Author: admin

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿದ್ದು, ಹೆಬ್ಬಾಳ ಫ್ಲೈಓವರ್ ಬಳಿ ಕಾಮಗಾರಿಯನ್ನ ಪರಿಶೀಲಿಸಿದ್ದಾರೆ. ಹೌದು ಟ್ರಾಫಿಕ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಗರ ಸುತ್ತಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಡಿಸಿಎಂ‌ ಸಿಟಿ ರೌಂಡ್ಸ್ ಹಾಕುತ್ತಿರುವುದು ತುಂಬಾ ಸಂತೋಷ ನಾನು ಸ್ವಾಗತ ಮಾಡಲು ಬಂದಿದ್ದೇನೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ಇಲ್ಲಿ ಜನರಿಗೆ ತುಂಬಾ ಸಮಸ್ಯೆ ಆಗುತ್ತಿತ್ತು ಅಂತ 350 ಕೋಟಿ ಸ್ಯಾಂಕ್ಷನ್ ಮಾಡಿಸಿ ಕಾಮಗಾರಿ ಮಾಡಿಸುತ್ತಿದ್ದೆ. ಕಾರ್ಯಕ್ರಮ ರೂಪಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದೇನೆ. ಸಾವಿರಾರು ವೆಹಿಕಲ್ಸ್ ಇಲ್ಲಿಂದ ಮದ್ರಾಸ್ ಆಂಧ್ರಾಗೆ ಹೋಗುತ್ತದೆ. ಮುಂದಿನ ದಿನಗಳಲ್ಲಿ ಕಾದು ನೋಡುತ್ತೇವೆ ಇಲ್ಲಿ ಯಾವ ರೀತಿ ಕೆಲಸಗಳು ಆಗುತ್ತವೆ ಅಂತ. ಆದರೆ ಈಗ ಕಾಂಗ್ರೆಸ್ ಸರ್ಕಾರ ಎನ್ ಮಾಡುತ್ತೆ ಅಂತ ನೋಡಬೇಕು. ನಮ್ಮ ಪಕ್ಷದ ಅವಧಿಯಲ್ಲಿ ಜಾರಿ ಅದಂತಹ ಕಾಮಗರಿಗಳಿಗೆ ಕೆಲವು ಕೆಲಸಗಳಿಗೆ ಇವರು ತಡೆ ನೀಡಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆ ಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಪ್ರಾಮಾಣಿಕವಾಗಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು ಮಾತನಾಡಿ, 1. 4. 2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಾಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್…

Read More

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗಿಲ್ಲ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಮುಂದಿನ ಸಭೆಯೊಳಗೆ ಸರಿಪಡಿಸಬೇಕು ಎಂದು ಆದೇಶಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‍ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವ ಬಗ್ಗೆ, ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ 52% ರಷ್ಟು ತಜ್ಞ ವೈದ್ಯರ ಕೊರತೆ ಇದೆ.  31% ರಷ್ಟು ವೈದ್ಯರ ಕೊರತೆ ಹಾಗೂ 18% ರಷ್ಟು ನರ್ಸ್ ಸಿಬ್ಬಂದಿ…

Read More

ಚಲಿಸುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಆಟೋ ಚಾಲಕ ಹಾಗೂ ಸಂಬಂಧಿಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯವಾಗಿರೋ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆಟೋಗೆ ಕಾರು ಗುದ್ದಿದ ರಭಸಕ್ಕೆ ಕಾರಿನ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿದ್ದು ಚಾಲಕ ಬಚಾವ್ ಆಗಿದ್ದಾನೆ. ಘಟನೆಯಲ್ಲಿ ಗಾಯವಾಗಿರೋ ವ್ಯಕ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಘಟನೆ ಸಂಬಂಧ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ. ಸೋಲಿನ ಬಗ್ಗೆ ವರಿಷ್ಠರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ನಾನೇ ವಿಧಾನಸಭೆ ಚುನಾವಣೆ ಸೋಲಿನ ಹೊಣೆ ಹೊತ್ತಿದ್ದೇನೆ ಎಂದರು. ಇನ್ನು ಕೆಲ ಶಾಸಕರ ಸೋಲಿಗೆ ಬೊಮ್ಮಾಯಿ ಕಾರಣ ಆರೋಪ ವಿಚಾರ ‘ ಸೋಲಿನ ಹೊಣೆ ಹೊತ್ತಿದ್ದೇನೆ ಎಂದಮೇಲೆ ಆರೋಪಕ್ಕೆ ಉತ್ತರಿಸಬೇಕಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾಂತಾರ ಸಿನಿಮಾದ ಮುಹೂರ್ತ ಕಳೆದ ಬಾರಿ ಯಾವ ದೇವಸ್ಥಾನದಲ್ಲಿ ಆಗಿತ್ತೋ, ಮತ್ತೆ ಅದೇ ದೇವಸ್ಥಾನದಲ್ಲೇ ಕಾಂತಾರ ಪ್ರಿಕ್ವೆಲ್ ಮುಹೂರ್ತ ಆಗಲಿದೆಯಂತೆ. ಆನೆಗುಡಿ ಗಣಪತಿ ದೇವಸ್ಥಾನದಲ್ಲೇ ಮುಹೂರ್ತ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 27ನೇ ತಾರೀಖು ಕಾಂತಾರ ಪ್ರಕ್ವೆಲ್ ಗೆ ಮಹೂರ್ತ ನಿಗದಿಯಾಗಿದೆ. ಕಾಂತಾರ ಮೊದಲ ಭಾಗ ಕೂಡ ಆಗಸ್ಟ್ ನಲ್ಲಿ ಮುಹೂರ್ತ ಕಂಡಿತ್ತು. ಆಗಸ್ಟ್ ನಲ್ಲಿ ಕಾಂತಾರ ಪ್ರಿಕ್ವೆಲ್ ಗೆ ಮುಹೂರ್ತವಾದರೆ ಸೆಪ್ಟೆಂಬರ್ ತಿಂಗಳಿಂದ ಚಿತ್ರೀಕರಣ ಆರಂಭಿಸಲಿದ್ದಾರಂತೆ ರಿಷಬ್ ಶೆಟ್ಟಿ. ಪಂಜುರ್ಲಿ ದೈವದ ಸುತ್ತವೇ ಚಿತ್ರಕಥೆ ಇರುವುದರಿಂದ ಕೆರಾಡಿ ಸುತ್ತಮುತ್ತವೇ ಶೂಟಿಂಗ್ ಆಗಲಿದೆ ಎನ್ನುವ ಮಾತು ಹರಿದಾಡುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೀದರ್ ಜಿಲ್ಲೆಯಲ್ಲಿ ನೀರುಪಾಲಾದ ಇಬ್ಬರಿಗೆ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ವಿತರಿಸಲಾಗಿದೆ. ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಮೃತರ ಪತ್ನಿಯರಿಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು 5 ಲಕ್ಷದ ಚೆಕ್ ನೀಡಿದರು. ಸೋಮವಾರ 1 ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ಕಾರಂಜಾ ನದಿಗೆ ಹೆಚ್ಚಿನ ನೀರು ಹರಿದು ಬಂದು ಇಬ್ಬರು ಕೊಚ್ಚಿ ಹೊಗಿದ್ದಾರೆ. ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದ ತುಕಾರಾಮ ಲಕ್ಷ್ಮಣ (40), ಘಾಟಬೋರಾಳದ ತಿಪ್ಪಣ್ಣ ವಿಶ್ವನಾಥ್ (33) ನೀರುಪಾಲಾಗಿದ್ದಾರೆ. ಭಾಲ್ಕಿ ತಾಲೂಕಿನ ಮರೂರು ಗ್ರಾಮದ ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರು ಸೇತುವೆ ಮೇಲೆ ದ್ವಿಚಕ್ರದ ಮೇಲೆ ತೆರಳುತ್ತಿದ್ದ ಇಬ್ಬರು ನೀರುಪಾಲಾಗಿದ್ದಾರೆ. ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿ ಸ್ಥಾನಮಾನ ವಿಚಾರವಾಗಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಶೆಟ್ಟರ್ ಚುನಾವಣೆಯಲ್ಲಿ ಸೋತಿರಬಹುದು. ಆದರೆ ಪಕ್ಷ ಅವರನ್ನ ಕೈಬಿಡಲ್ಲ ಎಂದರು. ನಾವು ಅವರನ್ನ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೆಟ್ಟರ್ ಕೂಡ ಪಕ್ಷಕ್ಕೆ ಬರುವ ವೇಳೆ ನಮ್ಮ ಹೈಕಮಾಂಡ್ ಮುಂದೆ ಗೌರವಯುತವಾಗಿ ನಡೆಸಿಕೊಳ್ಳಿ ಅಂತ ಹೇಳಿದ್ದರು. ನಾವು ಗೌರವಯುತವಾಗಿ ನೋಡಿಕೊಳ್ಳುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಮೃತಪಟ್ಟು ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ಮೃತರನ್ನು ದಾವಣೆಗೆರೆ ಮೂಲದ ಶಿವು ನಾಯಕ್( 32),  ಕೊಡಿಗೇನಹಳ್ಳಿಯ ಪರಮೇಶ್ ಎಂದು ಗುರುತಿಸಲಾಗಿದೆ. ಮಧ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಸ್ನೇಹಿತನ ಮದುವೆಗೆ ತೆರಳಿ ವಾಪಸ್  ಕೊರಟಗೆರೆ ಹಾಗೂ ಕೊಡಿಗೇನಹಳ್ಳಿ ಕಡೆಗೆ ವಾಪಸ್ ಬರುತಿದ್ದ ಯುವಕರ ತಂಡದಲ್ಲಿದ್ದ  ಐವರು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕರೆದುಕೊಂಡು ಹೋಗಲಾಗಿದೆ. ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತ್ತಿದ್ದರು. ದಾಬಸ್ ಪೇಟೆಯಲ್ಲಿ ಮದುವೆ ಮುಗಿಸಿ ತುಮಕೂರು ಮೂಲಕ ಕೊಡಿಗೇನಹಳ್ಳಿ ಕಡೆ ಹೋಗುತ್ತಿದ್ದರು. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ  ಡಿಕ್ಕಿ ಹೊಡೆದಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ತುಮಕೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊರಟಗೆರೆ ಟೌನ್ ನಿವಾಸಿ ಬಾಲಕಿಯೋರ್ವಳ ಮೇಲೆ 32 ವರ್ಷ ವಯಸ್ಸಿನ ಸಂಬಂಧಿಕನೇ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದೀಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯ  20 ವರ್ಷ ಜೈಲು ಶಿಕ್ಷೆ ಹಾಗೂ  1 ಲಕ್ಷ ರೂಪಾಯಿ ದಂಡ ವಿಧಿಸಿದೆ. 15—12—2021ರಂದು ನೊಂದ 15 ವರ್ಷದ ಬಾಲಕಿ ಆಗಾಗ ವಾಂತಿ ಮಾಡುತ್ತಿದ್ದರಿಂದ ಆಕೆಯ ತಾಯಿಯು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪರೀಕ್ಷಿಸಿದ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿತ್ತು. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ 32 ವರ್ಷ ವಯಸ್ಸಿನ ಹನುಮಂತರಾಯ ಎಂಬಾತ 4 ತಿಂಗಳಿಂದ ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿಸಿದ್ದಳು. ಈ ಪ್ರಕರಣದ ವಿಚಾರಣೆಯು ಮಾನ್ಯ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯದಲ್ಲಿ ನಡೆದಿದ್ದು, ಅಭಿಯೋಜನೆಯ ಪರ ವಿಚಾರಣೆ…

Read More