Author: admin

ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ ಎಂದರು. ಒಂದು ಗ್ರಾಮಕ್ಕೆ ಕುಡಿಯುವ ನೀರು ಆರೋಗ್ಯದ ಜೊತೆಗೆ ಶಾಲಾ ಕೊಠಡಿಗಳು ಮುಖ್ಯವಾಗಿದೆ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆ ಅಡಿಯಲ್ಲಿ ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ ಎಂದರು. ರೈತನ ಭೂಮಿ ಎಷ್ಟಿದೆ ಅಷ್ಟೇ ಇದೆ. ಆದರೆ, ಕುಟುಂಬದ ಸದಸ್ಯರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಶಿಕ್ಷಣ ಅತ್ಯಂತ ಮುಖ್ಯ ಆದ್ದರಿಂದ ನಾನು ಶಿಕ್ಷಣಕ್ಕೆ 13% ಅನುದಾನ ನೀಡಿದ್ದೇನೆ. ಆರೋಗ್ಯ ಕ್ಷೇತ್ರಕ್ಕೆ 12% ಅನುದಾನ ನೀಡಿದ್ದೇನೆ.…

Read More

ರಾಜ್ಯದಲ್ಲಿನ ಹೊಸ ವಿಮಾನ ನಿಲ್ದಾಣಗಳನ್ನು ರಾಜ್ಯ ಸರಕಾರದ ವತಿಯಿಂದಲೇ ನಿರ್ವಹಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸದ್ಯಕ್ಕೆ ನಾವು ಸಾವಿರಾರು ಕೋಟಿ ರೂ. ವಿನಿಯೋಗಿಸಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಆದರೆ ಬಳಿಕ ಇವುಗಳನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟುಕೊಡುತ್ತಿದ್ದೇವೆ. ಅವರು, ಇವುಗಳನ್ನು ಅದಾನಿ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಗೆ ವಹಿಸುತ್ತಿದ್ದಾರೆ. ಹೀಗಾಗಿ ನಮ್ಮದೇ ವಿಮಾನ ನಿಲ್ದಾಣಗಳ ಮೇಲೆ ನಮಗೆ ಯಾವ ಹಕ್ಕೂ ಇಲ್ಲದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ಭಾವನೆ ಇದೆ. ವಿಮಾನ ನಿಲ್ದಾಣ ಪ್ರಾಧಿಕಾರದವರು ಯಾರಿಗೋ ವಹಿಸುವ ಬದಲು ನಾವೇ ಆ ಕೆಲಸವನ್ನು ಮಾಡಬಹುದು. ಸದ್ಯಕ್ಕೆ ಇದನ್ನು ಎಲ್ಲ ಮಗ್ಗುಲಿನಿಂದಲೂ ಪರಿಶೀಲಿಸಲಾಗುತ್ತಿದೆ. ಮಹಾರಾಷ್ಟ್ರದ ಮಾದರಿಯನ್ನೂ ಗಮನಿಸುತ್ತಿದ್ದೇವೆ. ಸದ್ಯದ ವ್ಯವಸ್ಥೆಯಲ್ಲಿ ರಾಜ್ಯದ ಅಹವಾಲುಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಕನಿಷ್ಠಪಕ್ಷ ಆಲಿಸುವುದೂ ಇಲ್ಲ ಎಂದು ಎಂ. ಬಿ.…

Read More

ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಜೂನ್ 20 ರಂದು ಅಂದರೆ ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಕಾಂಗ್ರೆಸ್  ಜಿಲ್ಲಾ ಘಟಕಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಂದಿನ ಹಂತದಲ್ಲಿ ಬ್ಲಾಕ್ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದೆ. ಹೀಗಾಗಿ ರಾಜ್ಯಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ಕ್ರಿಶ್ಚಿಯನ್ ಧರ್ಮಗುರು ಪೀಟರ್ ಮಚಾಡೋ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಗುರುವನ್ನು ಭೇಟಿ ಮಾಡಿದರು. ಮಿಲ್ಲರ್ಸ್ ರಸ್ತೆಯಲ್ಲಿರೋ ಬಿಷಪ್ ನಿವಾಸಕ್ಕೆ ಭೇಟಿ ನೀಡಿದ ಸಿಎಂಗೆ ಹೂಗುಚ್ಛ ನೀಡಿದ ಧರ್ಮಗುರು ಡಾ. ಪೀಟರ್  ಮಚಾಡೋ ಬರಮಾಡಿಕೊಂಡರು. ಸಿಎಂ ಭೇಟಿ ಬಗ್ಗೆ ಜಾರ್ಜ್ ಸ್ಪಷ್ಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕ್ರಿಶ್ಚಿಯನ್ ಬಿಷಪ್ ಅನ್ನು ಭೇಟಿಯಾಗಿ ಆಶೀರ್ವಾದ  ತಗೊಂಡಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ಬೆಂಗಳೂರಿನಲ್ಲಿ ಮಾತನಾಡಿ, ಇದು ಸೌಹರ್ದಯುತ ಭೇಟಿ ಎಂದು ತಿಳಿಸಿದರು. ಸುತ್ತೂರು ಶ್ರೀ ಸೇರಿದಂತೆ ಎಲ್ಲಾ ಧರ್ಮದ ಗುರುಗಳನ್ನು ಭೇಟಿಯಾಗಿದ್ದಾರೆ. ಅದೇ ರೀತಿ ಇಂದು ಮುಸ್ಲಿಂ ಧರ್ಮಗುರುಗಳು ಮತ್ತು ಕ್ರಿಶ್ಚಿಯನ್ ಧರ್ಮಗುರುಗಳನ್ನು ಭೇಟಿಯಾಗಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಿಎಂಗೆ ಸಚಿವ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸ್ಥಳೀಯ ಮುಖಂಡರ ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೊಗ್ಗ: ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ಗೊಂದಲ ಉಂಟು ಮಾಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲಿಕ್ಕೆ ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ. ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ. ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಟಿ.ಬಿ.ಕ್ರಾಸ್ ನಲ್ಲಿರುವ ಎಸ್‌ ಬಿಜಿ ಮಹಾ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್ ಕುಮಾರ್ ನೇತೃತ್ವದ ಕರ್ನಾಟಕದ ತಂಡ ಟೇಬಲ್ ಟೆನಿಸ್ ತಂಡ ರಾಷ್ಟ್ರಮಟ್ಟದ ಚಿನ್ನದ ಪದಕವನ್ನು ಗೆದ್ದಿದೆ. ಇದೇ ತಿಂಗಳ ದಿನಾಂಕ 6 ರಿಂದ 13 ರವರೆಗೆ ಭೋಪಾಲ್ ನ ,ಟಿ.ಟಿ.ಸ್ಟೇಡಿಯಂನಲ್ಲಿ ನಡೆದ 19 ವರ್ಷದೊಳಗಿನ  ಬಾಲಕರ ಟೇಬಲ್ ಟೆನಿಸ್ ಕ್ರೀಡೆಯಲ್ಲಿ ಮಹಾರಾಷ್ಟ್ರದ ತಂಡದ ವಿರುದ್ಧ ಉದಯ್ ಕುಮಾರ್ ರವರ ನೇತೃತ್ವದ ತಂಡ ರಾಷ್ಟ್ರಮಟ್ಟದ ಚಿನ್ನದ ಪದಕವನ್ನು ಗೆದ್ದು ವಿಜೇತರಾಗಿ ಹೊರಹಮ್ಮಿದ್ದಾರೆ . ಈ ತಂಡದಲ್ಲಿ 1 .ಆಕಾಶ್ ಕೆ ಜೆ , 2 .ರೋಹಿತ್ ಶಂಕರ್,  3. ಯಶವಂತ್ ಪಿ, 4. ಆದಿತ್ಯ ಜಿ , 4. ವಿಲಿಯನ್ ಥಾಮಸ್. ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಾಗಿರುತ್ತಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…

Read More

ರಾಜಕೀಯ ಪಾದಾರ್ಪಣೆಯ ಊಹಾಪೋಹಗಳ ನಡುವೆ ತಮಿಳು ನಟ ವಿಜಯ್ ಸಾರ್ವಜನಿಕವಾಗಿ ರಾಜಕೀಯ ಮಾತನಾಡಿದ್ದಾರೆ. ಮತಕ್ಕಾಗಿ ಹಣ ಪಡೆಯುವುದನ್ನು ನಿಲ್ಲಿಸುವಂತೆ ಪೋಷಕರಿಗೆ ತಿಳಿಸಬೇಕು ಎಂದು ವಿದ್ಯಾರ್ಥಿಗಳೊಂದಿಗೆ ನಡೆದ ಚರ್ಚೆಯಲ್ಲಿ ವಿಜಯ್ ಹೇಳಿದರು. 10 ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಚೆನ್ನೈನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಜಯ್ ಅವರ ಅಭಿಮಾನಿಗಳ ಸಂಘಟನೆಯಾದ ವಿಜಯ್ ಮಕ್ಕಳ್ ಇಯಕಂ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ನೀವು ನಾಳಿನ ಮತದಾರರು. ಮುಂದಿನ ನಾಯಕನನ್ನು ಆಯ್ಕೆ ಮಾಡುವವರು ಭವಿಷ್ಯದ ಮತದಾರರಾದ ನೀವೇ. ಇಂದು ಜನರು ಹಣಕ್ಕಾಗಿ ಮತ ಹಾಕುತ್ತಿದ್ದಾರೆ. ಒಂದು ಮತಕ್ಕೆ 1000 ರೂ.ನಂತೆ ಒಂದೂವರೆ ಲಕ್ಷ ಮತದಾರರಿರುವ ಕ್ಷೇತ್ರಕ್ಕೆ ಸುಮಾರು 15 ಕೋಟಿ ರೂ. ವೋಟಿಗಾಗಿ 15 ಕೋಟಿಯವರೆಗೂ ಖರ್ಚು ಮಾಡಬೇಕೆಂದಿದ್ದರೆ ಆ ವ್ಯಕ್ತಿ ಎಷ್ಟು ಸಂಪಾದಿಸುತ್ತಾನೆ ಎಂದು ಯೋಚಿಸಿ’ – ವಿಜಯ್ ಹೇಳಿದರು. ಯಾವುದು ಸರಿ ಮತ್ತು ಯಾವುದು ತಪ್ಪು? ಯಾವುದನ್ನು ನಂಬಬೇಕು ಮತ್ತು ಯಾವುದನ್ನು ನಂಬಬಾರದು ಎಂಬುದನ್ನು ತಿಳಿದುಕೊಳ್ಳಲು…

Read More

9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ಹಾಗೂ ಜೈನ್ ಹೆರಿಟೇಜ್ ಶಾಲೆ -ಬೆಳಗಾವಿ ಸಹಯೋಗದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ -ಜಿಲ್ಲಾ ಆಯುಷ್ ಆಸ್ಪತ್ರೆ ಟಿಳಕವಾಡಿ ಮಂಡೋಳಿ ರೋಡ್ -ಬೆಳಗಾವಿಯಲ್ಲಿ ದಿನಾಂಕ 17 -06 -2023 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಯೋಗ ತರಬೇತಿಯ ತರಗತಿಯನ್ನು ಆಯೋಜಿಸಲಾಯಿತು. ಯೋಗ ಶಿಕ್ಷಕರಾದ ಲಟುಕರ, ವಿದ್ಯಾರ್ಥಿ ಸತ್ಯಂ ಖಾಂಡೇಕರ್, ಹಾಗೂ ಯೋಗ ಶಿಕ್ಷಕಿಯಾದ ಪಲ್ಲವಿ ನಾಡಕರ್ಣಿ ಮುಂದಾಳತ್ವದಲ್ಲಿ ಜೈನ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು. ಶಿಕ್ಷಕರು ಭಾಗವಹಿಸಿ ಯೋಗದ ಪ್ರಾಮುಖ್ಯತೆಯನ್ನ ತಿಳಿದುಕೊಳ್ಳುವುದಲ್ಲದೆ ಆರೋಗ್ಯಕ್ಕೆ ಯೋಗವು ಉತ್ತಮವಾದದ್ದು ಎಂದು ಅರಿತುಕೊಂಡರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ್ ಸುಣದೊಳಿ ಹಾಗೂ ಡಾ. ಗಿರೀಶ್ ಪಶುಪತಿಮಠ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 19) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡ್ರೆ ಮಾತ್ರ ಮುಂದಿನ ತಿಂಗಳಿನಿಂದಲೇ ಉಚಿತ ವಿದ್ಯುತ್‌ ಸಿಗಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೇವಾ ಸಿಂಧು ವೆಬ್‌ಸೈಟ್‌ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು ಬಾಡಿಗೆದಾರರಾಗಿದ್ರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಡೌಟ್‌ ಇದ್ರೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಕಾಲ್‌ ಮಾಡಿ ಮಾಹಿತಿ ಪಡೆಯಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್…

Read More

ಬೈಪೋರ್‌ ಜಾಯ್ ಚಂಡಮಾರುತವು ಹಾನಿಯನ್ನುಂಟುಮಾಡಿರುವ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗುಜರಾತ್‌ ನ ಕರಾವಳಿ ಮತ್ತು ರಾಜಸ್ಥಾನದ ಬಾರ್ಮರ್‌ ನಲ್ಲಿ ಪ್ರವಾಹ ತೀವ್ರವಾಗಿದೆ. ಬಾರ್ಮಾರ್‌ನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಗುಜರಾತ್‌ನಲ್ಲಿ ಹಾನಿಗೊಳಗಾದ ವಿದ್ಯುತ್ ಮತ್ತು ರಸ್ತೆ ಸಂಚಾರವನ್ನು ಪುನಃಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಹಲವೆಡೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಮಂಗಳವಾರದ ವೇಳೆಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಅಮಿತ್ ಶಾ ಕಳೆದ ದಿನ ರಾಜ್ಯದ ದುರಂತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಕೇಂದ್ರ ಹವಾಮಾನ ಕೇಂದ್ರದ ಪ್ರಕಾರ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಇನ್ನೂ ಎರಡು ದಿನಗಳ ಕಾಲ ಗಾಳಿ ಮತ್ತು ಮಳೆ ಮುಂದುವರಿಯುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More