Author: admin

ತುಮಕೂರು: ಮಹಿಳಾ ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ತಡೆದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಬಸ್ ನ್ನು ಮಹಿಳೆಯರು ತಡೆದರೂ, ಅವರ ಮುಂದೆಯೇ ಬಸ್ ನ್ನು ನುಗ್ಗಿಸಿ ಚಾಲಕ ಉದ್ಧಟತನ ಪ್ರದರ್ಶಿಸಿದ ವಿಡಿಯೋ ಸೆರೆಯಾಗಿದೆ. ಈ ಘಟನೆ ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊಳ್ಳೇಗಾಲದಿಂದ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು ಹಾಗೂ ಮಕ್ಕಳು, ದೇವರ ದರ್ಶನ ಮುಗಿಸಿ ವಾಪಸ್ ಕೊಳ್ಳೆಗಾಲದತ್ತ ತೆರಳುವಾಗ ಘಟನೆ ನಡೆದಿದೆ. ಎರಡು ತಾಸು ಕಾದರೂ ಯಾವುದೇ ಬಸ್ ನಿಲ್ಲಿಸದ ಕಾರಣ  ಮಹಿಳೆಯರು ಬಸ್ ಗೆ ಅಡ್ಡಲಾಗಿ ನಿಂತು ಬಸ್  ತಡೆಯಲು ಮುಂದಾಗಿದ್ದಾರೆ.   ಈ ವೇಳೆ ಮಹಿಳೆಯರ ಮೇಲೆ ಬಸ್ ಹರಿಸಲು ಸರ್ಕಾರಿ ಬಸ್ ಚಾಲಕ ಮುಂದಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೊರಟಗೆರೆ ತಹಶೀಲ್ದಾರ್ ಮುನಿಶಾಮ ರೆಡ್ಡಿ, ಮಹಿಳೆಯರ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದರು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.…

Read More

ತುಮಕೂರು: ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ  10 ವರ್ಷಗಳ ಕಾಲ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ನ್ಯಾಯಾಲಯವು ತೀರ್ಪು ನೀಡಿದೆ. ಫೇಸ್ ಬುಕ್ ನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಪರಾಧಿ ರವಿಯು, ಆಕೆಯನ್ನು ಪುಸಲಾಯಿಸಿ ಮೈಸೂರಿನ ಹೆಚ್.ಡಿ.ಕೋಟೆ ಟೌನ್ ನ ವಿಶ್ವನಾಥ ಕಾಲೋನಿಯಲ್ಲಿ ಬಾಡಿಗೆಗೆ ಮನೆ ಪಡೆದುಕೊಂಡು, ಆ ಮನೆಯಲ್ಲಿ ಇರಿಸಿ ಬಾಲಕಿಯ ಇಚ್ಛೆಯ ವಿರುದ್ಧವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ಶಿರಾ ಪೊಲೀಸ್ ತನಿಖಾಧಿಕಾರಿಗಳಾದ ಹನುಮಂತರಾಯಪ್ಪ ಜೆ.ಬಿ. ಈ ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ  ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ನ್ಯಾಯಾಲಯವು, ರವಿ ಕೃತ್ಯ ನಡೆಸಿರುವುದು ಸಾಬೀತಾದ ಕಾರಣ ಆತನಿಗೆ 10…

Read More

ಲಖನೌ: ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರಾದ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡ ಅಖಿಲೇಶ್ ಯಾದವ್ ಅವರು, ದೀರ್ಘಕಾಲ ಮಾತುಕತೆ ನಡೆಸಿದರು. ಈ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ…

Read More

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ. ಸಂಪುಟ ಸಭೆಯ ಬಳಿಕ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾಜ ವಿಜ್ಞಾನ ಹಾಗೂ ಕನ್ನಡ ಪಠ್ಯದಲ್ಲಿ ಕೆಲವೊಂದು ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದು, 6ನೇ ತರಗತಿಯಿಂದ 10ನೇ ತರಗತಿ ವರೆಗೆ ಕೆಲವು ಪಾಠಗಳನ್ನ ಈ ಸಾಲಿನಿಂದಲೇ ಪರಿಷ್ಕರಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಪಠ್ಯ ಪುಸ್ತಕ ಈಗಾಗಲೇ ಹಂಚಿಕೆ ಆಗಿದೆ. ಆದ್ದರಿಂದ ಹೆಚ್ಚುವರಿ ಪುಸ್ತಕಗಳನ್ನ ಶಾಲೆಗಳಿಗೆ ತಲುಪಿಸುತ್ತೇವೆ. ಅದರಲ್ಲಿ ಕೆಲವು ಶಿಷ್ಟಾಚಾರ ಇರುತ್ತವೆ. ಜ್ಯೋತಿ ಬಾಫುಲೆ, ಅಂಬೇಡ್ಕರ್ ಹಾಗೂ ನೆಹರೂ ಪಾಠಗಳು ಸೇರ್ಪಡೆ ಆಗಿರುತ್ತೆ. ಹೆಡ್ಗೆವಾರ್, ಚಕ್ರವರ್ತಿ ಸೂಲಿಬೆಲೆ ಪಠ್ಯಗಳನ್ನ ಕೈಬಿಟ್ಟಿದ್ದೇವೆ. ಇದು ತಾತ್ಕಾಲಿಕ ಬದಲಾವಣೆ. ಮುಂದೆ ಸಮಿತಿ ಮಾಡಿ ಸಂಪೂರ್ಣ ಪರಿಷ್ಕರಣೆ ಮಾಡಲಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಾಮರಾಜನಗರ: ಕುಡಿದ ಮತ್ತಿನಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ‌ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.‌ ಸುಧಾಮಣಿ ಎಂಬವರು ತೀವ್ರವಾಗಿ ಗಾಯಗೊಂಡ ಮಹಿಳೆಯಾಗಿದ್ದಾರೆ. ಈಕೆಯ ಪತಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಬುಧವಾರ ತಡರಾತ್ರಿ ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದ ಪರಿಣಾಮ ತಲೆ, ಬೆನ್ನು ಹಾಗೂ, ಕೈಗಳಿಗೆ ತೀವ್ರ ಗಾಯಗಳಾಗಿವೆ. ಗಾಯಳುವನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತಿದೆ.‌ಪತಿ ಕುಮಾರನನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅನ್ನ ಬಾಗ್ಯ ಯೋಜನೆಗೆ ಕೇಂದ್ರದ ಅಸಹಕಾರ ವಿರೋಧಿಸಿ ದಿಲ್ಲಿಯ ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಉನ್ನತ ಮೂಲಗಳು ಈ ವಿಷಯ ತಿಳಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ರಾಜ್ಯದ ಕಾಂಗ್ರೆಸ್ ಸಂಸದರು,ರಾಜ್ಯಸಭಾ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ಚಿಂತನೆ ನಡೆಸಲಾಗುತ್ತಿದ. ತೆರೆದ ಮಾರುಕಟ್ಟೆಯಲ್ಲಿ ರಾಜ್ಯಗಳಿಗೆ ಅಕ್ಕಿ ಮಾರುವುದನ್ನು ಸ್ಥಗಿತಗೊಳಿಸುವ ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ ಕೆಂಡಾಮಂಡಲಗೊಂಡಿದೆ.ಅನ್ನಬಾಗ್ಯ ಯೋಜನೆಗೆ ಬೇಕಾಗುವ ಎರಡು ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಅಕ್ಕಿಯನ್ನು ಕೇಂದ್ರದಿಂದ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿತ್ತು.ಆದರೆ ಕೇಂದ್ರ ಸರ್ಕಾರ ಇದ್ದಕ್ಕಿದ್ದಂತೆ ಯೂ ಟರ್ನ್ ಹೊಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು ನಗರದ ಹೃದಯ ಭಾಗದಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಸೇರಿದ ಎಟಿಎಂನ್ನು ಕತ್ತರಿಸಿದ ಕಳ್ಳರು, ಸುಮಾರು 2,90,000 ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಎಸ್ ಪಿ ಕಚೇರಿ ಬಳಿಯಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಪಕ್ಕದಲ್ಲೇ ಎಟಿಎಂ ಇದ್ದು, ಈ ಎಟಿಎಂಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ ಬಳಸಿ, ವ್ಯವಸ್ಥಿತವಾಗಿ ಎಟಿಎಂ ಮಷೀನ್ ಅನ್ನು ತುಂಡು ಮಾಡಿದ್ದಾರೆ. ಬಿಎಚ್ ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಎಟಿಎಂ ಮಷೀನ್ ಅನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗ್ಯಾಸ್ ಕಟರ್ ಬಳಸಿ ಮೆಷಿನ್ ಅನ್ನು ತುಂಡರಿಸಲಾಗಿದೆ.ಈ ಸಂಬಂಧ ಸ್ಥಳಕ್ಕೆ ಡಿವೈಎಸ್ಪಿ ಶ್ರೀನಿವಾಸ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎನ್ ಎಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕಾಗಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಲಾಗಿದೆ. ಕರ್ನಾಟಕ ಕಲಬುರ್ಗಿ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ. 2020 ರಲ್ಲಿ, ಕರ್ನಾಟಕದ ಬೀದರ್‌ನಲ್ಲಿರುವ ಶಾಹೀನ್ ಶಾಲೆಯ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಾಟಕವನ್ನು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಲಬುರ್ಗಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲ್‌ಪಿ ಮತ್ತು ಯುಪಿ ಮಕ್ಕಳು ಪ್ರಸ್ತುತಪಡಿಸಿದ ನಾಟಕವು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಉಲ್ಲೇಖಗಳನ್ನು ಹೊಂದಿದೆ ಮತ್ತು ದೇಶದ ಕಾನೂನಿಗೆ ವಿರುದ್ಧವಾದ ಉಲ್ಲೇಖಗಳನ್ನು ದೇಶದ್ರೋಹ ಎಂದು ವ್ಯಾಖ್ಯಾನಿಸಬಹುದು ಎಂಬ ಆಧಾರದ ಮೇಲೆ ಅವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಯಿತು. ಇದರ ನಂತರ, ಜನವರಿ 30, 2020 ರಂದು, ಶಾಲೆಯ ಮುಖ್ಯೋಪಾಧ್ಯಾಯಿನಿ ಫರೀದಾ ಬೇಗಂ ಮತ್ತು ನಾಟಕದಲ್ಲಿ ನಟಿಸಿದ ಮಗುವಿನ ತಾಯಿ ನಜ್ಬುನ್ನೀಸಾ ಅವರನ್ನು ಪೊಲೀಸರು ಬಂಧಿಸಿದರು. ಆದರೆ, ಮುಂದಿನ ತಿಂಗಳು ಅವರನ್ನು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತು. ಅವರನ್ನು ಹೊರತುಪಡಿಸಿ, ಇತರ ಲೂಪರ್‌ಗಳ…

Read More

ತುಮಕೂರು: ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿಯನ್ನು ವಿರೋಧಿಸಿ ರೊಚ್ಚಿಗೆದ್ದ ವಿದ್ಯಾರ್ಥಿಗಳು ಉಪನ್ಯಾಸಕನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯೊಂದಿಗೆ ಮೊಬೈಲ್ ಚಾಟಿಂಗ್ ಹಾಗೂ ಕಾರಿನಲ್ಲಿ ಸುತ್ತಾಟ ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉಪನ್ಯಾಸಕನನ್ನು ಕೊಠಡಿಯಲ್ಲಿ ಕೂಡಿಹಾಕಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಿಪಟೂರು ಪೊಲೀಸರು ಕಾಲೇಜಿಗೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಮನವೊಲಿಕೆ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಕ್ರಮಗಳೊಂದಿಗೆ ಕೇಂದ್ರ. ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಧಾರ್ಮಿಕ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಕೇಳಿದ ನಂತರ 21 ನೇ ಕಾನೂನು ಆಯೋಗವು ತನ್ನ ಆದೇಶವನ್ನು ನೀಡಿದೆ. ಮೂವತ್ತು ದಿನಗಳಲ್ಲಿ ಸಲಹೆ ಮತ್ತು ಅಭಿಪ್ರಾಯಗಳನ್ನು ಸಲ್ಲಿಸಬೇಕು ಎಂಬುದು ಕಾನೂನು ಆಯೋಗದ ಆದೇಶ. ಈ ಕುರಿತು ಹಿಂದಿನ ಆಯೋಗ ನೀಡಿರುವ ಸಮಾಲೋಚನಾ ಪತ್ರ ಮೂರು ವರ್ಷಕ್ಕಿಂತ ಹಳೆಯದಾಗಿದ್ದರೂ, ಇದು ಪ್ರಸ್ತುತ ಕಾನೂನು ಆಯೋಗವು ಕರ್ನಾಟಕ ಹೈಕೋರ್ಟ್‌ ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರ ನೇತೃತ್ವದಲ್ಲಿದೆ. ಆಸಕ್ತರು ಮತ್ತು ಇಚ್ಛೆಯುಳ್ಳವರು ಏಕರೂಪ ನಾಗರಿಕ ಸಂಹಿತೆಯ ಕುರಿತು ತಮ್ಮ ಕಾಮೆಂಟ್‌ ಗಳನ್ನು ಆದೇಶವನ್ನು ಸ್ವೀಕರಿಸಿದ ಮೂವತ್ತು ದಿನಗಳ ಒಳಗಾಗಿ ಕಮಿಷನ್‌ ಗೆ memberecretary-lci@gov.in ಇಮೇಲ್ ಮೂಲಕ ಸಲ್ಲಿಸಬಹುದು. ಇದಕ್ಕೂ ಮುನ್ನ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಪ್ರಸ್ತಾವನೆ ಸಲ್ಲಿಸಲು ಸಮಿತಿಯನ್ನೂ ಕೇಂದ್ರ ಘೋಷಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More