Subscribe to Updates
Get the latest creative news from FooBar about art, design and business.
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ
- ಒಂದೇ ರಾತ್ರಿ 3 ಅಂಗಡಿಗಳಿಗೆ ನುಗ್ಗಿದ ಕಳ್ಳರು: ಶೀಟ್ ಕತ್ತರಿಸಿ, ನಗ ನಾಣ್ಯ ದೋಚಿ ಪರಾರಿ
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
Author: admin
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಅಸಲಿಯಾಗಿದ್ದು, ಅರ್ಜಿಯಲ್ಲಿರುವ ಒಂದೆರಡು ಅಂಶಗಳನ್ನು ಮತ್ತು ಡಿಸೈನ್ ನ್ನು ಸ್ವಲ್ಪ ಬದಲಿಸಲಾಗುವುದು ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಅರ್ಜಿ ನಮೂನೆ ಅಸಲಿ ನಮೂನೆಯಾಗಿದೆ, ಅದು ನಕಲಿ ಅಲ್ಲ. ಅರ್ಜಿಯಲ್ಲಿರುವ ಒಂದೆರಡು ಅಂಶಗಳನ್ನು ಬದಲಿಸಲಾಗುವುದು, ಜಾತಿ ಕಾಲಂ ತೆಗೆದು ವರ್ಗ ಎಂದು ಹಾಕಲಾಗುವುದು, ಅರ್ಜಿಯ ಡಿಸೈನ್ ಸ್ವಲ್ಪ ಬದಲಾಗಲಿದೆ ಎಂದು ತಿಳಿಸಿದರು. ಗೃಹಲಕ್ಷ್ಮೀ ಯೋಜನೆಗೆ ಮಗ ತೆರಿಗೆ ಕಟ್ಟುವುದು ಅನ್ವಯ ಆಗಲ್ಲ. ಫಲಾನುಭವಿಯ ಗಂಡ ತೆರಿಗೆ ಕಟ್ಟಿದರೆ ಪತ್ನಿಗೆ ಗೃಹಲಕ್ಷ್ಮೀ ಯೋಜನೆ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ. 90% ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಪ್ರಮುಖರಾಗಿದ್ದಾರೆ, ಯಜಮಾನಿ ಎಂದೇ ನಮೂದಾಗಿದೆ. ವೃದ್ದಾಶ್ರಮದಲ್ಲಿರುವ ಮಹಿಳೆಯರ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಇದ್ದರೆ ಅವರಿಗೂ ಯೋಜನೆ ಸಿಗಲಿದೆ ಎಂದು ಹೆಬ್ಬಾಳಕರ್ ಹೇಳಿದರು. ಮತ್ತೇನಾದರೂ ಮಾರ್ಪಾಡುಗಳು ಅಗತ್ಯವೆನಿಸಿದರೆ…
ಉಡುಪಿ: ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ, 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ಹೆಡ್ಗೆವಾರ್ ಪಾಠವನ್ನು ಸರ್ಕಾರ ವಾಪಸ್ ಪಡೆಯುವುದಾಗಿ ಹೇಳಿದೆ. ಚಕ್ರವರ್ತಿ ಸೂಲಿಬೆಲೆ ಪಾಠ ವಾಪಸ್ ಪಡೆಯುವುದಾಗಿ ಹೇಳುತ್ತಿದ್ದಾರೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್ಗೆ ತಲುಪಲಿದ್ದಾರೆ. ಮಧ್ಯಾಹ್ನ 12.35ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೋಡಿ ಜೂ.11ರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು. ಜೂನ್ 15 ರಿಂದ ನೋಂದಣಿ ಆರಂಭವಾಗಿ, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು ಇದ್ದಾರೆ.…
ತುಮಕೂರು: ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡಿನಿಂದ ಕುಯ್ದು ಮತಿಭ್ರಮನೆಯ ತಾಯಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಡೆದಿದೆ. ಶ್ವೇತಾ (28) ಎಂಬಾಕೆಯಿಂದ ಕೃತ್ಯ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೈಯನ್ನು ಕುಯ್ದಿ ನಂತರ ತೀವ್ರ ರಕ್ತ ಸಾವ್ರವಾಗಿ ಮಗು ಸಾವನಪ್ಪಿದೆ. ಒಂದು ವರ್ಷದ ಕ್ರಿತೀಶ್ ಮೃತ ಮಗು ರಕ್ತದ ಮಡುವಿನಲ್ಲಿ ಮೃತಪಟ್ಟಿದೆ. ಬಳಿಕ ತಾನು ಕೂಡ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶ್ವೇತಾ ರನ್ನು ಅಕ್ಕಪಕ್ಕದ ಮನೆಯವರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಧುಗಿರಿ ನಿವಾಸಿ ಶಿವಾನಂದ ಎಂಬುವ ಪತ್ನಿಯಾಗಿದ್ದ ಶ್ವೇತಾ ಮಾನಸಿಕ ಅಸ್ವಸ್ಥೆಯಾಗಿದ್ದರು, ಇತ್ತೀಚೆಗಷ್ಟೇ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರದಲ್ಲಿ ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅದನ್ನು ಮುಂದಿನ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು. ಯಾವುದನ್ನು ಮಾಡಬೇಕು, ಎಂಬ ಬಗ್ಗೆ ಸರ್ಕಾರದ ನಿಯಮಗಳಿವೆ ಎಂದರು. ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ. ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾವು ವೈಯಕ್ತಿಯವಾಗಿ ಸಚಿವರಾಗಿದ್ದೇನೆ ಅಂತ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟು ಕೊಳ್ಳಬಾರದು ಅಂತ ಹೇಳಿದ್ದೇನೆ ಅಂತ ವೈರಲ್ ಮಾಡಿದ್ದಾರೆ. ಅದನ್ನು ನಾನು ಹೇಳಿಯೇ ಇಲ್ಲ. ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ…
ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ.ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಅನುಭವ,ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು. ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ,ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ಭಾರತವು 27 ವರ್ಷಗಳ ನಂತರ ವಿಶ್ವ ಸುಂದರಿ 2023 ಅನ್ನು ಆಯೋಜಿಸಲು ಸಿದ್ಧವಾಗಿದೆ. 71ನೇ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ನಡೆಯುತ್ತಿದೆ. ವರದಿಯ ಪ್ರಕಾರ, ಸ್ಪರ್ಧೆಯು ನವೆಂಬರ್ ನಲ್ಲಿ ನಡೆಯಲಿದೆ. ದಿನಾಂಕಗಳನ್ನು ಪ್ರಕಟಿಸಿಲ್ಲ. ಭಾರತವು ಕೊನೆಯ ಬಾರಿಗೆ 1996 ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿತ್ತು. ರೀಟಾ ಫರಿಯಾ ಮೂಲಕ ಭಾರತವು ಆಗಿನ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದುಕೊಂಡಿತು ರೀಟಾ ಫರಿಯಾ (1966), ಐಶ್ವರ್ಯಾ ರೈ (1994), ಡಯಾನಾ ಹೇಡನ್ (1997), ಯುಕ್ತಾ ಮುಖಿ (1999), ಪ್ರಿಯಾಂಕಾ ಚೋಪ್ರಾ (2000), ಪಾರ್ವತಿ ಓಮನಕುಟ್ಟನ್ (2008) ಮತ್ತು ಮಾನುಷಿ ಚಿಲ್ಲರ್ (2017) ಭಾರತಕ್ಕೆ ವಿಶ್ವ ಸುಂದರಿ ಪ್ರಶಸ್ತಿಯನ್ನು ತಂದಿದ್ದಾರೆ. ತಿಂಗಳ ಕಾಲ ನಡೆಯುವ ಸ್ಪರ್ಧೆಯಲ್ಲಿ 130 ದೇಶಗಳ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅನೇಕ ಸ್ಪರ್ಧೆಗಳು ಸ್ಪರ್ಧಿಗಳಿಗಾಗಿ ಕಾಯುತ್ತಿವೆ. ವಿಶ್ವ ಸುಂದರಿ ಸಂಸ್ಥೆಗೆ ಸಮಾನವಾದ ಮೌಲ್ಯಗಳನ್ನು ಹೊಂದಿರುವ ಈ ಸುಂದರ ದೇಶದಲ್ಲಿ ವಿಶ್ವ ಸುಂದರಿ ಕಿರೀಟವನ್ನು ಹಸ್ತಾಂತರಿಸಲು ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಪ್ರಸ್ತುತ ವಿಶ್ವ…
ದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ಎಚ್ಚರಿಸಿದೆ. ಟೈಫಾಯಿಡ್, ಮಲೇರಿಯಾ, ಡೆಂಗ್ಯೂ ಜ್ವರ, ಸ್ಕ್ರಬ್ ಟೈಫಸ್ ಮತ್ತು ಹೆಪಟೈಟಿಸ್ ಎ ವಿರುದ್ಧ ಎನ್‌ಸಿಡಿಸಿ ಎಚ್ಚರಿಕೆ ನೀಡಿದೆ. ಎನ್‌ಸಿಡಿಸಿ ಅಧಿಕಾರಿಗಳ ಪ್ರಕಾರ, ಈ ತಿಂಗಳು ಈ ನಿಟ್ಟಿನಲ್ಲಿ 209 ಎಚ್ಚರಿಕೆಗಳನ್ನು ನೀಡಲಾಗಿದೆ ಮತ್ತು ಈ ರೋಗಗಳು 90 ಸ್ಥಳಗಳಲ್ಲಿ ಪ್ರಾದೇಶಿಕ ಸಾಂಕ್ರಾಮಿಕ ರೋಗಗಳಾಗಿವೆ. ಮುಂದಿನ ದಿನಗಳಲ್ಲಿ ರೋಗಗಳು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಎನ್‌ಸಿಡಿಸಿ ಎಲ್ಲಾ ರಾಜ್ಯಗಳನ್ನು ಕೇಳಿದೆ. ಈ ಎಚ್ಚರಿಕೆಗಳು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂನ ಭಾಗವಾಗಿದೆ. ಟೈಫಾಯಿಡ್, ಮಲೇರಿಯಾ, ಹೆಪಟೈಟಿಸ್ ಎ, ಸ್ಕ್ರಬ್ ಟೈಫಸ್ ಮತ್ತು ಡೆಂಗ್ಯೂ ಜ್ವರ ಈ ಐದು ರೋಗಗಳ ಎಚ್ಚರಿಕೆ ನೀಡಲಾಗಿದೆ. ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾದಿಂದ ಟೈಫಾಯಿಡ್ ಉಂಟಾಗುತ್ತದೆ. ಟೈಫಾಯಿಡ್ ಅನ್ನು ಎಂಟರ್ಟಿಕ್ ಜ್ವರ ಎಂದೂ ಕರೆಯುತ್ತಾರೆ. ಈ ಬ್ಯಾಕ್ಟೀರಿಯಾವು ಆಹಾರ ಮತ್ತು ನೀರಿನ ಮೂಲಕ ಮಾನವ ದೇಹವನ್ನು ಪ್ರವೇಶಿಸುತ್ತದೆ. ಟೈಫಾಯಿಡ್ ನ ಲಕ್ಷಣಗಳು ಅಧಿಕ-ದರ್ಜೆಯ ಜ್ವರ,…
ರಾಜ್ಯದ ವಿವಿಧ ಜಿಲ್ಲೆಗಳಿಗೆ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದ್ದು, ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈ ರೀತಿಯಾಗಿದೆ. ಡಿ.ಕೆ.ಶಿವಕುಮಾರ್: ಬೆಂಗಳೂರು ನಗರ ಡಾ.ಜಿ.ಪರಮೇಶ್ವರ್: ತುಮಕೂರು ಎಚ್.ಕೆ.ಪಾಟೀಲ: ಗದಗ ಕೆ.ಹೆಚ್.ಮುನಿಯಪ್ಪ: ಬೆಂಗಳೂರು ಗ್ರಾಮಾಂತರ ರಾಮಲಿಂಗರೆಡ್ಡಿ: ರಾಮನಗರ ಕೆ.ಜೆ.ಜಾರ್ಜ್: ಚಿಕ್ಕಮಗಳೂರು ಎಂ.ಬಿ.ಪಾಟೀಲ: ವಿಜಯಪುರ ದಿನೇಶ್ ಗುಂಡೂರಾವ್: ದಕ್ಷಿಣ ಕನ್ನಡ ಹೆಚ್.ಸಿ.ಮಹಾದೇವಪ್ಪ: ಮೈಸೂರು ಸತೀಶ್ ಜಾರಕಿಹೊಳಿ: ಬೆಳಗಾವಿ ಪ್ರಿಯಾಂಕ್ ಖರ್ಗೆ: ಕಲಬುರಗಿ ಶಿವಾನಂದ ಪಾಟೀಲ: ಹಾವೇರಿ ಬಿ.ಝೆಡ್.ಜಮೀರ್ ಅಹ್ಮದ್ ಖಾನ್: ವಿಜಯನಗರ ಶರಣ ಬಸಪ್ಪ ದರ್ಶನಾಪುರ್: ಯಾದಗಿರಿ ಈಶ್ವರ್ ಬಿ. ಖಂಡ್ರೆ: ಬೀದರ್ ಎನ್.ಚಲುವರಾಯಸ್ವಾಮಿ: ಮಂಡ್ಯ ಎಸ್.ಎಸ್.ಮಲ್ಲಿಕಾರ್ಜುನ: ದಾವಣಗೆರೆ ಸಂತೋಷ ಎಸ್.ಲಾಡ್: ಧಾರವಾಡ ಡಾ.ಶರಣ ಪ್ರಕಾಶ್ ಪಾಟೀಲ್: ರಾಯಚೂರು ಆರ್.ಬಿ.ತಿಮ್ಮಾಪೂರ: ಬಾಗಲಕೋಟೆ ಕೆ.ವೆಂಕಟೇಶ್: ಚಾಮರಾಜನಗರ ತಂಗಡಗಿ ಶಿವರಾಜ್ ಸಂಗಪ್ಪ: ಕೊಪ್ಪಳ ಡಿ.ಸುಧಾಕರ್: ಚಿತ್ರದುರ್ಗ ಬಿ.ನಾಗೇಂದ್ರ: ಬಳ್ಳಾರಿ ಕೆ.ಎನ್.ರಾಜಣ್ಣ: ಹಾಸನ ಬಿ.ಎಸ್.ಸುರೇಶ್: ಕೋಲಾರ ಲಕ್ಷ್ಮೀ ಹೆಬ್ಬಾಳ್ಕರ್: ಉಡುಪಿ ಮಂಕಾಳ್ ವೈದ್ಯ: ಉತ್ತರ ಕನ್ನಡ ಮಧುಬಂಗಾರಪ್ಪ: ಶಿವಮೊಗ್ಗ ಡಾ.ಎಂ.ಸಿ.ಸುಧಾಕರ್: ಚಿಕ್ಕಬಳ್ಳಾಪುರ ಎನ್.ಎಸ್.ಭೋಸರಾಜು: ಕೊಡಗು…