Author: admin

ಬೆಳಗಾವಿ: ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ ಯೋಜನೆಯಿಂದ ರಾಜ್ಯದ ಸಾರಿಗೆ ಮಂಡಳಿಗಳಿಗೆ ಲಾಭವಾಗಲಿದೆ ಎಂದು ನಂಬಲಾಗಿದೆ. ಹೀಗಾದರೆ ಸಾರಿಗೆ ಮಂಡಳಿಗಳ ಸ್ಥಿತಿ ಸುಧಾರಿಸಿ ನೌಕರರ ವೇತನವನ್ನೂ ಹೆಚ್ಚಿಸಬಹುದು ಎಂದರು. ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಂಡಳಿಗಳು ವಿದ್ಯುತ್ ಬಿಲ್ ಹೆಚ್ಚಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾವ ಆಧಾರದಲ್ಲಿ ಬಿಲ್ ಗಳನ್ನು ಎರಡು-ಮೂರು ಪಟ್ಟು ಹೆಚ್ಚಿಸುತ್ತಿದ್ದಾರೆ ಎಂಬುದು ನಮಗೆ ನಿಖರವಾಗಿ ತಿಳಿದಿಲ್ಲ ವಿದ್ಯುತ್ ಬೆಲೆ ಏರಿಕೆ ನಿಯಮಿತ ಪ್ರಕ್ರಿಯೆ. ವಿದ್ಯುತ್ ನಿಯಂತ್ರಣ ಆಯೋಗವು ಏಪ್ರಿಲ್ನಲ್ಲಿ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಬಹುಶಃ ಚುನಾವಣೆಯ ಕಾರಣದಿಂದ ದರ ಏರಿಕೆ ತಕ್ಷಣಕ್ಕೆ ಜಾರಿಯಾಗಿರಲಿಲ್ಲ. ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ವಿದ್ಯುತ್ ಸಮಸ್ಯೆ ಇದೆ.…

Read More

ತುಮಕೂರು: ಬಿಬಿಎಂಪಿ ಸಭೆಯಲ್ಲಿ ಸುರ್ಜೇವಾಲ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಪಟ್ಟಂತೆ ‘ಯಾರು ಯಾವ ದೂರು ಬೇಕಾದರೂ ಕೊಡಲಿ.ನಾನು ಸಿಟಿ ರೌಂಡ್ ನಲ್ಲಿ ಇದ್ದೆ ನನ್ನನ್ನು ಕರೆದುಕೊಂಡು ಹೋಗಲು ಅವರು ಬಂದಿದ್ದರು. ನಾನು ಸುರ್ಜೇವಾಲ ಇಬ್ಬರು ಕಾಫಿ ಕುಡಿಯಲು ಕುಳಿತುಕೊಂಡಿದ್ವಿ’ಎಂದು ಉಪಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಂದು ಸುರ್ಜೆವಾಲ ಅವರು ಕೂಡ ಕೂಡ ಬಂದರು, ಸಿಟಿ ರೌಂಡ್ ಹೋಗ್ಬೇಕು.  ನನ್ನ ಪಿಕಪ್ ಮಾಡಲು ಬಂದಿದ್ದರು. ಬಿಡಿಎಯಲ್ಲಿ ಒಂದು ಮಿಟಿಂಗ್ ಮಾಡ್ಕೊಂಡು ಹೋಗೋಣ ಅಂತ ನಿರ್ಧಾರ ಮಾಡಿದ್ವಿ.ಅದನ್ನು ಬಿಟ್ಟರೆ ಯಾವ ಆಫೀರ್ಸ್ ಗೂ ಸುರ್ಜೇವಾಲಾಗು ಸಂಬಂಧವಿಲ್ಲ. ಎಂದರು. ನಾವುಂಟು ಸುರ್ಜೇವಾಲ ಉಂಟು, ಹೋಟ್ಲು ಉಂಟು, ಕಾಫಿ ಉಂಟು. ಯಾರು ಮಿಟಿಂಗ್ ಕರೆದಿರಲಿಲ್ಲ, ನಾವು ಮಿಟಿಂಗ್ ಮಾಡಿಲ್ಲ. ಯಾರು ಮಿಟಿಂಗ್ ಕರೆದಿಲ್ಲ, ಸಭೆ ಮಾಡಿಲ್ಲ ಎಂದರು. ರಾಜ್ಯಪಾಲರಿಗೆ ಬೇಕಾದ ದೂರು ಕೊಡ್ಲಿ ಇನ್ಯಾರಿಗೆ ಬೇಕಾದ ದೂರು  ಕೊಡ್ಲಿ ಇಂಥ ಮೀಟಿಂಗಗಳು ಬಿಜೆಪಿ ಅವರು ಎಷ್ಟು ಮಾಡಿದ್ದಾರೆ ಅನ್ನೋದು ನಮ್ಮತ್ರನು…

Read More

ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಂಬಾನಿ, ಅದಾನಿಯಂತಹ ಉದ್ಯಮಿಗಳು ಮುಂದೆ ಬಂದರೂ ಅವರಿಗೆ ಜಾಗ ಕೊಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬಾನಿ ಮತ್ತು ಅದಾನಿ ಕೂಡಾ ಉದ್ಯಮಿಗಳು. ಅವರು ಉದ್ಯಮ ಸ್ಥಾಪಿಸಲು ಮುಂದೆ ಬಂದರೆ ನಮ್ಮಕೈಗಾರಿಕಾ ನೀತಿಯ ಅಡಿ ಏನು ಕೊಡಬೇಕೋ ಅದನ್ನೆಲ್ಲ ಕೊಡುತ್ತೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದವರು ಅಲೆದಾಡುವ ಪರಿಸ್ಥಿತಿ ಇರಬಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲ ಮಾಡಿಕೊಡಲು ರೂಪಿಸಲಾದ ಏಕಗವಾಕ್ಷಿ ಯೋಜನೆ ಸರಿ’ ಇಲ್ಲ. ಏಕಗವಾಕ್ಷಿ ಯೋಜನೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದು ಒಂದೆರಡು ದಿನಗಳಲ್ಲಿ ಅದು ಲಭ್ಯವಾಗುವ ನಿರೀಕ್ಷೆ ಇದೆ. ಉಪನಗರ ರೈಲ್ವೆ ಕುರಿತು ಚರ್ಚೆ ನಡೆಸಲಾಗಿದೆ. ಇದನ್ನು ಮೈಸೂರು, ತುಮಕೂರು, ಉಲ್ಲಾಳ ಮತ್ತು ದಾಬಸ್ ಪೇಟೆವರೆಗೆ ವಿಸ್ತರಣೆ ಮಾಡುವ ಅಗತ್ಯವಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬಿಜೆಪಿ ಪಕ್ಷದ ವಿರುದ್ಧ ವಿವಿಧ ಭ್ರಷ್ಟಾಚಾರ ಆರೋಪ ಹೊರಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿದೆ. ಭಾರತೀಯ ಜನತಾ ಪಕ್ಷ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ದೂರು ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿದ್ದು, ಕಾಗ್ನಿಜೆನ್ಸ್ ಪಡೆದುಕೊಂಡಿದೆ. ಅಲ್ಲದೇ, ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವುದಕ್ಕಾಗಿ ಜುಲೈ 27ಕ್ಕೆ ದಿನಾಂಕವನ್ನು ನಿಗದಿ ಪಡಿಸಿ ವಿಚಾರಣೆ ಮುಂದೂಡಿದೆ. ಪ್ರಕರಣದ ಹಿನ್ನೆಲೆ ಏನು?:ಬಿಜೆಪಿ ಪಕ್ಷದ ವಿರುದ್ಧ ಭ್ರಷ್ಟಾಚಾರ ರೇಟ್ ಕಾರ್ಡ್ ಎಂಬ ಶೀರ್ಷಿಕೆಯಡಿ ಪ್ರಮುಖ ದಿನ ಪತ್ರಿಕೆಗಳಲ್ಲಿ 2023 ರ ಮೇ 5ರಂದು ಮಾನಹಾನಿಕರ ಜಾಹೀರಾತು ನೀಡಲಾಗಿತ್ತು. ಈ ಜಾಹೀರಾತಿನಲ್ಲಿ ಅಧಿಕಾರಿಗಳ ವರ್ಗಾವಣೆಗೆ ವಿವಿಧ ಹಂತದಲ್ಲಿ ಲಂಚವನ್ನು ಪಡೆದುಕೊಳ್ಳಲಾಗುತ್ತಿದೆ. ಎಂಜಿನಿಯರ್‌ಗಳಿಗೆ 5 ಕೋಟಿ, ಸಬ್ ರಿಜಿಸ್ಟಾರ್‌ಗೆ 5 ಕೋಟಿ, ಪಿಎಸ್‌ಐಗೆ 80…

Read More

ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಮುಖ ದಲಿತ ಮುಖಂಡ, ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆ ದಲಿತ ಸಿಎಂ ಚರ್ಚೆಗೆ ಎಡೆಮಾಡಿಕೊಟ್ಟಿದ್ದಲ್ಲದೆ, ಕಾಂಗ್ರೆಸ್ ಸರ್ಕಾರದೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಹಿರಂಗಪಡಿಸಿದೆ. ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷನಾಗಿದ್ದಾಗ 2013 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಆಗಲು ಸಾಧ್ಯವಾಗಲಿಲ್ಲ, ನನ್ನ ನಾಯಕತ್ವದಲ್ಲಿ ಪಕ್ಷವು ಯಶಸ್ಸು ಸಾಧಿಸಿದ್ದರೂ ಯಾರೂ ನನಗೆ ಕ್ರೆಡಿಟ್ ನೀಡಲಿಲ್ಲ. 2018ರಲ್ಲಿ ದಲಿತರನ್ನು ಕಡೆಗಣಿಸಿದ್ದರಿಂದ ಪಕ್ಷ ಸೋಲಿನ ರುಚಿ ಅನುಭವಿಸಬೇಕಾಯಿತು ಎಂದು ಪರಮೇಶ್ವರ್ ಹೇಳಿದ್ದಾರೆ. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಗಳ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಉದ್ದೇಶಪೂರ್ವಕವಾಗಿ ದಲಿತ ನಾಯಕರಿಗೆ ಪಕ್ಷದಲ್ಲಿ ಸಿಎಂ ಸ್ಥಾನ ನಿರಾಕರಿಸಲಾಗುತ್ತಿದೆ ಎಂದು ಸಚಿವರು ಕಿಡಿಕಾರಿದರು.”ನಾನು ಅಥವಾ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಏಕೆ ಮುಖ್ಯಮಂತ್ರಿಯಾಗಬಾರದು ಎಂದು ಪರಮೇಶ್ವರ ತಿಳಿಸಿದ್ದಾರೆ. ದಲಿತ ನಾಯಕರೆಲ್ಲ ಈ…

Read More

ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಪ್ರಶ್ನಿಸಿದ ಮುಖ್ಯ ಮಂತ್ರಿಗಳು ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು. ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು.ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ.ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ,ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ರಾಜ್ಯದಲ್ಲಿ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದು, ಈ ವಿಚಾರದಲ್ಲಿ ಸರ್ಕಾರ ಕಿವಿ ಹಿಂಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದೆ ಎಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಚಟುವಟಿಕೆಗೆ ರಾಜಕಾರಣದಲ್ಲಿ ಅವಕಾಶ ಕೊಡಬಾರದು, ನಿಜಕ್ಕೂ ಈ ರೀತಿ ಕಾಂಗ್ರೆಸ್ ಪಕ್ಷದ ವರಿಷ್ಠರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು ಖಂಡನೀಯ. ಹಾಗಾಗಿ ನಾವು ರಾಜ್ಯಪಾಲರ ಮೊರೆ ಹೋಗಿ ಈ ವಿಚಾರದಲ್ಲಿ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುವಂತೆ ಹಾಗೂ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಗಮನಕ್ಕೆ ತರುತ್ತೇವೆ ಎಂದರು. ಸುರ್ಜೇವಾಲಾ ಅಧಿಕಾರಿಗಳ ಸಭೆಗೆ ಹಾಜರಾಗಿದ್ದರಲ್ಲಿ ಬಹಳ ಮುಖ್ಯವಾಗಿ ಅವರ ನಿಜವಾದ ಉದ್ದೇಶ ಏನು ಎಂದು ಗೊತ್ತಿಲ್ಲ. ಆದರೆ, ಈ ರೀತಿ ಪಕ್ಷದ ಪದಾಧಿಕಾರಿಯೊಬ್ಬರು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ, ಆದರೂ ಭಾಗವಹಿಸಿದ್ದಾರೆ.ಇದು ಸ್ಪಷ್ಟವಾಗಿ ಕಾನೂನು ಉಲ್ಲಂಘನೆಯಾಗಿದೆ.ಕಾನೂನು ಉಲ್ಲಂಘನೆ…

Read More

ತಾಪಮಾನ ಏರಿಕೆ, ಮಳೆ ಕೊರತೆಯಿಂದಾಗಿ ಇಳುವರಿ ಕುಂಠಿತವಾಗಿ ತರಕಾರಿ ಮತ್ತು ಸೊಪ್ಪಿನ ದರಗಳು ದುಪ್ಪಟ್ಟಾಗಿವೆ.ಬೀನ್ಸ್ ಮತ್ತು ಕ್ಯಾರೆಟ್ 7100ರ ಗಡಿ ದಾಟಿದ್ದು, ಗ್ರಾಹಕರಿಗೆ ಹೊರೆಯಾಗಿದೆ. ಕಳೆದ ವಾರ ರಾಜ್ಯದ ಕೆಲವು ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಬಿದ್ದಿದೆ.ಆದರೆ, ಬಿಸಿಲಿನ ತಾಪ ಕಡಿಮೆಯಾಗಿಲ್ಲ. ಈ ಕಾರಣದಿಂದಾಗಿ ಸಹಜವಾಗಿಯೇ ತರಕಾರಿಗಳ ಇಳುವರಿ ಕಡಿಮೆಯಾಗಿ ಬೆಲೆ ದುಬಾರಿಯಾಗಿದೆ. ‘ತಮಿಳುನಾಡು ಸೇರಿ ಬೇರೆ ರಾಜ್ಯಗಳಲ್ಲಿ ಮಳೆ ಬೀಳದ ಕಾರಣ ಕ್ಯಾರೆಟ್ ಪೂರೈಕೆ ಕಡಿಮೆಯಾಗಿದೆ. ಅಲ್ಲಿಂದ ಅವಕವಾಗುತ್ತಿದ್ದ ಕ್ಯಾರೆಟ್ ಪ್ರಮಾಣ ಇದರಿಂದ ಹೆಚ್ಚು ತೊಂದರೆಯಾಗಿದೆ. ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರಿಂದ ಬೆಲೆ ಹೆಚ್ಚಾಗಿದೆ.ಮದುವೆ ಮೊದಲಾದ ಶುಭ ಸಮಾರಂಭ ಮಾಡುವವರಿಗೆ ಹಾಗೂ ಗ್ರಾಹಕರಿಗೆ ಮತ್ತೊಂದೆಡೆ ರೈತರು ಬೆಳೆದ ಫಸಲಿನಲ್ಲಿ ಸಮರ್ಪಕ ಇಳುವರಿ ಬಾರದ ಕಾರಣ ಅವರಿಗೂ ಹೆಚ್ಚಿನ ಲಾಭವಾಗುತ್ತಿಲ್ಲ ಎನ್ನುತ್ತಾರೆ ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳು. ಕಳೆದ ವಾರ ಕೆ.ಜಿಗೆ 360ಕ್ಕೆ ಮಾರಾಟವಾಗುತ್ತಿದ್ದ ಬೀನ್ಸ್, ಕ್ಯಾರೆಟ್ 7100ರ ಗಡಿ ದಾಟಿದೆ.ಪ್ರತಿ ಕೆ.ಜಿ.ಗೆ 140ರಂತೆ ಮಾರಾಟವಾಗುತ್ತಿದ್ದಹೂಕೋಸು, ಹಾಗಲಕಾಯಿ, ತೊಂಡೆಕಾಯಿ, ಬದನೆಕಾಯಿ, ಕುಂಬಳಕಾಯಿ,ಸೊರೇಕಾಯಿ, ಹಿರೇಕಾಯಿ…

Read More

ಬೆಂಗಳೂರಿನ ಎಚ್‌ಎಎಲ್‌ ನಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿವೇಕ್ ಕುಮಾರ್ ಮೃತ ದುರ್ದೈವಿ ಎಂದು ಹೇಳಲಾಗಿದೆ. ಈತ ಲ್ಯಾಂಡ್ ಮಾರ್ಕ್ ಗ್ರೂಪ್‌ಗೆ ಸೇರಿದ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ಮೂವರು ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಮೃತ ವಿವೇಕ್ ಆರೋಪಿಸಿದ್ದು ಈ ಮೂವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿರುವುದಾಗಿ ಆತ್ಮಹತ್ಯೆಗೂ ಮುನ್ನ ವಿವೇಕ್ ಕುಮಾರ್ ಮೊಬೈಲ್‌ ನಲ್ಲಿ ವೀಡಿಯೊ ಮಾಡಿ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ್ದಾರೆ. ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಆಗಮಿಸಿ ವಿವೇಕ್‌ಕುಮಾರ್ ಸಾವಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದ್ದು ಅಟ್ರಾಸಿಟಿ ಪ್ರಕರಣ ದಾಖಲು ಮಾಡಿಕೊಂಡು ನಿತೇಶ್ ಎಂಬಾತನನ್ನು ಬಂಧಿಸಿದ್ದಾರೆ.ಉಳಿದ ಇನ್ನಿಬ್ಬರಿಗಾಗಿ ಶೋಧ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತವರು ಮನೆಗೆ ತೆರಳಿದ್ದ ಪತ್ನಿಯನ್ನು ಕರೆತರಲು ಹೋಗಿದ್ದ ಪತಿರಾಯ ಪತ್ನಿಯನ್ನು ಕರೆತರದೆ ಅತ್ತೆಗೆ ಚಾಕು ಇರಿದಿರುವ ಘೋರ ಘಟನೆ ಬೆಂಗಳೂರಿನ ಇಬ್ಬಲೂರಿನಲ್ಲಿ ನಡೆದಿದೆ. ಅಳಿಯ ಮನೋಜ್ ಎಂಬುವರು ಅತ್ತೆ ಗೀತಾಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.ಇದು ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿರುತ್ತದೆ. ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ್ಯ ಮೂಲದ ವರ್ಷಿತಾ ಪರಿಚಯವಾಗಿ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು.ಮದುವೆಯ ನಂತರ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ ಪತ್ನಿ ಗಂಡನ ಮನೆ ಬಿಟ್ಟು ತವರು ಮನೆಗೆ ಬಂದಿದ್ದಳು. ಹೆಂಡತಿಯನ್ನು ಜೊತೆಗೆ ಕಳುಹಿಸಿ ಕೊಡುವಂತೆ ಅತ್ತೆಯ ಜೊತೆಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅಳಿಯ ಅತ್ತೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.ಆದರೆ ಈಗ ಬೆಳ್ಳಂದೂರು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More