Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಹುಬ್ಬಳ್ಳಿ: ಬಿ.ಎಲ್.ಸಂತೋಷ್ ವಿರುದ್ಧ ಬಿಜೆಪಿಯೊಳಗೆ ಅಸಮಾಧಾನ ಸೃಷ್ಟಿ ಆಗಿರುವ ಬೆನ್ನಲ್ಲೇ, ಇತ್ತೀಚೆಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆ ತಿರುಗೇಟು ನೀಡಿರುವ ಅವರು, ಬಿ.ಎಲ್ ಸಂತೋಷವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರನ್ನು, ಮಾಜಿ ಶಾಸಕರನ್ನು ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದಿದ್ದಾರೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡುವುದು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ ಎಂದು ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆಗೆ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.
ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಭಿನ್ನಮತ ಸೃಷ್ಟಿಯಾಗಿರುವ ನಡುವೆಯೇ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿ.ಎಲ್.ಸಂತೋಷ್ ಅವರ ಕಾಲೆಳೆದಿದೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿ.ಎಲ್.ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಕಿವಿಮಾತು ಹೇಳಿದೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆ.1) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.
ಬೆಂಗಳೂರು: ಇಸ್ರೋ ವಿಜ್ಞಾನಿಗಳನ್ನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸನ್ಮಾನಿಸಲಾಗುವುದು. ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾರ್ಯಕ್ರಮದ ರೂಪ ರೇಷೆಗಳ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು. ವಿಕಾಸಸೌಧಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚಂದ್ರಯಾನ – ೩ ರ ಸಫಲತೆಗೆ ಕಾರಣೀಭೂತರಾದ ವಿಜ್ಞಾನಿಗಳನ್ನು ರಾಜ್ಯ ಸರಕಾರದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದೇನೆ. ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳು ಹೇಗಿರಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಯಿತು. ಇಸ್ರೋ ಮುಖ್ಯಸ್ಥರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ಸಮಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಅಂತರಿಕ್ಷ ಕ್ಷೇತ್ರದಲ್ಲಿ ಭಾರತದ ದೇಶದ ಸಾಧನೆ ಪ್ರದರ್ಶನವನ್ನು ಆಯೋಜಿಸುವ ಬಗ್ಗೆಯೂ ಚರ್ಚಿಸಲಾಗಿದೆ…
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯದಿಂದಲೇ ನಿರ್ವಹಣೆ ಮಾಡಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ವಿಮಾನ ನಿಲ್ದಾಣಗಳನ್ನು ನಾವು ಈ ಹಿಂದೆ ಏರ್ ಪೋರ್ಟ್ ಅಥಾರಿಟಿಗೆ ನೀಡುತ್ತಿದ್ದೇವೆ. ವಿಮಾನ ನಿಲ್ದಾಣ ಭೂಮಿ ಕೂಡ ಅಥಾರಿಟಿ ಹೆಸರಿಗೆ ಟ್ರಾನ್ಸ್ ಫರ್ ಆಗುತ್ತಿತ್ತು. ಇಷ್ಟೆಲ್ಲ ಆದರೂ ಕೂಡ ವಿಮಾನ ನಿಲ್ದಾಣಗಳ ಮೇಲೆ ನಮ್ಮ ಹಿಡಿತ ಇರುತ್ತಿರಲಿಲ್ಲ. ಇದೀಗ ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯದಿಂದಲೇ ನಿರ್ವಹಣೆ ಮಾಡುತ್ತಿದ್ದೇವೆ ಎಂದರು. ನಾವೇ ಏರ್ ಲೈನ್ಸ್ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ. ಮುಂದೆ ಎಲ್ಲ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ. ವಿಜಯಪುರ, ಕಾರವಾರ, ಬೀದರ್ ಸೇರಿ ಮುಂದೆ ಎಲ್ಲ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುತ್ತೇವೆ. ತದಡಿಯಲ್ಲಿ ಸೂಕ್ಷ್ಮ ವಲಯ ಆಗಿದ್ದರಿಂದ ಬಂದರು ನಿರ್ಮಾಣ ಆಗಿರಲಿಲ್ಲ ಎಂದರು.
ಸಂಸತ್ತಿನ ವಿಶೇಷ ಅಧಿವೇಶನವು ಚುನಾವಣಾ ಮಸೂದೆಯನ್ನು ಅಂಗೀಕರಿಸುತ್ತದೆ ಎಂಬ ವದಂತಿಗಳ ನಡುವೆ ಕೇಂದ್ರವು ನಿರ್ಣಾಯಕ ಕ್ರಮವನ್ನು ಕೈಗೊಂಡಿದೆ. ಮಸೂದೆಯ ಸಿಂಧುತ್ವವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಮಸೂದೆಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಚಿಸಿದ್ದರು. ಐದು ದಿನಗಳ ಕಾಲ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ದೇಶವೊಂದು ಚುನಾವಣಾ ಮಸೂದೆಯನ್ನು ಅಂಗೀಕರಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸುವುದು ಬಿಜೆಪಿಯ ಹಲವು ವರ್ಷಗಳ ಅಜೆಂಡಾ. ಹಲವಾರು ಹಂತಗಳಲ್ಲಿ ವಿವಿಧ ಚುನಾವಣೆಗಳನ್ನು ನಡೆಸುವುದು ಭಾರಿ ವೆಚ್ಚವನ್ನು ಹೊಂದುತ್ತದೆ ಮತ್ತು ಚುನಾವಣಾ ಮಸೂದೆಯ ಮೂಲಕ ಇದನ್ನು ಕಡಿಮೆ ಮಾಡುವ ಗುರಿಯನ್ನು ದೇಶವೊಂದು ಹೊಂದಿದೆ ಎಂಬುದು ಕೇಂದ್ರ ಸರ್ಕಾರದ ವಾದವಾಗಿದೆ. ಆದರೆ ಚುನಾವಣಾ ಅಜೆಂಡಾದ ಹಿಂದೆ ಬಿಜೆಪಿ ರಾಜಕೀಯ ಅಜೆಂಡಾ ಹೊಂದಿದೆ…
‘ದಲಿತ ಸಂಘಟನೆಗಳು ಒಗ್ಗೂಡಬೇಕು. ನಮ್ಮ ಒಡಕುಗಳನ್ನೇ ಬೇರೆಯವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಹೀಗಾಗಿ, ಎಲ್ಲರೂ ಒಗ್ಗಟ್ಟಾಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಗುರುವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಜಯಂತ್ಯುತ್ಸವ, ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಏಕತೆಗಾಗಿ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಳುವವನೇ ಭೂ ಒಡೆಯ ಎನ್ನುವ ಕಾನೂನನ್ನು ಬಿಜೆಪಿಯವರು ಉಲ್ಟಾ ಮಾಡಿ ಉಳ್ಳವನೇ ಭೂ ಒಡೆಯ ಎಂದು ಬದಲಾಯಿಸಿಬಿಟ್ಟಿದ್ದಾರೆ. ಇದಕ್ಕಾಗಿ ಸಂವಿಧಾನ 79 (a), (b)ವನ್ನೇ ರದ್ದುಪಡಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಟೀಕಿಸಿದರು. ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ಷೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಸಚಿವ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ…
ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟಿರುವ ಘಟನೆ ನಡೆದಿದೆ. ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ್, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆನೆಗೆ ಚಿಕಿತ್ಸೆ ನೀಡುವ ಮುನ್ನ ಅರವಳಿಕೆ ಚುಚ್ಚುಮದ್ದು ನೀಡುವಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ಭೀಮನನ್ನು ಸೆರೆ ಹಿಡಿದು ಚಿಕಿತ್ಸೆ ನೀಡಲು ಹಳ್ಳಿಯೂರು ಬಳಿ ವೆಂಕಟೇಶ್ ಅವರು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಈ ವೇಳೆ ಏಕಾಏಕಿಯಾಗಿ ವೆಂಕಟೇಶ್ ಮೇಲೆ ಭೀಮ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಆನೆ ಸೆರೆ ವೇಳೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದ ಅನುಭವವನ್ನು ವೆಂಕಟೇಶ್ ಹೊಂದಿದ್ದರು.
‘ಜೈ ಶ್ರೀರಾಮ್’ ಎಂಬುದಾಗಿ ರೀಲ್ಸ್ ಮಾಡಿ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದ ಯುವಕ-ಯುವತಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದಡಿ ನಯಾಜ್ ನನ್ನು (22) ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕೋಣನಕುಂಟೆ ಬಳಿಯ ಹರಿನಗರ ನಿವಾಸಿ ನಯಾಜ್, ಆಟೊ ಚಾಲಕ. ಯುವಕ-ಯುವತಿಗೆ ಬೆದರಿಕೆಯೊಡ್ಡಿ ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದ. ವೀಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಂಡು, ನಯಾಜ್ ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಮಲಯಾಳಂ ಸಿನಿಮಾ-ಧಾರಾವಾಹಿ ತಾರೆ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಟಿ ಕರಮಾನ ತಾಲಿಯಾದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಪಿಆರ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ ಸಂಜೆ 7.30ರ ಸುಮಾರಿಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಕ್ಕೂ ಮುನ್ನ ಮೃತಪಟ್ಟಿದ್ದರು. ಘಟನೆ ವೇಳೆ ಮನೆಯಲ್ಲಿ ತಾಯಿ ಮತ್ತು ಸಹೋದರಿ ಇದ್ದರು ಎಂದು ವರದಿಯಾಗಿದೆ. ಕರಮಾನ ಪೊಲೀಸರು ಸಾವಿನ ತನಿಖೆ ಆರಂಭಿಸಿದ್ದಾರೆ. ಮೇಘತೀರ್ಥಂ, ಮುದ್ದುಗೌ, ಅಚಾಯನ್ಸ್, ಖಾರ್ತ ಸಮಕ್ಷಮ ಬಾಲನ ವಕೀಲ, ಕಲ್ಕಿ ಮುಂತಾದ ಚಿತ್ರಗಳಲ್ಲಿ ಹಾಗೂ ಚಂದನಮಜ, ಆತ್ಮಸಖಿ, ಮೈಥಿಲಿ ರೀ ವಾಂ, ದೇವಸ್ಪರ್ಶಂ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗಂಡ: ಸಂಜಿತ್, ಮಕ್ಕಳು: ತ್ರಯ, ಕೃತಿಕಾ. ಇವರನ್ನು ಅಗಲಿದ್ದಾರೆ.