Author: admin

ಬೈಪೋರ್‌ ಜಾಯ್ ಚಂಡಮಾರುತ ಗುಜರಾತ್‌ ನಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಗುಜರಾತಿ ಮಾಧ್ಯಮಗಳು ಸಾವಿನ ವರದಿಯನ್ನು ವರದಿ ಮಾಡಿವೆ. ಮೋರ್ಬಿಯಲ್ಲಿ ಸುಮಾರು 300 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದ ರಾಜ್ಯದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. 45 ಗ್ರಾಮಗಳು ಸಂಪೂರ್ಣ ಕತ್ತಲಲ್ಲಿ ಮುಳುಗಿವೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಬೈಪೋರ್‌ ಜಾಯ್ ಚಂಡಮಾರುತವು ಗುಜರಾತ್‌ನಲ್ಲಿ ವ್ಯಾಪಕ ಹಾನಿಯನ್ನುಂಟು ಮಾಡಿದೆ. ಬಲವಾದ ಗಾಳಿಯಿಂದಾಗಿ 99 ರೈಲುಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ಇದುವರೆಗೆ 524 ಮರಗಳು ಧರೆಗುರುಳಿವೆ ಎಂದು ವರದಿಯಾಗಿದೆ. ಜಾಮ್ ನಗರ ಮತ್ತು ದ್ವಾರಕಾ ಪಂಟಕ್‌ನಲ್ಲಿ ಬಲವಾದ ಗಾಳಿ ಮತ್ತು ಮಳೆ ಮುಂದುವರಿದಿದೆ. ಸೌರಾಷ್ಟ್ರ ಮತ್ತು ಕಚ್ಮೇಖಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭುಜ್‌ನಲ್ಲೂ ಭಾರೀ ಮಳೆ ಮುಂದುವರಿದಿದೆ. ಮೋರ್ಬಿಯಲ್ಲಿ ವಿದ್ಯುತ್ ಕಂಬಗಳು ಮತ್ತು ತಂತಿಗಳು ಹಾನಿಗೊಳಗಾಗಿವೆ. ಪೋರಬಂದರ್‌ನಲ್ಲಿ ವ್ಯಾಪಕ ಹಾನಿಯಾಗಿದೆ. ದ್ವಾರಕಾದಲ್ಲಿ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ರಾಜ್ಯದ ವಿವಿಧೆಡೆ ವಿದ್ಯುತ್ ಕಂಬಗಳು ಬಿದ್ದಿವೆ. ಅಹಮದಾಬಾದ್‌ನ ಒಂಬತ್ತು ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.…

Read More

ಆದಿಪುರುಷ ಚಿತ್ರದ ಪ್ರದರ್ಶನದ ವೇಳೆ ಕೋತಿಯೊಂದು ಥಿಯೇಟರ್ ಪ್ರವೇಶಿಸಿದೆ. ಜನರು ಸಿನಿಮಾ ನೋಡುತ್ತಿರುವಾಗಲೇ ಕೋತಿ ಬಾಲ್ಕನಿಗೆ ಬಂದಿತ್ತು. ತೆಲಂಗಾಣದ ವಿಡಿಯೋದಲ್ಲಿ ಕೋತಿಯನ್ನು ನೋಡಿದ ಜನರು ಜೈಶ್ರೀರಾಮ್ ಎಂದು ಕೂಗುತ್ತಿದ್ದಾರೆ. ಆದಿಪುರುಷ ಚಿತ್ರ ತೆರೆಕಾಣುತ್ತಿರುವಾಗ ಪ್ರತಿ ಥಿಯೇಟರ್‌ನಲ್ಲಿ ಹನುಮಂತನಿಗೆ ಆಸನ ಬಿಟ್ಟುಕೊಡುವಂತೆ ನಿರ್ದೇಶಕ ಓಂ ರಾವುತ್ ಥಿಯೇಟರ್ ಮಾಲೀಕರಿಗೆ ಸೂಚಿಸಿದ್ದರು. ಯಾವುದೇ ಶೋನಲ್ಲಿ ಈ ಸೀಟನ್ನು ಬೇರೆಯವರಿಗೆ ನೀಡುವುದಿಲ್ಲ ಎಂದು ಚಿತ್ರತಂಡ ನಿರ್ಧರಿಸಿದೆ. ಹಲವೆಡೆ ಹನುಮರಿಗೆ ವಿಶೇಷವಾಗಿ ಸಿದ್ಧಪಡಿಸಿರುವ ಆಸನಗಳ ಚಿತ್ರಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಿಂದಿ, ಮಲಯಾಳಂ, ತಮಿಳು, ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಆದಿಪುರುಷ ಚಿತ್ರಮಂದಿರಗಳಿಗೆ ಲಗ್ಗೆ ಇಡುತ್ತಿದೆ. ರಾಮಾಯಣಕ್ಕೆ ಸಂಬಂಧಿಸಿದಂತೆ ಓಂ ರಾವುತ್ ನಿರ್ಮಿಸಿದ ಚಿತ್ರ ಆದಿಪುರುಷ. ಚಿತ್ರದಲ್ಲಿ ಪ್ರಭಾಸ್ ಮತ್ತು ಕೃತಿ ಸನೋನ್ ಅವರಲ್ಲದೆ, ಸನ್ನಿ ಸಿಂಗ್, ದೇವದತ್ತ ನಾಗ್ ಮತ್ತು ಸೈಫ್ ಅಲಿ ಖಾನ್ ಸಹ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಭಿವೃದ್ಧಿ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ, ಅರ್ಜಿ ಸಲ್ಲಿಕೆ 4-5 ದಿನಗಳ ಕಾಲ ವಿಳಂಬವಾಗಲಿದೆ ಎಂದಿದ್ದಾರೆ. ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆನ್ನುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಹಾಗಾಗಿ ಆ್ಯಪ್ ಸಿದ್ಧಪಡಿಸಲು ಸ್ವಲ್ಪ ಸಮಯಾವಕಾಶ ಬೇಕಿರುವುದರಿಂದ ಅರ್ಜಿ ಸಲ್ಲಿಕೆಯನ್ನು ಸ್ವಲ್ಪ ಮುಂದೂಡೋಣ ಎನ್ನುವ ಸಲಹೆ ಹಿರಿಯರಿಂದ ಬಂದಿರುವುದರಿಂದ ಸ್ವಲ್ಪ ಮುಂದೂಡಲಾಗಿದೆ ಎಂದು ಅವರು ವಿವರಿಸಿದರು. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಸೇವಾಸಿಂಧು ಆಪ್, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಡಕಚೇರಿಗಳಿಗೂ ತೆರಳಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಗೃಹಲಕ್ಷ್ಮೀ ಯೋಜನೆಗಾಗಿ ಹೊಸ ಆಪ್ ಸಿದ್ಧಪಡಿಸಲು ಇ-ಗವರ್ನನ್ಸ್ ಗೆ…

Read More

ಬೆಳಗಾವಿ: ನಾನು ಇನ್ನೂ 22 ವರ್ಷ ರಾಜಕಾರಣದಲ್ಲಿ ಇರುತ್ತೇನೆ. ರಾಜಕೀಯದಲ್ಲಿದ್ದವರಿಗೆ ತಾಳ್ಮೆ ಮತ್ತು ದೂರದೃಷ್ಟಿ ಎರಡೂ ಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ  ಸವದಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷ್ಮಣ ಸವದಿಯವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರದ ಕುರಿತು ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಒಳ್ಳೆಯ ದಿನಗಳು ಕಾದಿವೆ ಎಂಬುದನ್ನು ನಾನು ನಂಬುತ್ತೇನೆ. ನಾನು ಮೊದಲ ಆದ್ಯತೆಯನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿವೆ. ನೆನೆಗುದಿಗೆ ಬಿದ್ದಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಕ್ಷೇತ್ರದ ಜನ ನೆಮ್ಮದಿಯಿಂದ ಬದುಕುವ ಹಾಗೆ ವಾತಾವರಣ ನಿರ್ಮಾಣ ಮಾಡಿದ ಮೇಲೆ ರಾಜ್ಯ ರಾಜಕಾರಣದ ವಿಚಾರ ಮಾಡುತ್ತೇನೆ ಎಂದರು. ಕಳೆದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ನಾಯಕರ ಮಧ್ಯೆ ಹೊಂದಾಣಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ.ನಾನು ಅಷ್ಟು ಕೆಳಗೆ ಹೋಗಿ…

Read More

ಬೆಂಗಳೂರು: ಉಚಿತ ಯೋಜನೆಗಳನ್ನು ಜಾರಿಗೆ ತರುವ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್‌ ಕುಮಾರ್‌ ಟೀಕಿಸಿದ್ದಾರೆ ಸಿದ್ದರಾಮಯ್ಯನವರೇ  ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ‌ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ. ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ. ಉಚಿತ.. ಉಚಿತ.. ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ…

Read More

ಕಾಂಗ್ರೆಸ್, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನನ್ನ ಜೀವನದಲ್ಲಿ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆಯೇ ಇಲ್ಲ. ಶಾಮನೂರು, ನಾವು ಹಳೆಯ ಸ್ನೇಹಿತರು, ಹೀಗಾಗಿ ಭೇಟಿಯಾಗಿದ್ದೆವು. ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಮ್ಮದೇ ಪಕ್ಷದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪೂರ್ಣಚಂದ್ರ ತೇಜಸ್ವಿಯವರ ಸಣ್ಣ ಕಥೆ ಆಧರಿತ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ನಿರ್ದೇಶಕ ಶಶಾಂಕ್ ಸೋಗಾಲ ಅವರು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ತೆರಿಗೆ ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆ ಅಂದರೆ ಜೂನ್ 16ರಿಂದ ಆನ್ಲೈನ್, ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್…

Read More

ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಎಂಜಿನಿಯರಿಂಗ್‌ ವಿಭಾಗದಲ್ಲಿ ಬೆಂಗಳೂರಿನ ಮಲ್ಲಸಂದ್ರದ ಶ್ರೀ ಕುಮಾರನ್ಸ್‌ ಕಾಲೇಜಿನ ವಿಘ್ನೇಶ್‌ ನಟರಾಜ್‌ ಕುಮಾರ್‌ ಪ್ರಥಮ ರ‍್ಯಾಂಕ್‌ ಪಡೆದರೆ ಬೆಂಗಳೂರಿನ ಆರ್‌ವಿ ಕಾಲೇಜಿನ ಅರುಣ್‌ ಕೃಷ್ಣಮೂರ್ತಿ ದ್ವಿತೀಯ ರ‍್ಯಾಂಕ್‌ ಪಡೆದಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಫಲಿತಾಂಶ ಪ್ರಕಟ ಮಾಡಿದರು. ಈ ವೇಳೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಉಪಸ್ಥಿತರಿದ್ದರು. ಒಟ್ಟು 2,61,610 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಆ ಪೈಕಿ 2,44,345 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರಾಗಿದ್ದರು. ಇಂಜಿನಿಯರಿಂಗ್ ಕೋರ್ಸಿಗೆ 2,03,381 ರ‍್ಯಾಂಕ್‌ ನೀಡಲಾಗಿದೆ. ಕೃಷಿ ವಿಜ್ಞಾನ ಕೋರ್ಸುಗಳಿಗೆ 1,64,187 ವಿದ್ಯಾರ್ಥಿಗಳು, ಪಶುಸಂಗೋಪನೆಗೆ 1,66,756 ವಿದ್ಯಾರ್ಥಿಗಳು, ಯೋಗ ಮತ್ತು ನ್ಯಾಚುರೋಪತಿಗೆ 2,06,191 ವಿದ್ಯಾರ್ಥಿಗಳು ಬಿ. ಫಾರ್ಮ ಕೋರ್ಸಿಗೆ ಮತ್ತು ಫಾರ್ಮ-ಡಿ ಕೋರ್ಸಿಗೆ 2,06,340 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದಿರುತ್ತಾರೆ. ಬಿ.ಎಸ್.ಸಿ (ನರ್ಸಿಂಗ್) ಕೋರ್ಸಿಗೂ ಸಹ ಸಿಇಟಿ ನಡೆಸಲಾಗಿದ್ದು, ಒಟ್ಟು 1,66,808 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ.…

Read More