Author: admin

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಇಂದಿನ ಸರಕಾರದಲ್ಲಿ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್‌ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್‌ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಇನ್ನೂ ಇವರಷ್ಟೇ ಅಲ್ಲದೆ ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್ ಅವರನ್ನು, ಕಾರವಾರದ ಕರ್ನಾಟಕ ಮರಿಟೈಮ್ ಬೋರ್ಡ್ ಸಿಇಓ ಆಗಿ ನೇಮಿಸಿದೆ. ಐಎಎಸ್ ಅಧಿಕಾರಿ ಡಾ.ರಿಚರ್ಜ್ ವಿನ್ಸೆಂಟ್ ಡಿಸೋಜಾ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಹುದ್ದೆಯ ಜೊತೆಗೆ, ಹೆಚ್ಚುವರಿಯಾಗಿ ಗೌರ್ನಮೆಂಟ್ ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಸ್ಟಿಕ್ಸ್ ವಿಭಾಗದ ಕಾರ್ಯದರ್ಶಿಯ ಹೊಣೆಗಾರಿಕೆಯನ್ನು ವಹಿಸಿ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಲಾ ವಾಂಗ್ಮಯಿ ವಿವಾಹವಾಗಿದ್ದಾರೆ. ಬೆಂಗಳೂರಿನ ಹೊಟೇಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯಲ್ಲಿ ಅಧಿಕಾರಿ ಪ್ರತೀಕ್ ದೋಷಿ ಎಂಬಾತನೇ ವರ. ಸಾಂಪ್ರದಾಯಿಕ ಹಿಂದೂ ವಿವಾಹದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಡುಪಿ ಆತಮಾರು ಮಠದ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ವಾಂಗ್‌ಮೈ ಮಿಂಟ್ ಲಾಂಚ್‌ನ ಪುಸ್ತಕಗಳು ಮತ್ತು ಸಂಸ್ಕೃತಿ ವಿಭಾಗಕ್ಕೆ ವೈಶಿಷ್ಟ್ಯ ಬರಹಗಾರರಾಗಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್‌ನಲ್ಲಿ ಪದವಿ ಪಡೆದಿರುವ ವಾಂಗ್ಮಯಿ ಮಿಡಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರತೀಕ್ ಅವರು 2014 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಕೆಲಸ ಮಾಡುತ್ತಿದ್ದಾರೆ. ದೋಷಿ ಅವರು ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ. ಅವರು 2014 ರಲ್ಲಿ ಪಿಎಂಒ ಕಚೇರಿಯನ್ನು ತಲುಪಿದರು. ಜೂನ್ 2019 ರಲ್ಲಿ, ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾದಾಗ, ಅವರನ್ನು ಜಂಟಿ ಕಾರ್ಯದರ್ಶಿ ಶ್ರೇಣಿಯಲ್ಲಿ…

Read More

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್ ಜಿಕೆವಿಕೆಯ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬೀಜ ದಿನ – 2023’ ಉದ್ಘಾಟಿಸಿ ಮಾತನಾಡಿದ ಅವರು ಬಿತ್ತನೆ ಬೀಜಗಳನ್ನು ಉತ್ಪಾದಿಸುವತ್ತ ಹೆಚ್ಚಿನ ನಿಗಾ ವಹಿಸುವಂತೆ ಕೃಷಿ ಸಚಿವ ಎನ್. ಚಲುವರಾಯ ಸೂಚಿಸಿದ್ದಾರೆ. ಹೆಚ್ಚು ಇಳುವರಿ ನೀಡುವ ಹಾಗೂ ಹೊಸ ತಳಿಗಳನ್ನು ಸಂಶೋಧಿಸಿ ರೈತರಿಗೆ ತಲುಪಿಸಬೇಕು. ಹೊಸ ತಾಂತ್ರಿಕತೆಯನ್ನು ರೈತಾಪಿ ವರ್ಗಕ್ಕೆ ವರ್ಗಾಯಿಸಬೇಕು. ರೈತರು ಹೆಚ್ಚು ಶ್ರಮವಹಿಸಿ ದುಡಿಯುತ್ತಿದ್ದರೂ, ದೇಶದಲ್ಲಿ ಸ್ವಲ್ಪಮಟ್ಟಿಗೆ ಆಹಾರ ಕೊರತೆ ಉಂಟಾಗುವ ಲಕ್ಷಣ ಗೋಚರಿಸುತ್ತಿದೆ. ಇದಕ್ಕೆ ಆಸ್ಪದ ನೀಡದಿರಲು ಕೃಷಿ ವಿಜ್ಞಾನಿಗಳು ಹಾಗೂ ವಿಶ್ವವಿದ್ಯಾಲಯಗಳು ರೈತರ ಬೆನ್ನೆಲುಬಾಗಿ ಸದಾ ಇರಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ. ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಯಾಗಿ ಆರ್ಥಿಕ ನಷ್ಟವನ್ನು ರೈತರು ಒಳಗಾಗುತ್ತಿದ್ದಾರೆ.ಉತ್ತಮ ಬೆಳೆಗೆ ಮಾರುಕಟ್ಟೆ ದರ ಸಿಗುವುದಿಲ್ಲ ಎಂಬ ಆಕ್ಷೇಪವೂ ಇದೆ. ಇದನ್ನು ಮನಗಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿ ನಿಲ್ಲಲು ಕಟಿಬದ್ಧವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಬೀಜ ಕೊರತೆ…

Read More

ವಸತಿ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಜಿಲ್ಲಾಮಟ್ಟದಲ್ಲಿ ಜನತಾ ದರ್ಶನ ಆರಂಭಿಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ ಗುರುವಾರ ಮಾತನಾಡಿದ ಅವರು, ‘ಮೊದಲ ಜನತಾ ದರ್ಶನ ಆಗಸ್ಟ್ 1ರಂದು ನಡೆಯಲಿದೆ. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಎರಡು ದಿನ ಜನತಾ ದರ್ಶನ ನಡೆಸಲಿದ್ದೇನೆ. ಜಿಲ್ಲೆ ವ್ಯಾಪ್ತಿಯ ಎರಡೂ ಇಲಾಖೆಗಳ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ’ ಎಂದು ಮಾಹಿತಿ ನೀಡಿದರು. ಆಗಸ್ಟ್ ಒಳಗೆ ಎರಡೂ ಇಲಾಖೆಗಳಲ್ಲಿ ಸಮಸ್ಯೆ ಇದ್ದರೆ ಪರಿಹರಿಸಿಕೊಳ್ಳಲು ಅಧಿಕಾರಿಗಳಿಗೆ ಗಡುವು ನೀಡಿದ್ದೇನೆ.ಜನತಾ ದರ್ಶನ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಕಂಡು ಬಂದರೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ತಪ್ಪು ನಡೆದಿದ್ದರೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು. ಬೆಂಗಳೂರಿನ 25 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ ಘೋಷಿಸಿರುವ 154 ಕೊಳೆಗೇರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಒಂದು ತಿಂಗಳಲ್ಲಿ ಪ್ರಾರಂಭಿಸಬೇಕು ಎಂದು ಸೂಚಿಸಿದರು.7500 ಕೋಟಿ ಅನುದಾನಕ್ಕೆ…

Read More

ಕಲುಷಿತ ನೀರು ಕುಡಿದು ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರಿನ ಮಹಾವೀರ್ ರ್ಯಾನ್ಸನ್ ಅಪಾರ್ಟ್‌ಮೆಂಟ್‌ನಲ್ಲಿ ಇಂದು(ಗುರುವಾರ) ನಡೆದಿದೆ.ಒಂದೇ ಅಪಾರ್ಟ್‌ಮೆಂಟ್‌ನ ಮೂವತ್ತುಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಅಂತ ತಿಳಿದು ಬಂದಿದೆ. ಕಲುಷಿತ ನೀರು ಕುಡಿದ ಪರಿಣಾಮ ಮಕ್ಕಳಲ್ಲಿ ವಾಂತಿ ಭೇದಿ ಹಾಗೂ ಜ್ವರ ಕಾಣಿಸಿಕೊಳ್ಳುತ್ತಿದೆ.ಹೀಗಾಗಿ ನಾಲ್ವರು ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಅಪಾರ್ಟ್‌ಮೆಂಟ್ ಬಿಲ್ಡರ್ಸ್ ವಿರುದ್ಧ ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಪರಪ್ಪನ ಆಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಲುಷಿತ ನೀರು ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಲುಷಿತ ನೀರು ಕುಡಿದು ಮಕ್ಕಳು ಅಸ್ವಸ್ಥರಾಗಿದ್ದರಿಂದ ಅಪಾರ್ಟ್‌ಮೆಂಟ್‌ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಬೆಳ್ಳಂದೂರು ಬಳಿಯ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎರಡು ಮಕ್ಕಳಿಗೆ ಸಿಂಗಸಂದ್ರ ಪ್ರಾಥಮಿಕ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ ಕಳುಹಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ನಟಿ ಶ್ರುತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಮೀಟೂ ಕೇಸ್ ಸಂಬಂಧ ಜನವರಿ 2022ರಂದು ಕಬ್ಬನ್ ಪಾರ್ಕ್ ಪೊಲೀಸರು ಸೂಕ್ತ ಸಾಕ್ಷಿಗಳಿಲ್ಲ ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಈ ರಿಪೋರ್ಟ್ ವಿರುದ್ಧ ಶ್ರುತಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಶ್ರುತಿ ಹರಿಹರನ್ ಅವರಿಗೆ ವಿಸ್ಮಯ ಚಿತ್ರದ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮೀಟೂ ವೇದಿಕೆಯಲ್ಲಿ ಅವರು ಹೇಳಿಕೊಂಡಿದ್ದರು. ಶ್ರುತಿ ಅವರ ಮಾಡಿರುವ ಆರೋಪದ ಬಗ್ಗೆ ಕೆಲ ಸಂಘಟನೆಗಳು ಹಾಗೂ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಸಾಕಷ್ಟು ಸಂಖ್ಯೆಯ ಹೋರಾಟಗಾರರು, ಕಲಾವಿದರು ಶ್ರುತಿ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಯ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ಘಟನೆಯ ಬಗ್ಗೆ ಸಾಕ್ಷ್ಯ ನೀಡುವಂತೆ ಶ್ರುತಿ ಹರಿಹರನ್ ಅವರಿಗೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಡಾ.ಕೆ.ಸುಧಾಕರ್ ಗೆ ನೀಡಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ’ ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್,ಬಿಜೆಪಿ ಆತ್ಮವಲೋಕನಸಭೆಯಲ್ಲಿ ಸುಧಾಕರ್ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಉಸ್ತುವಾರಿ ಸ್ಥಾನದ ಜವಾಬ್ದಾರಿಯನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ನನ್ನ,ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಅವರೇ ಕಾರಣ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಆದರೆ ಕಾಂಗ್ರೆಸ್‌ ನಲ್ಲಿರುವಾಗ ಮೂರು ಬಾರಿ ಗೆದ್ದಿದ್ದ ನಾನು ಬಿಜೆಪಿ ಸೇರಿದ ನಂತರ ಎರಡು ಬಾರಿಯೂ ಸೋಲನ್ನು ಅನುಭವಿಸಿದೆ’ ಎಂದು ಅಳಲು ತೋಡಿಕೊಂಡರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ನ ಶೇ.40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪ್ರತಿಯಾಗಿ ಬಿಜೆಪಿ ಏನೂ ಮಾಡಲಿಲ್ಲ.ನಾವು ಕೇವಲ ಸಿದ್ದರಾಮಯ್ಯರಿಗೆ ಮಾತ್ರ ಬೈದೆವು. ವಿಧಾನಸಭೆ ಚುನಾವಣೆ ವೇಳೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಸೋಲಿಗೆ ಪ್ರಮುಖ ಕಾರಣ. ಆದರೆ, ಇದೇ ವೇಳೆ ಕಾಂಗ್ರೆಸ್ ಪಕ್ಷದ 10…

Read More

ಕೇಂದ್ರ ಸರ್ಕಾರ ದೇಶದಲ್ಲಿ 50 ಹೊಸ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರವು ತೆಲಂಗಾಣಕ್ಕೆ ಗರಿಷ್ಠ ಸಂಖ್ಯೆಯ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ.ಕೇರಳ ರಾಜ್ಯಕ್ಕೆ 12 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ತಮಿಳುನಾಡು ಮತ್ತು ಕರ್ನಾಟಕಕ್ಕೆ ತಲಾ ಮೂರು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದ್ದರೂ ಕೇರಳಕ್ಕೆ ಒಂದನ್ನೂ ನೀಡಿಲ್ಲ. ಸದ್ಯ ಮಂಜೂರಾದ ಕಾಲೇಜುಗಳಲ್ಲಿ 30 ಸರ್ಕಾರಿ ಕಾಲೇಜುಗಳು ಹಾಗೂ 20 ಖಾಸಗಿ ಕಾಲೇಜುಗಳು. ಆಂಧ್ರಪ್ರದೇಶದಲ್ಲಿ ಐದು, ಅಸ್ಸಾಂ ಮತ್ತು ಗುಜರಾತ್‌ನಲ್ಲಿ ಮೂರು, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಎರಡು, ಮಹಾರಾಷ್ಟ್ರದಲ್ಲಿ ನಾಲ್ಕು, ಮಧ್ಯಪ್ರದೇಶದಲ್ಲಿ ಒಂದು, ನಾಗಾಲ್ಯಾಂಡ್‌ನಲ್ಲಿ 1, ಒಡಿಶಾದಲ್ಲಿ ಎರಡು, ರಾಜಸ್ಥಾನದಲ್ಲಿ ಐದು, ಬಂಗಾಳದಲ್ಲಿ ಎರಡು ಮತ್ತು ಯುಪಿಯಲ್ಲಿ ಒಂದು.ಅದೇ ಸಮಯದಲ್ಲಿ, ಕೇರಳ ಸರ್ಕಾರವು ವಯನಾಡಿನಲ್ಲಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಕೇಂದ್ರಕ್ಕೆ ಅಧಿಕೃತವಾಗಿ ಮನವಿ ಮಾಡಿತು. ಈ ಬೇಡಿಕೆಯೂ ಹೆಚ್ಚುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಗರ್ಭಪಾತಕ್ಕೆ ಅನುಮತಿ ಕೋರಿ 17 ವರ್ಷದ ಬಾಲಕಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವಾಗ ಮನುಸ್ಮೃತಿಯನ್ನು ಓದಲು ಗುಜರಾತ್ ಹೈಕೋರ್ಟ್ ಸಲಹೆ ನೀಡಿದೆ. ಹೆಣ್ಣುಮಕ್ಕಳು 14-15ನೇ ವಯಸ್ಸಿನಲ್ಲಿ ಮದುವೆಯಾಗುವುದು ಮತ್ತು 17ನೇ ವಯಸ್ಸಿನಲ್ಲಿ ಹೆರಿಗೆಯಾಗುವುದು ಸಹಜ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. 17ನೇ ವಯಸ್ಸಿನಲ್ಲಿ ಗರ್ಭಿಣಿಯಾಗುವುದು ಈ ಹಿಂದೆ ಬಹಳ ಸಹಜ ಸಂಗತಿಯಾಗಿದ್ದು, ಮನುಸ್ಮೃತಿ ಓದಿಲ್ಲದಿದ್ದರೆ ಓದಿ ಎಂದು ಕೋರ್ಟ್ ಸಲಹೆ ನೀಡಿದೆ. ಅತ್ಯಾಚಾರಕ್ಕೊಳಗಾದ ಏಳು ತಿಂಗಳ ಗರ್ಭಿಣಿಯಾಗಿರುವ 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಬಾಲಕಿಯ ಪರವಾಗಿ ಹಾಜರಾದ ಸಿಕಂದರ್ ಸೈದ್, ಹೆರಿಗೆಯ ದಿನಾಂಕ ಆಗಸ್ಟ್ 18 ಆಗಿರುವುದರಿಂದ ಈ ವಿಷಯವನ್ನು ಶೀಘ್ರವಾಗಿ ನಿರ್ಧರಿಸುವಂತೆ ನ್ಯಾಯಾಲಯವನ್ನು ಕೋರಿದರು. ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ಜೆ ದವೆ ಅವರು 17ನೇ ವಯಸ್ಸಿನಲ್ಲಿ ಗರ್ಭಿಣಿಯಾಗುವುದು ಸಹಜ. ಹುಡುಗಿಯರು ಹುಡುಗರಿಗಿಂತ ಮೊದಲು ಪ್ರಬುದ್ಧತೆಯನ್ನು ಪಡೆಯುತ್ತಾರೆ ಎಂದು ನ್ಯಾಯಾಲಯ ಹೇಳಿದೆ. ಬಾಲಕಿಯನ್ನು ಪರೀಕ್ಷಿಸಿ ವರದಿ ಸಲ್ಲಿಸುವಂತೆ ರಾಜ್‌ಕೋಟ್‌ನ ವೈದ್ಯಕೀಯ ಅಧೀಕ್ಷಕರಿಗೆ ನ್ಯಾಯಾಲಯ ಸೂಚಿಸಿದೆ.ಹೆಣ್ಣು ಮತ್ತು…

Read More