Author: admin

ಈ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವೃತ್ತಿಪರ ಕೋರ್ಸುಗಳಿಗೆ ಬ್ಯಾಂಕ್ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯು ಜೂನ್ 26, 27 ಮತ್ತು 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಈ ಪ್ರಕ್ರಿಯೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅರ್ಹ ವಿಕಲಚೇತನ ಅಭ್ಯರ್ಥಿಗಳ ಪಟ್ಟಿಯನ್ನು ಅವರು ಯಾವ ದಿನ ಈ ತಪಾಸಣೆಗೆ ಬರಬೇಕೆನ್ನುವ ದಿನಾಂಕದ ಸಮೇತ ಪ್ರಾಧಿಕಾರದ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗಿದೆ. ಜತೆಗೆ ಯಾವ್ಯಾವ ದಾಖಲೆಗಳನ್ನು ತರಬೇಕು ಎನ್ನುವುದನ್ನೂ ಜಾಲತಾಣದಲ್ಲಿ ಸೂಚಿಸಲಾಗಿದೆ. ಇದರಂತೆ ಆಯಾ ದಿನದಂದು ಬೆಳಿಗ್ಗೆ 9. 30ಕ್ಕೆ ಪ್ರಾಧಿಕಾರದಲ್ಲಿ ಹಾಜರಿರಬೇಕು. ತಪಾಸಣೆ ಪ್ರಕ್ರಿಯೆಯು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ”  ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡ್ರಗ್ಸ್ ದಂಧೆಕೋರರ ಹೊಸ ವಿಧಾನ ಕಂಡುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಓಪನ್ ಡ್ರಗ್ಸ್ ಸೇಲ್ ಮಾಡುತ್ತಿದ್ದಾರೆ. ಇನ್ಸ್ ಟ್ರಾಗ್ರಾಮ್ ನಲ್ಲಿ ಡ್ರಗ್ಸ್ ಫೋಟೋ ಹಾಕಿ ಬೆಂಗಳೂರು ಹಾಗು ಗೋವಾದಲ್ಲಿ ಡ್ರಗ್ ಮಾರಾಟ ಮಾಡುವುದಾಗಿ ಪೋಸ್ಟ್ ಹಾಕಿದ್ದಾರೆ. ಇದರ ಜೊತೆಗೆ U get whatever u want ಎಂದು ಪೋಸ್ಟ್ ಸಹ ಹಾಕಿದ್ದು ಕಂಡು ಬಂದಿದೆ. ಸದ್ಯ ಈ ಸಂಬಂಧ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದೆ. ಬೆಂಗಳೂರು ಮತ್ತು ಗೋವಾದಲ್ಲಿ ನೀವು ಕೇಳಿದಲ್ಲಿ ಡ್ರಗ್ಸ್ ಸಪ್ಪೆ ಮಾಡ್ತೀವಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ದಂಧೆಕೋರರು ಪೋಸ್ಟ್ ಹಾಕುತ್ತಿದ್ದಾರೆ. ಅಷ್ಟೆ ಅಲ್ಲದೆ ಪರ್ಸನಲ್ ಆಗಿ ಪೋಸ್ಟ್ ಮೆಸೇಜ್ ಮಾಡಿ ರೇಟ್ ಹೇಳುವ ಡ್ರಗ್ಸ್ ದಂಧೆಕೋರರು, 1 ಗ್ರಾಂಗೆ 1 ಸಾವಿರಕ್ಕೂ ಹೆಚ್ಚು ದರ ನಿಗದಿ ಮಾಡಿದ್ದಾರೆ. ಡ್ರಗ್ಸ್ ಖರೀದಿಗೂ ಕಂಡೀಷನ್ ಹಾಕಿರುವ ದಂಧೆಕೋರರು ಮಿನಿಮಮ್ 10 ಗ್ರಾಂ ಖರೀದಿ ಮಾಡಬೇಕೆಂದು ಮೆಸೇಜ್ ಮಾಡಿರುವುದು ಕಂಡು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

15 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ದಿನಗಳ ಹಿಂದಷ್ಟೇ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ 15 ಐಪಿಎಸ್ ಅಧಿಕಾರಿಗಳು ವರ್ಗಾವಣೆ ಮಾಡಿದೆ. ಕೆ. ರಾಮಚಂದ್ರ ರಾವ್, ಮಾಲಿನಿ ಕೃಷ್ಣಮೂರ್ತಿ, ಅರುಣ್ ಚಕ್ರವರ್ತಿ ಜೆ., ಮನೀಷ್ ಕರ್ಬಿಕರ್, ಎಂ. ಚಂದ್ರಶೇಖರ್, ವಿಪುಲ್ ಕುಮಾರ್, ಪ್ರವೀಣ್ ಮಧುಕರ್ ಪವಾರ್, ಎನ್. ಸತೀಶ್ ಕುಮಾರ್, ಸಂದೀಪ್ ಪಾಟಿಲ್, ವಿಕಾಸ್ ಕುಮಾರ್ ವಿಕಾಸ್, ರಮಣ್ ಗುಪ್ತಾ, ಎಸ್. ಎನ್. ಸಿದ್ದರಾಮಪ್ಪ, ಎಂ. ಬಿ. ಬೋರಲಿಂಗಯ್ಯ, ಸಿ. ವಂಶಿಕೃಷ್ಣ ಹಾಗೂ ಸಿ. ಬಿ. ರಿಷ್ಯಂತ್ ಅವರನ್ನು ತಕ್ಷಣ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ. ನಾವು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಮೂಲಕ 10 ಕೆ. ಜಿ ಅಕ್ಕಿ ನೀಡುವುದಾಗಿ ವಾಗ್ದಾನ ನೀಡಿದ್ದೇವೆ. ಹೆಚ್ಚುವರಿ 5 ಕೆ. ಜಿ ಅಕ್ಕಿ ಖರೀದಿಗೆ ಭಾರತೀಯ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ರಾಜಕೀಯ ಉದ್ದೇಶದಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಇದೀಗ ಅಕ್ಕಿ ನೀಡಲು ನಿರಾಕರಿಸಿದ್ದಾರೆ. ಆ ಮೂಲಕ ರಾಜ್ಯದ ಬಡವರಿಗೆ ಬಿಜೆಪಿಯ ಕೇಂದ್ರ ಸರ್ಕಾರ ಮೋಸ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಿದ್ದರೆ ಕೇಂದ್ರದ ಯೋಜನೆ ಕಟ್ ಮಾಡುತ್ತೇವೆ ಎಂದು ನಡ್ಡಾ ಅವರು ಹೇಳಿದ್ದರು. ಈಗ ಅವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಅಕ್ಕಿ ನೀಡದಿದ್ದರೂ ನಾವು ಬೇರೆ ರಾಜ್ಯಗಳ ಜತೆ ಮಾತನಾಡಿ ಅಲ್ಲಿಂದ ಅಕ್ಕಿ ಖರೀದಿ ಮಾಡುತ್ತೇವೆ. ಸ್ವಲ್ಪ ತಡವಾದರೂ ನಾವು ನಮ್ಮ…

Read More

ಬೆಳಗಾವಿ: ಬೆಳಗಾವಿಯ ವ್ಯಾಕ್ಸಿನ್ ಡಿಪೋ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿರುವ ಕಾಮಗಾರಿಗಳನ್ನು ರಾಜ್ಯ ಲೋಕೋಪಯೋಗಿ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ವೀಕ್ಷಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಿಂದ ವ್ಯಾಕ್ಸಿನ್ ಡಿಪೋ ಆವರಣದಲ್ಲಿ ಅಕ್ರಮವಾಗಿ ಕಾಮಗಾರಿಗಳು ನಡೆಯುತ್ತಿವೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಿದ ಇಬ್ಬರು ಸಚಿವರು, ಕಾಮಗಾರಿಗಳ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು. ಆರೋಗ್ಯ ಇಲಾಖೆಯ ಪೂರ್ವಾನುಮತಿ ಪಡೆಯದೆ ಕಾಮಗಾರಿ ನಡೆಸಲಾಗಿದೆ ಎನ್ನುವ ಕಾರಣಕ್ಕಾಗಿ ಆರೋಗ್ಯಾಧಿಕಾರಿಗಳು ಈ ಸಂಬಂಧ ದೂರು ದಾಖಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುವುದು. ಮನಸ್ಸಿಗೆ ಬಂದಂತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಸತೀಶ್ ಜಾರಕಿಹೊಳಿ ಈ ಸಂದರ್ಭದಲ್ಲಿ ಹೇಳಿದರು. ಟಿಳಕವಾಡಿ ವ್ಯಾಕ್ಸಿನ ಡಿಪೋವನ್ನು ಯಥಾಸ್ಥಿತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು. ಇದು ಐತಿಹಾಸಿಕ ಲಸಿಕಾ ಸಂಸ್ಥೆಯಾಗಿತ್ತು. ೨೦೦೬ರಲ್ಲಿ ಇದನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.…

Read More

ಬೆಳಗಾವಿಯ ಸುವರ್ಣಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದೆ. ಆಯುಷ್ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿದರು. ಬೆಳಗಾವಿ ಜಿಲ್ಲೆಯ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಗೈರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ನಿರಾಕರಿಸಿರುವುದು ಖಂಡನೀಯ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದ ಜನರಿಗೆ ನಾವು ನೀಡಿದ್ದ 5 ಗ್ಯಾರಂಟಿ ಭರವಸೆಯನ್ನು ಈಡೇರಿಸುತ್ತೇವೆ. ಪ್ರಮುಖವಾಗಿ ಅನ್ನಭಾಗ್ಯ ಯೋಜನೆಯಡಿ 10ಕೆ ಜಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಆರಂಭದಲ್ಲಿ ಅಕ್ಕಿ ವಿತರಣೆ ಮಾಡುವುದಾಗಿ ಹೇಳಿದ್ದ ಎಫ್ ಸಿಐ ನಂತರ ಅಕ್ಕಿ ನೀಡಲು ಆಗಲ್ಲ ಎಂದಿದೆ. ರಾಜ್ಯಕ್ಕೆ ನೀಡಬೇಕಿದ್ದ ಅಕ್ಕಿಯನ್ನು ಕೊಡದೇ ಕೇಂದ್ರ ಸರ್ಕಾರ ಓಪನ್…

Read More

ಬೆಂಗಳೂರು: ಕೆಲ ಸಚಿವರನ್ನು ಸಿದ್ದರಾಮಯ್ಯನವರ ಚೇಲಾಗಳು ಎಂದಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದು, ‘ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು’ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಎಂದು ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ದಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಬರೋಬ್ಬರಿ 18 ಲಕ್ಷ ರೂ. ಬಿಲ್ ಅನ್ನು ನೀಡಿದ್ದು, ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ವಿದ್ಯಾಶಂಕರ್ ಹೌಹಾರಿದ್ದಾರೆ. ಕರ್ನಾಟಕ ವಿದ್ಯುತ್‌ ಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಏರಿಕೆ ಹಿನ್ನಲೆ ವಿದ್ಯುತ್ ದರ ಏರಿಕೆಯಿಂದ ಬೆಳಗಾವಿಯ ವಿಟಿಯುಗೆ 5 ಲಕ್ಷ ರೂ. ಹೆಚ್ಚುವರಿ ಬಿಲ್ ಬಂದಿದ್ದು, ವಿದ್ಯುತ್ ಬಿಲ್‌ ನಿಂದ ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್ ಶಾಕ್‌ ಗೆ ಒಳಗಾಗಿದ್ದಾರೆ. ರಾಜ್ಯದ ಐದು ಕಡೆ ವಿಭಾಗೀಯ ಕೇಂದ್ರಗಳನ್ನು ಹೊಂದಿರುವ ವಿಟಿಯು ವಿಭಾಗೀಯ ಕೇಂದ್ರ ಹಾಗೂ ವಿಟಿಯು ಕ್ಯಾಂಪಸ್ ಸೇರಿ ಜೂನ್ ತಿಂಗಳಲ್ಲಿ 35 ಲಕ್ಷ ರೂ. ಬಿಲ್ ಬಂದಿದೆ. ಅದರಲ್ಲಿ ಬೆಳಗಾವಿಯಲ್ಲಿರುವ ವಿಟಿಯು ಕ್ಯಾಂಪಸ್ಸಿನ ಈ ತಿಂಗಳ ಬಿಲ್ 18 ಲಕ್ಷ ರೂ. ಎಂದು ನಮೂದಿಸಲಾಗಿದೆ. ವಿಟಿಯು ಮುಖ್ಯ ಕ್ಯಾಂಪಸ್ ಸೇರಿ 6 ವಿಭಾಗೀಯ ಕೇಂದ್ರಗಳ ಮೇ ತಿಂಗಳ ವಿದ್ಯುತ್ ಬಿಲ್ 35 ಲಕ್ಷ ರೂ.ಬಂದಿದ್ದು, ಮಾರ್ಚ್…

Read More

ಬೆಂಗಳೂರು: ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ವಿಧಾನಸೌಧದ ‌ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More