Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಿಕಸಿತ ಭಾರತ್ ಗ್ರಾಮೀಣ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (VB-G RAM G) ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಯುಪಿಎ ಸರ್ಕಾರದ ಅವಧಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ಮಹತ್ವದ ನಿರ್ಣಯ ಮಂಡಿಸಿದೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಹೊಸ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯು ಫೆಡರಲ್ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವಂತಿದೆ ಎಂದು ಸಿಎಂ ಪ್ರತಿಪಾದಿಸಿದರು. ಪಂಚಾಯತ್‌ಗಳ ಅಧಿಕಾರ ಕಡಿತ: ಈ ಕಾಯ್ದೆಯು ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿದ್ದು, ಗ್ರಾಮ ಪಂಚಾಯತ್‌ಗಳ ಸ್ವಾಯತ್ತತೆ ಮತ್ತು ಅಧಿಕಾರವನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಆರ್ಥಿಕ ಹೊರೆ: ಹೊಸ ವ್ಯವಸ್ಥೆಯು ರಾಜ್ಯದ ಖಜಾನೆಗೆ ಅನಗತ್ಯ ಹೊರೆಯಾಗಲಿದೆ ಎಂದು ಸರ್ಕಾರ ದೂರಿದೆ. ಮನರೇಗಾ ಅಗತ್ಯ: ಗ್ರಾಮೀಣ ಬಡವರ ಬದುಕಿಗೆ ‘ಸಂಜೀವಿನಿ’ಯಂತಿದ್ದ ಮನರೇಗಾ ಯೋಜನೆಯನ್ನು ಅದರ ಮೂಲ ಸ್ವರೂಪದಲ್ಲಿಯೇ…
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ತಪ್ಪು ಮಾಡಿಲ್ಲದ ಕಾರಣ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ರಾಜೀನಾಮೆಗೆ ನಕಾರ: ಬಿಜೆಪಿ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳನ್ನು ತಳ್ಳಿ ಹಾಕಿದ ಸಚಿವರು, “ಅಧಿಕಾರಿಗಳು ಯಾರಾದರೂ ಸಚಿವರ ಅಥವಾ ಮುಖ್ಯಮಂತ್ರಿಗಳ ಹೆಸರು ದುರುಪಯೋಗಪಡಿಸಿಕೊಂಡು ಲಂಚ ಪಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ನಾನು ತಪ್ಪು ಮಾಡದಿದ್ದ ಮೇಲೆ ರಾಜೀನಾಮೆ ಏಕೆ ನೀಡಲಿ?” ಎಂದು ಪ್ರಶ್ನಿಸಿದ್ದಾರೆ. ಆಡಿಯೋ ಕ್ಲಿಪ್ ಬಗ್ಗೆ ಪ್ರತಿಕ್ರಿಯೆ: ತಮ್ಮ ಹಾಗೂ ತಮ್ಮ ಪುತ್ರರ ಹೆಸರಿರುವ ಆಡಿಯೋ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಆಡಿಯೋಗಳು ಕೂಡ ಸುಳ್ಳೆಂದು ಸಾಬೀತಾಗಿದ್ದವು ಎಂಬುದನ್ನು ನೆನಪಿಸಿದರು. ಸಂಘದ ಅಸ್ತಿತ್ವದ ಬಗ್ಗೆ ಪ್ರಶ್ನೆ: ಲೋಕಾಯುಕ್ತಕ್ಕೆ ದೂರು ನೀಡಿದ ‘ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್’ ಕಾನೂನಾತ್ಮಕವಾಗಿ ಅಸ್ತಿತ್ವದಲ್ಲಿದೆಯೇ? ಅದು ಆಡಿಟ್ ಮತ್ತು ಸಭೆಗಳನ್ನು…
ಗುಬ್ಬಿ: ತಾಲೂಕಿನ ಹಿಂಡಿಸ್ಗೆರೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ, ಉಪಾಧ್ಯಕ್ಷರಾಗಿ ಗೀತಾ ಅವಿರೋಧವಾಗಿ ಆಯ್ಕೆಯಾದರು. ಸುಮಾರು ಎಂಟು ವರ್ಷಗಳ ಬಳಿಕ ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಸುಜಾತ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಮಾತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿದರು. ಚುನಾವಣೆ ಅಧಿಕಾರಿಯಾಗಿ ಲಿಯಾಖಾತ್ ಅಲಿಖಾನ್ ಚುನಾವಣೆ ಪ್ರಕ್ರಿಯೆಗಳನ್ನ ನಡೆಸಿಕೊಟ್ಟರು. ನಂತರ ನೂತನ ಅಧ್ಯಕ್ಷೆ ಸುಜಾತ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಎಲ್ಲ ನಿರ್ದೇಶಕ ಸಹಕಾರ ಪಡೆದು ಹಿಂಡಿಸ್ ಗೆರೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಹಾಲು ಉತ್ಪಾದಕರಿಗೆ ಹಾಗೂ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಲು ಪ್ರಯತ್ನ ಮಾಡುತ್ತೇನೆ. ಗ್ರಾಮೀಣ ಭಾಗದ ರೈತರು ಹೈನುಗಾರಿಕೆಗೆ ಹೆಚ್ಚು ಆದ್ಯತೆಯನ್ನು ಕೊಟ್ಟು ಪ್ರತಿ ಮನೆಯಲ್ಲೂ ಹಸುಗಳನ್ನು ಕಟ್ಟಿಕೊಂಡು ಡೈರಿಗಳಿಗೆ ಹಾಲು ಹಾಕುವುದರ ಮೂಲಕ ಸ್ವಾವಲಂಬಿ ಬದುಕನ್ನ…
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 370 ಬಾಂಗ್ಲಾ ಪ್ರಜೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 196 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಲ್ಲೆಲ್ಲಿ ಎಷ್ಟು ಜನ?: ಗುರುತಿಸಲಾದ 370 ಜನರಲ್ಲಿ ಅತಿ ಹೆಚ್ಚು ಅಂದರೆ 284 ಮಂದಿ ಬೆಂಗಳೂರಿನಲ್ಲಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ 37, ಶಿವಮೊಗ್ಗದಲ್ಲಿ 12 ಮತ್ತು ಹಾಸನದಲ್ಲಿ 3 ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಲಾಗಿದೆ. ಹಲವು ನಗರಗಳಿಗೆ ವಲಸೆ: ಅಕ್ರಮ ವಲಸಿಗರು ಸಾಮಾನ್ಯವಾಗಿ ಕೋಲ್ಕತ್ತಾ ಮೂಲಕ ದೇಶದ ಒಳಗೆ ನುಸುಳುತ್ತಾರೆ. ಅಲ್ಲಿಂದ ಕೆಲಸ ಅರಸಿ ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ವಲಸೆ ಹೋಗುತ್ತಾರೆ ಎಂದು ಸಚಿವರು ವಿವರಿಸಿದರು. ಲಕ್ಷಾಂತರ ಜನರಿದ್ದಾರೆ ಎಂಬ ಆರೋಪ ತಳ್ಳಿಹಾಕೆ: ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾ ವಲಸಿಗರಿದ್ದಾರೆ ಎಂಬ ವಿರೋಧ ಪಕ್ಷದ ಆರೋಪವನ್ನು ಸಚಿವರು ನಿರಾಕರಿಸಿದರು. “ಇಷ್ಟು…
ಬೆಂಗಳೂರು: “ನಮ್ಮ ಸರ್ಕಾರ ಹಾದಿ ತಪ್ಪಿಲ್ಲ ಮತ್ತು ನಾನು ಅಸಹಾಯಕ ಮುಖ್ಯಮಂತ್ರಿಯಲ್ಲ. ಜನರಿಗೆ ನೀಡಿದ್ದ ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಪ್ರತಿಪಾದಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸೋಮವಾರ ಸುದೀರ್ಘ ಉತ್ತರ ನೀಡಿದ ಅವರು, ವಿರೋಧ ಪಕ್ಷಗಳ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಅಸಹಾಯಕನಲ್ಲ: ವಿರೋಧ ಪಕ್ಷದವರು ಸರ್ಕಾರವನ್ನು ‘ಅಸಹಾಯಕ’ ಮತ್ತು ‘ಸಂವಿಧಾನರಹಿತ’ ಎಂದು ಟೀಕಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಕೆಲವೊಮ್ಮೆ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ ಅಷ್ಟೇ. ಆದರೆ ನಾನು ಅಸಹಾಯಕನಲ್ಲ,” ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಮಾದರಿ ಅಭಿವೃದ್ಧಿ: ಕರ್ನಾಟಕದ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸಚಿವರು ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ನಾವು ಜನಪರ ಮತ್ತು ಸಮಾಜಮುಖಿ ಆಡಳಿತ ನೀಡುತ್ತಿದ್ದೇವೆ ಎಂದು ಎದೆತಟ್ಟಿ ಹೇಳಿದರು. ವಿರೋಧ ಪಕ್ಷದವರ ವಿರುದ್ಧ ವಾಗ್ದಾಳಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಕ್ಸಿಜನ್ ಇಲ್ಲದೆ ಜನರು ಮೃತಪಟ್ಟಾಗ ನಿಮ್ಮ ಸಂವೇದನೆ ಎಲ್ಲಿತ್ತು? ನೀವು ಕೃಷಿ ಸಾಲ, ಕೃಷಿ ಭಾಗ್ಯದಂತಹ…
ಬೆಂಗಳೂರು: ದಶಕಗಳ ಕಾಲದ ಕನಸಿನ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಇಲಾಖೆಯ ಭೂಮಿ ಹಸ್ತಾಂತರ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ವಿಧಾನಸಭೆಯ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ, ಕೇಂದ್ರ ಸರ್ಕಾರ ಅರಣ್ಯ ಇಲಾಖೆಯ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದ ಈ ಧೋರಣೆಯಿಂದಾಗಿ ಬಯಲು ಸೀಮೆಯ ಜನರಿಗೆ ನೀರು ತಲುಪಿಸುವ ಯೋಜನೆಗೆ ಹಿನ್ನಡೆಯಾಗುತ್ತಿದೆ ಎಂದು ದೂರಿದರು. ಕೇಂದ್ರದ ವಿರುದ್ಧ ಕಿಡಿ: “ನಾವು ಈ ದೇಶದ ಪ್ರಜೆಗಳಲ್ಲವೇ? ನಮ್ಮ ಹಕ್ಕನ್ನು ಕೇಳಲು ನಮಗೆ ಅಧಿಕಾರವಿದೆ. ಪ್ರತಿಯೊಂದು ನೀರಾವರಿ ಯೋಜನೆಗೂ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ. ಮಹದಾಯಿ ಯೋಜನೆಗೆ ಇಂದಿನವರೆಗೂ ಪೂರ್ಣ ಪ್ರಮಾಣದ ಅವಕಾಶ ಕೊಟ್ಟಿಲ್ಲ, ಈಗ ಎತ್ತಿನಹೊಳೆ ಯೋಜನೆಗೂ ಇದೇ ಪರಿಸ್ಥಿತಿ ಬಂದೊದಗಿದೆ,” ಎಂದು ಶಿವಲಿಂಗೇಗೌಡ ಕಿಡಿಕಾರಿದರು. ಈ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಸದನದಲ್ಲಿ…
ಬೆಂಗಳೂರು: ಸಾಮಾಜಿಕ ಅಸಮಾನತೆ ಹಾಗೂ ಜಾತಿಯಾಧಾರಿತ ಶೋಷಣೆಯ ವಿರುದ್ಧ ಧ್ವನಿ ಎತ್ತಿರುವ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಸಮಾಜದಲ್ಲಿ ಮೌಲ್ಯಯುತ ಸಂದೇಶಗಳನ್ನು ಬಿತ್ತಲು ಮತ್ತು ಸಾರ್ವತ್ರಿಕ ಅಭಿಪ್ರಾಯ ಮೂಡಿಸಲು ಸಿನಿಮಾ ಅತ್ಯಂತ ಪ್ರಬಲ ಮಾಧ್ಯಮವಾಗಿದೆ. ಸಾಮಾಜಿಕ ಅಸಮಾನತೆ ಮತ್ತು ಜಾತಿ ಪದ್ಧತಿಯಂತಹ ಪಿಡುಗುಗಳ ವಿರುದ್ಧ ಬೆಳಕು ಚೆಲ್ಲುವ ಚಿತ್ರಗಳಿಗೆ ಬೆಂಬಲ ನೀಡುವುದು ಸರ್ಕಾರದ ನೈತಿಕ ಜವಾಬ್ದಾರಿ ಎಂದು ತಿಳಿಸಿದ್ದಾರೆ. ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನಿಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಸರ್ಕಾರದ ನೈತಿಕ ಹೊಣೆ. ಈ ನಿಟ್ಟಿನಲ್ಲಿ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸೂಚಿಸಲಾಗಿದೆ ಅಂತಾ ಅವರು ತಿಳಿಸಿದ್ದಾರೆ. ಮುಂದಿನ…
ಬೆಂಗಳೂರು: ರಾಜ್ಯ ವಿಧಾನಸಭೆಯ ಕಲಾಪದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ‘ನಾಯಕತ್ವ’ ಹಾಗೂ ‘ಅಧಿಕಾರ ಹಂಚಿಕೆ’ (Power Sharing) ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸ್ವಾರಸ್ಯಕರ ವಾಗ್ವಾದ ನಡೆಯಿತು. ಸಿಎಂ ಸಿದ್ದರಾಮಯ್ಯ ವ್ಯಂಗ್ಯ: ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದವರ ಕಾಲೆಳೆಯುತ್ತಾ, “ನನಗೂ ಮತ್ತು ಡಿ.ಕೆ. ಶಿವಕುಮಾರ್ ಅವರಿಗೂ ಆಗುವುದಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಮ್ಮ ನಡುವೆ ಹಾಲಾಹಲ ಇದೆ ಎನ್ನುತ್ತಿದ್ದಾರೆ,” ಎಂದು ನಗುತ್ತಲೇ ಡಿಕೆಶಿ ಕಡೆ ನೋಡಿ ಹೇಳಿದರು. ಸಮಯವೇ ಉತ್ತರ ನೀಡಲಿದೆ: ಸಿಎಂ ಮಾತಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, “ಎಲ್ಲದಕ್ಕೂ ಸಮಯವೇ ಉತ್ತರ ಕೊಡುತ್ತದೆ ಬಿಡಿ,” ಎಂದು ಮಾರ್ಮಿಕವಾಗಿ ನುಡಿದರು. ಆರ್. ಅಶೋಕ್ ಲೇವಡಿ: ಡಿಕೆಶಿ ಹೇಳಿಕೆಯನ್ನು ಹಿಡಿದು ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, “ಇದು ಡಿಕೆಶಿ ಅವರ ಸ್ಟೈಲ್. ಒಂದು ಮಾತಿಗೆ ನೂರು ಅರ್ಥವಿರುತ್ತದೆ. ಆ ಸಮಯ ಯಾವಾಗ ಬರುತ್ತದೆ ಎಂದು…
ಕೊರಟಗೆರೆ: ನಮ್ಮ ದೇಶದ ನಿಜವಾದ ಶಕ್ತಿ ಗ್ರಾಮಗಳಲ್ಲಿ ಅಡಗಿದೆ. ಗ್ರಾಮೀಣ ಜನರು ಜಾತಿ–ಮತ ಭೇದ ಮರೆತು ಒಗ್ಗಟ್ಟಾಗಿ ಬದುಕಿದಾಗ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಏಕತೆಯನ್ನು ಬೆಳೆಸುವಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು. ತಾಲೂಕಿನ ಕೋಳಾಲ ಹೋಬಳಿಯ ಪಾತಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ನೂತನವಾಗಿ ನಿರ್ಮಿಸಲಾದ ಶ್ರೀ ಚನ್ನಕೇಶ್ವರ ಸ್ವಾಮಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದ ಅವರು, ಗ್ರಾಮೀಣ ಜೀವನದ ಮೌಲ್ಯ, ಪರಸ್ಪರ ಸಹಕಾರ ಹಾಗೂ ಸಾಮಾಜಿಕ ಸಾಮರಸ್ಯದ ಅಗತ್ಯತೆಯನ್ನು ಬಗ್ಗೆ ತಿಳಿಸಿದರು. ಗ್ರಾಮಗಳಲ್ಲಿ ಇರುವ ಸೌಹಾರ್ದತೆಯೇ ದೇಶದ ಬಲ, ಧಾರ್ಮಿಕ ಕೇಂದ್ರಗಳು ಕೇವಲ ಪೂಜೆಯ ಸ್ಥಳಗಳಲ್ಲ, ಸಮಾಜವನ್ನು ಒಂದಾಗಿ ಕಟ್ಟುವ ಕೇಂದ್ರಗಳಾಗಬೇಕು. ಯುವಕರು ದುಶ್ಚಟಗಳಿಗೆ ಒಳಗಾಗದೆ ಸಂಸ್ಕೃತಿ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಅಳವಡಿಸಿ ಕೊಳ್ಳಬೇಕು ಎಂದು ಸ್ವಾಮೀಜಿ ಉಪದೇಶ ನೀಡಿದರು.…
ಹತ್ರಾಸ್: ಮದುವೆಯೆಂಬುದು ನೂರು ಕಾಲದ ಸುಖದ ಸಂಸಾರಕ್ಕೆ ನಾಂದಿ ಹಾಡಬೇಕಾದ ಪವಿತ್ರ ಬಂಧ. ಆದರೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಪತ್ನಿಯೊಬ್ಬಳು ತನ್ನ ಪತಿಯನ್ನು ಬಿಟ್ಟು ಹೋಗಲು ನಿರ್ಧರಿಸಿದ್ದಾಳೆ. ಘಟನೆಯ ವಿವರ: ಆಗ್ರಾ ನಿವಾಸಿಯಾದ ಯುವತಿಯೊಬ್ಬಳು ಹತ್ರಾಸ್‌ನ ಅಭಿಷೇಕ್ ಎಂಬುವವರನ್ನು ಒಂದು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದೇ ಭಾವಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಪತ್ನಿ ತನ್ನ ಪತಿಯಿಂದ ದೂರವಾಗುವುದಾಗಿ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಅವರು ನೀಡಿರುವ ಕಾರಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪತ್ನಿಯ ಆರೋಪವೇನು? ತನ್ನ ಪತಿ ಅಭಿಷೇಕ್ ಅವರ ಮೈಬಣ್ಣ ಕಪ್ಪಗಿದೆ ಹಾಗೂ ಅವರ ನಡುವಿನ ದೈಹಿಕ ಸಂಬಂಧ ತನಗೆ ತೃಪ್ತಿ ನೀಡುತ್ತಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ. “ನಮ್ಮ ನಡುವೆ ಯಾವುದೇ ಕೌಟುಂಬಿಕ ಸಮಸ್ಯೆಗಳಿಲ್ಲ, ಆದರೆ ದೈಹಿಕ ಸಂಬಂಧದಲ್ಲಿ ನನಗೆ ತೃಪ್ತಿಯಿಲ್ಲ. ಈ ಬಗ್ಗೆ ನಾನು ಬಹಿರಂಗವಾಗಿ ಚರ್ಚಿಸಲು…