Subscribe to Updates
Get the latest creative news from FooBar about art, design and business.
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
- ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
- ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
Author: admin
ಬೆಂಗಳೂರು : ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಅದೃಷ್ಟವಶಾತ್ ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ ಚಾಲಕ ಹಾಗೂ ಸ್ನೇಹಿತ ಇಳಿದಿದ್ದಾರೆ. ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಲ್ಲಿ ಕೆಲ ವಸ್ತುಗಳಿದ್ದು, ಬೆಂಕಿಗೆ ಆಹುತಿಯಾಗಿವೆ.
ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಜನರಿಂದ 1854 ಕೋಟಿ ಕಟ್ಟಿಸಿಕೊಂಡು ವಂಚಿಸಿದ್ದ ಬೃಹತ್ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು, ಜಾಲದ ಪ್ರಮುಖ ರೂವಾರಿ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್ ಅಲಿಯಾಸ್ ಜಾಕ್, ಫಣೀಂದ್ರ, ಚಕ್ರಧರ್ ಅಲಿಯಾಸ್ ಚಕ್ರಿ, ಶ್ರೀನಿವಾಸ್, ಸೋಮಶೇಖರ್ ಹಾಗೂ ವಸಂತ್ ಕುಮಾರ್ ಬಂಧಿತರು. ಇವರೆಲ್ಲರೂ ತಂಡ ಕಟ್ಟಿಕೊಂಡು ಹಲವು ವರ್ಷಗಳಿಂದ ಸೈಬರ್ ಅಪರಾಧ ಎಸಗುತ್ತಿದ್ದರು ಎಂದು ಕಮಿಷನರ್ ಬಿ. ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು : ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸೆಪ್ಟೆಂಬರ್ ನಲ್ಲಿ 293 ಕೆ.ಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಡ್ರಗ್ಸ್ ಮಾರಾಟ ಹಾಗೂ ಸೇವನೆ ತಡೆಯಲು ವಿಶೇಷ ಒತ್ತು ನೀಡಲಾಗಿದೆ. ಸೆಪ್ಟೆಂಬರ್‌ನಲ್ಲಿ 237 ಪ್ರಕರಣ ದಾಖಲಿಸಿಕೊಂಡು, 351 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು. 13 ವಿದೇಶಿಯರು ಹಾಗೂ ಹೊರ ರಾಜ್ಯಗಳ 27 ಆರೋಪಿಗಳನ್ನು ಬಂಧಿಸಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಸ್ಥಳೀಯರನ್ನೂ ಸೆರೆ ಹಿಡಿಯಲಾಗಿದೆ. ಇವರೆಲ್ಲರಿಂದ 7 8.63 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದರು.
ಬೆಂಗಳೂರು : ಖಾಲಿ ನಿವೇಶನ, ಫ್ಲ್ಯಾಟ್ ಹಾಗೂ ಮನೆಗಳಿಗೆ ಸಂಬಂಧಪಟ್ಟಂತೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದು ವಂಚಿಸುತ್ತಿದ್ದ ಆರೋಪಿ ಕೃಷ್ಣಕುಮಾರ್ (39) ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ನಿವಾಸಿ ಕೃಷ್ಣಕುಮಾರ್, ತನ್ನದೇ ತಂಡ ಕಟ್ಟಿಕೊಂಡು ವಂಚನೆ ಮಾಡುತ್ತಿದ್ದ. ಈತನ ಕೃತ್ಯದ ವಿರುದ್ಧ 9 ಠಾಣೆಗಳಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ತನಿಖೆ ಕೈಗೊಂಡು ಇತ್ತೀಚೆಗೆ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು : ದೇವರ ಜೀವನಹಳ್ಳಿ (ಡಿ. ಜೆ. ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ಸಯ್ಯದ್ ಸುಹೇಲ್ ಅಲಿಯಾಸ್ ಪಪ್ಪಾಯಿಯನ್ನು (18) ದುಷ್ಕರ್ಮಿಗಳು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಅಪರಾಧ ಹಿನ್ನೆಲೆಯುಳ್ಳ ಸುಹೇಲ್, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಹೆಸರು ರೌಡಿಪಟ್ಟಿಯಲ್ಲಿತ್ತು. ಜನ್ಮದಿನವಾಗಿದ್ದ ಗುರುವಾರವೇ (ಸೆ. 28) ಈತನ ಕೊಲೆಯಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ಹಳೇ ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಮಾಹಿತಿ ಇದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ.
ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತಿಯೋರ್ವ ತನ್ನ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಕತ್ತು ಹಿಸುಕಿ ನಂತರ ತಲೆ ಮತ್ತು ಬೆರಳುಗಳನ್ನು ಕತ್ತರಿಸಿ ದೇಹವನ್ನು ಎಸೆದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಮಹಿಳೆಯ ತಲೆಯಿಲ್ಲದ ಮೃತದೇಹವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೃತದೇಹದಿಂದ ನಾಲ್ಕು ಬೆರಳುಗಳು ಕಾಣೆಯಾಗಿದ್ದವು. ಪೊಲೀಸರು ನಡೆಸಿದ ಹುಡುಕಾಟದಲ್ಲಿ ಶವ ಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮಹಿಳೆಯ ತಲೆ ಪತ್ತೆಯಾಗಿದೆ. ಪೊಲೀಸ್ ತನಿಖೆಯಲ್ಲಿ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ನಿವಾಸಿ ರಾಮ್ ಕುಮಾರ್ ಅಹಿರ್ವಾರ್ ಅವರ ಪತ್ನಿ ಮಾಯಾದೇವಿ ಅವರ ಮೃತದೇಹ ಎಂದು ಗುರುತಿಸಲಾಯಿತು. ತನಿಖೆಯ ವೇಳೆ ಮಹಿಳೆಯ ಪತಿ ಹಾಗೂ ಕುಟುಂಬಸ್ಥರು ಮಹಿಳೆಯನ್ನು ಬರ್ಬರವಾಗಿ ಹತ್ಯೆ ನಡೆಸಿರುವುದು ಬಯಲಾಗಿದೆ. ಪತಿ ರಾಮ್ ಕುಮಾರ್, ಮಕ್ಕಳಾದ ಸೂರಜ್ ಪ್ರಕಾಶ್, ಬ್ರಿಜೇಶ್ ಮತ್ತು ಸೋದರಳಿಯ ಉದಯಭಾನ್ ಅವರನ್ನು ಪ್ರಕರಣಕ್ಕೆ…
ಸಂಶೋಧನೆಯ ಪ್ರಕಾರ ದಿನಕ್ಕೆ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡುವುದರಿಂದ ಹೃದಯ ಮತ್ತು ಮನಸ್ಸು ಬಲಗೊಳ್ಳುತ್ತದೆ. ಮೆದುಳಿನ ಹೊಸ ಕೋಶಗಳ ಅಭಿವೃದ್ಧಿಗೆ ಸಹಕಾರಿ. ಪ್ರತಿದಿನ ಬೆಳಗ್ಗೆ ಕನಿಷ್ಟ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡಿದರೆ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ. ಹಾಗೆಯೇ ಹೃದಯದ ಬಡಿತ ಹೆಚ್ಚಿಸುತ್ತದೆ. ಕೊಬ್ಬನ್ನು ವೇಗವಾಗಿ ಕರಗಿಸುತ್ತದೆ. ನಿರಂತರ ಸೈಕ್ಲಿಂಗ್ ನಿಂದ ಖಿನ್ನತೆ ಮತ್ತು ಆತಂಕ ಕಡಿಮೆಯಾಗುತ್ತದೆ. ಒಟ್ಟಾರೆ ದೇಹದ ತೂಕ ಇಳಿಸಿ ಫಿಟ್ ಆಗಿರಲು ಸಹಕಾರಿಯಾಗಿದೆ.
ಪ್ರಜ್ವಲ್ ದೇವರಾಜ್ ಮತ್ತು ಮೇಘನಾರಾಜ್ ಅಭಿನಯದ ‘ತತ್ಸಮ ತದ್ಭವ’ ಚಿತ್ರವನ್ನು ಬೆಂಗಳೂರಿನ ಪೊಲೀಸ್ ಕಮಿಷನರ್ ಬಿ. ದಯಾನಂದ್ ಮತ್ತು 5 ಡಿಸಿಪಿಗಳು ಸೇರಿದಂತೆ 250 ಪೊಲೀಸ್ ಸಿಬ್ಬಂದಿಗಳು ಸಿನಿಮಾ ವೀಕ್ಷಿಸಿದ್ದು, ಅವರೆಲ್ಲಾ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೇ ಪ್ರಧಾನವಾಗಿರುವ ಈ ಸೈಕಲಾಜಿಕಲ್ ಕೈಮ್ ಥಿಲ್ಲರ್ ಚಿತ್ರಕ್ಕೆ ಪ್ರೇಕ್ಷಕರಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಪೊಲೀಸ್ ಅಧಿಕಾರಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸಿರುವುದಕ್ಕೆ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ವಿಶಾಲ್ ಆತ್ರೇಯ ನಿರ್ದೇಶನದ ಸಿನಿಮಾ ಇದಾಗಿದ್ದು, ಪನ್ನಗಭರಣ ನಿರ್ಮಿಸಿದ್ದಾರೆ. ವರದಿ : ಆಂಟೋನಿ ಬೇಗೂರು
ಹೆಚ್.ಡಿ.ಕೋಟೆ: ಶುಕ್ರವಾರ ನಡೆದ ಕರ್ನಾಟಕ ಬಂದ್, ಕಾವೇರಿ ಹೋರಾಟದಲ್ಲಿ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಭಾಗಿಯಾಗಿ, ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿದರು. ಹೆಚ್ ಡಿ ಕೋಟೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮುಖ್ಯರಸ್ತೆ ಬಾಪೂಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ಕೂಡಲೇ ನೀರು ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು, ಪ್ರಧಾನ ಮಂತ್ರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ವರದಿ: ಮಲಾರ ಮಹದೇವಸ್ವಾಮಿ
ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಮಕೂರು ಎ.ಸಿ. ಗೌರವ್ ಕುಮಾರ್ ಶೆಟ್ಟಿ, ಗುಬ್ಬಿ ತಹಶೀಲ್ದಾರ್ ಆರತಿ.ಬಿ ದಿಢೀರ್ ಭೇಟಿ ನೀಡಿದ್ದರಿಂದ ಹಾಸ್ಟೆಲ್ ಸಿಬ್ಬಂದಿಗಳು ತಬ್ಬಿಬ್ಬಾಗಿದ್ದಾರೆ. ಹಾಸ್ಟೆಲ್ ನ ಅಡುಗೆ ಕೊಠಡಿ, ಶೌಚಾಲಯ, ವಿದ್ಯಾರ್ಥಿಗಳ ಕೊಠಡಿಗಳನ್ನ ವೀಕ್ಷಿಸಿದ ಅಧಿಕಾರಿಗಳು ಹಾಸ್ಟೆಲ್ ನಿರ್ವಹಣೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಸಿಬ್ಬಂದಿ ಜೊತೆಗೆ ಚರ್ಚಿಸಿದರು. ಹಾಸ್ಟೆಲ್ ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ ವೇಳೆ ವಾರ್ಡನ್ ಅವರು ಹಾಸ್ಟೆಲ್ ನಲ್ಲಿ ಇಲ್ಲದೇ ಇರುವುದನ್ನು ಕಂಡ ಉಪ ವಿಭಾಗಾಧಿಕಾರಿಗಳು, ವಾರ್ಡನ್ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು.