Author: admin

ಬೆಂಗಳೂರಿನ ಘನತೆಗೆ ಕಪ್ಪುಚುಕ್ಕೆಯಾಗಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಕಲ್ಪ ಮಾಡಿರುವ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಪ್ರಮುಖ ಸಂಚಾರಿ ದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಡಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಕಮಿಷನರ್ ಕುಮಾರ್ ನಾಯಕ್, ಬಿಬಿಎಂಪಿ ಕಮಿಷನರ್ ತುಷಾರ್ ಗಿರೀನಾಥ್, ಡಿಸಿಎಂ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಹಾಗೂ ಮತ್ತಿತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಂತರ ಬೆಂಗಳೂರು ಪ್ರದಕ್ಷಣೆ ಹಾಕಿದ ಶಿವಕುಮಾರ್ ಅವರು ಮೊದಲು ಹೆಬ್ಬಾಳ ಜಂಕ್ಷನ್ ಗೆ ಭೇಟಿ ನೀಡಿ ಮೇಲ್ಸೇತುವೆ ನಿರ್ಮಾಣ, ಸುತ್ತಮುತ್ತಲ ಪ್ರದೇಶದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಈ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ, ಮೇಲ್ಸೇತುವೆ ಅಗಲೀಕರಣ ಹಾಗೂ ಹೆಬ್ಬಾಳ ಕೆರೆಯ ಸೌಂದರ್ಯಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ 2047ರ ವೇಳೆಗೆ ಹೆಚ್ಚಾಗುವ ವಾಹನ…

Read More

ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲದೆ ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳು, ವಿದ್ಯುತ್ ಮೀಟರ್ ಗಳು ಸುಟ್ಟು ಭಸ್ಮವಾಗಿವೆ.ಲಕ್ಷಾಂತರ ರೂ. ಬೆಲೆಯ ಬಾಳುವ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಈ ನಡುವೆ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಶಾರದಮ್ಮ (55) , ಮಗ ಮಂಜುನಾಥ್ (35), ಸೊಸೆ ವರಲಕ್ಷ್ಮಿ (30), ಮೊಮ್ಮಗ ದರ್ಶನ್ (12 )ವಿದ್ಯುತ್ ಶಾಕ್ ಗೆ ತುತ್ತಾಗಿದ್ದರೆ. ಪ್ರಾಣಾಪಾಯದಿಂದ ಪಾರಾಗಿರೋ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಘಡ ಸಂಭವಿಸಿದ್ದ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ, ಕೊರಟಗೆರೆ ತಹಶೀಲ್ದಾರ್, ಬೆಸ್ಕಾಂ ಅಧಿಕಾರಿಗಳು…

Read More

ಹೆತ್ತ ತಾಯಿಯನ್ನು ಹತ್ಯೆ ಮಾಡಿ, ಶವವನ್ನು ಸ್ಕೂಟೇಸ್ ನಲ್ಲಿ ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೋನಾಲಿ ಹಾಗೂ ತಾಯಿ ಬೀವಪಾಲ್ ವಾಸವಾಗಿದ್ದರು. ತಾಯಿ, ಅತ್ತೆ ನಡುವೆ ಜಗಳದಿಂದಸೋನಾಲಿ (39) ಬೇಸತ್ತಿದ್ದಳು. ನಿನ್ನೆ ರಾತ್ರಿ ಜಗಳವಾಗಿದ್ದು, ಜಗಳದ ಬಳಿಕ ತಾಯಿ ಬೀವಾಪಲ್ (78) ನಿದ್ದೆ ಮಾತ್ರೆ ನುಂಗಿ ಸಾಯುವುದಾಗಿ ಹೇಳಿದ್ದಳು. ಮುಂಜಾನೆ ತಾಯಿಗೆ ಸೋನಾಲಿ 20 ನಿದ್ದೆ ಮಾತ್ರೆ ನುಂಗಿಸಿ ಕೊಲೆ ಮಾಡಿದ್ದಾಳೆ.ಬಳಿಕ ಟ್ಯಾಲಿ ಸೂಟ್ ಕೇಸ್ ನಲ್ಲಿ ತಾಯಿಯ ಶವದ ಜೊತೆಗೆ ತಂದೆಯ ಫೋಟೋ ಇಟ್ಟುಕೊಂಡು ಠಾಣೆಗೆ ಬಂದಿದ್ದಾಳೆ.ಸದ್ಯ ಮೈಕೋಟ್ ಲೇಔಟ್ ಠಾಣೆ ಪೊಲೀಸರು ಸೋನಾಲಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಟ್ವಿಟರ್‌ ನ ಮಾಜಿ ಸಿಇಒ ಜಾಕ್ ಡೋರ್ಸೆ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚುವುದಾಗಿ ಕೇಂದ್ರ ಸರ್ಕಾರ ಬೆದರಿಕೆ ಹಾಕಿದೆ ಎಂದು ಜಾಕ್ ಡಾರ್ಸೆ ಬಹಿರಂಗಪಡಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರವನ್ನು ಟೀಕಿಸುವ ಮಾಧ್ಯಮದವರ ಖಾತೆಗಳಿಗೆ ಕಪ್ಪುಚುಕ್ಕೆ ಮಾಡುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ಅವರು ಬಹಿರಂಗಪಡಿಸಿದರು. ಆದರೆ ಟ್ವಿಟರ್‌ ನ ಮಾಜಿ ಸಿಇಒ ಆರೋಪವನ್ನು ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರ್ ತಳ್ಳಿ ಹಾಕಿದ್ದಾರೆ. ಮತ್ತೊಂದು ಆರೋಪವೆಂದರೆ ಡೋರ್ಸೆ ಸಿಇಒ ಆಗಿ ಅಧಿಕಾರಾವಧಿಯು ಟ್ವಿಟರ್ ಇತಿಹಾಸದಲ್ಲಿ ಪ್ರಶ್ನಾರ್ಹ ಸಮಯವಾಗಿತ್ತು. ಡಾರ್ಸೆ ಅವರು ಭಾರತೀಯ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಭಾರತದ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದರು. ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಜಾಕ್ ಡೋರ್ಸೆ ಅವರು ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದರು ಮತ್ತು ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಿದರು ಎಂದು ಹೇಳಿದರು. ಈ ವಿಡಿಯೋವನ್ನು ವಕೀಲ…

Read More

ಕಾಲೇಜಿನ ಸೆಮಿನಾರ್‌ ನಲ್ಲಿ ಮುಸ್ಲಿಂ ಪ್ರಾರ್ಥನೆ ಸಲ್ಲಿಸಿದ ಪ್ರಾಂಶುಪಾಲರ ವಿರುದ್ಧ ಪ್ರಕರಣ ಮಹಾರಾಷ್ಟ್ರದ ಮಾಲೆಗಾಂವ್‌ ನ ಮಹಾರಾಜ ಸಯಾಜಿರಾವ್ ಗಾಯಕ್‌ ವಾಡ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಭಾಷ್ ನಿಗಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಶಿವಸೇನಾ ಉದ್ಧವ್ ಠಾಕ್ರೆ ವಿಭಾಗದ ನಾಯಕ ಮತ್ತು ಬಿಜೆಪಿ ಮಾಜಿ ಶಾಸಕ ಡಾ. ಕಾಲೇಜು ಅಪೂರ್ವ ಹಿರಾಯ್ ಅವರ ಒಡೆತನದಲ್ಲಿದೆ. ರಕ್ಷಣಾ ಕ್ಷೇತ್ರದ ಸಾಧ್ಯತೆಗಳ ಕುರಿತು ವಿಚಾರ ಸಂಕಿರಣ ನಡೆಯಿತು. ಪುಣೆಯ ಅನೀಸ್ ಡಿಫೆನ್ಸ್ ಕರಿಯರ್ ಸಂಸ್ಥೆಯ ಮುಖ್ಯಸ್ಥ ಅನೀಸ್ ಕುಟ್ಟಿ ಮುಖ್ಯ ಅತಿಥಿಯಾಗಿದ್ದರು. ಸತ್ಯ ಮಲಿಕ್ ಸೇವಾ ಗ್ರೂಪ್ ಎಂಬ ಸ್ವಯಂ ಸೇವಾ ಸಂಸ್ಥೆ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ವಿಚಾರ ಸಂಕಿರಣದಲ್ಲಿ ಮುಸ್ಲಿಂ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಲಾಯಿತು. ಇದರೊಂದಿಗೆ ಕೆಲವರು ಹೊರಗಿನಿಂದ ಬಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ಇಸ್ಲಾಂ ಧರ್ಮವನ್ನು ಹರಡುವ ಪ್ರಯತ್ನವಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಇದು ಕಾರ್ಯಕ್ರಮ ಆಯೋಜಿಸಿರುವ…

Read More

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪಿಡಬ್ಲ್ಯುಡಿ ಅಧಿಕಾರಿಯ ಕಾರು ಡಿಕ್ಕಿ ಹೊಡೆದು ಮೂವರು ರೈತರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದೆ. ಅಪಘಾತದ ಬಳಿಕ ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ ಬಿಲ್ಹಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಅವಘಡ ಸಂಭವಿಸಿದ ಹೊಲಗಳಿಗೆ ರೈತರು ತೆರಳುತ್ತಿದ್ದರು. ರಸ್ತೆಯಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಸುರೇಂದ್ರ ಸಿಂಗ್ (62), ಅಹಿಬರನ್ ಸಿಂಗ್ (63) ಮತ್ತು ಘಸೀತೆ ಯಾದವ್ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಪರಾರಿಯಾಗಲು ಯತ್ನಿಸಿದ ಚಾಲಕ ಅಜಿತ್ ಕುಮಾರ್ ಪಾಂಡೆಯನ್ನು ಇತರರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಯೋಧ್ಯೆಯ ಪಿಡಬ್ಲ್ಯೂಡಿಯ ಜೂನಿಯರ್ ಇಂಜಿನಿಯರ್ ಅವರ ಹೆಸರನ್ನು ಈ ಕಾರಿಗೆ ಇಡಲಾಗಿದೆ. ಜೂನಿಯರ್ ಇಂಜಿನಿಯರ್ ಕುಟುಂಬವನ್ನು ಮನೆಗೆ ಕರೆತಂದು ಹಿಂತಿರುಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ವಿರುದ್ಧ ಬಿಲ್ಹೂರ್ ಪೊಲೀಸರು…

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆರೋಗ್ಯ ಇಲಾಖೆ ಮತ್ತು ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ನಡೆದ ನೈಂಟಿಗೇಲ್ ಶುಶೂಷ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನನ್ನನ್ನೂ ಸೇರಿ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ಸರ್ಕಾರದ ಜತೆಗೆ ಆರೋಗ್ಯ ಸಿಬ್ಬಂದಿ ಇಚ್ಚಾಶಕ್ತಿಯಿಂದ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಜಯದೇವ ಆಸ್ಪತ್ರೆ ಒಂದು ಮಾದರಿ. ಈ ಆಸ್ಪತ್ರೆಯಲ್ಲಿ ಎಲ್ಲಾ ರಾಜಕಾರಣಿಗಳು ಚಿಕಿತ್ಸೆ ಪಡೆಯುತ್ತಾರೆ. ಆ ರೀತಿಯ ಗುಣಮಟ್ಟ, ಶುಚಿತ್ವ, ಶಿಸ್ತು ಜಯದೇವ ಆಸ್ಪತ್ರೆಯಲ್ಲಿದೆ. ಇಲ್ಲಿರುವ ವ್ಯವಸ್ಥೆಯನ್ನೇ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ. ಇದಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಹಾಗೂ ಶ್ರದ್ಧೆ ಮಾತ್ರ ಎಂದರು. “ಲೇಡಿ ವಿತ್ ದಿ ಲ್ಯಾಂಪ್” ಹೆಸರಾಗಿದ್ದ ಶುಶ್ರೂಷಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಹೆಸರಿನ 21ನೇ ಸಾಲಿನ ಪ್ರಶಸ್ತಿ ಪಡೆದ…

Read More

ಉಡುಪಿ: ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬAದಲ್ಲಿ ಅಂತಹ ಅಧಿಕಾರಿಗಳು ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ಅವರು ಇಂದು ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ನೂತನ ಸರ್ಕಾರ ಜಾರಿಗೆ ಬಂದಿದೆ, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸರಕಾರಕ್ಕೆ ಒಳ್ಳೆಯ ಹೆಸರು ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ಕಾರ್ಯದಲ್ಲಿ ಅನಗತ್ಯ ವಿಳಂಬ ಹಾಗೂ ಅಶಿಸ್ತು ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಸೂಚನೆ ನೀಡಿದರು. ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ನಬಾಗ್ಯ, ಗೃಹಲ ಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ…

Read More

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸಲ್ಲಿಸಿದರು. ಮನವಿಯ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ: ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ…

Read More