Author: admin

ತುಮಕೂರು: ಉಚಿತ ಬಸ್ ಪ್ರಯಾಣದ ಎಫೆಕ್ಟ್., ಪಾವಗಡ ಶನಿಮಹಾತ್ಮ ದೇವಸ್ಥಾನಕ್ಕೆ ಜನ ಸಾಗರವೇ ಹರಿದು ಬಂದಿದೆ. ರಾಜ್ಯದ ಮೂಲೆಯಿಂದ ಪಾವಗಡದ ಶನಿಮಹಾತ್ಮನ ದರ್ಶನಕ್ಕೆ ಭಕ್ತರು ಬಂದಿದ್ದರು. ದೇವರ ದರ್ಶನಕ್ಕೆ ಬಂದವರಲ್ಲಿ ಮಹಿಳೇಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಪ್ರಯಾಣಿಕರಿಂದ  ಪಾವಗಡ ಬಸ್ ನಿಲ್ದಾಣ ತುಂಬಿ ತುಳುಕಿತ್ತು. ಬೆಳಗ್ಗೆಯಿಂದಲ್ಲೇ ಎಲ್ಲಾ ಬಸ್ ಗಳು ಪುಲ್ ರಷ್ ಆಗಿದ್ದವು. ಇನ್ನೊಂದೆಡೆ ಬಸ್ ಗಳಿಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು, ಚಿತ್ರದುರ್ಗ ಬಳ್ಳಾರಿ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಾವಗಡಕ್ಕೆ ಮಹಿಳಾ ಪ್ರಯಾಣಿಕರು ಆಗಮಿಸಿದ್ದರು. ಪಾವಗಡದಿಂದ ದಾವಣಗೆರೆ- ಚಳ್ಳಕೆರೆ ಚಿತ್ರದುರ್ಗ ಮಾರ್ಗದಲ್ಲಿ ಬಸ್ಗಳ ಸಂಖ್ಯೆ ವಿರಳವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ : ಬೊಗಸೆ ಯಲ್ಲಿ ಸಮುದ್ರದ ನೀರಿನ ಮಾದರಿ ಕಾಣಬಹುದು, ಸಮುದ್ರ ಕಾಣುವುದಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಂದು ವಿಶಾಲವಾದ ಸಮುದ್ರ. ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿ ಹೆಗ್ಗಡವರ ಚಿಂತನೆಯಿಂದ ರೂಪುಗೊಂಡ ಒಂದೊಂದು ಯೋಜನೆಗಳು ವಿಶಾಲವಾದ ಸಮುದ್ರದ ನೀರನ್ನು ಬೊಗಸೆಯಲ್ಲಿ ಎತ್ತಿದಂತೆ.., ಹಳ್ಳಿಯ ಮನಸ್ಸುಗಳನ್ನು ಹತ್ತಿರದಿಂದ ಆಲಿಸಿ ಅವುಗಳಿಗೆ ಜೀವ ನೀಡಲಾಗಿದೆ. ಜ್ಞಾನವಿಕಾಸ ಕಾರ್ಯಕ್ರಮವು ಗ್ರಾಮೀಣ ಮಹಿಳೆಯರ ಪ್ರತಿಭೆಗಳ ಅನಾವರಣಕ್ಕೆ ಇರುವ ಒಂದು ಅಭೂತಪೂರ್ವ ವೇದಿಕೆ ಎಂದು ಜಿಲ್ಲಾ ನಿರ್ದೇಶಕಿ ಜಯಶೀಲ ತಿಳಿಸಿದರು. ಇವರು ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ ನಡೆದ ಜ್ಞಾನವಿಕಾಸ ಸೇವಾ ಪ್ರತಿನಿಧಿಗಳ ವಾರ್ಷಿಕ ಕ್ರಿಯಾ ಯೋಜನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಬೆಂಗಳೂರು ಪ್ರಾದೇಶಿಕ ಕಚೇರಿಯ ಜ್ಞಾನವಿಕಾಸ ಯೋಜನಾಧಿಕಾರಿ ಸಂಧ್ಯಾ ಶೆಟ್ಟಿ ಮಾತನಾಡಿ ಯೋಜನೆಯ ಕಾರ್ಯಕರ್ತರು ಜ್ಞಾನವನ್ನು ಪಡೆದುಕೊಳ್ಳುವಲ್ಲಿ ಸದಾ ಹಕ್ಕಿಯಂತೆ ಹೆಕ್ಕಿ ತಿನ್ನುವವರಾಗಬೇಕು ಎಂದು ಕ್ರಿಯಾ ಯೋಜನೆಯ ಸಮರ್ಪಕ ಅನುಷ್ಠಾನದ ಕುರಿತು ಮಾಹಿತಿ ನೀಡಿದರು. ಈ ಸಭೆಯಲ್ಲಿ ಕ್ಷೇತ್ರ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ, ಯಶೋಧರ್ , ಜಿಲ್ಲಾ…

Read More

ತುರುವೇಕೆರೆ: ಗೋಣಿ ತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಈ ಹಿಂದಿನ ಅಧ್ಯಕ್ಷರಾದ ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 14 ಜನ ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ನಾಗರತ್ನ ರಂಗಸ್ವಾಮಿಯವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯವರೆಗೂ ಯಾರೊಬ್ಬರೂ ಸಹ ನಾಮಪತ್ರ ಸಲ್ಲಿಸದ ಕಾರಣ , ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲ್ಲೂಕಿನ ತಹಶೀಲ್ದಾರ್ ವೈ.ಎಂ.ರೇಣು ಕುಮಾರ್ ರವರು ನಾಗರತ್ನ ರಂಗಸ್ವಾಮಿ ರವರನ್ನು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು. ಘೋಷಣೆ ಮಾಡಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಸಂಭ್ರಮ ಹಂಚಿಕೊಂಡರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಜಯಲಕ್ಷ್ಮಮ್ಮ ಉಪಾಧ್ಯಕ್ಷ ಲಕ್ಷ್ಮಮ್ಮ ಹಾಗೂ ಗುತ್ತಿಗೆದಾರ ತ್ಯಾಗರಾಜು ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು, ಜೂನ್ 17:  ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ್ದು,ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ  ಖುದ್ದಾಗಿ ಮಾತನಾಡಿದ್ದು, ಅಲ್ಲಿ  ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು  ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಆರ್ ಆರ್ ನಗರದ 118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ ಶಾಸಕ ಮುನಿರತ್ನ ರವರ ಪಾತ್ರದ ಬಗ್ಗೆ ತನಿಖೆ ನಡೆಸಲು ಕೂಡಲೇ ಶಾಸಕರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೋಹನ್ ದಾಸರಿ 2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಇಷ್ಟೆಲ್ಲ ಕೋಟ್ಯಾಂತರ ರೂಪಾಯಿಗಳ ಬಾನಗಡಿಯ ಹಿಂದೆ ನೇರ ಪಾತ್ರವಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕರ ನೇರ ಹಸ್ತಕ್ಷೇಪವಿಲ್ಲದೆ ಕೇವಲ ಅಧಿಕಾರಿಗಳು ಮಾತ್ರ ಇಷ್ಟೆಲ್ಲ ಹಗರಣಗಳು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಲೋಕಾಯುಕ್ತ ವರದಿಯಲ್ಲಿ ಶಾಸಕ ಮುನಿರತ್ನ ಹೆಸರು ಕೈ ಬಿಟ್ಟಿರುವುದರ ಹಿಂದೆ ಸಹ ಈ ಹಿಂದಿನ ಬಿಜೆಪಿ ಸರ್ಕಾರದ ನೇರ ಷಡ್ಯಂತರವಿತ್ತು. ಈ ಹಗರಣದ ಹಿಂದೆ ಮುನಿರತ್ನ ಕೈವಾಡವಿದೆಯೆಂದು ಇವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಈ ಹಿಂದೆ ಆಮ್ ಆದ್ಮಿ ಪಕ್ಷವು ಒತ್ತಾಯಿಸಿತ್ತು. ನೂತನ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡು ಪ್ರಕರಣವನ್ನು ತಿಪ್ಪೆ…

Read More

ಸರ್ಕಾರಿ ನೌಕರರ ಸಾಮಾನ್ಯವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಸಾರ್ವತ್ರೀಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಈ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತಿಪಟೂರು: ನಗರದ ಮೋರ್ ಮುಂಭಾಗ ಲಾರಿ ಮತ್ತು ಟಿವಿಎಸ್ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ವೃದ್ಧ ದಂಪತಿಗೆ ಗಾಯವಾಗಿದೆ. ಹಿಂದೆಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಒಡೆದ ಪರಿಣಾಮ ಬೈಕ್ ನಲ್ಲಿದ್ದ ವೃದ್ದ ದಂಪತಿಗಳಿಗೆ ತೀವ್ರ ಗಾಯವಾಗಿದೆ. ಕೆಲಸದ ನಿಮಿತ್ತ ನಗರಕ್ಕೆ ಬಂದಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ವಾಸಿ ಮಹಾಲಿಂಗಯ್ಯ ಮತ್ತು ಸುಜಾತ ಅಪಘಾತದಲ್ಲಿ ಗಾಯಗೊಂಡವರಾಗಿದ್ದಾರೆ. ಸುಜಾತಾ ಅವರ ಕಾಲು ಮುರಿದಿದೆ. ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿಪಟೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ: ಆನಂದ್  ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA admin

Read More

ಬೆಂಗಳೂರು: “ಕರ್ನಾಟಕ ರಾಜ್ಯದ ಪ್ರತಿಷ್ಠಿತ ಯೋಜನೆ ಅನ್ನಭಾಗ್ಯ ಜಾರಿಗೆ ಅಗತ್ಯ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿರುವುದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಗೆ ಸಾಕ್ಷಿ. ಇದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಇದೇ 20 ರಂದು ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿ ಜನರಲ್ಲಿ ಅರಿವು ಮೂಡಿಸಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡಲು ಬದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಕಾಂಗ್ರೆಸ್ ಐದು ಗ್ಯಾರಂಟಿ ಘೋಷಿಸಿತ್ತು. ಇದರ ಜಾರಿ ಬಗ್ಗೆ ವಿರೋಧ ಪಕ್ಷದ ಸ್ನೇಹಿತರು ಅನೇಕ ಟೀಕೆ ಮಾಡುತ್ತಾ ಬಂದಿದ್ದಾರೆ. ಸರ್ಕಾರ ಬಂದ ಮೊದಲ ದಿನವೇ ಮೊದಲ ಆದೇಶ ಹೊರಡಿಸಿ ನಮ್ಮ ಬದ್ಧತೆ ಪ್ರದರ್ಶಿಸಿದ್ದೇವೆ. ಎರಡನೇ ಸಂಪುಟ ಸಭೆಯಲ್ಲಿ…

Read More

ಬೆಂಗಳೂರು: ಶಿವಕುಮಾರ್ ಅಣ್ಣ ನೀವು ಕೊಟ್ಟಿರೋ ಭರವಸೆ, ಮೋದಿ ಕೊಟ್ಟಿರೋ ಭರವಸೆ ಅಲ್ಲ. ನೀವು ಈಡೇರಿಸಬೇಕು. ಗ್ಯಾರಂಟಿ ಕೊಡಲು ಆಗದೇ ಹೋದರೆ ಅಧಿಕಾರ ಬಿಟ್ಟು ಹೋಗಿ. ಮೋದಿ ಮೇಲೆ ಯಾಕೆ ಆರೋಪ ಮಾಡ್ತೀರಾ ಎಂದು ಮಾಜಿ ಸಚಿವ ಆರ್ ಅಶೋಕ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಗ್ಯಾರಂಟಿ ಘೋಷಣೆ ಮಾಡೋವಾಗ ಕೇಂದ್ರ ಸರ್ಕಾರದ ಅನುಮತಿ ಪಡೆದಿದ್ರಾ? ಕೇಂದ್ರವನ್ನು ಕೇಳಿ ಭರವಸೆ ಕೊಟ್ಟಿದ್ದೀರಾ? ನಿಮ್ಮ ಗ್ಯಾರಂಟಿ ಜಾರಿ ಮಾಡೋದು ನಿಮ್ಮ ಕರ್ತವ್ಯ. ಅದಕ್ಕೆ ಮೋದಿ ಮೇಲೆ ಯಾಕೆ ಮಾತಾಡ್ತೀರಾ? ಎಂದು ಪ್ರಶ್ನಿಸಿದ್ದಾರೆ. ಅಕ್ಕಿ ಬಗ್ಗೆ ಈಗ ಆರೋಪ ಮಾಡುತ್ತಾರೆ. ಕೇಂದ್ರ ಸರ್ಕಾರ ಅತ್ತೆ ಮನೆ ಅಲ್ಲ. ಸುರ್ಜೆವಾಲ ಮಂತ್ರಿ ಹಾಗೆ ಆಡ್ತಿದ್ದಾರೆ. ಘೋಷಣೆ ಮಾಡೋವಾಗ ಪರಿಜ್ಞಾನ ಇರಲಿಲ್ಲವಾ? ಮಾತು ಕೊಡೋವಾಗ ನೀವು ಕೇಂದ್ರ ಸರ್ಕಾರವನ್ನು ಕೇಳಿದ್ರಾ? ನಾವೇನು ಅಕ್ಕಿ ರಾಜಕೀಯ ಮಾಡಲ್ಲ. ಇಡೀ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉಚಿತವಾಗಿ ಅಕ್ಕಿ ಕೊಡ್ತಿದ್ದಾರೆ.…

Read More

ಬೆಂಗಳೂರು: ನಗರ ಪಶ್ಚಿಮ‌ ವಿಭಾಗದ ಪೊಲೀಸರು 4 ಮೊಬೈಲ್ ಫೋನ್‌ಗಳು ಮತ್ತು ನಗದು ಹಣ ಸುಲಿಗೆ ಮಾಡಿದ ಮೂರು ಜನ ಆರೋಪಿತರ ಬಂಧಿಸಿದ್ದಾರೆ. ಕಳೆದ‌‌ ದಿನಾಂಕ 10 ರಂದು ರಾತ್ರಿ ಸುಮಾರು 11-50 ಗಂಟೆಯ ಸಮಯದಲ್ಲಿ ಆರ್‌ಐ ಕಾಲೇಜ್‌ನ ವಿದ್ಯಾರ್ಥಿಗಳಾದ ಮನ್ವಿತ್ ರಾವ್ 19 ವರ್ಷ, ಜೋಸ್ಟಾ 18 ವರ್ಷ, ದೃಷ್ಟಿ 19 ವರ್ಷ, ಆರೈತ 18 ವರ್ಷ, ರಿಯಾ 18 ವರ್ಷ, ಎಂಬುವರುಗಳು ಸೇರಿಕೊಂಡು ಟ್ರಕ್ಕಿಂಗ್ ಮಾಡಿದ್ದರು. ಸೂರ್ಯೋದಯವನ್ನು ನೋಡುವ ಉದ್ದೇಶದಿಂದ ಪಿಇಎಸ್‌ ಕಾಲೇಜ್ ಹತ್ತಿರದಲ್ಲಿರುವ ವೀರಭದ್ರೇಶ್ವರ ದೇವಸ್ಥಾನಕ್ಕೆ ಹೋಗುವ ಸಲುವಾಗಿ ತಮ್ಮ ಮೊಬೈಲ್‌ನಲ್ಲಿ ಕಾಲ‌ ಕ್ಯಾರ್ ಮಿಕ್ ಮಾಡಿಕೊಂಡು ಬಂದಿದ್ದು, ಈ ಸಮಯದಲ್ಲಿ ತಾವು ಹೋಗಬೇಕಾಗಿದ್ದ ಲೋಕೇಷನ್‌ ಅನ್ನು ತಪ್ಪಾಗಿ ನರದಾಗಿದ್ದರಿಂದ ಮೇಲ್ಕಂಡ 5 ಜನ ವಿದ್ಯಾರ್ಥಿಗಳು ತಡರಾತ್ರಿ 12-30 ಗಂಟೆಯ ಸಮಯದಲ್ಲಿ ಅಂದಹಳ್ಳಿ ಮುಖ್ಯರಸ್ತೆಯ ವೆಂಕಟೇಶ್ವರ ಬಡಾವಣೆಯಲ್ಲಿರುವ ಫಾರ್ಮಸಿ ಬಳಿ ಬಂದು ವಿಳಾಸ ಪರಿಶೀಲಿಸಿದಾಗ ಯಾರೋ 3 ಜನ ಅಪರಿಚಿತ ವ್ಯಕ್ತಿಗಳು ಒಂದು ಹೊಂಡಾ ಆಕ್ಟಿವಾ ದಿವಾ…

Read More