Author: admin

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ಮಹಿಳಾ ಉದ್ಯಮಿಯ ಹಲ್ಲೆ ನಡೆಸಿ ಕಿಟ್ರ್ಯಾಪ್ ಮಾಡಲು ಯತ್ನಿಸಿ, ಜಾಲಹಳ್ಳಿ ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್ ಆಗಿದ್ದಾರೆ. ಹೋಟೆಲ್ ಉದ್ಯಮಿ ಆಗಿರುವ ಪಂಕಜಾ ಅವರನ್ನು ಬುರ್ಖಾ ಧರಿಸಿ ಬಂದಿದ್ದವರು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಹಿಂಬಾಲಿಸಿದ ಪೊಲೀಸರು ಬಿಇಎಲ್ ಸರ್ಕಲ್ ಬಳಿ ಅಡ್ಡಹಾಕಿ ಉದ್ಯಮಿ ಪಂಕಜ ಅವರನ್ನು ರಕ್ಷಣೆ ಮಾಡಿದ್ದಾರೆ.

Read More

ಈ ವರ್ಷದ ವೈದ್ಯಕೀಯ ನೊಬೆಲ್ ಪ್ರಶಸ್ತಿಯು ಹಂಗೇರಿಯನ್-ಅಮೆರಿಕನ್ ಜೀವ ರಸಾಯನಶಾಸ್ತ್ರಜ್ಞ ಕ್ಯಾಥ್ಲೀನ್ ಕ್ಯಾರಿಕೊ ಮತ್ತು ಅಮೆರಿಕನ್ ಮೂಲದ ವೈದ್ಯ ಮತ್ತು ವಿಜ್ಞಾನಿ ಡ್ರೂ ವೈಸ್ಮನ್ ಅವರಿಗೆ ಸಂದಿದೆ. ಅವರ ಆವಿಷ್ಕಾರಗಳು ಕೋವಿಡ್-19 ವಿರುದ್ಧ mRNA ಲಸಿಕೆಯನ್ನು ಅಭಿವೃದ್ಧಿಪಡಿಸಲು ಕಾರಣವಾಯಿತು. ಸಾಹಿತ್ಯ ಮತ್ತು ಶಾಂತಿ ಸೇರಿದಂತೆ ಇತರ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹಂಗೇರಿಯ ಸಗಾನ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಕಟೆಲಿನ್ ಕರಿಕೊ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡ್ರೂ ವೈಸ್ಮನ್ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಅವರು ನಡೆಸಿದ ಸಂಶೋಧನೆಯು ಕೋವಿಡ್ ಲಸಿಕೆ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಿದೆ. ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯ ದಿನವಾದ ಡಿಸೆಂಬರ್ 10 ರಂದು ಸ್ಟಾಕ್‌ ಹೋಮ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಪ್ರಮಾಣಪತ್ರ, ಚಿನ್ನದ ಪದಕ ಮತ್ತು 10 ಲಕ್ಷ ಡಾಲರ್‌ ಗಳನ್ನು ಒಳಗೊಂಡಿದೆ.

Read More

ಬೆಂಗಳೂರು: ವಿದೇಶಿ ಮೂಲದ ಯುವತಿಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ಮಾದಕ ವಸ್ತು ವ್ಯವಹಾರ, ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆ. ಆರ್. ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಡ್ರಗ್ ಹಾಗೂ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಆಫ್ರಿಕಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ದಂಧೆ ನಡೆಸುತ್ತಿದ್ದವರು ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಲಾಗಿದೆ. ಯುವತಿಯರ ಪಾಸ್‌ ಪೋರ್ಟ್ ಕಸಿದಿಟ್ಟುಕೊಂಡು ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.

Read More

ಬೆಂಗಳೂರು: ಬೆಂಗಳೂರಿನ ಬೆಟ್ಟಹಲಸೂರು ಗ್ರಾಮದಲ್ಲಿ ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್‌ ಗಳು ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್‌ ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ನಾಲೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್ ‌ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್ ‌ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ, ತಾಯಿ- ಮಗು ಸಜೀವ ದಹನಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ. ಕಾರು, ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಅದರೊಳಗೇ ಸುಟ್ಟು ಹೋಗಿದ್ದಾರೆ.

Read More

ಬೆಂಗಳೂರು: ಹೆಚ್‌.ಡಿ. ಕುಮಾರಸ್ವಾಮಿ ಅವರ ಸಕಲ ವಿದ್ಯೆಗಳೂ ನನಗೆ ಗೊತ್ತಿತ್ತು. ಆದರೆ, ಅವರು ಪ್ಯಾಂಟ್‌ ಒಳಗೆ ಆರ್ ‌ಎಸ್‌ ಎಸ್‌ ಚೆಡ್ಡಿ ಹಾಕಿದ್ದು ಗೊತ್ತೇ ಆಗಲಿಲ್ಲ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ನಾನಾ ಜೆಡಿಎಸ್‌ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜೆಡಿಎಸ್‌ ನಿಂದ ಹೊರಬರುತ್ತಿರುವ ಪ್ರಮುಖರನ್ನು ನಗರದ ಅರಮನೆ ಮೈದಾನದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜಿಸಿ ಕಾಂಗ್ರೆಸ್‌ ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯಿಂದ ಜಾತ್ಯತೀತ ಮನೋಭಾವದ ನೂರಾರು ನಾಯಕರು ಬೇಸರಗೊಂಡಿದ್ದು, ಕಾಂಗ್ರೆಸ್‌ ಸೇರ್ಪಡೆಗಾಗಿ ನನ್ನ ಸಂಪರ್ಕದಲ್ಲಿದ್ದಾರೆ. ದೇವೇಗೌಡರು ಈಗಲೂ ಸೆಕ್ಯುಲರ್‌. ಅವರಿಂದ ನಮ್ಮ ಮುಸ್ಲಿಂ ಸಮಾಜಕ್ಕೆ ನ್ಯಾಯ ಸಿಕ್ಕಿದೆ ಮತ್ತು 2ನೇ ಹಂತದ ನಾಯಕರನ್ನೂ ಬೆಳೆಸಿದ್ದಾರೆ. ಆದರೆ, ಕುಮಾರಸ್ವಾಮಿ ಖಂಡಿತವಾಗಿ ಸೆಕ್ಯುಲರ್‌ ಅಲ್ಲ. ಮುಸ್ಲಿಂ ಸಮುದಾಯದವರು ಅನಿವಾರ್ಯವಾಗಿ ನನಗೆ ಮತಹಾಕಿದರು ಎಂದು ಅವರು ಹೇಳಿಕೊಂಡಿರುವುದು ನೋವು ತಂದಿದೆ ಎಂದರು.

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಪಂ ವ್ಯಾಪ್ತಿಯ ವಾಡೇನ್ ಬಾಗ್ ತಾಂಡಕ್ಕೆ ಸೋಮವಾರ ಭೇಟಿ ನೀಡಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಭೀಮಸೇನರಾವ ಶಿಂಧೆ, ತಾಂಡದ ಜನರ ಸಮಸ್ಯೆ ಆಲಿಸಿದರು. ತಾಂಡದಲ್ಲಿನ ಶಾಲೆ, ಅಂಗನವಾಡಿ, ರಸ್ತೆ ಸೇರಿದಂತೆ ವಿದ್ಯುತ್ ಸೌಕರ್ಯಗಳ ಕುರಿತು ತಾಂಡದ ನಿವಾಸಿಗಳಿಂದ ಮಾಹಿತಿ ಪಡೆದರು. ಈ ವೇಳೆ ಗ್ರಾಮದ ನಿವಾಸಿ ಬಾಬುರಾವ ಎನ್ನುವರು ಸಾಹೇಬ್ರೆ ನಮಗೆ ರಸ್ತೆ ಮಾಡಿಸಿಕೊಡಿ ಮಕ್ಕಳು ನಿತ್ಯ ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿದೆ ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಅವರು,  ತಾಂಡಕ್ಕೆ ಹೋಗಲು ರಸ್ತೆಯಿಲ್ಲ ಎಂಬ ಬಗ್ಗೆ ಮಾಹಿತಿ ಬಂದಿದೆ.  ಆದ್ದರಿಂದ ತಾಂಡಕ್ಕೆ ಭೇಟಿ ಎಲ್ಲ ರಸ್ತೆ ಸೇರಿದಂತೆ ಎಲ್ಲ ಸಮಸ್ಯೆಗಳು ವಿಚಾರಿಸಲಾಗುತ್ತಿದೆ. ಸರಕಾರಕ್ಕೆ ಪತ್ರ ಬರೆಯುವ ಮೂಲಕ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಈಗಾಗಲೇ ಕಾಂಗ್ರೆಸ್ ಸರಕಾರ ಕೆಕೆಆರ್‌ ಡಿಬಿಯಿಂದ ನಿರೀಕ್ಷೆಗೂ ಮೀರಿ ಹಣ ನೀಡಲಿದೆ. ಈ ಹಣ ತಾಲೂಕಿನ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿ ಮಾಡಬೇಕಿದೆ. ಜನರಿಗೆ ಸಮಸ್ಯೆ…

Read More

ಬೀದರ್:  ವಿದ್ಯುತ್ ತಂತಿ ತಗುಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ ಮಲ್ಲಿಕಾರ್ಜುನ (51) ಹಾಗೂ ಶರಣಮ್ಮ (40) ಮೃತಪಟ್ಟ ರೈತ ದಂಪತಿಯಾಗಿದ್ದಾರೆ.  ತಮ್ಮಹೊಲದಲ್ಲಿ ಕೃಷಿ ಕೆಲಸಕ್ಕೆಂದು ತೆರಳುವ ವೇಳೆ ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪರಿಸರ ಮತ್ತು ಅರಣ್ಯ ಸಚಿವ  ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಈ ಸುದ್ದಿ ಕೇಳಿ ತುಂಬಾ ದುಃಖವಾಯಿತು.  ಮೃತ ದಂಪತಿ ಆತ್ಮಕ್ಕೆ ಶಾಂತಿ ಸಿಗಲಿ, ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸಿದರು. ಇಂತಹ ದುರ್ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಜೋತು ಬಿದ್ದಿರುವ ಮತ್ತು ಜಾಯಿಂಟ್ ಹಾಕಲಾಗಿರುವ ವಿದ್ಯುತ್ ತಂತಿಗಳ ಪರಿಶೀಲನೆ ಮಾಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.  ಮೃತ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಚೆಸ್ಕಾಂ ಮತ್ತು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.…

Read More

ಕುಮಾರ್ ಪೆರ್ನಾಜೆ, ಪುತ್ತೂರು ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೇಕಾಯಿ ರಾಮಬಾಣ ನುಗ್ಗೆಕಾಯಿಯನ್ನು ತಿನ್ನುವುದರಿಂದ ಏನಾಗುತ್ತದೆ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮ. ಚೋಟುದ್ದವಿದ್ದ ನುಗ್ಗೆಕಾಯಿ ಫಿಟುದ್ದ ಆಯಿತು ಹೈಬ್ರಿಡ್ ಬಂತು ಆದರೆ ಇತ್ತೀಚೆಗೆ ಮಾರುದ್ದದ ಚಿಕ್ಕ ಚಿಕ್ಕ ಗಿಡಗಳಲ್ಲಿ ಮೀಟರ್ ನುಗ್ಗೆಕಾಯಿ ಗಳು ಬಂಟ್ವಾಳ ತಾಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟರ ಹಿತ್ತಲಲ್ಲಿ ಬೆಳೆದ ಮೀಟರ್ ನುಗ್ಗೆಕಾಯಿ ನೋಡುಗರ ಕಣ್ತುಂಬಿ ಕಣ್ ಮನಸೆಳೆಯಿತು ಕ್ಯಾಮರಾ ಕಣ್ಣಲ್ಲಿ ಸೆರೆಯಾಯಿತು. ಪ್ರಾರಂಭದಲ್ಲಿ ಮೀಟರ್ ಅಲಸಂಡೆ ಬಂತು ನಾವು ಚಿಕ್ಕದಿರುವಾಗ ತರಕಾರಿಗಳ ಬಗ್ಗೆ ತೊಂಡೆಕಾಯಿ ಬೆಂಡೆಕಾಯಿ ತೋಟದಲ್ಲಿದೆ ಎಂದು ಹಾಡಿದ್ದೇನು ಪಡುವಾಲಕಾಯಿ ಮಾತ್ರ ಇಷ್ಟುದ್ದ ಎಂದು ಡ್ಯಾನ್ಸ್ ಮಾಡುತ್ತಾ ಹೇಳಿದ್ದೇವೆ ಆದರೆ ಇತ್ತೀಚೆಗೆ ಹೀರೆಕಾಯಿ ಸೋರೆಕಾಯಿ ಮುಳ್ಳು ಸೌತೆ ಹಾಗಲಕಾಯಿ ಎಲ್ಲಾ…

Read More

ಬೆಂಗಳೂರು:  ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವದರಿಂದ ಆಗುವ ಅನುಕೂಲಗಳು, ವಿದ್ಯುತ್ ಉತ್ಪಾದನೆಯ ಪ್ರಮಾಣ ಮುಂತಾದ ವಿಷಯಗಳ ಬಗ್ಗೆ ವಿಸ್ತ್ರುತ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಸೂಚನೆ ನೀಡಿದರು. ಇಂದು ಭಾರತೀಯ ವಿಜ್ಞಾನ ಸಂಸ್ಥೆ ಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆಯನ್ನ ನಡೆಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿ ಐ ಐ ಎಸ್‌ ಸಿ (ಭಾರತೀಯ ವಿಜ್ಞಾನ ಸಂಸ್ಥೆಯ) ಸಹಯೋಗದಲ್ಲಿ ರಾಜ್ಯದ ಹಲವಾರು ಇಲಾಖೆಗಳ ಸಂಶೋಧನೆ ಹಾಗೂ ವರದಿ ಸಿದ್ಧಪಡಿಸುತ್ತದೆ. ಸಿದ್ದಪಡಿಸುತ್ತಿದೆ. ಹಾಗೆಯೇ, ತಾಂತ್ರಿಕ ಸಲಹೆಯನ್ನು ನೀಡುತ್ತಿದೆ. ಎನ್ಆರ್ಡಿಎಂಎಸ್ ಮೂಲಕ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯ ಮಾಡುತ್ತಿದೆ. ಅಲ್ಲದೆ, ಜನರಲ್ಲಿ ವೈಜ್ಞಾನಿಕ ಭಾವನೆ ಬೆಳೆಸುವಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಂಡಳಿಯು…

Read More