗಿ ನೀಡುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಸಂಜಯ್ ಸಿಂಗ್ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವುದು ಮತ್ತು ಭ್ರಷ್ಟಾಚಾರ ನಿಗ್ರಹ ಕಾನೂನು ಉಲ್ಲಂಘನೆ ಆರೋಪಗಳು ಇದೇ ವೇಳೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯು ಎಎಪಿ ನಾಯಕರನ್ನು ಸುಳ್ಳು ಆರೋಪದ ಮೇಲೆ…
ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಹಕಾರವಿದೆ, ಆದರೆ ರೈತರಿಗೆ ತೊಂದರೆಯಾದರೆ ಸಹಿಸುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವಿಮಾನ ನಿಲ್ದಾಣ ಅಭಿವೃದ್ಧಿಗೆ ಅನುಕೂಲ ಮಾಡಿ ಕೊಡೋಣ. ಆದರೆ ಸಾಂಬ್ರಾ ವಿಮಾನ ನಿಲ್ದಾಣಕ್ಕಾಗಿ ಈಗಾಗಲೇ ರೈತರು ಸಾಕಷ್ಟು ಜಮೀನನ್ನು ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಮನೆಗಳನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ. ಜತೆಗೆ ರೈತರಿಂದ ಬಲತ್ಕಾರವಾಗಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ. ರೈತರೊಂದಿಗೆ ಚರ್ಚಿಸದೇ ಮುಂದಡಿ ಇಡಲು ಅವಕಾಶ ಕೊಡುವುದಿಲ್ಲ. ರೈತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ…
ಪ್ರಧಾನಿ ನರೇಂದ್ರ ಮೋದಿಯವರ ಉಡುಗೊರೆಗಳು ಹರಾಜಿಗೆ! ಇತ್ತೀಚಿನ ಸುತ್ತಿನ ಇ-ಹರಾಜಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾದ 900 ಕ್ಕೂ ಹೆಚ್ಚು ಉಡುಗೊರೆಗಳು ಮತ್ತು ಸ್ಮರಣಿಕೆಗಳು ಹರಾಜಾಗಿವೆ. ಸೋಮವಾರ ಆರಂಭವಾದ ಇ-ಹರಾಜು ಅಕ್ಟೋಬರ್ 31ಕ್ಕೆ ಮುಕ್ತಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರದರ್ಶನದ ಭಾಗವಾಗಿ ಕೆಲವು ವಸ್ತುಗಳನ್ನು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಸ್ (NGMA) ನಲ್ಲಿ ಪ್ರದರ್ಶಿಸಲಾಗಿದೆ. ಇದು ಹರಾಜು ಸರಣಿಯ ಐದನೇ ಆವೃತ್ತಿಯಾಗಿದ್ದು, ಮೊದಲನೆಯದನ್ನು ಜನವರಿ 2019 ರಲ್ಲಿ ನಡೆಸಲಾಯಿತು ಎಂದು ಸಂಸ್ಕೃತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಉಡುಗೊರೆಗಳ ಬೆಲೆ 100 ರಿಂದ 64 ಲಕ್ಷ ರೂ. ಇವುಗಳಲ್ಲಿ ಕೆಲವು ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಉಳಿದವು ವೆಬ್ ಸೈಟ್ ನಲ್ಲಿ ಲಭ್ಯವಿದೆ. ಗುಜರಾತ್ ನ ಮೊಧೇರಾದಲ್ಲಿರುವ ಸೂರ್ಯ ದೇವಾಲಯದ ಪ್ರತಿಕೃತಿಗಳು, ಚಿತ್ತೋರ್ ಗಢದ ವಿಜಯ ಸ್ತಂಭ ಮತ್ತು ವಾರಣಾಸಿಯ ಘಾಟ್ ನ ವರ್ಣಚಿತ್ರಗಳು ಹರಾಜಿನಲ್ಲಿವೆ. ಮೋದಿಯವರ 900 ಕ್ಕೂ ಹೆಚ್ಚು ಉಡುಗೊರೆಗಳು…
ತ್ರಿಶೂಲ ಹಿಡಿಯೋದಕ್ಕೂ, ತಲ್ವಾರ್ ಹಿಡಿಯೋದಕ್ಕೂ ವ್ಯತ್ಯಾಸ ಇದೆ. ತ್ರಿಶೂಲ ಹಿಡಿಯೋರು ಯಾರ ಮೇಲೂ ಕಲ್ಲು ಎಸೆಯಲ್ಲ. ನಾಲ್ಕೇ ಜನ ತಲ್ವಾರ ಹಿಡಿದವರು ಇಡೀ ಶಿವಮೊಗ್ಗದ ಮೇಲೆ ಕಲ್ಲು ಎಸೆದ್ರು. ತ್ರಿಶೂಲ ಹಿಡಿದವರ ಭಾವನೆ, ತಲ್ವಾರ್ ಹಿಡಿದವರ ಭಾವನೆ ಏನು ಅಂತ ಎಲ್ಲರಿಗೂ ಗೊತ್ತಾಗುತ್ತೆ ಎಂದ ಸಚಿವ ಮಧು ಬಂಗಾರಪ್ಪ ಅವರಿಗೆ ಚಕ್ರವರ್ತಿ ಸೂಲಿಬೆಲೆ ತೀಕ್ಷ್ಣವಾಗೇ ಟಾಂಗ್ ನೀಡಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಿವಮೊಗ್ಗದಲ್ಲಿ ಹಿಂದೂಗಳು ಪ್ರಚೋದನೆಗೆ ಒಳಗಾಗಿಲ್ಲ ಎಂಬುದಾಗಿ ಪೊಲೀಸರನ್ನೇ ಬಡಿದಿದ್ದಾರೆ. ಈ ಘಟನೆಯನ್ನು ಖಂಡಿಸೋ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ. ಮಂತ್ರಿಗಳು, ಶಾಸಕರು ತಾವು ಮುಸ್ಲೀಂಮರ ಹತ್ತಿರ ಇದ್ದೇವೆ ಅಂತ ತೋರಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಶಿವಮೊಗ್ಗ ಗಲಭೆಯ ಹಿಂದೆ ಕಾಂಗ್ರೆಸ್ ಸರ್ಕಾರದ ಬೆಂಬಲವಿದೆ. ಕರ್ನಾಟಕದಲ್ಲಿ ಮುಂಬರುವ ದಿನಗಳು ಹೇಗಿರಲಿವೆ ಎಂದು ತೋರಿಸಲು ಹೊರಟಿದ್ದಾರೆ. ತಲ್ವಾರು ಹಿಡಿದುಕೊಂಡು ಬರೋರ ಮುಂದೆ ಪಾಪ ಪೊಲೀಸರು ಲಾಠಿ ಹಿಡಿದು ಓನ್ ಮಾಡುತ್ತಾರೆ ಅಂತ ಹೇಳಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಶಂಕಿತ ಫುಡ್ ಪೋಯ್ಸನ್ ನಿಂದ ಬಳಲುತ್ತಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಲಕ್ಷ್ಮೀಬಾಯಿ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಫಿಸಿಕಲ್ ಎಜುಕೇಶನ್ ನ ಸುಮಾರು 100 ವಿದ್ಯಾರ್ಥಿಗಳನ್ನು ಮಂಗಳವಾರ ಸರ್ಕಾರಿ ಜಯರೋಗ ಆಸ್ಪತ್ರೆಗೆ ಕರೆತರಲಾಯಿತು ಎಂದು ಅದರ ಅಧೀಕ್ಷಕ ಆರ್ ಕೆಎಸ್ ಧಕಡ್ ತಿಳಿಸಿದ್ದಾರೆ. ಬಹುಶಃ ವಿಷಾಹಾರ ಸೇವನೆಯಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. “ವಧ್ಯಾರ್ತಿಗಳು ಪನೀರ್ ಸಬ್ಜಿಯನ್ನು ಸೇವಿಸಿದ್ದಾರೆ. ಇದು ಆಹಾರ ವಿಷಕ್ಕೆ ಕಾರಣವಾಗಬಹುದು” ಎಂದು ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೆಲವರು ತೀವ್ರ ಅಸ್ವಸ್ಥರಾಗಿದ್ದಾರೆ, ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸ್ಥೆಯ ರಿಜಿಸ್ಟ್ರಾರ್ ಅಮಿತ್ ಯಾದವ್, ಮಂಗಳವಾರ ಕೆಲವು ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಮತ್ತು ಅವರು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ. ಸುಮಾರು 70 ವಿದ್ಯಾರ್ಥಿಗಳು ಔಷಧೋಪಚಾರದ ನಂತರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ,…