Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಕೊರಟಗೆರೆ: ದಿನಸಿ ಸಾಮಾನಿನ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ ತನ್ನ ಪತ್ನಿಯ ಮೇಲೆ ಡಿಸೇಲ್ ಸುರಿದು ಆಕೆಯ ಸಾವಿಗೆ ಕಾರಣನಾದ ಗಂಡನಿಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾಧವ ಕರಕೇರ ಅವರು ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢ ವಿಧಿಸಿ ಜೂನ್ 19ರ ಸೋಮವಾರ ತೀರ್ಪು ನೀಡಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಂಪುರ ಗ್ರಾಮದ ಶಫೀವುಲ್ಲಾ ಎಂಬುವರ ಮಗನಾದ ಜಿಯಾವುಲ್ಲಾ (42) ನಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ. ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢವಿಧಿಸಿ ಜೂ.19ರಂದು ಆದೇಶ ಮಾಡಿದೆ. ಅಭಿಯೋಜನೆಯ ಪರವಾಗಿ ಸರಕಾರಿ ಅಭಿಯೋಜಕ ನಿರಂಜನಮೂರ್ತಿ.ಬಿ.ಎಂ ವಾದ ಮಂಡಿಸಿದ್ದಾರೆ.ದಿನಸಿ ಸಾಮಾನಿನ ವಿಚಾರಕ್ಕೆ ಜಗಳ ನಡೆದಿದೆ. ಸೋಂಪುರದ ಜಿಯಾವುಳ್ಳಾ ಮತ್ತು ತಸ್ಲೀಮಾಭಾನು ನಡುವೆ ದಿನಸಿ ಸಾಮಾನಿನ ವಿಚಾರಕ್ಕೆ 2019ರ ಮೇ.14ರಂದು ಜಗಳವಾಗಿ ಬಾಟೀಲುನಲ್ಲಿದ್ದ ಡಿಸೇಲ್ ಸುರಿದು ಬೆಂಕಿ…
ತುಮಕೂರು:ನಮ್ಮ ಭಾರತೀಯ ಪರಂಪರೆಯಲ್ಲಿ ಯೋಗಾಸನಕ್ಕೆ ಸಾಕಷ್ಟು ಮಹತ್ವವಿದೆ. ಕಳೆದ 9 ವರ್ಷಗಳಿಂದ ಯೋಗ ಅಂತರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದಗಂಗಾ ಮಠದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮೂಲಕ ಯೋಗಾಸನವನ್ನು ಪ್ರಪಂಚಕ್ಕೆ ಪರಿಚಯಿಸಿ ಕೊಟ್ಟಂತಹ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ದೈಹಿಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಿರುವಂತಹ ಮನುಷ್ಯ ಶ್ರೀಮಂತನಾಗಿರುತ್ತಾನೆ. ಪ್ರಸ್ತುತ ಸಮಾಜದಲ್ಲಿ ಹಣವಂತವರು ಆಸ್ತಿ ಇರುವವರು ಶ್ರೀಮಂತರಲ್ಲ ಬದಲಾಗಿ ಆರೋಗ್ಯವನ್ನು ಕಾಪಾಡಿಕೊಂಡಿರುವವರೇ ಶ್ರೀಮಂತನಾಗಿದ್ದಾನೆ ಎಂದು ತಿಳಿಸಿದರು. ಆರೋಗ್ಯವೇ ಭಾಗ್ಯ ಎಂಬಂತಹ ನಾಣ್ಣುಡಿಯನ್ನು ಬಹು ಹಿಂದಿನಿಂದಲೂ ನಾವು ಕೇಳುತ್ತಿದ್ದೇವೆ. ಹೀಗಾಗಿ ಉತ್ತಮ ಆಚಾರ ವಿಚಾರ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಮಾತ್ರ ನಾವು ಆರೋಗ್ಯವಂತರಾಗಿರಲು ಸಾಧ್ಯವಿದೆ ಎಂದು ಹೇಳಿದರು. ಪ್ರತಿಯೊಬ್ಬರಿಗೂ ಆರೋಗ್ಯ ಬೇಕು, ಆದರೆ ಆರೋಗ್ಯ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ ಇದು ಹೇಗೆ ಸಾಧ್ಯವಿರುತ್ತದೆ ಆರೋಗ್ಯವಂತರಾಗಿರಲು, ಎಂದು ಹೇಳಿದ…
ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ ಕೆಆರ್ ಪುರಂನಲ್ಲಿ ಬುಲ್ಲೋಜರ್ಗಳೊಂದಿಗೆ ಅತಿಕ್ರಮಣ ತೆರವುಗೊಳಿಸಲು ಮುಂದಾದ ವೇಳೆ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಬುಲ್ಲೋಜರ್ ವಾಹನದ ಕೀಗಳನ್ನು ಕಸಿದುಕೊಂಡು ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಘಟನೆ ನಡೆಯಿತು. ಬಿಬಿಎಂಪಿಯ ಎಸ್ಟಬ್ಲ್ಯುಡಿ ಇಲಾಖೆ ಅಧಿಕಾರಿಗಳು ಮತ್ತು ಮಹದೇವಪುರ ವಲಯ ಎಂಜಿನಿಯರ್ಗಳು, ಭೂಮಾಪಕರು ಮತ್ತು ಸ್ಥಳೀಯ ಪೊಲೀಸರೊಂದಿಗೆ ಸೋಮವಾರ ಬೆಳಿಗ್ಗೆ ತಮ್ಮ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ದೊಡ್ಡನೆಕುಂದಿಯ ಸರ್ವೆ ನಂಬರ್ 24/1, 3, 4, ಮತ್ತು 5ರಲ್ಲಿ ಫರ್ನ್ ಸಿಟಿ ಲೇಔಟ್ ಯಲ್ಲಿ ತೆರವು ಕಾರ್ಯಾಚರಣೆ ನಡೆಸಲು ಮುಂದಾದಾಗ ವಿಲ್ಲಾ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ನಂದೀಶ್ ರೆಡ್ಡಿ, ಬುಲೋಜರ್ನ ಕೀ ಕಿತ್ತುಕೊಂಡರು ಮತ್ತು ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಅಡ್ಡಿ ಪಡಿಸಿದರು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಆಕ್ಷೇಪಣೆಗಳ ಹೊರತಾಗಿಯೂ, ಸುಮಾರು 50 ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ, 200 ಮೀಟರ್ ಉದ್ದದ ಮಳೆನೀರು ಚರಂಡಿ ಮೇಲೆ ಅಕ್ರಮವಾಗಿ ನಿರ್ಮಿಸಲಾಗಿದ್ದ…
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿದ್ದ ಆಂಜಿಯೋಪ್ಲಾಸ್ಟಿ ಕಾರ್ಯಾಗಾರದಲ್ಲಿ 225 ಹೃದ್ರೋಗಿಗಳಿಗೆ ಉಚಿತವಾಗಿ ಸ್ಟೆಂಟ್ ಅಳವಡಿಸಲಾಗಿದೆ.ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂಅಮೆರಿಕದ ಮೆಡ್‌ಟ್ರಾನಿಕ್ಸ್, ವಿಸ್ಕಿನ್‌ಸನ್ ಸಂಸ್ಥೆಗಳ ಸಹಯೋಗದಲ್ಲಿಈ ಕಾರ್ಯಾಗಾರವು ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ನಡೆದಿದೆ. ರೈತರು, ದಿನಗೂಲಿ ನೌಕರರು, ಆಟೋ ರಿಕ್ಷಾ ಚಾಲಕರು, ಬೀದಿ ಬದಿ ಕಾರ್ಮಿಕರು ಹಾಗೂ ಹಿರಿಯ ನಾಗರಿಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ರಾಜ್ಯದ ಹೃದ್ರೋಗಿಗಳ ಜತೆಗೆ ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣದ ರೋಗಿಗಳೂ ಕಾರ್ಯಾಗಾರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಅಸಾಧಾರಣ ಕಾರ್ಯಾಗಾರವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ 17 ಕ್ಯಾತ್ ಲ್ಯಾಬ್ ನೆರವಾಗಿವೆ. 120 ನುರಿತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಶ್ರಮಿಸಿದ್ದಾರೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು. ಹೃದಯಾಘಾತಕ್ಕೆ ಸಂಬಂಧಿಸಿದ ಕಾಯಿಲೆಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರ ಆತಂಕಕ್ಕೆ ಕಾರಣವಾಗಿವೆ. ಈ ಕಾರ್ಯಾಗಾರದಲ್ಲಿ ಭಾಗವಹಿಸಿದವರಲ್ಲಿ 31 ವರ್ಷದ ದಿನಗೂಲಿ ಕೆಲಸಗಾರ ಅತ್ಯಂತ ಕಿರಿಯ…
ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್‌ಜಿಇಎಫ್‌ಗೆ ಸೇರಿದ ಜಾಗದಲ್ಲಿ 30 ಕೋಟಿ ರೂ. ಗಳಿಗೂ ಅಧಿಕ ವೆಚ್ಚದಲ್ಲಿ ವಿಶ್ವ ದರ್ಜೆಯ ಅರಣ್ಯ ಉದ್ಯಾನ (ಟೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಮಂಗಳವಾರ ಇಲ್ಲಿ ಏರ್ಪಡಿಸಲಾಗಿದ್ದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಪ್ರಾಥಮಿಕ ಸುತ್ತಿನ ಸಭೆ ನಡೆಸಿ ಮಾತನಾಡಿದ ಅವರು, ಎನ್‌ಜಿಇಎಫ್‌ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, ಅರಣ್ಯ ಉದ್ಯಾನ ಅಭಿವೃದ್ಧಿಪಡಿಸುವ ಮೂಲಕ ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಎನ್‌ಜಿಇಎಫ್‌ಗೆ ಸೇರಿದ ಜಾಗದ ಪೈಕಿ 70 ಎಕರೆಯಲ್ಲಿ ದಟ್ಟ ಹಸಿರಿದ್ದು, ನಾನಾ ಪ್ರಭೇದಗಳ ಸಾವಿರಾರು ವೃಕ್ಷಗಳಿವೆ. ಜತೆಗೆ ಐದು ಕೈಗಾರಿಕಾ ಶೆಡ್‌ಗಳಿವೆ. ಇವುಗಳನ್ನು ಹಾಗೆಯೇ ಉಳಿಸಿಕೊಂಡು ಹಂತ-1ಎಯಲ್ಲಿ 11 ಕೋಟಿ ರೂ. ಮತ್ತು ಹಂತ-1ಬಿನಲ್ಲಿ 15 ಕೋಟಿ ರೂ. ವೆಚ್ಚ ಮಾಡಿ ವೃಕೋದ್ಯಾನ ಅಭಿವೃದ್ಧಿ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಹಿನ್ನೆಲೆಯಲ್ಲಿ ನಡೆಸಲಾಗಿದ್ದ ನಗರ ವ್ಯಾಪ್ತಿಯಲ್ಲಿನ ಕೆಲವು ವಿಧಾನಸಭೆ ಕ್ಷೇತ್ರಗಳ ವಾರ್ಡ್ ಮರು ವಿಂಗಡಣೆಯಲ್ಲಿ ಸಣ್ಣಪುಟ್ಟ ಲೋಪದೋಷಗಳಿವೆ. ಅವುಗಳನ್ನು ಸರಿಪಡಿಸಿದ ನಂತರವೇ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ. ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಮಾಡಿ ಹಿಂದಿನ ಬಿಜೆಪಿನೇತೃತ್ವದ ರಾಜ್ಯ ಸರ್ಕಾರವು 2022ರ ಜುಲೈ 14ರಂದುಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದಿದ್ದ ಏಕಸದಸ್ಯನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್ ಬಿ. ಎನ್. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ವ್ಯಕ್ತಿಗೆ ಮಿದುಳು ನಿಷ್ಕ್ರಿಯಗೊಂಡಿದ್ದ 13 ತಿಂಗಳ ಮಗುವಿನ ಮೂತ್ರಪಿಂಡಗಳನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರು ಕಸಿ ಮಾಡಿದ್ದಾರೆ. ‘ರೋಬೋಟಿಕ್ ಎನ್-ಬ್ಲಾಕ್’ ವಿಧಾನದ ಮೂಲಕ ಕಸಿ ಮಾಡಲಾಗಿದೆ. ಉಸಿರುಗಟ್ಟಿ ಮೃತಪಟ್ಟ ಮಗುವಿನ ಅಂಗಾಂಗ ದಾನಕ್ಕೆ ಪೋಷಕರು ಸಮ್ಮತಿ ಸೂಚಿಸಿದ್ದರು. ಮಗು 7. 3 ಕೆ. ಜಿ. ತೂಕ ಹೊಂದಿತ್ತು. ಎರಡು ಮೂತ್ರಪಿಂಡಗಳನ್ನು 50 ಕೆ. ಜಿ. ತೂಕವುಳ್ಳ ವ್ಯಕ್ತಿಗೆ ಕಸಿ ಮಾಡಲಾಗಿದೆ. ಅವರು ದೀರ್ಘಕಾಲದಿಂದ ಮೂತ್ರಪಿಂಡದ ವೈಫಲ್ಯಕ್ಕೆ ಒಳಗಾಗಿ, ಹಿಮೋಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದರು. ಇದರಿಂದಾಗಿ ಮೂತ್ರಪಿಂಡದ ಕಸಿ ಅನಿವಾರ್ಯವಾಗಿತ್ತು. ರೋಬೋಟಿಕ್ ಎನ್-ಬ್ಲಾಕ್ ವಿಧಾನದ ಕಸಿಯಿಂದ ವ್ಯಕ್ತಿಯ ತೂಕಕ್ಕೆ ಅನುಗುಣವಾಗಿ ಮೂತ್ರಪಿಂಡಗಳ ಗಾತ್ರ ಹೆಚ್ಚಿಸಲು ಸಾಧ್ಯವಾಗುತ್ತದೆ. ನಾಲ್ಕು ಗಂಟೆಯ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ, ರೋಗಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ, ಆರೈಕೆ ಮಾಡಲಾಯಿತು. 12 ದಿನಗಳ ಬಳಿಕ ಅವರನ್ನು ಮನೆಗೆ ಕಳುಹಿಸಲಾಗಿದೆ’ ಎಂದು ಡಾ. ಕೇಶವಮೂರ್ತಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ತಿಪಟೂರು: ಹಾವು ಕಚ್ಚಿದ ಪರಿಣಾಮ ರೈತರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಘಟಕಿನಕೆರೆ ಗ್ರಾಮದಲ್ಲಿ ನಡೆದಿದೆ. ರೈತ ರಮೇಶ್(52) ಬಿನ್ ರಂಗಪ್ಪ ಎಂಬುವರು ಹಸುಗಳಿಗೆ ಹುಲ್ಲನ್ನು ತರಲು, ಹುಲ್ಲಿನ ಮೇದೆ (ಬವಣೆ)ಯಲ್ಲಿ ಹುಲ್ಲನ್ನು ಹಿರಿಯುವಾಗ ಮೇದೆಯಲ್ಲಿ ಇದ್ದ ಹಾವು, ಎಡಗಾಲಿಗೆ ಕಚ್ಚಿತ್ತು. ಹಾವು ಕಚ್ಚಿದ ಪರಿಣಾಮ ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಹೊನವಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಶ್ರೀ ಆದಿಚುಂಚನಗಿರಿ ಶಾಖಾಮಠ ಪುಣ್ಯಕ್ಷೇತ್ರ ಶ್ರೀ ಚೌಡೇಶ್ವರಿ ದೇವಸ್ಥಾನ ದಸರೀಘಟ್ಟದಲ್ಲಿ ಆಶಾಡ ಮಾಸದ ಮೊದಲನೇ ಮಂಗಳವಾರದಂದು ಶಾಖಾಮಠದ ಪೂಜ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ವ್ರತ ಹಾಗೂ ಚೌಡೇಶ್ವರಿ ಅಮ್ಮನವರಿಗೆ ಮತ್ತು ಕರಿಯಮ್ಮ ದೇವಿಗೆ ವಿಶೇಷ ಹೂವಿನ ಅಲಂಕಾರ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಎಲೆರಾಂಪುರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ಡಾ .ಹನುಮಂತನಾಥ ಮಹಾ ಸ್ವಾಮೀಜಿಯವರು ಹಾಗೂ ಈ ಶ್ರೀ ಆದಿಚುಂಚನಗಿರಿ ಅಮೇರಿಕಾ ಶಾಖಾಮಠದ ಶ್ರೀ ಶ್ರೀಶೈಲ ಸ್ವಾಮೀಜಿಯವರು ಹಾಗೂ ಯಲಹಂಕ ಮಠದ ಶ್ರೀ ಡಾ .ಅರುಣ್ ಗುರೂಜಿಯವರು ಕುಣಿಗಲ್ ಮಠದ ಶ್ರೀ ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿಯವರು ಹಾಗೂ ಹಾಸನದ ಉದ್ಯಮಿಯಾದ ವಿಜಯ್ ಕುಮಾರ್ ಅವರು ಹಾಗೂ ಗ್ರಾಮಸ್ಥರು ಸಹಸ್ರಾರು ಭಕ್ತರು ಉಪಸ್ಥಿತರಿದ್ದರು ಪೂಜಾ ಕಾರ್ಯವನ್ನು ಬಾಲಕೃಷ್ಣ ಭಟ್ ರವರು ನೆರವೇರಿಸಿದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರಿನಲ್ಲಿ ಯೋಗರತ್ನ – 2023 ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಜಯಮಹಲ್ ಮುಖ್ಯ ರಸ್ತೆ, ಚಾಮರ ವಜ್ರದಲ್ಲಿ ಶ್ವಾಸಗುರು ಶ್ರೀ ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗರತ್ನ – 2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತದನಂತರ ಸಾಧಕ – ಸಾಧಕಿಯರಿಗೆ ಯೋಗ ರತ್ನ – 2023 ಪ್ರಶಸ್ತಿಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರ ರವಿಶಂಕರ್ ಗುರೂಜಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮಂತ್ರಿ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ ಕೆ ಗೋವಿಂದರಾಜ್ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy