Subscribe to Updates
Get the latest creative news from FooBar about art, design and business.
- ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
- ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
- ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಡಾ.ಜ್ಯೋತ್ಸ್ನಾ ರೆಡ್ಡಿ
- ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
- ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
- ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
- ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
- ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
Author: admin
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ವಿಚಾರ, ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ ಎಂದು ವಿಧಾನಸೌಧದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್ ವುಡ್ ನಟರು ಬರಲಿ ಎಂದರು.
ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು. ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು.
ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ವಿಷ್ಣು (24) ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ. ಬಾಗಲಗುಂಟೆ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶೆ ರೂಪಾ ಕೆ.ಎನ್ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದಿಸಿದ್ದರು.
ದೂರವಾಗಿದ್ದ ಪತ್ನಿ ವಾಪಸ್ ಬಾರದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿ ಪತಿಯೊಂದಿಗೆ ಜಗಳ ಮಾಡಿಕೊಂಡು ಮಹಿಳೆ ತವರು ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪತಿಯ ಅತಿಯಾದ ಕುಡಿತದಿಂದ ಮನನೊಂದ ಮಹಿಳೆ ತನ್ನ ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿ ತೊರೆದ ಬಳಿಕ ರಾಜೇಶ್ ಮಕ್ಕಳೊಂದಿಗೆ ವಾಸವಾಗಿದ್ದ. ಪತ್ನಿಯನ್ನು ಮನೆಗೆ ಕರೆತರಲು ಪತಿ ಎಷ್ಟು ಸಾಧ್ಯವೋ ಅಷ್ಟು ಸಮಾಧಾನ ಮಾಡಿದರೂ ಪತ್ನಿ ಮಣಿಯದ ಕಾರಣದ ಪತಿ ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲವು ತಿಳಿಸಿದೆ.
ಮೆಟಾ ಅವರ ಇತ್ತೀಚಿನ ವೈಶಿಷ್ಟ್ಯವಾದ ವಾಟ್ಸಾಪ್ ಚಾನೆಲ್ ನಲ್ಲಿ 17 ಲಕ್ಷ ಅನುಯಾಯಿಗಳೊಂದಿಗೆ ಮೋದಿ. ನಿಮ್ಮ ಅನುಯಾಯಿಗಳೊಂದಿಗೆ ಪಠ್ಯ, ಚಿತ್ರಗಳು, ವೀಡಿಯೊಗಳು, ಸ್ಟಿಕ್ಕರ್ ಗಳು ಮತ್ತು ಹೆಚ್ಚಿನದನ್ನು ಹಂಚಿಕೊಳ್ಳಬಹುದಾದ ಅಂತಹ ಚಾನಲ್ ಗಳನ್ನು ಪ್ರಾರಂಭಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲಿಗರು. ಮೊದಲ 24 ಗಂಟೆಗಳಲ್ಲಿ 1 ಮಿಲಿಯನ್ ಜನರು ವಾಟ್ಸಾಪ್ ನಲ್ಲಿ ಮೋದಿಯನ್ನು ಫಾಲೋ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ವಾಟ್ಸಾಪ್ ಚಾನೆಲ್ ಗಳನ್ನು ಆರಂಭಿಸಿದ್ದಾರೆ. ಪ್ರಸ್ತುತ 51 ಲಕ್ಷ ಜನರು ಭಾರತೀಯ ಕ್ರಿಕೆಟ್ ತಂಡವನ್ನು ತಮ್ಮ ವಾಟ್ಸಾಪ್ ಚಾನೆಲ್ ನಲ್ಲಿ ಅನುಸರಿಸುತ್ತಿದ್ದಾರೆ. ಅದೇ ರೀತಿ ಅಕ್ಷಯ್ ಕುಮಾರ್ 41 ಲಕ್ಷ ಹಾಗೂ ಕತ್ರಿನಾ ಕೈಫ್ 84 ಲಕ್ಷ ಅಭಿಮಾನಿಗಳನ್ನು ಹೊಂದಿದ್ದಾರೆ. ಮಲಯಾಳಂನಲ್ಲಿ ಮೋಹನ್ ಲಾಲ್, ಮಮ್ಮುಟ್ಟಿ ಮುಂತಾದ ಅನೇಕ ಸೆಲೆಬ್ರಿಟಿಗಳು ವಾಟ್ಸಾಪ್ ಚಾನೆಲ್ ಗಳನ್ನು ಪ್ರಾರಂಭಿಸಿದ್ದಾರೆ. WhatsApp ಚಾನಲ್ ಗೆ ಸೇರಲು WhatsApp ಗೆ ಹೋಗಿ ಮತ್ತು ‘ಅಪ್ ಡೇಟ್ ಗಳು’ ಟ್ಯಾಬ್ ಗೆ ನ್ಯಾವಿಗೇಟ್ ಮಾಡಿ. ಪರದೆಯ ಕೆಳಭಾಗದಲ್ಲಿರುವ…
ಎರಡು ವರ್ಷದ ಬಾಲಕನನ್ನು ಕೊಂದು ಶವವನ್ನು ಸ್ಪೀಕರ್ ಬಾಕ್ಸ್ ನಲ್ಲಿ ಬಚ್ಚಿಟ್ಟ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಪೊಲೀಸರು ಬಾಲಕನ ಚಿಕ್ಕಪ್ಪನನ್ನು ಬಂಧಿಸಿದ್ದಾರೆ. ಸಹೋದರನ ಜತೆಗಿನ ಆಸ್ತಿ ವಿವಾದವೇ ಕೊಲೆಗೆ ಕಾರಣ. ಕಳೆದ 17ರಿಂದ ಮಗು ನಾಪತ್ತೆಯಾಗಿತ್ತು. ಜಿಲ್ಲೆಯ ತಿರುಪ್ಪಲಪಂಥಾಲ್ ಗ್ರಾಮದ ಮಾರಿಯಮ್ಮನ್ ಕೋವಿಲ್ ಬೀದಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಾಗಿದ್ದ ಗುರುಮೂರ್ತಿ ಮತ್ತು ಅವರ ಪತ್ನಿ ಜಗತೀಶ್ವರಿ ದಂಪತಿಯ ಎರಡು ವರ್ಷದ ಮಗ ಮೃತಪಟ್ಟಿದ್ದಾನೆ. 17ರಂದು ಮಗು ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿತ್ತು. ರಾತ್ರಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪ್ಪಲಪಂಟಾಲ್ ಪೊಲೀಸರು ನಾಲ್ಕು ದಿನಗಳ ಕಾಲ ತನಿಖೆ ನಡೆಸುತ್ತಿದ್ದರು. ಇದೇ ವೇಳೆ ನಿನ್ನೆ ಗುರುಮೂರ್ತಿ ಅವರ ಮನೆಯಲ್ಲಿದ್ದ ಸ್ಪೀಕರ್ ಬಾಕ್ಸ್ ಒಂದರಿಂದ ದುರ್ವಾಸನೆ ಬರಲಾರಂಭಿಸಿದೆ. ಅನುಮಾನಗೊಂಡ ಕುಟುಂಬಸ್ಥರು ಸ್ಪೀಕರ್ ಬಾಕ್ಸ್ ತೆರೆದು ನೋಡಿದಾಗ ನಾಪತ್ತೆಯಾಗಿದ್ದ ಎರಡು ವರ್ಷದ ತಿರುಮೂರ್ತಿ ಶವ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಮಗುವಿನ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…
ಹುಬ್ಬಳ್ಳಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ರಾಜ್ಯದ ರೈತರನ್ನು ಬಲಿಕೊಟ್ಟು ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ‘ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಸರ್ಜನೆ ಮಾಡಬೇಕು. ನಮಗೆ ಕುಡಿಯೋಕೆ ನೀರಿಲ್ಲ. ಆದ್ರೆ, ಕಾಂಗ್ರೆಸ್ ಸರ್ಕಾರ ನೀರು ಬಿಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯನ್ನು ಕಾಂಗ್ರೆಸ್ ತಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.
ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪಿಗೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಂಡಿದೆ. ಬೆಂಗಳೂರು ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಡಿಸಿಪಿಗಳಿಗೆ ನಗರ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಪಶ್ಚಿಮ, ಪೂರ್ವ, ಉತ್ತರ, ದಕ್ಷಿಣ ವಲಯ ಹಾಗೂ ವೈಟ್ ಫೀಲ್ಡ್ ಸೇರಿ ಎಲ್ಲೆಡೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.
ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್ (12) ಮೃತ ದುರ್ದೈವಿ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದ ಕೌಶಿಕ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ.
ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ರಾಘವೇಂದ್ರ (21) ಮೃತಪಟ್ಟಿದ್ದು, ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ‘ಕೊಪ್ಪಳದ ರಾಘವೇಂದ್ರ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಹೋಟೆಲೊಂದರಲ್ಲಿ ಸಹಾಯಕ ಕೆಲಸಕ್ಕೆ ಸೇರಿದ್ದರು. ಸ್ನೇಹಿತರ ಜೊತೆ ಕೊಠಡಿಯಲ್ಲಿ ವಾಸವಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ‘ಸೆ. 17ರಂದು ರಾಘವೇಂದ್ರ, ಇಬ್ಬರು ಸ್ನೇಹಿತರ ಜೊತೆ ಕೊಠಡಿಯತ್ತ ನಡೆದುಕೊಂಡು ಹೊರಟಿದ್ದರು. ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದರು. ಆಗ ಕಾರು ಡಿಕ್ಕಿಯಾಗಿ ದಾರುಣ ಸಾವನ್ನಪ್ಪಿದ್ದಾರೆ.