Subscribe to Updates
Get the latest creative news from FooBar about art, design and business.
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
- ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
- ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
Author: admin
ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಸ್ವತಂತ್ರಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ರವರು ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು. ಸಂತಪುರ್ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹುತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮತ್ತು ಲಾಲಾ ಲಜಪತ್ ರಾಯ್ ರವರ ಜೊತೆಗಿನ ಘಟನೆಯನ್ನು ತನ್ನ ಹೋರಾಟದ ಸ್ಪೂರ್ತಿಯಾಗಿಸಿಕೊಂಡು ಹೋರಾಡಿದವರು ಮತ್ತು ಯುವಕರಲ್ಲಿ ಹೊಸ ಜಾಗೃತಿಯ ಸಂಕೇತವಾದವರು ಕ್ರಾಂತಿಕಾರಿ ವೀರ ಹುತಾತ್ಮ ಭಗತ್ ಸಿಂಗ್ ರವರು ಎಂದು ಅವರು ತಿಳಿಸಿದರು. ಉಪನ್ಯಾಸಕರಾದ ಶಿವಪುತ್ರ ಧರಣಿ ಮಾತನಾಡಿ ಇಂದಿನ ಯುವಕರು ಭಗತ್ ಸಿಂಗ್ ರವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಉಪನ್ಯಾಸಕರಾದ ಕಲ್ಲಪ್ಪ ಬುಟ್ಟೆ, ವನದೇವಿ ಎಕ್ಕಳೆ, ಅಂಬಿಕಾ ವಿಶ್ವಕರ್ಮ, ಮೀರಾತಾಯಿ ಕಾಂಬಳೆ ಇದ್ದರು. ಇದೇ ಸಂದರ್ಭದಲ್ಲಿ ಹುತ್ತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ…
ತುರುವೇಕೆರೆ : ಹಾವು ಕಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 42 ವರ್ಷ ವಯಸ್ಸಿನ ಮಹೇಶ್ ಶೆಟ್ಟಿ ಸನ್ ಆಫ್ ತಿಮ್ಮಯ್ಯ ಎಂಬವರು ತಮ್ಮ ತೋಟದಲ್ಲಿ ತೆಂಗಿನ ಮರಗಳಿಗೆ ಗೊಬ್ಬರ ಹಾಕುವ ಸಮಯದಲ್ಲಿ ಆಕಸ್ಮಿಕವಾಗಿ ಹಾವು ಕಚ್ಚಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಎರಡು ಗಂಡು ಒಂದು ಹೆಣ್ಣು ಮಗುವಿದ್ದು ಹಾಗೂ ಪತ್ನಿ ಸುಜಾತ ಅವರನ್ನು ಅಗಲಿದ್ದಾರೆ. ಮೃತದೇಹವನ್ನು ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವ ಗಾರದಲ್ಲಿ ಇರಿಸಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ಕಾವೇರಿ ನೀರಿಗಾಗಿ ಶುಕ್ರವಾರ ರಾಜ್ಯಾದಂತ ಬಂದ್ ಹಿನ್ನೆಲೆ ಬೀದರ್ ನಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರವೇ ಪ್ರವೀಣ ಶೆಟ್ಟಿ ಬಣ, ಕನ್ನಡಿಗರ ರಕ್ಷಣಾ ವೇದಿಕೆ, ಕರವೇ ಯುವ ಘರ್ಜನೆಯಿಂದ ಬೀದರ್ ನಲ್ಲಿ ಪ್ರತಿಭಟನೆ ನಡೆಯಿತು. ಇಲ್ಲಿನ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರೈತ ವಿರೋಧಿ ಸರ್ಕಾರ, ಒಳ ಒಪ್ಪಂದ ಮಾಡಿಕೊಳ್ಳುವ ಸರ್ಕಾರ ಎಂದು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ಬೆಂಗಳೂರು: ಮುಖಂಡರು ತಮ್ಮ ಕಾರುಗಳಿಗೆ ನಿಯಮ ಬಾಹಿರವಾಗಿ ಅಳವಡಿಸಿದ್ದ ಸಂಘಟನೆ ಹೆಸರಿದ್ದ ನಾಮಫಲಕ ಹಾಗೂ ಹಸಿರು ಟಾಪ್ ಲೈಟ್ (ಕಾರಿನ ಮೇಲ್ಬಾಗ) ಅನ್ನು ವೈಟ್ ಫಿಲ್ಡ್ ವಿಭಾಗದ ಪೋಲಿಸರು, ಶುಕ್ರವಾರ ತೆರವುಗೊಳಿಸಿದರು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಾವೇರಿ ಹೋರಾಟಕ್ಕೆ ರತ್ನ ಭಾರತ ರೈತ ಸಮಾಜದ ರಾಜ್ಯ ಅಧ್ಯಕ್ಷ ಲಕ್ಷ್ಮಣ್ ನೇತೃತ್ವದಲ್ಲಿ ಹೋರಾಟಗಾರರು ಕಾರುಗಳಲ್ಲಿ ಬರುತ್ತಿದ್ದರು ಈ ವೇಳೆ ಪೋಲಿಸರು ನಾಮಫಲಕ ಹಾಗೂ ಹಸಿರು ಟಾಪ್ ಲೈಟ್ ತೆರವುಗೊಳಿಸಿದರು.
ತಮಿಳುನಾಡಿಗೆ ಕಾವೇರಿ ನೀರನ್ನ ಹರಿಸಲು ಸಿಡಬ್ಲ್ಯೂಎಂಎ ಆದೇಶ ಹೊರಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ರಿಷಬ್ ಶೆಟ್ಟಿ, ನಮಗೆ ನೀರಿಲ್ಲ, ಬೇರೆಯವರಿಗೆ ಎಲ್ಲಿ ಕೋಡಲು ಆಗುತ್ತದೆ? ಮಳೆ ಇಲ್ಲದೆ ಡ್ಯಾಮ್ ಗಳು ಭರ್ತಿ ಆಗಿಲ್ಲ, ನೀರು ಬಿಡುತ್ತಿರುವುದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು. ಸಮಸ್ಯೆಗೆ ಎರಡು ಸರ್ಕಾರ ಕೂತು ಮಾತನಾಡಬೇಕು, ರೈತರಿಗೆ ನ್ಯಾಯ ಒದಗಿಸಬೇಕು ಎಂದರು. ಸದ್ಯ ಕಾಂತಾರ 2 ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿರುವ ರಿಷಬ್ ಹೊರಗಡೆ ಇದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಚಿಕ್ಕೋಡಿ: ಬಿಜೆಪಿ –- ಜೆಡಿಎಸ್ ಮೈತ್ರಿ ವಿರೋಧಿಸಿ ಆ ಪಕ್ಷಗಳ ತೊರೆಯಲು ಹಲವು ಜನ ನಿರ್ಧರಿಸಿದ್ದಾರೆಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ, ಬಹಳಷ್ಟು ಜನ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಆಸಕ್ತಿ ತೋರಿಸುತ್ತಿದ್ದಾರೆ ಎಂದರು. ಅಥಣಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಕಾಲ ಕೂಡಿ ಬರಬೇಕು, ಲೋಕಸಭೆ ಸಮೀಪಿಸಿದಾಗ ಹಾಲಿ ಶಾಸಕರು, ಮಾಜಿ ಶಾಸಕರು ಇರಬಹುದು. ಬಹಳಷ್ಟು ಜನ ಬಿಜೆಪಿ, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಆಸಕ್ತಿ ತೋರಿಸುತ್ತಿದ್ದಾರೆ. ಕಾಲ ಕೂಡಿ ಬಂದ ಸಂದರ್ಭದಲ್ಲಿ ಅದನ್ನ ಪ್ರಕಟ ಮಾಡುತ್ತೇವೆ ಎಂದರು. ರಮೇಶ್ ಕತ್ತಿ ಕಾಂಗ್ರೆಸ್ ಸೇರುತ್ತಾರೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಇಲ್ಲಿಯವರೆಗೆ ಆ ಬಗ್ಗೆ ಚರ್ಚೆ ಆಗಿಲ್ಲ. ಕಾಲ ಕೂಡಿ ಬಂದಾಗ ಚರ್ಚೆ ಬಂದಾಗ ಆ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದರು.
ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ–ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ (48) ಮೃತಪಟ್ಟವರಾಗಿದ್ದಾರೆ. ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೇವಸ್ಥಾನದ ಬಳಿ ಈ ದಂಪತಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹಾಬಲ ದೇವಾಡಿಗ ದಿನಗೂಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಲಕ್ಷ್ಮಿ ತನ್ನ ಪತಿಯನ್ನು ಹುಡುಕಿಕೊಂಡು ಹೋದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದನ್ನು ನೋಡಿದ್ದಾಳೆ. ಪತಿಯನ್ನು ರಕ್ಷಿಸಲು ಹೋಗಿ ಆಕೆಯು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.
ಕೊರಟಗೆರೆ:ಕಾವೇರಿ ನೀರು ಕನ್ನಡಿಗರ ಸ್ವತ್ತು, ಆದರೆ ರಾಜ್ಯ ಸರ್ಕಾರ ತನ್ನ ರಾಜಕೀಯಕ್ಕೋಸ್ಕರಾ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುತ್ತಿದೆ ಎಂದು ಖಂಡಿಸಿ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರಿಗೆ ಬಾರಿ ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಹಶೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಿದರು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಬಂದ್‍ನ್ನು ಮಾಡಿದರು, ನಂತರ ಸೆ.29 ರಂದು ಇಡೀ ರಾಜ್ಯವನ್ನೇ ಬಂದ್ ಮಾಡುವಂತೆ ರಾಜ್ಯ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು ಅದರಂತೆ ಜಿಲ್ಲಾದ್ಯಂತ ಬಂದ್‍ಗಳು ನಡೆಯಿತು, ಕೊರಟಗೆರೆಯಲ್ಲೂ ಸಹ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‍ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆ, ದರ್ಶನ್ ಅಭಿಮಾನಿ ಬಳಗದವರಿಂದ ನಡೆದ ಶುಕ್ರವಾರದ ಕರ್ನಾಟಕ…
ಬೆಂಗಳೂರು: ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವದರಿಂದ ಆಗುವ ಅನುಕೂಲಗಳು, ವಿದ್ಯುತ್ ಉತ್ಪಾದನೆಯ ಪ್ರಮಾಣ ಮುಂತಾದ ವಿಷಯಗಳ ಬಗ್ಗೆ ವಿಸ್ತ್ರುತ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಸೂಚನೆ ನೀಡಿದರು. ಭಾರತೀಯ ವಿಜ್ಞಾನ ಸಂಸ್ಥೆ ಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆಯನ್ನ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿ ಐ ಐ ಎಸ್ ಸಿ (ಭಾರತೀಯ ವಿಜ್ಞಾನ ಸಂಸ್ಥೆಯ) ಸಹಯೋಗದಲ್ಲಿ ರಾಜ್ಯದ ಹಲವಾರು ಇಲಾಖೆಗಳ ಸಂಶೋಧನೆ ಹಾಗೂ ವರದಿ ಸಿದ್ಧಪಡಿಸುತ್ತದೆ. ಹಾಗೆಯೇ, ತಾಂತ್ರಿಕ ಸಲಹೆಯನ್ನು ನೀಡುತ್ತಿದೆ. ಎನ್ಆರ್ಡಿಎಂಎಸ್ ಮೂಲಕ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯ ಮಾಡುತ್ತಿದೆ. ಅಲ್ಲದೆ, ಜನರಲ್ಲಿ ವೈಜ್ಞಾನಿಕ ಭಾವನೆ ಬೆಳೆಸುವಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.…
ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಟಿ.ಬಿ.ಕ್ರಾಸ್ ನೆಹರು ವಿದ್ಯಾ ಶಾಲೆ ಪದವಿ ಪೂರ್ವ ಕಾಲೇಜು ಆವರಣದ ಮುಂಭಾಗ, ತುಮಕೂರಿನಿಂದ ಮೈಸೂರು ರಸ್ತೆ ಮಾರ್ಗ ಕಲ್ಪಿಸುವ ಸ್ಥಳದಲ್ಲಿ ಎರಡು ದ್ವಿಚಕ್ರ ವಾಹನಗಳು ಮೂಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಜಖಂ ಆಗಿದ್ದು, ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಿರೀಶ್ ಎಂಬವರು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನಾಗಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಇನ್ನೋರ್ವ ದ್ವಿಚಕ್ರ ವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ , ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಸಂದ್ರ ಉಪ ಠಾಣೆ ಹೆಡ್ ಕಾನ್ಸ್ಟೇಬಲ್ ಧನಂಜಯ್, ಕಾನ್ಸ್ಟೇಬಲ್ ಆನಂದ್, ಆರಕ್ಷಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿ ಪ್ರಕರಣದ ದಾಖಲು ಮಾಡಿಕೊಂಡಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ