Author: admin

ಸರಗೂರು:  ತಾಲೂಕಿನಲ್ಲಿ ಯುವಕರು ಸೇರಿಕೊಂಡು ನಾಮಧಾರಿ ಗೌಡ ಸಂಘಗಳನ್ನು ಮಾಡಿಕೊಂಡು ಒಳ್ಳೆಯ ಕಾರ್ಯಕ್ರಮ ಮಾಡಿಕೊಂಡು ಎಂದು ಬರುತ್ತಿದ್ದಾರೆ. ಅದು ಸಂತೋಷದ ವಿಷಯ  ಎಂದು ನಿವೃತ್ತ ಕೃಷಿ ಅಧಿಕಾರಿ ಕೃಷ್ಣಯ್ಯ  ಹೇಳಿದರು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಭಾನುವಾರದಂದು ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ SSLC ಮತ್ತು PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ಮಾತ್ರ ಸಭೆ ಸಮಾರಂಭಗಳು ನಡೆಯುತ್ತವೆ. ಆದರೆ ಬೇರೆ ತಾಲೂಕಿನಲ್ಲಿ ನಾಮಧಾರಿಗೌಡರ ಸಭೆ ನಡೆಯುತ್ತಿಲ್ಲ ಎಂದು ನಾನು ಎಲ್ಲಿ ನೋಡಿಲ್ಲ ಎಂದು ತಿಳಿಸಿದರು. ಮುಂದಿನ ಸಭೆಗಳು ಮಾಡಿದರೆ, ಬೇರೆ ತಾಲೂಕಿನಿಂದ ನಮ್ಮ ಸಮಾಜದವರಿಗೆ ಆಹ್ವಾನ ನೀಡಿ ಬರಮಾಡಿಕೊಳ್ಳಿ. ಏಕೆಂದರೆ ಎರಡು ತಾಲ್ಲೂಕುಗಳಲ್ಲಿ ಸಭೆಗಳನ್ನು ಮಾಡುವುದನ್ನು ನೋಡಿ ಕಾರ್ಯಕ್ರಮವನ್ನು ಮಾಡಲಿ ನಾವು ಕೂಡ ಕಾರ್ಯಕ್ರಮ ಮಾಡಬೇಕು ಎನ್ನುವುದು ಅವರ ಮನದಲ್ಲಿ ಹುಟ್ಟಲಿ ಎಂದು ಸಲಹೆ ನೀಡಿದರು. ಸಂಘ ಪ್ರಾರಂಭದಲ್ಲಿ 20 ಜನ ಸದಸ್ಯರು…

Read More

ತುಮಕೂರು: ಪ್ರಪಂಚದ ಗಮನ ಸೆಳೆಯುವ ಮಟ್ಟಿಗೆ ಭಾರತ ಬದಲಾಗಿದ್ದು, ಶಿಕ್ಷಣ ಮತ್ತು ಯುವಕರ ಪಾತ್ರ ಹೆಚ್ಚಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಪಡೆದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ 96 ಕೋಟಿ ಜನ ಇಂಟರ್‌ ನೆಟ್ ಬಳಸುತ್ತಿದ್ದಾರೆ. ಬೇರೆ ಯಾವ ದೇಶಗಳ ಜನರು ಇಷ್ಟೊಂದು ಇಂಟರ್‌ ನೆಟ್ ಬಳಸುತ್ತಿರುವ ಉದಾಹರಣೆಗಳಿಲ್ಲ. ಶಿಕ್ಷಣ ಸಾಕಷ್ಟು ಬದಲಾವಣೆ ತಂದಿದೆ. ಕರ್ನಾಟಕವು ಶೇ.75ರಷ್ಟು ಸಾಕ್ಷರತೆ ಪ್ರಮಾಣ ಹೊಂದಿದೆ. ಭಾರತ ಹೊರತುಪಡಿಸಿದರೆ ವೈದ್ಯರು, ಇಂಜಿನಿಯರ್‌ ಗಳ ಉತ್ಪಾದನೆಯಾವ ದೇಶದಲ್ಲಿಯೂ ಆಗುತ್ತಿಲ್ಲ. ಶಿಕ್ಷಣದಿಂದ ಇಷ್ಟೆಲ್ಲ ಬದಲಾವಣೆ ಸಾಧ್ಯವಾಗಿದೆ ಎಂದರು. ಪ್ರತಿಭಾ ಪುರಸ್ಕೃತರು ಶೇ.‌ 90ರಷ್ಟು ಅಂಕ ಪಡೆದುಕೊಂಡಿದ್ದಾರೆ. ಕೆಲವು ವಿಷಯಗಳಲ್ಲಿ…

Read More

ತುಮಕೂರು: ದೇಶದ ಸ್ವಾತಂತ್ರ್ಯ ಹೋರಾಟಕದಲ್ಲಿ ಶೋಷಿತ ಸಮುದಾಯಗಳು ಮುಂಚೂಣಿಯಲ್ಲಿದ್ದವು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿಕೊಂಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರುಕ್ರಾಂತಿಯ ಹರಿಕಾರ,‌ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ‌ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು. ದೇಶದ ಮಹಾನ್ ನಾಯಕರ ಹುಟ್ಟುಹಬ್ಬ, ಪುಣ್ಯಸ್ಮರಣೆಯ ಆಚರಣೆಗಳು, ಅವರ ಆದರ್ಶಗಳನ್ನು ಸ್ಮರಿಸಿಕೊಳ್ಳಲು ಉಪಯೋಗವಾಗುತ್ತವೆ. ಅವರ ಜೀವನ ಚರಿತ್ರೆಯನ್ನು ನಾವು ಸ್ಮರಿಸಿದರೆ ಮುಂದಿನ ಪೀಳಿಗೆಗೂ ಗೊತ್ತಾಗುತ್ತದೆ. ನಾವೆಲ್ಲ ಹೋರಾಟದ ದಾರಿಯಲ್ಲಿ ಹೋಗುತ್ತಿದ್ದೇವೆ. ಇದಕ್ಕೆ ಬಾಬು…

Read More

ತುಮಕೂರು:  ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್  ಸಬ್ ಇನ್ಸ್ಪೆಕ್ಟರ್ ತುಮಕೂರಿನ ಖಾಸಗಿ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ ಪೆಕ್ಟರ್ ನಾಜರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಜುಲೈ 1 ನೇ ತಾರೀಖು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಬಾಂಡ್ ಪೇಪರ್ ನಲ್ಲಿ ವಿಲ್ ಬರೆದಿಟ್ಟಿದ್ದಾರೆ.  ಮೊಬೈಲ್ ಸೇರಿದಂತೆ, ಡೆತ್ ನೋಟ್ ಮತ್ತು ಬಾಂಡ್ ಪೇಪರ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.  4 ನೇ ಮಹಡಿಯಲ್ಲಿ ರೂಂ ಬಾಡಿಗೆ ಪಡೆದಿದ್ರು, ಲಾಡ್ಜ್ ರೂಂ ನಲ್ಲೇ ರೂಂ ನಲ್ಲೇ‌ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಕುಟುಂಬದ ಸಮಸ್ಯೆಗಳನ್ನ ಬರೆದಿಟ್ಟು ನನ್ನ ಸಾವಿಗೆ ನಾನೇ ಕಾರಣ ಎಂದು ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.  ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಾಗ, ಲಾಡ್ಜ್ ಸಿಬ್ಬಂದಿ…

Read More

ತುಮಕೂರು:  ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನ ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ತುಮಕೂರು ನಗರದ ಕೋತಿತೋಪು ನಿವಾಸಿ ನಫೀಸ್ ಅಹಮದ್(33)  ಭೀಕರವಾಗಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಫೈರೋಜ್ ಪಾಷಾ ಎನ್ನುವ ವ್ಯಕ್ತಿಯು ಕೊಲೆ ಮಾಡಿದ್ದಾನೆ. ಕೊಲೆಯಾದ ನಫೀಸ್ ಅಹಮ್ಮದ್ ಟೈಲ್ಸ್ ಕೆಲಸ ಮಾಡ್ತಿದ್ದನು. ಆರೋಪಿ ಫೈರೋಜ್ ಪಾಷಾ, ಬೈಕ್ ಗ್ಯಾರೇಜ್ ಇಟ್ಟುಕೊಂಡಿದ್ದನು.  ಆರೋಪಿ ಫೈರೋಜ್ ಪಾಷಾ ಎಂಬಾತನಿಂದ  ಸಾಲವಾಗಿ  ನಫೀಸ್ ಅಹಮ್ಮದ್ ನಿಂದ ಹಣ ಪಡೆದಿದ್ದನು.  ಹಣದ ವಿಚಾರಕ್ಕೆ ಇಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಎನ್ ಇಪಿಎಸ್ ಪೊಲೀಸ್ ಠಾಣೆ ಪೊಲೀಸರು ಹಾಗೂ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ಭೇಟಿ ಪರಿಶೀಲನೆ ನಡೆಸಿದರು.  ಘಟನೆ‌ ಸಂಬಂಧ ಎನ್ ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.  ಆರೋಪಿ ಫೈರೋಜ್ ಪಾಷಾ ನನ್ನ  ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತಿಪಟೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕು ಕಸಬಾ ವಲಯದ ಗಾಂಧಿನಗರ ಕಾರ್ಯಕ್ಷೇತ್ರದಲ್ಲಿ  ‘ನೇಸರ ‘ಎಂಬ ಹೆಸರಿನ ನೂತನ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಮಾಡಲಾಯಿತು. ತಿಪಟೂರು ನಗರ ಸಭೆ ಸದಸ್ಯರಾದ ಲತಾ ಲೋಕೇಶ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅನೇಕ ಮಹಿಳೆಯರು ಆರ್ಥಿಕ ಶಿಸ್ತಿನೊಂದಿಗೆ ಸ್ವಉದ್ಯೋಗ ನಡೆಸಿಕೊಂಡು ಕುಟುಂಬ ನಡೆಸಿಕೊಂಡು ಹೋಗುತ್ತಿದ್ದಾರೆ, ಜ್ಞಾನ ವಿಕಾಸ ಕೇಂದ್ರದ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಶುಭ ನುಡಿದರು. ಉದಯ್ ಕೆ. ಕ್ಷೇತ್ರ ಯೋಜನಾಧಿಕಾರಿಯವರು ಕೇಂದ್ರದ ದಾಖಲಾತಿಯನ್ನು ಹಸ್ತಾಂತರ ಮಾಡಿ ಜ್ಞಾನ ವಿಕಾಸ ಕಾರ್ಯಕ್ರಮವು ಮಹಿಳಾ ಸಬಲೀಕರಣದಲ್ಲಿ  ಪೂರಕವಾಗಿ ಸರ್ಕಾರಿ ಸೌಲಭ್ಯ, ಕಾನೂನು, ಶಿಕ್ಷಣ, ಅರೋಗ್ಯ ಅರಿವು, ಪೌಷ್ಟಿಕ ಆಹಾರ, ಸ್ವಉದ್ಯೋಗ ಪ್ರೇರಣಾ ಶಿಬಿರ ಅಧ್ಯಯನ ಪ್ರವಾಸ, ಜ್ವಲಂತ ಕಾರ್ಯಕ್ರಮದ ಕುರಿತು ತಾಲೂಕಿನಲ್ಲಿ ಪ್ರತಿ ತಿಂಗಳು ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಅರಿವು ಮೂಡಿಸುತ್ತಿದ್ದು, ಮಾತೃಶ್ರೀ ರವರ…

Read More

ಬೀದರ್ : ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ ಮೊಹರಂ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ–21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ ಜಿಲ್ಲಾದ್ಯಂತ ಜು.6 ರ ಬೆಳಿಗ್ಗೆ 6 ಗಂಟೆಯಿಂದ ಜು.7 ರ ಬೆಳಿಗ್ಗೆ 6 ಗಂಟೆವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಂತೆ ಪಾಠ ಮಾಡಿದ ಅವರು, ಪ್ಲಾಸ್ಟಿಕ್ ನಿಂದ ಆಗುವ ಪರಿಣಾಮಗಳ ಬಗ್ಗೆ ತಿಳಿಸಿ ಹೇಳಿದರು. ಕಾಲೇಜಿನ ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೇರಿ…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಮೈಸೂರಿನ ಟಿ ನರಸೀಪುರ ಎಂಬಲ್ಲಿ ವಶಕ್ಕೆ ಪಡೆದ ಪೊಲೀಸರು ಪುತ್ತೂರಿಗೆ ಕರೆದುಕೊಂಡು ಬಂದಿದ್ದಾರೆ. ಪುತ್ತೂರಿನ ಪ್ರಭಾವಿ ಮುಖಂಡ, ನಗರಸಭಾ ಸದಸ್ಯ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಎಫ್​ ಐಆರ್ ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ. ಆತನನ್ನು ವಶಕ್ಕೆ ಪಡೆಯಲು ಕಳೆದ ಕೆಲವು ದಿನಗಳಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಮಗ ಕೃಷ್ಣ ಜೆ.ರಾವ್ ಹೈಸ್ಕೂಲ್​​ ನಿಂದಲೇ ಪರಿಚಿತರು. ಸದ್ಯ ಎಂಜಿನಿಯರಿಂಗ್ ಓದುತ್ತಿರುವ ಆರೋಪಿ ಕೃಷ್ಣ ಜೆ ರಾವ್ ಮದುವೆಯಾಗುವುದಾಗಿ ಭರವಸೆ ನೀಡಿ ಸಂತ್ರಸ್ತೆಯ ಜೊತೆ ದೈಹಿಕ ಸಂಪರ್ಕ ನಡೆಸಿದ್ದು, ಯುವತಿ ಗರ್ಭಿಣಿಯಾದ ನಂತರ ಮದುವೆಗೆ ನಿರಾಕರಿಸಿದ್ದು, ತಲೆಮರೆಸಿಕೊಂಡಿದ್ದ. ಸದ್ಯ…

Read More

ಬೆಂಗಳೂರು:   ಕುಣಿಗಲ್  ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ  ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು. ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಜಿಲ್ಲೆಯ…

Read More