Author: admin

ರಾಜಸ್ಥಾನದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಹಳಿ ತಪ್ಪಿಸಲು ಯತ್ನ. ಸಿಬ್ಬಂದಿಯ ಮಧ್ಯಪ್ರವೇಶದಿಂದ ಭಾರೀ ಅನಾಹುತ ತಪ್ಪಿದೆ. ಟ್ರ್ಯಾಕ್ ಮೇಲೆ ದೊಡ್ಡ ಕಲ್ಲುಗಳು ಮತ್ತು ತಂತಿಯ ತುಂಡುಗಳು ಕಂಡು ಬಂದಿವೆ. ಭಿಲ್ವಾರಾ ಬಳಿ ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ ಪ್ರೆಸ್ ವಿರುದ್ಧ ವಿಧ್ವಂಸಕ ಯತ್ನ ನಡೆದಿದೆ. ಪ್ರಾಥಮಿಕ ತನಿಖೆಯ ನಂತರ, ನಡೆದಿರುವುದು ವಿಧ್ವಂಸಕ ಯತ್ನ ಎಂದು ರೈಲ್ವೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಬಂಡೆಗಲ್ಲುಗಳ ಜೊತೆಗೆ ಬೋಲ್ಟ್ ಮತ್ತು ತಂತಿಗಳನ್ನು ಟ್ರ್ಯಾಕ್ ‌ನಲ್ಲಿ ಹುದುಗಿಸಿ ಅದನ್ನು ಚಲಿಸದಂತೆ ಮಾಡಲಾಗಿತ್ತು. ಇದೆಲ್ಲವೂ ರೈಲನ್ನು ಹಳಿತಪ್ಪಿಸುವ ಪ್ರಯತ್ನ ಎಂದು ಅಧಿಕಾರಿಗಳು ವಿವರಿಸುತ್ತಾರೆ. ಲೊಕೊ ಪೈಲಟ್‌ ಗಳ ಗಮನಕ್ಕೆ ತಂದಾಗ ಭಾರಿ ಅನಾಹುತ ತಪ್ಪಿದೆ.

Read More

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಅತ್ಯಂತ ಹಿಂದುಳಿದ ವರ್ಗ ಶೇ.36.01, ಹಿಂದುಳಿದ ವರ್ಗ ಶೇ.27.1 ಮತ್ತು ಸಾಮಾನ್ಯ ವರ್ಗ ಶೇ.15.52 ಎಂದು ಅಂಕಿಅಂಶಗಳು ತೋರಿಸುತ್ತವೆ. ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇ.19.65ರಷ್ಟು ಪರಿಶಿಷ್ಟ ಜಾತಿಗಳು ಮತ್ತು ಶೇ.1.68ರಷ್ಟು ಪರಿಶಿಷ್ಟ ಪಂಗಡಗಳು. ರಾಜ್ಯದಲ್ಲಿ ಜಾತಿ ಗಣತಿ ವರದಿ ಬರುತ್ತಿರುವುದು ದೇಶದಲ್ಲಿ ಇದೇ ಮೊದಲು. ರಾಜ್ಯದ ಒಟ್ಟು ಜನಸಂಖ್ಯೆ 13 ಕೋಟಿ. ಇದೇ ವೇಳೆ ಗಾಂಧಿ ಜಯಂತಿಯಂದು ಜನಗಣತಿ ವರದಿಯನ್ನು ಬಿಡುಗಡೆ ಮಾಡಿದ್ದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಜನಗಣತಿಯಲ್ಲಿ ಕೆಲಸ ಮಾಡಿದ ಇಡೀ ತಂಡವನ್ನು ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಎಕ್ಸ್ ಪ್ಲಾಟ್‌ ಫಾರ್ಮ್‌ ನಲ್ಲಿ ಹೇಳಿದರು. ಜನಗಣತಿಯು ಎಲ್ಲರಿಗೂ ಪ್ರಯೋಜನಕಾರಿಯಾಗಿದೆ ಮತ್ತು ಬಡವರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು  ನಿತೀಶ್ ಕುಮಾರ್ ಹೇಳಿದರು. ಒಬಿಸಿ ಮೀಸಲಾತಿಯನ್ನು ಶೇ.27ಕ್ಕೆ ಏರಿಸುವುದು ಸೇರಿದಂತೆ ಜಾತಿ ಗಣತಿಗೆ ಸಂಬಂಧಿಸಿದ ಮುಂದಿನ ಕ್ರಮಗಳನ್ನು ಮಿತ್ರಪಕ್ಷಗಳೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ…

Read More

ಪ್ರಶ್ನೆ ಕೇಳುವ ವೇಳೆ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಟೀಕೆ. ರಾಜ್ಯ ಘಟಕದ ಅಧ್ಯಕ್ಷರಾಗದಿದ್ದರೆ ಬಿಜೆಪಿಯಲ್ಲೇ ಉಳಿಯುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಅಧ್ಯಕ್ಷರು ಕೆರಳಿದರು. ಆಗ, ಅಣ್ಣಾಮಲೈ ಅವರ ಪ್ರತಿಕ್ರಿಯೆ ಯಾರು ‘ಆ ಪ್ರಶ್ನೆ ಕೇಳಿದ್ದು ಅಕ್ಕ ಇಲ್ಲಿ ಬನ್ನಿ ಎಲ್ಲರೂ ನೋಡಲಿ. ಬಂದು ನನ್ನ ಜೊತೆ ಇರು. ನನಗೆ ಇಂತಹ ಪ್ರಶ್ನೆ ಕೇಳಿದವರು ಟಿವಿಯಲ್ಲಿ ನೋಡಲಿ. ಪ್ರಶ್ನೆಗಳನ್ನು ಕೇಳಲು ಒಂದು ಮಾರ್ಗವಿದೆ. ಇಂತಹ ಅದ್ಭುತ ಪ್ರಶ್ನೆಯನ್ನು ಕೇಳಿದ ವ್ಯಕ್ತಿಯನ್ನು ಎಂಟು ಕೋಟಿ ಜನರು ತಿಳಿದುಕೊಳ್ಳಬೇಕು’ ಎಂದು ಬಿಜೆಪಿ ನಾಯಕ ಹೇಳಿದರು. ವರದಿಗಾರರನ್ನು ಕ್ಯಾಮರಾ ಮುಂದೆ ನಿಲ್ಲುವಂತೆ ಬಿಜೆಪಿ ಅಧ್ಯಕ್ಷರು ಕೇಳಿದಾಗ, ಸಹ ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಕೊಯಮತ್ತೂರು ಪ್ರೆಸ್ ಕ್ಲಬ್ ಕೂಡ ಅಣ್ಣಾಮಲೈ ಅವರ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಪತ್ರಿಕೋದ್ಯಮದ ನೀತಿಯನ್ನು ಕಲಿಸುವ ಮೊದಲು ನಾಯಕತ್ವದ ಸದ್ಗುಣಗಳನ್ನು ಕಲಿತು ಘನತೆಯಿಂದ ವರ್ತಿಸಬೇಕು. ಕೊಯಮತ್ತೂರು ಪ್ರೆಸ್ ಕ್ಲಬ್ ಪದಾಧಿಕಾರಿಗಳು ಪ್ರತಿಕ್ರಿಯಿಸಿ, ಪತ್ರಿಕೋದ್ಯಮ ಜನರು ಮತ್ತು…

Read More

ಮಂಡ್ಯ: ಕಲ್ಲು ತೂರುವವರು, ಗಲಭೆ ಸೃಷ್ಟಿಸುವವರಿಗೆ ಈ ಸರ್ಕಾರದಲ್ಲಿ ಕಾನೂನಿನ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಭೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಗಲಾಟೆ ಎಂದು ಹೇಳಿರುವುದು ದುರ್ದೈವದ ಸಂಗತಿ. ಮನೆಗಳಿಗೆ ಕಲ್ಲು ತೂರಿದ್ದಾರೆ. ಕೋಲಾರದಲ್ಲಿಯೂ ಇದೇ ರೀತಿ ಘಟನೆ ನಡೆಯಿತು. ಸರ್ಕಾರ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ‌. ಗೃಹ ಸಚಿವ ಪರಮೇಶ್ವರ  ಅವರ ಹೇಳಿಕೆ ಬಾಲಿಶವಾಗಿದೆ ಎಂದು ಹೇಳಿದರು. ಸರ್ಕಾರದ ಈ ನಡವಳಿಕೆಯಿಂದಲೇ ಜೂಜುಕೋರರು, ಗಲಭೆಕೋರರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದರು‌.

Read More

ಮಣಿಪಾಲ: ಎರಡು ತಂಡಗಳ‌ ಮಧ್ಯೆ ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ, ಬೈಕಾಡಿಯ ಹರ್ಷಿತ್‌, ತಿಲಕ್‌ ಹಾಗೂ ರಿತೇಷ್‌ ಬಂಧಿತ ಆರೋಪಿಗಳು. ಚೂರಿ ಇರಿತಕ್ಕೆ ಒಳಗಾದ ಪ್ರತಾಪ್(19) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಪ್ರತಾಪ್, ತಿಲಕ್ ಮತ್ತು ಹರ್ಷಿತ್‌ ನೊಂದಿಗೆ ರಾತ್ರಿ ಮಣಿಪಾಲದ ಎಡ್ಜ್ ಹೊಟೇಲ್ ಬಳಿ ಹೋದಾಗ ಕಾರಿನಲ್ಲಿ ಬಂದ ಇದೇ ಮೂರು ಜನ ಹಾಗೂ ಇತರರು ಪ್ರತಾಪ್‌ ಗೆ ಕೈಯಿಂದ ಹೊಡೆದು ಚೂರಿಯಿಂದ ಕೈಗೆ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಲಾಗಿದೆ.

Read More

ಬೆಂಗಳೂರು: ಕಾವೇರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಡಿಸಿಎಂ ಯಾವಾಗಲೂ  ಬ್ರಾಂಡ್ ಬೆಂಗಳೂರು ಅಂತ ಭಾಷಣ ಮಾಡಿದರೆ ಸಾಲದು, ಬೆಂಗಳೂರಿಗೆ ಕಾವೇರಿ ನೀರು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ  ಬ್ಯಾಡ್ ಬೆಂಗಳೂರು ಆಗುತ್ತದೆ ಎಂದರು. ಸಂಕಷ್ಟ ಸೂತ್ರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2018 ಕ್ಕೂ ಮೊದಲು ಸಂಕಷ್ಟ ಸೂತ್ರ ಜಾರಿಗೊಳಿಸಲು ಈ ಪರಿಸ್ಥಿತಿ ಇರಲಿಲ್ಲ. ಸಿಡಬ್ಲುಎಂಎ ಬಂದ ಮೇಲೆ ನೀರಿನ ಸಮಸ್ಯೆ ಈಗ ಬಂದಿದೆ. ಹೀಗಾಗಿ ಸಂಕಷ್ಟ ಸೂತ್ರ ಜಾರಿ…

Read More

ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಚಾಲಕ  ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿಲಾಗಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

Read More

ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ  ಕಾವೇರಿ ನೀರಿನ ವಿಚಾರದಲ್ಲಿ  ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ  ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ  ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಬೈಕ್ ನಲ್ಲಿ ಹೊರಟು ರೈಲ್ವೆ ನಿಲ್ದಾಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ,  ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ಕರ್ನಾಟಕ  ಸರ್ಕಾರ, ಸಂಸದರ ವಿರುದ್ದ ದಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,  ಕಾವೇರಿ ನೀರು‌ ಹಂಚಿಕೆಯಲ್ಲಿ  ಕಾವೇರಿ ನ್ಯಾಯಾಧೀಕರಣ ಕರ್ನಾಟಕ ಪಾಲಿಗ ಮರಣಶಾಸನ ಬರೆದಿದ್ದು ಅನ್ಯಾಯ ಮಾಡಿದೆ.  ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಗುಣರಾಜು ಇದ್ದರು.

Read More

ಮುಂಬೈ: ಮಹಾರಾಷ್ಟ್ರದ ಹಾದಿಯಲ್ಲಿ ಮಲಗಿದ್ದ ಐದು ಕಾರ್ಮಿಕರು ಟ್ರಕ್ಸ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಬುಲ್ದಾನ ಜಿಲ್ಲೆಯ ವಾಡ್ನರ್ ಭೋಲ್ಜಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಅಪಘಾತ ನಡೆದಿದೆ. ದಾರಿಯುದ್ದಕ್ಕೂ ತಾತ್ಕಾಲಿಕವಾಗಿ ಕಟ್ಟೆಯ ಶೆಡ್ಡುಗಳಲ್ಲಿ ಕಾರ್ಮಿಕರು ಮಲಗಿದ್ದರು. ಈ ಸಮಯದಲ್ಲಿ ಅಪಘಾತ ನಡೆದಿದೆ. ಮೂರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಟ್ರಕ್ ಚಾಲಕರು ಅಡಗಿರುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿತ್ತು. ಅದಾದ ನಂತರ ಇದೀಗ ಮಂಗಳೂರು ತಾಲೂಕಿನ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡರು ಹಸಿರು ಬಾವುಟ ಪ್ರದರ್ಶಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 28ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ರಸ್ತೆ ಬಂದ್ ಮಾಡಿ ಬೈಕ್ ಹಾರ್ನ್ ಹಾಕಿಕೊಂಡು ಯುವಕರಿಂದ ಹುಚ್ಚಾಟ ನಡೆದಿತ್ತು. ಸದ್ಯ ವಿಡಿಯೋವನ್ನು ಆಧರಿಸಿ ಯುವಕರನ್ನು ಉಳ್ಳಾಲ ಪೋಲೀಸರು ಇದೀಗ ಪತ್ತೆ ಹಚ್ಚಿದ್ದಾರೆ. ಉಳ್ಳಾಲದ ವೀರರಾಣಿ ಅಬ್ಬಕ್ಕ ಸರ್ಕಲ್ ಮೇಲೆ ಯುವಕರ ಗುಂಪೊಂದು ಹಸಿರು ಬಾವುಟ ಪ್ರದರ್ಶಿಸಿದ್ದ ವಿಡಿಯೋ ಒಂದು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಮೂಲಕ ವಿಡಿಯೋ ಅಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

Read More