Author: admin

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು…

Read More

ಜಾರ್ಖಂಡ್‌ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಸಾವಿಗೀಡಾದವರ ಸಂಖ್ಯೆ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಅಭಿಷೇಕ್ ಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ಸಹೋದರರನ್ನು ಕೂಡ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದಲ್ಲಿ ನಡೆದಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದ ಸತೀಶ್ (32) ಪ್ರಸನ್ನ (29) ಎಂದು ಗುರುತಿಸಲಾಗಿದೆ. ಮೇಕೆಗೆ ಸೊಪ್ಪು ತರಲು ಹೋದ ಸತೀಶ್ ಮರದಿಂದ ಆಯಾ ತಪ್ಪಿ ಬಾವಿಗೆ ಬಿದ್ದಿದ್ದಾನೆ. ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ಸಹೋದರ ಸಹ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ. ಪುನೀತ್ ಹೆಸರಿನಲ್ಲಿ ಸ್ಕಾಲರ್ಶಿಪ್ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಾ.ರಾಜ್ ಕುಮಾರ್ IAS ಅಕಾಡೆಮಿಯಲ್ಲಿ ಪೃಥ್ವಿ ಸ್ಕಾಲರ್ಶಿಪ್ ಲಾಂಛನದ ಮೇಲೆ ಸಹಿ ಹಾಕಿದ ನಂತರ UPSC ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಕೆಲಸ ದೇವರ ಕೆಲಸವೆಂದು ಭಾವಿಸಿ ಕೆಲಸ ಮಾಡಿ. ನೀವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಿ ಎಂದು ಸಲಹೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಮನೆಗೆ ನುಗ್ಗಿ ಯುವತಿಯೊಬ್ಬಳನ್ನು ಯುವಕನೊಬ್ಬ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದೆ. ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ವೀಣಾಳ ಪ್ರಿಯಕರನೆ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ವೀಣಾ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸ ಮಾಡುತ್ತಿದ್ದಳು. ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕಚೇರಿಗೆ ಹೋಗುವ ಮುನ್ನ ವೀಣಾ ವಾಸವಾಗಿದ್ದ ಮನೆಗೆ ನುಗ್ಗಿ ಆರೋಪಿ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆಯ ಪ್ರಾಥಮಿಕ ಹಂತಗಳು ಆರಂಭಗೊಂಡಿವೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿ ಮತದಾರರ ಪಟ್ಟಿಯನ್ನು ಸಂಗ್ರಹಿಸಿದೆ. ತಾತ್ಕಾಲಿಕ ಸಮಿತಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿದ ನಂತರ, ಚುನಾವಣಾ ಪ್ರಕ್ರಿಯೆ ತಕ್ಷಣ ಪ್ರಾರಂಭವಾಗಲಿದೆ. ಭಾರತ ಕುಸ್ತಿ ಒಕ್ಕೂಟದ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಮುಷ್ಕರ ನಿರತ ಕುಸ್ತಿಪಟುಗಳು ಸರ್ಕಾರವನ್ನು ಒತ್ತಾಯಿಸಿದರು. ಇದೇ ತಿಂಗಳ 30ರೊಳಗೆ ಚುನಾವಣೆ ನಡೆಯಲಿದೆ ಎಂದು ಆಟಗಾರರಿಗೆ ಕೇಂದ್ರ ಕ್ರೀಡಾ ಸಚಿವರು ಭರವಸೆ ನೀಡಿದ್ದರು.ಬ್ರಿಜ್ ಭೂಷಣ್ ಅಥವಾ ಅವರ ಸಹಚರರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ದಿನನಿತ್ಯದ ಕರ್ತವ್ಯಕ್ಕಾಗಿ ಸರ್ಕಾರ ನೇಮಿಸಿರುವ ತಾತ್ಕಾಲಿಕ ಸಮಿತಿಯ ಕಾರ್ಯಾದೇಶ ಇದೇ 17ಕ್ಕೆ ಕೊನೆಗೊಳ್ಳಲಿದೆ. ಭಾರತದ ಕುಸ್ತಿ ಒಕ್ಕೂಟದ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ 50 ಮತಗಳನ್ನು ಒಳಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲು ಪಂಜಾಬ್ ಸರ್ಕಾರ ಯೋಜಿಸುತ್ತಿದೆ. ಭಯೋತ್ಪಾದಕರು ಸೇರಿದಂತೆ ಅಪರಾಧಿಗಳನ್ನು ಇರಿಸಲು ಜೈಲು ಸಂಕೀರ್ಣದೊಳಗೆ ಐವತ್ತು ಎಕರೆ ಪ್ರದೇಶದಲ್ಲಿ ಹೆಚ್ಚಿನ ಭದ್ರತೆಯ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದರು. ಲೂಧಿಯಾನ ಬಳಿ ಡಿಜಿಟಲ್ ಜೈಲು ಸ್ಥಾಪನೆಗೆ ಕೇಂದ್ರ 100 ಕೋಟಿ ರೂ. ಲಡ್ಡಾ ಕೋಠಿಯಲ್ಲಿ ಹೊಸದಾಗಿ ನೇಮಕಗೊಂಡ ಜೈಲು ವಾರ್ಡರ್‌ ಗಳಿಗೆ ನೇಮಕಾತಿ ಪತ್ರವನ್ನು ಸಹ ವಿತರಿಸಿದರು ಎಂದು ಮುಖ್ಯಮಂತ್ರಿ ಹೇಳಿದರು. ಜೈಲಿನಲ್ಲಿ ನ್ಯಾಯಾಧೀಶರಿಗೆ ಪ್ರತ್ಯೇಕ ಕ್ಯಾಬಿನ್ ಕೂಡ ಇರಲಿದೆ. ಭಯೋತ್ಪಾದಕರು ಸೇರಿದಂತೆ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರಾಗದೆ ವಿಚಾರಣೆಗೆ ಒಳಪಡಿಸಲು ವ್ಯವಸ್ಥೆಯು ಅನುಮತಿಸುತ್ತದೆ. ಭಗವಂತ್ ಮಾನ್ ಪ್ರತಿಕ್ರಿಯಿಸಿ, ಪೊಲೀಸರಿಗೆ ವಿಶೇಷ ತರಬೇತಿ ಸೇರಿದಂತೆ ವಿವಿಧ ಸುಧಾರಣೆಗಳ ಜತೆಗೆ ವೈಜ್ಞಾನಿಕ ರೀತಿಯಲ್ಲಿ ಪೊಲೀಸ್ ಪಡೆ ಆಧುನೀಕರಣಕ್ಕೆ ಶ್ರಮಿಸಲಾಗುತ್ತಿದೆ. ಮೊಬೈಲ್ ಫೋನ್ ಬಳಕೆಯನ್ನು ಪರಿಶೀಲಿಸಲು ಜೈಲಿನೊಳಗೆ ಹೈಟೆಕ್ ಜಾಮರ್ ಮತ್ತು ಇತರ ಸಾಧನಗಳನ್ನು ಅಳವಡಿಸಲಾಗುವುದು. ಗಡಿಯಾಚೆಗಿನ ನುಸುಳುವಿಕೆಯನ್ನು ತಡೆಯಲು ಪಂಜಾಬ್ ಪೊಲೀಸರು ಆ್ಯಂಟಿ ಡ್ರೋನ್ ತಂತ್ರಜ್ಞಾನವನ್ನೂ ಪರಿಚಯಿಸಲಿದ್ದಾರೆ.…

Read More

ಮುಂದಿನ 24 ಗಂಟೆಗಳಲ್ಲಿ ಬಿಪೋರ್ಜೋಯ್ ಚಂಡಮಾರುತ ತೀವ್ರಗೊಂಡು ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಮುನ್ಸೂಚಕರು ತಿಳಿಸಿದ್ದಾರೆ. ಚಂಡಮಾರುತವು ಪ್ರಸ್ತುತ ಗೋವಾದಿಂದ 690 ಕಿ.ಮೀ ದೂರದಲ್ಲಿ 145 ಕಿ.ಮೀ ಗರಿಷ್ಠ ವೇಗದಲ್ಲಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಜರಾತ್. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯ ಬಳಿ ಪ್ರಬಲವಾದ ವಾಯುಭಾರ ಕುಸಿತವಾಗಿ ಪರಿಣಮಿಸಿದೆ. ಮುಂದಿನ 4 ದಿನಗಳ ಕಾಲ ಕೇರಳದಲ್ಲಿ ವ್ಯಾಪಕ ಗುಡುಗು/ಮಿಂಚು/ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ ಜೂನ್ 10 ರಿಂದ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ‌ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ವಿಧಾನಸಭೆ ‌ಚುನಾವಣೆ ವರೆಗೆ ಕನಿಷ್ಠ ‌ಶುಲ್ಕ 90 ರೂಪಾಯಿ ಇತ್ತು. ಮತದಾನ ಮರುದಿನವೇ KERC ಕನಿಷ್ಠ ಶುಲ್ಕ 140 ರೂ.ಗೆ ಏರಿಕೆ ಮಾಡಲಾಗಿದೆ. ಕೆಇಆರ್‌ಸಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ತಕ್ಷಣವೇ ತಡೆ ನೀಡಬೇಕು. ಹೆಚ್ಚಳವಾಗಿರುವ ಶುಲ್ಕ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಾಲಕ್ಕೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ‌ ನೇಕಾರ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು. 10 ಎಚ್‌ ಪಿವರೆಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More