Subscribe to Updates
Get the latest creative news from FooBar about art, design and business.
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
- ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
- ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
Author: admin
ತುಮಕೂರು: ಸಾಲಭಾದೇ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಯಲ್ಲಿ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲಿಗೆ ಸಿಲುಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆಯ ಪ್ರಯುಕ್ತ ಅವರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಇಂದು ದೇಶದ ಇಬ್ಬರು ಮಹಾಚೇತನರಾದ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿ ಅವರ ದೂರದೃಷ್ಟಿಯನ್ನು ನೆನೆಯುವ ದಿನ.ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ. ಅವರ ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ.ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ನಮ್ಮನ್ನು ಬಂದೂಕಿನ ಗುಂಡಿನ ಮೂಲಕ ಕುಗ್ಗಿಸಬಹುದು ಎಂದು ಬ್ರಿಟೀಷರು ಭಾವಿಸಿದ್ದರು. ಆದರೆ ನಮ್ಮ ನಾಯಕರುಗಳು ಆ ಗುಂಡಿಗೆ ಎದೆಕೊಟ್ಟು ಪ್ರಾಣತ್ಯಾಗ ಮಾಡಿದ ಪರಿಣಾಮ ಇಂದು ದೇಶದಲ್ಲಿ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದರು. ಈ ದೇಶದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಪಕ್ಷ 60 ವರ್ಷಗಳ ಕಾಲ ಆಡಳಿತ ಮಾಡಿ ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ,…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಸೋಮವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಭಾರತದ ಹೆಮ್ಮೆ. ಸತ್ಯ, ಅಹಿಂಸೆಯ ಮೂಲಕ ಜಗದ ಹೃದಯ ಗೆದ್ದ ಮಹಾತ್ಮರು. ಅಕ್ಟೋಬರ್ 2 ಭಾರತದ ಜನತೆಯ ಪಾಲಿನ ಮಹತ್ವದ ದಿನ. ಈ ವರ್ಷ ನಾವು ಗಾಂಧೀಜಿಯವರ 154ನೇ ಜಯಂತಿಯನ್ನು ಆಚರಿಸುತ್ತೇವೆ. ಗಾಂಧೀಜಿ ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಮತ್ತು ಅದರಂತೆ ನಡೆಯುವ ಪಣ ತೊಡುವ ದಿನವಿದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ.ಸುರೇಶ್ .ಸಿ. ಮತ್ತು ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತುಮಕೂರು: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗೇಟ್ ಬಳಿಕ ನಡೆದಿದೆ. ಮೃತರನ್ನು ಸಹೋದರರಾದ ಪವನ್ 20 ವರ್ಷ, ಬಾಲಾಜಿ(18) , ತಾಯಿ ಅನಿತಾ (40) ಎಂದು ಗುರುತಿಸಲಾಗಿದೆ. ದ್ವಿಚಕ್ರವಾಹನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಟ್ಟಿದ್ದಾರೆ. ಮೃತರನ್ನು ಸವಾರರು ಮಧುಗಿರಿ ಮೂಲದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಕೊರಟಗೆರೆ ಸಬ್ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದರು. ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಾಯಿ ಮಗ ಹಾಗೂ ಅಣ್ಣನ ಮಗ ದುರಂತದಲ್ಲಿ ಮೃತಪಟ್ಟಿದ್ದಾರೆ. ಮಧುಗಿರಿ ಮೂಲದ ವೀರೇನಹಳ್ಳಿ ತಾಂಡದ ವಾಸಿಗಳು ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ, ತಮಿಳುನಾಡು ಮೂಲದವನಾದ ಈತ ವರ್ಕ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದನು. ವಸಂತನಗರದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ವಾಯು ವಿಹಾರ ಮಾಡುತ್ತಿದ್ದ ಯುವತಿಯನ್ನು ಕಂಡು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ನಂತರ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ತಬ್ಬಿಕೊಂಡು ನಂತರ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.
ಮೋಹನ್ ದಾಸ್ ಕರಮ್ ಚಂದ್ರ ಗಾಂಧಿ ಎನ್ನುವುದು ಕೇವಲ ಹೆಸರಲ್ಲ ಇದು ಭಾರತದ ಆತ್ಮ. ಸ್ವತಂತ್ರ ಹೋರಾಟದ ಅಸ್ತ್ರವಾಗಿದ್ದ ಗಾಂಧಿ ವಿಚಾರಗಳು ಇಂದಿಗೂ ಪ್ರಸ್ತುತ. ಅಕ್ಟೋಬರ್ 2 ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ಇಡೀ ಮಾನವ ಕುಲಕ್ಕೆ ನೀಡಿದ ಕೊಡುಗೆಗಳ ಸ್ಮರಣೆ ಮಾಡಲೇಬೇಕು. ಈ ದಿನವನ್ನ ಇಡೀ ವಿಶ್ವವೇ ಶಾಂತಿ ದಿನವೆಂದು ಆಚರಣೆ ಮಾಡುತ್ತದೆ. ಅವರ ಸತ್ಯ ಮತ್ತು ಅಹಿಂಸೆಯ ಮಾರ್ಗಗಳು ಜಗತ್ತಿನ ಅನೇಕ ನಾಯಕರುಗಳನ್ನು ಮಹಾತ್ಮರ ವ್ಯಕ್ತಿತ್ವಕ್ಕೆ ಪ್ರಭಾವಿತಗೊಳಿಸಿದ್ದವು. ಗ್ರಾಮೀಣ ಸರ್ವಾಂಗಿನ ಅಭಿವೃದ್ಧಿ ಇಂದಾಗಿ ದೇಶದ ಅಭಿವೃದ್ಧಿವಾಗಲಿದೆ ಎಂಬ ದೃಢವಾದ ನಂಬಿಕೆ ಅವರದಾಗಿತ್ತು. ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಶತಕಗಳ ಹಿಂದೆಯೇ ಯೋಚನೆ ಮಾಡಿದ್ದರು. ಅದರಂತೆ ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಮಹತ್ವವನ್ನು ಗಾಂಧೀಜಿಯವರು ನೀಡುತ್ತಿದ್ದರು. ಅದರ ಪರಿಕಲ್ಪನೆಯ ಪಲವಾಗಿ ಈಗ ಪಂಚಾಯತ್ ರಾಜ್ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳನ್ನು ಸದೃಢವಾಗಿ ಮತ್ತು ಪ್ರಗತಿ ಪರವಾಗಿ ನಡೆಸಿಕೊಂಡು ಬರುತ್ತಿದೆ. ಪ್ರಜಾಪ್ರಭುತ್ವದ ತಳಹದಿಯ ಮೇಲೆ ಗ್ರಾಮ ಸ್ವರಾಜ್ ಗಾಂಧೀಜಿ ಕಂಡ ಕಲ್ಪನೆಯ ವಾಸ್ತುವತೆಯನ್ನು…
ಬೆಂಗಳೂರು: ಹೊರವಲಯದಲ್ಲಿ ಹುಟ್ಟುಹಬ್ಬದ ಆಚರಣೆ ವೇಳೆ ಅವಘಡ ಸಂಭವಿಸಿದೆ. ಹೀಲಿಯಂ ಬ್ಲಾಸ್ಟ್ ಆಗಿ ಐವರಿಗೆ ಗಾಯವಾಗಿದೆ. ನಿನ್ನೆಹುಟ್ಟುಹಬ್ಬದ ಆಚರಣೆ ವೇಳೆ ಘಟನೆ ಸಂಭವಿಸಿದ್ದು, ಓರ್ವ ವ್ಯಕ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಈ ಘಟನೆಯಲ್ಲಿ ವಿಜಯ್ ಕುಮಾರ್ (44) ಧ್ಯಾನ್(7), ಸಂಜಯ್(8), ಸೋಹಿಲಾ (3) ಗಾಯಗೊಂಡಿದ್ದಾರೆ. ದೇಹದದಲ್ಲಿ ಕೈ-ಕಾಲು ಮುಖದ ಭಾಗಗಳು ಸುಟ್ಟು ಹೋಗಿದ್ದು, ಚರ್ಮವು ಸುಟ್ಟು ಹೋಗಿದೆ.
ಬೆಂಗಳೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಹಿರಿಯರನ್ನು ಸಾಕುವ ಜವಾಬ್ದಾರಿ ನಮ್ಮದು: ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ. ಹಿರಿಯ ಜೀವಗಳ…
ಬೆಂಗಳೂರು: “ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅಭಿಪ್ರಾಯ ಪಟ್ಟರು. ಚಿತ್ರಕಲಾ ಪರಿಷತ್ ನಲ್ಲಿ ಕಾವೇರಿ ಸಮಸ್ಯೆ ಬಗ್ಗೆ ಮಾಧ್ಯಮಗಳು ಭಾನುವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೀಗೆ ಹೇಳಿದರು. ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಯೋಗ್ಯ ತೀರ್ಮಾನ ತೆಗೆದುಕೊಳ್ಳಬೇಕು. ಶಾಶ್ವತ ಪರಿಹಾರಕ್ಕೆ ಇದೊಂದೇ ಮಾರ್ಗ. “ಮಳೆ ಕಡಿಮೆ ಆದಾಗ ಕಾವೇರಿ ವಿವಾದ ಸದ್ದು ಮಾಡುತ್ತದೆ. ಮಳೆಗಾಲದಲ್ಲಿ ನೀರಿನ ಪ್ರಮಾಣ ಕುಸಿದಾಗ ನೀರಿಗೆ ಒತ್ತಡ ಇರುತ್ತದೆ. ನಮಗೆ ಹೋಲಿಸಿದರೆ ತಮಿಳುನಾಡಿನ ವಸ್ತುಸ್ಥಿತಿ ನಾಚಿಸುವಂತೆ ಇದೆ. ನಾನು ಸಿಎಂ ಆಗಿದ್ದಾಗಲೂ ಕಾವೇರಿ ನೀರು ಹಂಚಿಕೆ ಬಗ್ಗೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆಗ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಸಿಎಂಗಳ ಜೊತೆ ಸಂಧಾನ ಮಾಡಲು ಪ್ರಯತ್ನಿಸಿದ್ದರು. ಆದರೆ ಸಫಲ ಆಗಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟ್…
ಬೀದರ್: ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದುತ್ತಿರುವ ಪಿ.ಎಸ್.ಐ. ಬೀದರ ನಗರ ಪೊಲೀಸ್ ಠಾಣೆಯ ಮೋಹನ ಮಹಾರಾಜ, ಎ.ಎಸ್.ಐ ಮಾರ್ಕೆಟ್ ಠಾಣೆಯ ವಿನೋದ, ಎ.ಎಸ್.ಐ ಗಾಂಧಿಗಂಜ ಠಾಣೆಯ ಹಸನಸಾಬ್ ಅವರನ್ನು ಬೀಳ್ಕೊಡಲಾಯಿತು. ನಿವೃತ್ತ ಅಧಿಕಾರಿಗಳು ತಮ್ಮ ನಿವೃತ್ತಿ ಜೀವನವನ್ನು ಸುಖ, ಶಾಂತಿ, ನೆಮ್ಮದಿಯಿಂದ ಕಳೆಯುವಂತಾಗಲಿ ಹಾಗೂ ಅವರ ಅನುಭವದಿಂದ ಸಮಾಜಕ್ಕೆ ಏನಾದರೂ ಕೊಡುಗೆ ದೊರೆಯುವಂತಾಗಲಿ ಎಂದು ಹಾರೈಸಿದ ಅಧಿಕಾರಿಗಳು, ಸಿಬ್ಬಂದಿ ನೆನಪಿನ ಕಾಣಿಕೆ ನೀಡು ಶುಭ ಹಾರೈಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್