Author: admin

ಬೆಳ್ಳಂದೂರು: ದಶಕಗಳಿಂದ ಬೆಳ್ಳಂದೂರು ಕಾಲುವೆಯ ಹೂಳು ತೆಗೆಯದ ಕಾರಣ ಈಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು ಎಂದು ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಬಿಬಿಎಂಪಿ ಎಸ್‌ ಡಬ್ಲೂಡಿ ಇಲಾಖೆಯಿಂದ ಹೂಳು ತೆಗೆಯುವ ಕಾರ್ಯವನ್ನು ನಡೆಸಲಾಗುತ್ತಿದ್ದು, ಇದರಿಂದ ಕೆರೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಾಥಮಿಕ ರಾಜಕಾಲುವೆಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣ ಪ್ರಮಾಣದ ಮಳೆ ನೀರನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದರು. ಇದರಿಂದಾಗಿ ನಾಳೆ ಮಳೆ ನೀರಿನಿಂದ ಉಂಟಾಗುವ ತೊಂದರೆ ಕಡಿಮೆಯಾಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಇಂದು ಅಧಿಸೂಚನೆ ಪ್ರಕಟವಾಗಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಜೂನ್ 20 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಸಲಿದೆ. 23 ರಂದು ಉಮೇದುದಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 30 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು, ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಲಕ್ಷ್ಮಣ್ ಸವದಿ, ಆರ್.ಶಂಕರ್ ಹಾಗೂ ಬಾಬುರಾವ್ ಚಿಂಚನಸೂರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ತಿಳಿಸಿದೆ. https://sevasindhuservices. karnataka.gov.in ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಕರ್ನಾಟಕ- ಒನ್, ಗ್ರಾಮ-ಒನ್, ಬೆಂಗಳೂರು-ಒನ್‌ ಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಆದರೆ, ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು 130 ಸೇವಾ ಶುಲ್ಕ ಪಾವತಿಸಬೇಕು. ರಾಜ್ಯದ ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲಾಗಿದೆ. ನೆರೆ ರಾಜ್ಯದಲ್ಲಿ ವಾಸವಿದ್ದು, ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡುವ ಗಡಿಭಾಗದ ವಿದ್ಯಾರ್ಥಿನಿಯರು ಪಾಸ್ ಪಡೆದುಕೊಳ್ಳಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಬಿಎಂಪಿ ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಈ ಹಿಂದೆ ಅಮಾನತು ಮಾಡಿದ್ದನ್ನು ತೆರವುಗೊಳಿಸಿ ಕೆಲಸಕ್ಕೆ ನಿಯೋಜಿಸಿದ್ದರೂ ಕಚೇರಿಗೆ ಹಾಜರಾಗದ್ದರಿಂದ ಗಂಭೀರ ಕರ್ತವ್ಯಲೋಪ ಎಸಗಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ ಮೇರೆಗೆ ಆಡಳಿತದ ಉಪ ಆಯುಕ್ತರು ಸೋಮವಾರ ಅಮಾನತಿನ ಆದೇಶ ಹೊರಡಿಸಿದ್ದಾರೆ. ರಸ್ತೆ ಮೂಲ ಸೌಕರ್ಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಮಾಯಣ್ಣ ಅವರನ್ನು ಭ್ರಷ್ಟಾಚಾರ ನಿಗ್ರಹದಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಲಾಗಿತ್ತು. ನಂತರ ಅಮಾನತು ತೆರೆವುಗೊಳಿಸಿ, 2022 ಜುಲೈ 19ರಂದು ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಹುದ್ದೆಗೆ ನಿಯೋಜಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಖಾಸಗಿ ಆಸ್ಪತ್ರೆಗಳಿಗೆ ಸಮಾನವಾದ ಸೇವೆ ಸಿಗುವಂತೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಸಮಿತಿ ನೇತೃತ್ವದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಶುಶ್ರೂಷಕರಿಗೆ ‘ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಶುಶ್ರೂಷಕರು  ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಶುಶ್ರೂಷಕರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಆದರೆ, ಕಾರ್ಯನಿರ್ವಹಣೆಯ ವಿಧಾನ ಮತ್ತು ಶಿಸ್ತಿನಲ್ಲಿ ವ್ಯತ್ಯಾಸ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲೂ ಶಿಸ್ತು ತಂದರೆ ಸುಧಾರಣೆ ಸಾಧ್ಯವಾಗಲಿದೆ. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ’ ಎಂದರು. ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರಾಜಕಾರಣಿಗಳು ಮತ್ತು ಶ್ರೀಮಂತರೂ ಚಿಕಿತ್ಸೆ ಪಡೆಯುತ್ತಾರೆ. ಅಲ್ಲಿ ಶಿಸ್ತು ಇರುವುದಕ್ಕೆ ಎಲ್ಲರೂ ಹೋಗುತ್ತಾರೆ. ಅದೊಂದು ಮಾದರಿ ಆಸ್ಪತ್ರೆ. ಅಲ್ಲಿ ಸಾಧ್ಯವಾಗುವುದು ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಏಕೆ ಸಾಧ್ಯ ಆಗುವುದಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಶುಶೂಷಕರು…

Read More

ತುಮಕೂರು: ರೈಲ್ವೆ ಹಳಿ ಬಳಿ ಭೂ ಕುಸಿತವಾದ ಹಿನ್ನೆಲೆಯಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿರೋ ಘಟನೆ ಸೋಮವಾರ ತಿಪಟೂರು ನಗರದ ಗಾಂಧಿ ನಗರದ ಬಳಿ ನಡೆದಿದೆ. ತಿಪಟೂರಿನ ಗಾಂಧಿನಗರದ ಅಂಡರ್ ಪಾಸ್ ಬಳಿ ಲಘು ಭೂಕುಸಿತ ಉಂಟಾಗಿತ್ತು. ಅಂಡರ್ ಪಾಸ್ ನಲ್ಲಿ ತುಂಬಿದ ಮಳೆ ನೀರಿನಿಂದಾಗಿ ಭೂಕುಸಿತವಾಗಿದೆ. ಜೆಸಿಬಿಯಿಂದ ಕಾರ್ಯಾಚರಣೆ ಮಾಡುತ್ತಿರುವ ರೇಲ್ವೆ ಇಲಾಖೆಯು ಅದನ್ನು ತೆರವುಗೊಳಿಸಲು ಮುಂದಾಗಿದೆ. ನಿಜಾಮುದ್ದಿನ್ ಎಕ್ಸ್ ಪ್ರೆಸ್ ಸೇರಿದಂತೆ ಬೆಂಗಳೂರು ಕಡೆಗೆ ಹೋಗುವ ಅನೇಕ ರೈಲು ಗಳ ಸಂಚಾರ ದಲ್ಲಿ ವ್ಯತ್ಯಯವಾಗಿದೆ. ಕೆಲವು ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. ಸುಮಾರು ಹತ್ತು ಅಡಿಗೂ ಹೆಚ್ಚು ಭೂಕುಸಿತವಾಗಿದ್ದು ನೀರು ಸಂಗ್ರಹವಾಗಿದೆ. ಅಲ್ಲದೆ ಯಾವ ವೈಜ್ಞಾನಿಕವಾಗಿ ಅಂಡರ್ ಪಾಸ್ ನಿರ್ಮಾಣ ಮಾಡಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ.ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು. ಈ ಸಂದರ್ಭದಲ್ಲಿ ಎಲ್ಲಾ ಅಲೆಮಾರಿ ಸಮುದಾಯಗಳ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ಸ್ಥಾಪಿಸುವ ಕುರಿತು ಪರಿಶೀಲಿಸಲಾಗುವುದು ಎಂದರು. ಇಂದಿಗೂ ಹಾವಾಡಿಸುವ ಮೂಲಕ ಜೀವನ ನಡೆಸುವ ಹಾವಾಡಿಗ ಸಮುದಾಯದವರಿಗೆ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಕಿವಿ ಮಾತು ಹೇಳಿದರು. ಸರ್ಕಾರ ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ದೊರೆಯಲಿದೆ. ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ನಿಯೋಗದ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು. ನಿಯೋಗದಲ್ಲಿ ಸುಡುಗಾಡು ಸಿದ್ಧರು, ದೊಂಬಿದಾಸ, ದಕ್ಕಲಿಗ, ಹಂದಿಜೋಗಿ, ಕೊಲೆಬಸವ, ಹಕ್ಕಿಪಿಕ್ಕಿ, ಕರಡಿ ಕಲಂಧರ್, ಪಿಂಜಾರ/ ನದಾಫ್, ಸೋಲಿಗ, ಜೇನು ಕುರುಬ, ಗ್ಯಾರೆ, ಕೊರವ, ಬೇಡ ಗಂಪಣ, ಗೆಜ್ಜೆಗಾರ, ಬುಡ್ಗ…

Read More

ನಮ್ಮತುಮಕೂರು ವಿಶೇಷ ವರದಿ: ತುಮಕೂರು: ಭೂಚಕ್ರ ಗೆಡ್ಡೆಗೆ ಭಾರೀ ಬೇಡಿಕೆ ಇದೆ. 15 ವರ್ಷಕ್ಕೂಮ್ಮೆ ಬಿಡುವ ಗೆಡ್ಡೆ ಬಹಳ ಅಪರೂಪದ ಗೆಡ್ಡೆಯಾಗಿದೆ. ಆದ್ರೆ ಭೂಚಕ್ರ ಗೆಡ್ಡೆ ಎಂದು ಕತ್ತಾಳೆ ಗೆಡ್ಡೆಯನ್ನು ಮಾರಾಟ ಮಾಡಿ ಸಾರ್ವಜನಿಕರನ್ನು ವಂಚಿಸುರುವ ಘಟನೆಯೊಂದು ಬೆಳಕಿಗೆ ಬಂದಿದೆ. ಭೂಚಕ್ರ ಗೆಡ್ಡೆ ಎಂದು ಕತ್ತಾಳೆ ಗೆಡ್ಡೆ ನೀಡುತ್ತಿರುವ ಕೃತ್ಯವನ್ನು ತಿಪಟೂರಿನ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.  ಕತ್ತಾಳೆ ಗೆಡ್ಡೆಯ ಎಳೆ ತೆಗೆದು ನಿಂಬೆಹಣ್ಣು, ಉಪ್ಪು ಖಾರ ಹಚ್ಚಿ ಮಾರಾಟ ಮಾಡುತ್ತಿರುವ ಕೃತ್ಯ ಬಯಲಾಗಿದೆ. ಕತ್ತಾಳೆ ಗೆಡ್ಡೆಗೆ ಕೆಮ್ಮಣ್ಣು ಬಳಿದು ಭೂಚಕ್ರ ಗೆಡ್ಡೆ ಎಂದು ದುಷ್ಕರ್ಮಿಗಳು ನಂಬಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಈ ಗೆಡ್ಡೆಗೆ ಭಾರೀ ಬೇಡಿಕೆ ಇದೆ. ಒಂದು ಎಳೆಗೆ 20 ರೂಪಾಯಿಯಂತೆ ಕತ್ತಾಳೆ ಗೆಡ್ಡೆಯನ್ನು ಭೂಚಕ್ರ ಗೆಡ್ಡೆ ಎಂದು ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಬೆಂಗಳೂರಿಗೂ ರವಾನೆ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕತ್ತಾಳೆ ಗೆಡ್ಡೆಯನ್ನು ಭೂಚಕ್ರ ಗೆಡ್ಡೆಯಂತೆ ಸಿದ್ಧಪಡಿಸುತ್ತಿರುವ ಸ್ಥಳವನ್ನು ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ…

Read More

ತುಮಕೂರು: ಮಾನಸಿಕ ಅಸ್ವಸ್ಥನಂತೆ ನಿವೃತ್ತ ಪ್ರಾಂಶುಪಾಲನೊಬ್ಬ ಸಾರ್ವಜನಿಕರನ್ನು ರಸ್ತೆಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಓಡಾಡುತ್ತಿದ್ದದ್ದನ್ನು ಕಂಡ ಸಾರ್ವಜನಿಕರು ಆತನಿಗೆ ತಿಳಿಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ನಿವೃತ್ತ ಪ್ರಿನ್ಸಿಪಾಲ್ ಹುಚ್ಚಾಟ ಸಾರ್ವಜನಕರಿಂದ ಧರ್ಮದೇಟು ನೀಡಿದ್ದು ಬೈಕ್ ನಿಲ್ಲಿಸುವ ಕಾರಣಕ್ಕೆ ತಿಪಟೂರು ನಗರದ ಹಾಸನ್ ಸರ್ಕಲ್ ನ ಎಸ್ ಬಿಐ ಬ್ಯಾಂಕ್ ಬಳಿ ಗಲಾಟೆ ನಡೆದಿದೆ. ತಿಪಟೂರಿನ  ಕಲ್ಪತರು ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್  ಶಿರೂರ್ ರಂಪಾಟ ಮಾಡಿದ್ದನು. ಅನಾವಶ್ಯಕವಾಗಿ ಅವಾಶ್ಚ್ಯ ಪದಗಳಿಂದ ಸಾರ್ವಜನಿಕರನ್ನು ನಿಂದಿಸುತ್ತಿದ್ದನು. ರೊಚ್ಚಿಗೆದ್ದ ಸಾರ್ವಜನಿಕರು ಚೆನ್ನಾಗಿ ತಿಳಿಸಿದ್ದ ಹಿನ್ನೆಲೆಯಲ್ಲಿ ಆತ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಸ್ಥಳದಲ್ಲಿದ್ದ ಕೆಲ ಮಹಿಳೆಯರಿಗೂ ಕೂಡ ಈತ ಆವಾಚ್ಯವಾಗಿ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಮಹಿಳೆಯರು ಆತನನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಿವೃತ್ತ ಪ್ರಿನ್ಸಿಪಾಲ್ ಜನರಿಂದ ತಿಳಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಸಲುನ್ ಅಂಗಡಿ ಹಾಗೂ ಆಸ್ಪತ್ರೆಗಳ ಬಳಿ ಓಡೋಗಿ ಬಚ್ಚಿಟ್ಟುಕೊಂಡ ದೃಶ್ಯ ಸರ್ವೇಸಾಮಾನ್ಯವಾಗಿತ್ತು. ಅಲ್ಲದೆ ಕೆಲಸ ಸ್ಥಳೀಯರು ನಿವೃತ್ತ ಪ್ರಾಂಶುಪಾಲರಿಗೆ ತಿಳಿಸುವುದನ್ನು ಕೂಡ ತಡೆದರು ಒಂದು ಹಂತದಲ್ಲಿ…

Read More

ತಿಪಟೂರು: ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ಶ್ರಮಪಟ್ಟು ನನ್ನನ್ನು ಗೆಲ್ಲಿಸಿ ಶಾಸಕನನ್ನಾಗಿ ಮಾಡಿದ್ದಾರೆ. ಆದ್ದರಿಂದ ನಾನು ಶಾಸಕನಲ್ಲ, ನಿಮ್ಮೆಲ್ಲರ ಸೇವಕನಾಗಿ ಇರಲು ಬಯಸುತ್ತೇನೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ  ಹೇಳಿದರು. ತಿಪಟೂರು ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಭಿಮಾನಿಗಳಿಂದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಋಣ ಅಭಿಮಾನ ನನ್ನ ಮೇಲಿದೆ, ಅವರ ಸೇವೆ ಮಾಡಲು ನಾನು ಸದಾ ಸಿದ್ಧನಿದ್ದೇನೆ. ಕೆಲವರು ಬೇರೆ ಬೇರೆ ಪಕ್ಷ ತ್ಯಜಿಸಿ ಕೆಲವರು ಬೇರೆ ಪಕ್ಷ ತ್ಯಜಿಸಿ ನಮ್ಮ ಪಕ್ಷಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನನ್ನ ಗೆಲುವಿಗೆ ಲೋಕೇಶ್ ಅವರು ಕಾರಣರಾಗಿದ್ದಾರೆ. ನಮ್ಮ ಪಕ್ಷದಲ್ಲಿ ಲೋಕೇಶ್ವರ್ ಗುಂಪು ಷಡಕ್ಷರಿ ಗುಂಪು ಎಂಬುದಿಲ್ಲ ಕೇವಲ ಇದು ಕಾಂಗ್ರೆಸ್ ಪಕ್ಷದ ಗುಂಪು ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ  ಎಂದರು. ನಾನು 48ನೇ ವಯಸ್ಸಿನಲ್ಲಿ ಪ್ರಥಮವಾಗಿ ಶಾಸಕರಾಗಿ ಆಯ್ಕೆಯಾಗಿದೆ. ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನನಗೆ ಮಂತ್ರಿ ಪದವಿ ಘೋಷಣೆಯಾಗಿ ಕೊನೆಯ ಹಂತದಲ್ಲಿ ಕೈ ತಪ್ಪಿತು. ನಾನು ಅಸಮಾಧಾನ ವ್ಯಕ್ತಪಡಿಸಲಿಲ್ಲ, ಮಾಧ್ಯಮದ ಬಳಿಯೂ…

Read More