Author: admin

ದೆಹಲಿಯ ಕೆಆರ್ ಪುರಂನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಹೋದರಿಯರು ಸಾವನ್ನಪ್ಪಿದ್ದಾರೆ. ಮೃತರನ್ನು ಪಿಂಕಿ (30) ಮತ್ತು ಜ್ಯೋತಿ (29) ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದ ವಿವಾದ ಕೊಲೆಯ ಹಿಂದೆ ಇದೆ ಎಂದು ತಿಳಿದುಬಂದಿದೆ. ದಾಳಿಕೋರರನ್ನು ಗುರುತಿಸಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಬೆಳಗಿನ ಜಾವ 4:30ರ ಸುಮಾರಿಗೆ ಬಂದ ದೂರವಾಣಿ ಕರೆ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ನೋಡಿದಾಗ ಚೂರಿ ಇರಿತದ ಸ್ಥಿತಿಯಲ್ಲಿದ್ದ ಮಹಿಳೆಯರು ಪತ್ತೆಯಾಗಿದ್ದಾರೆ. ನಂತರ ಪೊಲೀಸರು ಅವರನ್ನು ಸಫ್ದರ್‌ ಜಂಗ್ ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಹತ್ಯೆಗೀಡಾದ ಮಹಿಳೆಯರ ಶವಗಳನ್ನು ಎಸ್‌ಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಯುವತಿಯರ ಸಹೋದರನನ್ನು ಹುಡುಕಿಕೊಂಡು ಬಂದ ದುಷ್ಕರ್ಮಿಗಳು ಯುವತಿಯರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹೋದರ ಹಾಗೂ ಆರೋಪಿಗಳ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮೊಬೈಲ್ ಕದ್ದಿದ್ದಾನೆಂದು ಆರೋಪಿಸಿದ ದುಷ್ಕರ್ಮಿಗಳು ಮುಸ್ಲಿಮ್ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಘೋಷಣೆ ಮಾಡುವಂತೆ ಒತ್ತಾಯಿಸಿದ್ದು, ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 13 ರಂದು ಈ ಘಟನೆ ನಡೆದಿದೆ. ಬುಲಂದ್‌ ಶಹರ್ ಕಾಕೋಟ್ ಮೂಲದ ಸಾಹಿಲ್ ಥಳಿತಕ್ಕೊಳಗಾದ ವ್ಯಕ್ತಿ. ಸಾಹಿಲ್ ದೂರಿನ ಪ್ರಕಾರ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಯುವಕರು ಬಂದು ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಏಕಾಂತ ಸ್ಥಳಕ್ಕೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಆರೋಪಿಗಳು ತನ್ನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಎಂದು ಜಪಿಸುವಂತೆ ಒತ್ತಾಯಿಸಿದರು ಎಂದು ಸಾಹಿಲ್ ಆರೋಪಿಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಂಡ ನಂತರ ಸಾಹಿಲ್ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಆದರೆ ಅವರು ಕ್ರಮ ತೆಗೆದುಕೊಳ್ಳಲು ನಿರಾಕರಿಸಿದರು ಮತ್ತು ಬದಲಿಗೆ ಕಳ್ಳತನದ ಆರೋಪ ಹೊರಿಸಿ ಬಂಧಿಸಿದರು ಬಳಿಕ ದೂರು ಹಿಂಪಡೆಯುವಂತೆ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ. ಏಮ್ಸ್ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ.ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್, ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ…

Read More

ಬೆಂಗಳೂರಿಗೆ ಹೊಸ ರೂಪ ನೀಡಿ, ಸಮಗ್ರ ಅಭಿವೃದ್ಧಿ, ಬ್ರಾಂಡ್ ಬೆಂಗಳೂರು ಕುರಿತು ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜತೆ ಇಂದು ಸಭೆ ಮಾಡಲಾಗಿದೆ. ಎಂದು ನಾನಾ ಗಣ್ಯರ ಜತೆ ಸಭೆ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗೋಷ್ಟಿಯಲ್ಲಿ ಹೇಳಿದರು. ಇದು ಮೊದಲ ಹಂತದ ಸಭೆ. ಈ ಸಭೆಯಲ್ಲಿ ಅನೇಕ ಮೌಲ್ಯಯುತ ಸಲಹೆ ಬಂದಿದೆ.ಎಲ್ಲರ ಅನುಭವ ಅಭಿಪ್ರಾಯ ಪಡೆಯುತ್ತಿದ್ದೇನೆ. ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದರು. ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ,ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು. ಇಂದು ಸಭೆಗೆ ಬಂದವರು ತಮ್ಮಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದರು. ಹೈಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ…

Read More

ಕಲುಷಿತ ನೀರು ಸೇವನೆಯಿಂದ ಕೊಪ್ಪಳ ಹಾಗೂ ರಾಯಚೂರು ಭಾಗಗಳಲ್ಲಿ ಕೆಲವೊಂದು ಸಾವು ಸಂಭವಿಸಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಕುಲುಷಿತ ನೀರು ಸೇವನೆ ವಿಚಾರ ರಾಜ್ಯ ಸರ್ಕಾರಕ್ಕೂ ಕಪ್ಪು ಮಸಿ ಬಳಿಯಲಾರಂಭಿಸಿತ್ತು. ಇದರ ಎಚ್ಚೆತ್ತ ರಾಜ್ಯ ಸರ್ಕಾರ, ಇದೀಗ ಪ್ರಕರಣದ ತನಿಖೆಗೆ ಮೂರು ಮಂದಿಯ ತಂಡ ರಚಿಸಿದೆ. ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಐಎಎಸ್ ಗ್ರಾಮ ಕುಡಿಯಿವ ನೀರು ಹಾಗೂ ನೈರ್ಮಲ್ಯ ಬೆಂಗಳೂರು ಅಧೀಕ್ಷಕ ಅಭಿಯಂತರಾದ ಚಂದ್ರಹಾಸ್ ಹಾಗೂ ಗ್ರಾಮ ಕುಡಿಯುವ ನೀರು ನೈರ್ಮಲ್ಯದ ರಾಜ್ಯ ತಾಂತ್ರಿಕ ಸಮಾಲೋಚಕರಾದ ಬಿ.ಆರ್.ವೆಂಕಟೇಶ್‌ ತಂಡ ರಚಿಸಿ, ಪ್ರಕರಣದ ತನಿಖೆಗೆ ವರದಿ ನೀಡುವಂತೆ ಸೂಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಭಾರಿ ಮಳೆಯ ಸಂಭವ ಇದೆ.ನಗರದಲ್ಲಿ ಬಲವಾದ ಮೇಗಾಳಿ ಬೀಸುವ ಸಾಧ್ಯತೆ ಇದೆ. ನಗರದ ಸುತ್ತಮುತ್ತಲಿನ ಪ್ರದೇಶದಲ್ಲೂ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಹಾಸನ, ಚಾಮರಾಜನಗರ,ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲೂ ಮಳೆಯಾಗುವ ಸಂಭವವಿದೆ. ಮುಂದಿನ ಮೂರು ದಿನ ಅಂದರೆ ಜೂನ್ 19 ರಿಂದ 21ರವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು…

Read More

ಮುಂದಿನ ಮೂರು ತಿಂಗಳೊಳಗಾಗಿ 108 ಆರೋಗ್ಯ ಸೇವೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಮಾಗಡಿ ಆರೋಗ್ಯಸೌಧದಲ್ಲಿ ನಡೆದ 108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 90 ದಿನಗಳೊಳಗೆ ಆ್ಯಂಬುಲೆನ್ಸ್ ಸೇವೆಯಲ್ಲಿ ಉತ್ತಮ ಫಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಬೆಂಗಳೂರಿನ ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಹೆಚ್ಚಿನ ಜನರಿಗೆ ತಲುಪಬೇಕು ಎನ್ನುವ ಸದುದ್ದೇಶದಿಂದ ಕೆಲವು ಮಾರ್ಪಾಡುಗಳನ್ನು ಮಾಡಲಾಗುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಕೆ ಸ್ವಲ್ಪ ವಿಳಂಬವಾಗತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಜನರಿಗೆ ತಲುಪಬೇಕು ಹಾಗೂ ಸರಳವಾಗಿ ಸಿಗಬೇಕು ಎಂಬ ಕಾರಣಕ್ಕೆ ಯೋಜನೆಯಲ್ಲಿ ಹಲವು ಬದಲಾವಣೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚಿಸಿದ್ದೇವೆ. ಇದರಿಂದಾಗಿ ಸ್ವಲ್ಪ ಸಮಯ ಬೇಕಾಗಿದೆಯೇ ವಿನಃ ಬೇರೇನೂ ಸಮಸ್ಯೆ ಇಲ್ಲ ಎಂದು ಹೇಳಿದರು. ಪ್ರತ್ಯೇಕ ಆ್ಯಪ್ ಕೂಡ ಸಿದ್ಧಪಡಿಸಲು ಸೂಚಿಸಲಾಗಿದೆ. ಅದಾದಲ್ಲಿ ವೇಗವಾಗಿ ಅರ್ಜಿ ಸ್ವೀಕಾರ ಸಾಧ್ಯವಾಗುತ್ತದೆ. ಸಾಧ್ಯವಾದಷ್ಟು ಹೆಚ್ಚಿನ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಸರಕಾರದ ಉದ್ದೇಶವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಯೋಜನೆಗೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಆಗಸ್ಟ್ 17 ಅಥವಾ 18ರಿಂದ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ. ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌…

Read More