Author: admin

ವೈ.ಎನ್.ಹೊಸಕೋಟೆ: ಇಲ್ಲಿನ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಓರಿಗಾಮಿ ಮತ್ತು ಪಾಪಪ್ ಕಲೆಗಳ ಬಗ್ಗೆ ಪರಿಚಯ ಹಾಗೂ ಗಣಿತದ ಮಾದರಿಗಳನ್ನು ತಯಾರಿಸುವ ಬಗ್ಗೆ ಕಾರ್ಯಾಗಾರವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಮಧು ಶ್ರೀನಿವಾಸನ್ ಇವರ ನಿರ್ದೇಶನದಲ್ಲಿ ನಡೆಸಲಾಯಿತು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್.ಆರ್. ಅಶ್ವಥ್ , ಅಧ್ಯಕ್ಷರಾದ ಇ.ವಿ. ಶ್ರೀಧರ್  ಹಾಗೂ ಮುಖ್ಯ ಶಿಕ್ಷಕರಾದ ಬಿ. ತಿಪ್ಪೇಸ್ವಾಮಿ  ವಿವಿಧ ಓರಿಗಾಮಿ ಚಟುವಟಿಕೆ ಮಾಡಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಧು ಶ್ರೀನಿವಾಸನ್ ರವರು ಪಾಪ್ ಅಪ್ ಕಲೆಯ ಮೂಲಕ  ವಿವಿಧ ಸಮತಲಾಕೃತಿಗಳು, ಘನಾಕೃತಿಗಳು, ಬೀಜಗಣಿತದ ಸೂತ್ರಗಳು ಪ್ರಮೇಯಗಳು ಮುಂತಾದವುಗಳನ್ನು ಪ್ರದರ್ಶಿಸಿ ಮಾಹಿತಿ ನೀಡಿದರು. ಶಾಲೆಯ ಸುಮಾರು 120 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರುಗಳಾದ ಉಮರ್ ಫಾರೂಕ್, ವಿನೋದ್ ಕುಮಾರ್, ಅನಿಲ್ ಕುಮಾರ್  ಹಾಗೂ ಶಿಕ್ಷಕಿಯಾದ ಸೌಜನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅನಿಲ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು:  ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಆದ್ದರಿಂದ ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿಗಳನ್ನು ರೂಢಿಸಿಕೊಳ್ಳಬೇಕು ಎಂದು  ಸರಗೂರು ಆರಕ್ಷಕ ಠಾಣೆ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್  ಸಲಹೆ ನೀಡಿದರು. ಪಟ್ಟಣದ ಜೆಎಸ್ ಎಸ್ ಶಿವಾನುಭವ ಮಂಗಳ ಮಂಟಪದಲ್ಲಿ ಶುಕ್ರವಾರ ದಂದು  ಜೆಎಸ್ ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಹಾಗೂ ಶ್ರೀಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ವಿದ್ಯಾರ್ಥಿನಿಯರು ತಮಗೆ ಎದುರಾಗುವ ತೊಂದರೆಗಳಿಂದ ಹೇಗೆ ರಕ್ಷಣೆಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿನಿಯರು ಸಾಮಾಜಿಕ ಮಾಧ್ಯಮಗಳನ್ನು ಬಳಸಿದಾಗ ಉಂಟಾಗುವ ತೊಂದರೆಗಳ ಬಗ್ಗೆ ತಿಳಿಸಿದ ಅವರು,  ವಿದ್ಯಾರ್ಥಿನಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಯಾವಾಗಲೂ ಸಿದ್ಧವಿದೆ ಎಂದು ತಿಳಿಸಿದರು. ಸರಗೂರು ಸಮುದಾಯದ ಆರೋಗ್ಯ ಕೇಂದ್ರ ಸ್ತ್ರೀರೋಗ ತಜ್ಞರು  ಭಾಗ್ಯಲಕ್ಷ್ಮಿ ಬಿ.…

Read More

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ ಎಂದು ಅವರು ಟೀಕಿಸಿದರು. ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದರು. ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್​​ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಲಕ್ನೋ: ಉತ್ತರ ಪ್ರದೇಶದ  ಸಂಭಾಲ್‌ ಜಿಲ್ಲೆಯಲ್ಲಿ ಮದುವೆ ದಿಬ್ಬಣದ ಕಾರು ಭೀಕರ ಅಪಘಾತಕ್ಕೀಡಾಗಿ ವರ ಸಹಿತ 8 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಬೊಲೆರೊ ಎಸ್‌ ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವರ ಸೂರಜ್ (24), ವರನ ಅತ್ತಿಗೆ ಆಶಾ (26), ಆಶಾ ಅವರ ಮಗಳು ಐಶ್ವರ್ಯ (2), ಮನೋಜ್ ಅವರ ಮಗ ವಿಷ್ಣು (6), ಮತ್ತು ವರನ ಚಿಕ್ಕಮ್ಮ ಸೇರಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ…

Read More

ಮಂಗಳೂರು: ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿರುವ ಘಟನೆ  ನಡೆದಿದೆ. ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ. ಜೊತೆಗೆ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇರುವುದಾಗಿ ಚರ್ಚೆಗಳು ನಡೆಯುತ್ತಿದೆ. ಘಟನೆ ಸಂಬಂಧ ಮೂಡಬಿದಿರೆ ಠಾಣೆಯಲ್ಲಿ ಎಫ್ ​​ಐಆರ್​ ದಾಖಲಾಗಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ ಟ್ರಾಕ್ಟ್ ಮಾಡುತ್ತಿದ್ದ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ ಪೆಕ್ಟರ್ ಸಂದೇಶ್ ​ರಿಂದ ದೂರು ನೀಡಲಾಗಿದ್ದು,  ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದು, ಬಳಿಕ ಶುಕ್ರವಾರ ಬೆಳಿಗ್ಗೆ ಆಕೆಯನ್ನು  ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ನದಿಗೆ ಹಾರಿದ್ದಳು. ಬಳಿಕ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ… ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.…

Read More

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. 33 ವರ್ಷದ ಶರತ್ ಮೃತಪಟ್ಟ ಫಾರೆಸ್ಟ್ ಗಾರ್ಡ್ ಆಗಿದ್ದು, ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಇವರು ಶವವಾಗಿ ಪತ್ತೆಯಾಗಿದ್ದಾರೆ. 33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಅವರ ಶವ ಪತ್ತೆಯಾಗಿದೆ. ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ…

Read More

ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ದಿನದ ಶುಭ ಹಾರೈಕೆಯನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಂಸ್ಥೆಯ ಅಧ್ಯಕ್ಷರಾದ ಗಂಗರಾಜು “ಗ್ರಾಂಡ್ ವೆಲ್ಕಮ್ ಡೇ” ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜಿಲ್ಲೆಯ ಹೆಸರಾಂತ ಮುಖ್ಯ ಭಾಷಣಕಾರ, ಕವಿ–ಲೇಖಕರಾದ ಗಂಗಾಧರ್ ಕೊಡ್ಲಿರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿ — ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ಚಟುವಟಿಕೆಗಳ  ಬಗ್ಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಮೌಲ್ಯಧಾರಿತ ಶಿಕ್ಷಣವನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಮತ್ತು ಅಗತ್ಯವಾದ ಪ್ರಯೋಗೀಕ ಶಿಕ್ಷಣವನ್ನು ಸಂಸ್ಥೆಯು ಪೂರೈಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿಯಾದ ನಿರ್ಮಲಾ ತಿಳಿಸಿದರು. ನಂತರ ಮಾತನಾಡಿದ ಸುಭಾಷ್, ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಗಂಗರಾಜು, ಪ್ರೌಢಶಾಲೆಯ…

Read More

ಸರಗೂರು: ಸರ್ಕಾರದ ವತಿಯಿಂದ ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣವನ್ನು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಮಾಡಿದ್ದಾನೆ ಎಂದು ಅರಣ್ಯ ಮತ್ತು ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ನಾಡ ದೇವತೆ ಚಿಕ್ಕ ದೇವಮ್ಮನ ತಾಯಿ ಬೆಟ್ಟಕ್ಕೆ ತೆರಳಿ ಆಷಾಢ ಶುಕ್ರವಾರದಂದು ಚಿಕ್ಕದೇವಮ್ಮನ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಸರ್ಕಾರ ಹಲವು ನಿರ್ಧಾರಗಳನ್ನು ತೆಗೆದುಕೊಂಡು ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದಿದ್ದ ಸಮಯದಲ್ಲಿ ಬೆಟ್ಟಕ್ಕೆ 5 ಕೋಟಿ ಅನುದಾನವನ್ನು ಹಾಕಿ, ರಸ್ತೆಗೆ 2 ಕೋಟಿ ಅನುದಾನದಲ್ಲಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಅದರಂತೆ ಸುಮಾರು 7 ಕೋಟಿ ಅನುದಾನವನ್ನು ನನ್ನ ಅವಧಿಯಲ್ಲಿ ಬಳಸಿ ಬೆಟ್ಟದ ಅಭಿವೃದ್ಧಿಗೆ ಜೊತೆಯಲ್ಲಿ ಪಾಕಶಾಲೆ, ತಡೆಗೋಡೆ, ರಸ್ತೆ, ಮೆಟ್ಟಿಲು, ಮಾಡಿಕೊಡುವ ವ್ಯವಸ್ಥೆಯನ್ನು  ಮಾಡಿಕೊಡುವ ಕೆಲಸ ನನ್ನ ಅವಧಿಯಲ್ಲಿ ಮಾಡಿದ್ದಾನೆ ಎಂದು ಹೇಳಿದರು. ನಮ್ಮ ತಂದೆ ಶಾಸಕರಾದ ಸಂದರ್ಭದಲ್ಲಿ ಚಿಕ್ಕದೇವಮ್ಮ ಬೆಟ್ಟದ ತಾಯಿ ದೇವಸ್ಥಾನ ಹಳೆದಾಗಿತ್ತು. ದೇವಸ್ಥಾನ ನಿರ್ಮಾಣ ಮಾಡಲು…

Read More

ಬೆಂಗಳೂರು: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕುಂಟೆ ಪೊಲೀಸ್ ಠಾಣಾ ಪೊಲೀಸರು ಆರೋಪಿ  ಅಂಗಡಿ ಮಾಲಿಕನನ್ನು ಬಂಧಿಸಿದ್ದಾರೆ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೊಂದ ಬಾಲಕಿ ಚಿಪ್ಸ್ ಪ್ಯಾಕೆಟ್ ಖರೀದಿಸಲು ತನ್ನ ಮನೆಯ ಹತ್ತಿರದ ಅಂಗಡಿಗೆ ಹೋಗಿದ್ದಳು. ಆಗ ಅಂಗಡಿಯಲ್ಲಿದ್ದ 25 ವರ್ಷದ ವ್ಯಕ್ತಿ, ಚಿಪ್ಸ್ ಪ್ಯಾಕೆಟ್ ಅನ್ನು ಪಕ್ಕದಲ್ಲಿರುವ ಗೋಡೌನ್‌ನಿಂದ ತರಬೇಕೆಂದು ಹೇಳಿದ್ದಾನೆ. ಚಿಪ್ಸ್ ನೀಡುವ ನೆಪದಲ್ಲಿ ಗೋಡೌನ್‌ ಗೆ ಕರೆದೊಯ್ದು ತನ್ನ ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಬಾಲಕಿ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡು ಮನೆಗೆ ಬಂದು ಅಳಲು ಪ್ರಾರಂಭಿಸಿದಳು. ಆಕೆಯ ಚಿಕ್ಕಮ್ಮ ಕಾರಣ ಕೇಳಿದಾಗ, ಅವಳು ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More