Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಬಳ್ಳಾರಿ: ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಕೇಂದ್ರ ಕಚೇರಿ ಪಟ್ಟಿ ಪ್ರಕಾರ 5,972 ಮಂದಿ ಮರಣ ಹೊಂದಿದ ಫಲಾನುಭವಿಗಳಾಗಿದ್ದು, ಅವರಲ್ಲಿ 3,748 ಜನರಿಗೆ ಯಾವುದೇ ಹಣ ಜಮೆಯಾಗಿಲ್ಲ. ಉಳಿದ 2,224 ಮೃತರ ಖಾತೆಗೆ ಜಮೆಯಾಗಿರುವ ಒಟ್ಟು 2,28,96,000 ರೂ. ಹಣವನ್ನು ಸರ್ಕಾರದ ನಿಯಮಾವಳಿಗಳಂತೆ ನಾಮಿನಿಗಳ ಒಪ್ಪಿಗೆ ಪಡೆದು ಮರುಪಾವತಿ ಮಾಡಿಕೊಳ್ಳಲು ಬ್ಯಾಂಕುಗಳೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ಜಿಲ್ಲಾ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಕೋಟೆ ಪ್ರದೇಶದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆ ಆರಂಭವಾದ ಆಗಸ್ಟ್–2023 ರಿಂದ ಮಾರ್ಚ್–2026 ರವರೆಗೆ ಪ್ರತಿ ಫಲಾನುಭವಿಗೆ ಮಾಸಿಕ 2,000 ರೂ. ನಂತೆ ಜಿಲ್ಲೆಯಲ್ಲಿ ಒಟ್ಟು 1667,58,40,000 ರೂ. ಅನುದಾನ ಪಾವತಿಸಲಾಗಿದೆ. ಸಾರ್ವಜನಿಕ ಹಣ ದುರುಪಯೋಗವಾಗದಂತೆ ತಡೆಯಲು ಮತ್ತು ಅರ್ಹರಿಗೆ…
ಬಳ್ಳಾರಿ: ಜಿಲ್ಲೆಯನ್ನು ಸಂಪೂರ್ಣ ಕ್ಷಯರೋಗ (ಟಿಬಿ) ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಕ್ಷಯರೋಗವು ‘ಮೈಕೋಬ್ಯಾಕ್ಟೀರಿಯಂ ಟ್ಯುಬರ್ಕ್ಯುಲೋಸಿಸ್’ ಎಂಬ ಬ್ಯಾಕ್ಟೀರಿಯಾದಿಂದ ಬರುವ ಒಂದು ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಮುಖ್ಯವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆಯಾದರೂ, ದೇಹದ ಇತರ ಭಾಗಗಳಾದ ಮೂಳೆ, ಮೆದುಳು ಹಾಗೂ ಮೂತ್ರಪಿಂಡಗಳಿಗೂ ಹರಡುವ ಸಾಧ್ಯತೆ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಮುಖ ಲಕ್ಷಣಗಳೇನು? 2 ವಾರಗಳಿಗಿಂತ ಹೆಚ್ಚು ಕಾಲ ನಿರಂತರ ಕೆಮ್ಮು ಇರುವುದು ಮತ್ತು ಕೆಮ್ಮಿದಾಗ ಕಫದಲ್ಲಿ ರಕ್ತ ಬೀಳುವುದು. ಮುಖ್ಯವಾಗಿ ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಜ್ವರ ಬರುವುದು ಹಾಗೂ ರಾತ್ರಿ ತೀವ್ರವಾಗಿ ಬೆವರುವುದು. ಯಾವುದೇ ನಿಖರ ಕಾರಣವಿಲ್ಲದೆ ದೇಹದ ತೂಕ ಮತ್ತು ಹಸಿವು ಗಣನೀಯವಾಗಿ ಕಡಿಮೆಯಾಗುವುದು. ನಿರಂತರ ಸುಸ್ತು ಮತ್ತು ಉಸಿರಾಡುವಾಗ ಅಥವಾ ಕೆಮ್ಮುವಾಗ ಎದೆಯಲ್ಲಿ ನೋವು ಕಾಣಿಸಿಕೊಳ್ಳುವುದು. ರೋಗ ಹರಡುವ…
ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ (ಅಕ್ಷರ ದಾಸೋಹ) ನೌಕರರು ಇಂದು ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ‘ಕರಾಳ ದಿನಾಚರಣೆ’ಯ ಭಾಗವಾಗಿ ಬೃಹತ್ ಮುಷ್ಕರ ಮತ್ತು ಧರಣಿ ನಡೆಸಿದರು. ಸರ್ಕಾರಗಳ ನಿರಂತರ ನಿರ್ಲಕ್ಷ್ಯ ಮತ್ತು ಶೋಷಣೆಯ ವಿರುದ್ಧ ಆಕ್ರೋಶ ಹೊರಹಾಕಿದ ಸಾವಿರಾರು ನೌಕರರು, ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಧುಮುಕಿದರು. ನಗರದ ಟೌನ್ ಹಾಲ್ನಿಂದ ಬೃಹತ್ ಮೆರವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಂದು ಧರಣಿ ಕುಳಿತರು. ಅಂಗನವಾಡಿ ನೌಕರರ ಹಕ್ಕೋತ್ತಾಯಗಳು: NEP 2020 ವಿರೋಧ: ರಾಷ್ಟ್ರೀಯ ಶಿಕ್ಷಣ ನೀತಿ 2020 ಮತ್ತು ಅನುದಾನ ಕಡಿತದಿಂದಾಗಿ ಅಂಗನವಾಡಿ ವ್ಯವಸ್ಥೆ ಕುಸಿಯುತ್ತಿದೆ. 3–6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಶಾಲೆಗಳಲ್ಲಿ ಎಲ್ ಕೆಜಿ–ಯುಕೆಜಿ ಆರಂಭಿಸುವುದನ್ನು ನೌಕರರು ತೀವ್ರವಾಗಿ ವಿರೋಧಿಸಿದರು. ಬದಲಿಗೆ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ–ಯುಕೆಜಿ ವಿಸ್ತರಣೆ ಮಾಡಿ ಸಮವಸ್ತ್ರ, ಪುಸ್ತಕ ಹಾಗೂ ಆಟಿಕೆಗಳನ್ನು ಒದಗಿಸಬೇಕು…
ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದು ಅತ್ಯಗತ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಕರೆ ನೀಡಿದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ”ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಹಾಗೂ ಸಮಸ್ತ ಜೀವಜಾಲದ ಮೇಲೆ ಉಂಟಾಗುತ್ತಿರುವ ಗಂಭೀರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದೇ ಈ ವಿಶೇಷ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ನಾಗರಿಕರು ಪ್ಲಾಸ್ಟಿಕ್ ಬಳಕೆಯನ್ನು ಬಿಟ್ಟು, ಪರಿಸರ ಸ್ನೇಹಿ ಪರ್ಯಾಯ ವಸ್ತುಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು…
ಗುಬ್ಬಿ: ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಾಲೂಕು ಮಟ್ಟದ ಪ.ಜಾತಿ ಮತ್ತು ಪ.ವರ್ಗಗಳ ಕುಂದುಕೊರತೆ ಸಭೆಯನ್ನು ಜು.13ರಂದು ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11.30 ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಸಭೆ ಹಮ್ಮಿಕೊಂಡಿದ್ದು, ಸದರಿ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮಾಹಿತಿಯೊಂದಿಗೆ ಖುದ್ದು ಹಾಜರಿರುವಂತೆ ಸೂಚಿಸಿದ್ದು, ಎಲ್ಲಾ ಸಂಘಟನೆಗಳ ಮುಖಂಡರು ಪದಾಧಿಕಾರಿಗಳು ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದರಿ ಸಭೆಯಲ್ಲಿ, 29/09/2025 ರ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ನಡಾವಳಿಗಳಿಗೆ ಹಾಗೂ ಸದರಿ ದಿನಾಂಕ ಸಲ್ಲಿಕೆಯಾದ ಕುಂದು ಕೊರತೆಗಳ ಅಹವಾಲುಗಳ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ. ಹೊಸದಾಗಿ ಸಲ್ಲಿಸಬಹುದಾದ ಅಹವಾಲುಗಳು ಇದ್ದಲ್ಲಿ ಸಭೆಯಲ್ಲಿ ಸಲ್ಲಿಸಲು ಎಲ್ಲಾ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳಲ್ಲಿ ಕೋರಿದೆ. ಸದರಿ ವಿಷಯಗಳಿಗೆ ಸಂಬಂಧಿಸಿದಂತೆ ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಸರಗೂರು: ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾಗಿದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವೇಣುಗೋಪಾಲ್ ತಿಳಿಸಿದರು. ಪಟ್ಟಣದ ಶ್ರೀ ಷಡಕ್ಷರಿ ದೇವರಾಜ ಸ್ವಾಮಿ ನಿರಂತರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಪ್ರಥಮ ದಿನದ ಮಕ್ಕಳಿಗೆ ‘ಅಕ್ಷರ ಅಭ್ಯಾಸ’ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯಲ್ಲಿ ಮಗುವಿಗೆ ಶಿಕ್ಷಕರು ಅಕ್ಷರಾಭ್ಯಾಸ ಮಾಡಿಸುವುದು ರೂಢಿ. ಆದರೆ ಅಂದು ಮಕ್ಕಳಿಗೆ ಶಿಕ್ಷಕರು ಪಾಠ ಹೇಳಿಕೊಡಲಿಲ್ಲ. ಬದಲಿಗೆ ಪಾಲಕರೇ ತಮ್ಮ ಮಕ್ಕಳನ್ನು ಮುದ್ದಿನಿಂದ ಮಡಿಲಲ್ಲಿ ಕೂಡಿಸಿಕೊಂಡು ಅಕ್ಷರಭ್ಯಾಸ ಮಾಡಿಸಿದರು. ಇದರಿಂದಾಗಿ ಮಕ್ಕಳ ಮುಖದಲ್ಲಿ ಶಿಕ್ಷಕರ ಬೆತ್ತದ ಭಯವಿರಲಿಲ್ಲ. ಅಪ್ಪ–ಅಮ್ಮನ ಜೊತೆಯಲ್ಲಿ ಕುಳಿತು ನಗುನಗುತ್ತಲೇ ಶಿಕ್ಷಣಾಭ್ಯಾಸಕ್ಕೆ ತಮ್ಮ ಪುಟ್ಟ ಕೈಗಳಲ್ಲಿ ಮುನ್ನುಡಿ ಬರೆದರು. ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ನಾಮಕರಣ, ಅನ್ನಪ್ರಾಶನದಂತೆ ಅಕ್ಷರಾಭ್ಯಾಸಕ್ಕೂ ವಿಶೇಷ ಪದ್ಧತಿಯಿದೆ. ‘ನಕ್ಷರತಿ ಇತಿ ಅಕ್ಷರಂ’ ಎಂದರೆ ಯಾವುದಕ್ಕೆ ಅಳಿವಿಲ್ಲವೋ ಅದೇ ಅಕ್ಷರ. ಆದರೆ ಈಗಿನ ಸಮಾಜದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ…
ತಿಪಟೂರು: ತಾಲ್ಲೂಕಿನಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿರುವ ತಿಪಟೂರು ಲಯನ್ಸ್ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಣ್ಣಿನ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಲೆನ್ಸ್ ಅಳವಡಿಕೆ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿವೆ. ಈ ಕುರಿತು ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ತಿಪಟೂರು ಕೃಷ್ಣ ಅವರು ಮಾಹಿತಿ ನೀಡಿದ್ದಾರೆ. ತಿಪಟೂರು ಲಯನ್ಸ್ ಕ್ಲಬ್, ಸತ್ಯಕುಮಾರ್ ರಿಲೀಫ್ ಫೌಂಡೇಷನ್, ಬೆಂಗಳೂರಿನ ಶ್ರದ್ಧಾ ಐ ಕೇರ್ ಟ್ರಸ್ಟ್ ಹಾಗೂ ಕುಟುಂಬ ಮತ್ತು ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಪ್ರತಿ ತಿಂಗಳೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು ಐದು ಉಚಿತ ಶಿಬಿರಗಳನ್ನು ನಡೆಸಲು ಯೋಜನೆ ರೂಪಿಸಲಾಗಿದೆ. ಇದರ ಮುಂದಿನ ಭಾಗವಾಗಿ ಬರುವ ನಾಲ್ಕನೇ ಮಂಗಳವಾರ ನೊಣವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ಆಯೋಜನೆಯಾಗಲಿದೆ. ಬಿಳಿಗೆರೆ ಪಿ.ಹೆಚ್.ಸಿ: ಬಿಳಿಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ಕಣ್ಣಿನ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆ ಕಾರ್ಯಕ್ರಮದಲ್ಲಿ ಲಯನ್ಸ್ ಸದಸ್ಯರಾದ ಕೆ.ಆರ್. ದೇವರಾಜು, ವೈದ್ಯರಾದ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು. ಇಲ್ಲಿ ಒಟ್ಟು…
ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ ರುಚಿಕರ ಮತ್ತು ಪೌಷ್ಟಿಕಾಂಶ ಭರಿತವಾಗಿವೆ. ಆದರೆ ಇದರ ಮೇಲಿರುವ ಸಣ್ಣ ಸಣ್ಣ ಮುಳ್ಳುಗಳ ಕಾರಣದಿಂದಾಗಿ ಅನೇಕರು ಇದನ್ನು ತಿನ್ನಲು ಹಿಂಜರಿಯುತ್ತಾರೆ. ಈ ಹಣ್ಣನ್ನು ಸುರಕ್ಷಿತವಾಗಿ ಸ್ವಚ್ಛಗೊಳಿಸಿ ಸವಿಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. ಹಣ್ಣನ್ನು ಸ್ವಚ್ಛಗೊಳಿಸುವ ವಿಧಾನ: ಹಣ್ಣನ್ನು ಮುಟ್ಟುವ ಮುನ್ನ ಕೈಗೆ ದಪ್ಪಗಾದ ಗ್ಲೌಸ್ ಧರಿಸಿ ಅಥವಾ ಇಕ್ಕಳದ (tongs) ಸಹಾಯದಿಂದ ಹಣ್ಣನ್ನು ಹಿಡಿದುಕೊಳ್ಳಿ. ಹಣ್ಣನ್ನು ನೇರವಾಗಿ ಬೆಂಕಿಯ ಮೇಲಿಟ್ಟು ಸ್ವಲ್ಪ ಶಾಖ ನೀಡಬಹುದು ಅಥವಾ ಕುದಿಯುವ ಬಿಸಿ ನೀರಿನಲ್ಲಿ ತೊಳೆದು ಚಾಕುವಿನಿಂದ ಮೇಲ್ಭಾಗದ ಸಣ್ಣ ಮುಳ್ಳುಗಳನ್ನು (Glochids) ಕೆರೆದು ತೆಗೆಯಬಹುದು. ಹಣ್ಣಿನ ಎರಡೂ ಬದಿಗಳ ತುದಿಗಳನ್ನು ಕತ್ತರಿಸಿ. ನಂತರ ಹಣ್ಣಿನ ಉದ್ದಕ್ಕೆ ಚಾಕುವಿನಿಂದ ಲಘುವಾಗಿ ಸೀಳಿ, ಸಿಪ್ಪೆಯನ್ನು ಸುಲಭವಾಗಿ ಕೈಯಿಂದಲೇ ಸುಲಿದು ತೆಗೆಯಬಹುದು. ಹೇಗೆ ತಿನ್ನಬೇಕು? ಸಿಪ್ಪೆ ತೆಗೆದ ನಂತರ ಒಳಭಾಗದಲ್ಲಿ ಗಾಢ ಕೆಂಪು ಅಥವಾ ಹಳದಿ…
ತುಮಕೂರು: ಪಾವಗಡ ಪಟ್ಟಣದ ಶನಿಮಹಾತ್ಮ ದೇವಾಲಯದ ಬಳಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪಾವಗಡ ಪೊಲೀಸರು ಬಂಧಿಸಿದ್ದಾರೆ. ಜು.2 ರಂದು ಸಂಜೆ 5.30ರ ಸಮಯದಲ್ಲಿ ಮಡಕಶಿರಾದ ಖಾಸಗಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮುಗಿಸಿ ಪಳವಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ನಾಗಲಕ್ಷ್ಮಿ ಎಂಬ ಮಹಿಳೆಯನ್ನು ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅಡ್ಡಗಟ್ಟಿ ಆಕೆಯ ಮೇಲೆ ಹಲ್ಲೆ ನಡೆಸಿ ಕಿವಿಯ ಜುಮುಕಿ ಹಾಗೂ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದ. ಹಲ್ಲೆಯಿಂದ ಗಾಯಗೊಂಡಿದ್ದ ನಾಗಲಕ್ಷ್ಮಿ ಅವರನ್ನು ಸ್ಥಳೀಯರು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದರು. ಪ್ರಕರಣ ದಾಖಲಿಸಿದ್ದ ಪಾವಗಡ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ನಡೆಸಿ, ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಗೊಲ್ಲಪಳ್ಳಿ ಗ್ರಾಮದ ನಿವಾಸಿ ನಾಗಪ್ಪ ಅವರ ಪುತ್ರ ಮಂಜುನಾಥ್ (35) ಎಂಬಾತನನ್ನು ಬಂಧಿಸಿದ್ದಾರೆ. ಸದರಿ ಆರೋಪಿ ಗಾರೆ ಕೆಲಸ ಮಾಡುತ್ತಿದ್ದನೆಂದು ತಿಳಿದು ಬಂದಿದ್ದು, ಪಾವಗಡದ ಬಸ್ ನಿಲ್ದಾಣದ ಬಳಿ ಸ್ಥಳ ಮಹಜರು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ…
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗಗಳನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಜನರಲ್ಲಿ ಮನವಿ ಮಾಡಿದರು. ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಮಹಾನಗರಪಾಲಿಕೆ ಆವರಣದಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗವು ವೈರಾಣುಗಳಿಂದ ಬರುವ ಕಾಯಿಲೆಗಳಾಗಿದ್ದು, ಸೊಳ್ಳೆ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ರೋಗವನ್ನು ನಿಯಂತ್ರಿಸಲು ಜನ ಸಮುದಾಯದ ಸಹಭಾಗಿತ್ವ ಅಗತ್ಯ. ಮಳೆ ನೀರು ಸಂಗ್ರಹದ ಸ್ಥಳದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಜನಸಮುದಾಯ ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಹಂಸ…