Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ಪುರಸಭೆ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ಯರಳ್ಳಿ 18, 20ನೆ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಹಲವಾರು ವರ್ಷಗಳಿಂದ ಪುರಸಭೆಗೆ ಮನವಿಯನ್ನ ನೀಡಿದ್ದೇವೆ. ಈ ಸಂಬಂಧ ಈ ಭಾಗದ ಪುರಸಭಾ ಸದಸ್ಯರುಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎಂದು ಪುರಸಭೆ ಕಚೇರಿ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಹೆಚ್.ಡಿ.ಕೋಟೆ ಬಸ್ ನಿಲ್ದಾಣದಿಂದ ಪುರಸಭಾ ಕಚೇರಿವರೆಗೆ ಮಹಿಳೆಯರು ಬಿಂದಿಗೆ ಹೊತ್ತು ಆಗಮಿಸಿ ಸದಸ್ಯರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪುರಸಭೆ ಕಚೇರಿ ತಲುಪಿ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಪ್ರತಿಭಟನಾಕಾರರನ್ನು ಕುರಿತು ಆರ್ ಪಿ ಐ ಜಿಲ್ಲಾ ಅಧ್ಯಕ್ಷೆ ಅನುಷಾ ಮಾತನಾಡಿ, ಹ್ಯಾಂಡ್ ಪೋಸ್ಟ್ ಯರಳ್ಳಿ 18, 20 ನೆ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಪುರಸಭೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನಾಗುತ್ತಿಲ್ಲ. ನೀರಿನ ಸಮಸ್ಯೆ ಅಲ್ಲದೆ ಇನ್ನು…
ಇಂದು ಕೃಷಿ ಸಚಿವರಾದ ಎನ್. ಚೆಲುವನಾರಾಯಣ ಸ್ವಾಮಿಯವರನ್ನು AIKKMS ನ ರಾಜ್ಯ ಉಪಾಧ್ಯಕ್ಷರಾದ ಶಿವಪ್ರಕಾಶ, ರಾಜ್ಯ ಕಚೇರಿ ಕಾರ್ಯದರ್ಶಿಗಳಾದ ಎಸ್.ಎನ್.ಸ್ವಾಮಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೈಸೂರು ಬಸವರಾಜುರವರು ಭೇಟಿ ಮಾಡಿ ರೈತರ ಬೇಡಿಕೆಗಳ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜುರವರು ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆಂದು ಭರವಸೆ ನೀಡಿದರು. ಪೂರ್ವ ಮುಂಗಾರು ಬೆಳೆ ಮಳೆ ಅಭಾವದಿಂದ ನಷ್ಟವಾದ ಕಾರಣ ಪರಿಹಾರ ನೀಡಬೇಕು. ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಬೇಕು, ಮುಂತಾದ ಬೇಡಿಕೆಗಳನ್ನು ವಿವರಿಸಿ, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು. ಇತ್ತೀಚೆಗೆ ಕೊಬ್ಬರಿ ಬೆಲೆ ಪಾತಾಳಕ್ಕೆ ಇಳಿದಿರುವ ಬಗ್ಗೆ ಮತ್ತು ನಫೆಡ್ ಕೇಂದ್ರಗಳಲ್ಲಿ ಕೊಬ್ಬರಿ ಖರೀದಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿಯೋಗದೊಂದಿಗೆ ಮಾತನಾಡಲು ಸಮಯ ಕೊಡುತ್ತೇವೆಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪಾವಗಡ: ಸಿದ್ದರಾಮಯ್ಯ ಸರ್ಕಾರ ಎಪಿಎಂಸಿ ಕೃಷಿ ಕಾಯ್ದೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಪೂಜಾರಪ್ಪ ಹಾಗೂ ಪದಾಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ಆರ್ ಎಂಸಿ ಮಾರುಕಟ್ಟೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಪೂಜಾರಪ್ಪ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದನ್ನು ವಿರೋಧಿಸಿ ದೇಶಾದ್ಯಂತ ರೈತರು ಉಗ್ರ ಹೋರಾಟ ಮಾಡಿದಾಗ, ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದ್ದರು. ಆದರೆ ರಾಜ್ಯ ಸರ್ಕಾರ ಮಾತ್ರ ಈ ಕಾಯ್ದೆ ವಾಪಸ್ ಪಡೆದಿರಲಿಲ್ಲ. ಇದರ ವಿರುದ್ಧ ನಮ್ಮ ರಾಜ್ಯದ ರೈತರು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಈ ಕಾಯ್ದೆಯನ್ನು ಹಿಂಪಡೆದಿರುವುದು ಸಂತಸ ತಂದಿದೆ ಎಂದರು. ಈ ಸಂದರ್ಭದಲ್ಲಿ ವೀರಭದ್ರಪ್ಪ, ಮಂಜುನಾಥ್, ರಾಮಾಂಜನೇಯ, ಕದ್ರೆಹಳ್ಳಿ ಮಂಜುನಾಥ್, ಮಾರಣ್ಣ,…
ಬೆಂಗಳೂರು, ಜೂನ್ 20: ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೆಹಲಿ ಪ್ರವಾಸ: ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ: ನಾಳೆ ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದು, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದರು. ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅಕ್ಕಿ ಖರೀದಿಗೆ ಪ್ರಯತ್ನ: ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಛತ್ತೀಸಗಢ ರಾಜ್ಯದೊಂದಿಗೆ…
ಬೆಂಗಳೂರಿನಲ್ಲಿ ಕೊನೆಗೂ ಇಂದಿರಾ ಕ್ಯಾಂಟೀನ್ ಮೆನೂ ಸಿದ್ಧಗೊಂಡಿದೆ. ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನೂ ರೆಡಿಯಾಗಿದೆ. ಈ ಹಿಂದಿನ ಮೆನೂಗೆ ಹಲವು ಬದಲಾವಣೆ ಮಾಡಿರುವ ಬಿಬಿಎಂಪಿ, ಬಗೆ ಬಗೆಯ ತಿಂಡಿ ತಿನಿಸುಗಳೊಂದಿಗೆ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದಿರಾ ಕ್ಯಾಂಟೀನ್ ಹೊಸ ಮೆನೂದಲ್ಲಿ ಇಡ್ಲಿ ಚಟ್ಟಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿಯನ್ನು ಸೇರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾತಿ ಹಿನ್ನಲೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಉಚಿತ ಬಸ್ ಪ್ರಾರಂಭದ ನಂತರ ಗಲಾಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರಯಾಣದ ವೇಳೆ ಏನೆಲ್ಲ ತೊಂದರೆಗಳು ಎದುರಾದಾಗ ಏನು ಮಾಡಬೇಕು ಎಂದು ಬೆಂಗಳೂರು ಪೊಲೀಸರಿಂದ ಮಹಿಳಾ ಪ್ರಯಾಣಿಕರಿಗೆ ಅರಿವು ಕಾರ್ಯಕ್ರಮ ಕೈಗೊಂಡಿದ್ದಾರೆ. ಮಹಿಳಾ ಪ್ರಯಾಣಿಕರಿಗಾಗಿ ನಗರದ ಇನ್ಸ್ ಪೆಕ್ಟರ್ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳಿಂದ ಅರಿವು ಕಾರ್ಯಕ್ರಮ ಮಾಡಲಾಗುತ್ತಿದೆ. ನಗರದ ಸೇಫ್ಟಿ ಐ ಲ್ಯಾಂಡ್ ಗಳ ಕುರಿತು ಪ್ರಯಾಣಿಕರಲ್ಲಿ ತಿಳಿ ಹೇಳಲಾಯಿತು. ಇನ್ಸ್ ಪೆಕ್ಟರ್ ಗಳೊಂದಿಗೆ ಹಿರಿಯ ಅಧಿಕಾರಿಗಳು ಕೂಡ ಬಸ್ ಹತ್ತಿದ್ದು, ಶಿವಾಜಿನಗರದಿಂದ ಕನ್ನಿಂಗ್ ಹ್ಯಾಮ್ ರಸ್ತೆ, ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆದ್ ವರೆಗೆ ರೌಂಡ್ ಹಾಕಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3, 63, 70, 179 ಮಹಿಳೆಯರು ಪ್ರಯಾಣ. ಮಹಿಳಾ ಸುರಕ್ಷತೆ ನಮ್ಮ ಮೊದಲ ಆದ್ಯತೆ: ಈ ವೇಳೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್…
ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಬರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದೆ. ಈ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ದರಪಟ್ಟಿ ಕರೆಯಲು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಭಾರತೀಯ ಆಹಾರ ಮಂಡಳಿ (ಎಫ್‌ಸಿಐ) ನಿಂದ 34 ರೂ. ಅಕ್ಕಿ, 2. 60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36. 40 ರೂ. ವೆಚ್ಚ ತಗಲುತ್ತದೆ. ಈ ಮೂರು…
ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಬರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದೆ. ಈ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ದರಪಟ್ಟಿ ಕರೆಯಲು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಭಾರತೀಯ ಆಹಾರ ಮಂಡಳಿ (ಎಫ್‌ಸಿಐ) ನಿಂದ 34 ರೂ. ಅಕ್ಕಿ, 2. 60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36. 40 ರೂ. ವೆಚ್ಚ ತಗಲುತ್ತದೆ. ಈ ಮೂರು…
ನಾಯಂಡಹಳ್ಳಿ ಮೆಟ್ರೊ ನಿಲ್ದಾಣ ಬಳಿಯ ಪಂತರಪಾಳ್ಯ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಡೆಲಿವರಿ ಬಾಯ್ ಪ್ರಸನ್ನ ಕುಮಾರ್ (25) ಮೃತಪಟ್ಟಿದ್ದಾರೆ. ಎಚ್. ಡಿ. ಕೋಟೆಯ ಪ್ರಸನ್ನ ಕುಮಾರ್ ಡೆಲಿವರಿ ಬಾಯ್ ಆಗಿದ್ದರು. ಮೈಸೂರು ರಸ್ತೆಯಲ್ಲಿ ಭಾನುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ’ ಎಂದು ಬ್ಯಾಟರಾಯನಪುರ ಸಂಚಾರ ಪೊಲೀಸರು ಹೇಳಿದರು. ‘ಅಪಘಾತಕ್ಕೆ ಕಾರಣವಾದ ಕಾರು ಚಾಲಕ ವಿನಾಯಕ್ ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರೇ ಆತನನ್ನು ಬೆನ್ನಟ್ಟಿ ಹಿಡಿದು ಥಳಿಸಿ ಠಾಣೆಗೆ ಒಪ್ಪಿಸಿದ್ದಾರೆ. ಪಾನಮತ್ತನಾಗಿ ಆತ ಕಾರು ಚಲಾಯಿಸಿದ್ದನೆಂಬುದು ವೈದ್ಯಕೀಯ ಪರೀಕ್ಷೆಯಿಂದ ಗೊತ್ತಾಗಿದೆ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಆಗ್ರಹಿಸಿದ್ದಾರೆ. ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‌ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ 9/6/23 ರಂದು ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ತಿಳಿಸಿದ್ದಾರೆ. 13/6/23 ರಂದು…