Author: admin

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವಕನ ವಿರುದ್ಧ ಸುಳ್ಳು ಲೈಂಗಿಕ ಆರೋಪಗಳನ್ನು ಮಾಡಿ ಹಣ ಸುಲಿಗೆ ಮಾಡಿದ ದೂರಿನ ಮೇಲೆ ಐಟಿ ಉದ್ಯೋಗಿಯೊಬ್ಬರನ್ನು ಬಂಧಿಸಲಾಗಿದೆ. ಬಿಹಾರದ ಗುರ್‌ಗಾಂವ್‌ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಿಹಾರ ಮೂಲದ ಬಿನೀತಾ ಕುಮಾರಿ (30) ಮತ್ತು ಆಕೆಯ ಸ್ನೇಹಿತ ಹರಿಯಾಣ ಮೂಲದ ಮಹೇಶ್ ಫೋಗಟ್ ಅವರನ್ನು ಬಂಧಿಸಲಾಗಿದೆ. ಬಿನೀತಾ ಕುಮಾರಿ ನಗರದ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿ. ಮಹೇಶ್ ಎನ್ ಜಿಒ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಡೇಟಿಂಗ್ ಆಪ್ ಮೂಲಕ ಇವರಿಬ್ಬರು ಭೇಟಿಯಾಗಿದ್ದರು. ನಂತರ ದೂರುದಾರ ಯುವಕನಿಗೆ ಮೋಸ ಮಾಡಲು ನಿರ್ಧರಿಸಿದ್ದಾರೆ. ಮೇ 28ರಂದು ಯುವತಿಯು ಯುವಕನನ್ನು ನಗರದ ಹೋಟೆಲ್‌ಗೆ ಕರೆಸಿಕೊಂಡು ಬಿಯರ್ ನೀಡಿ ಬಳಿಕ ಬಲವಂತವಾಗಿ ಕುಡಿಸಿದ್ದಾಳೆ. ಅನುಮಾನಗೊಂಡ ಯುವಕ ಬಿಯರ್ ನಿರಾಕರಿಸಿ ಅಲ್ಲಿಂದ ವಾಪಸಾಗಿದ್ದಾನೆ. ನಂತರ ಬಿನೀತಾ ಯುವಕನಿಗೆ ದೂರವಾಣಿ ಕರೆ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ 5 ಲಕ್ಷ ನೀಡಿದರೆ…

Read More

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಜ್ಯೋತಿ: ಗೃಹ…

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ 2000 ರೂ ಮಾಸಿಕ ಧನ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಿಪಿಎಲ್ ಕಾರ್ಡ್ ಇಲ್ಲದ ಮಹಿಳೆಯರಿಗೂ ಯೋಜನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಮಾತನಾಡಿದ ಸಚಿವರು, ಆನ್ ಲೈನ್ ಹಾಗೂ ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ವೋಟರ್ ಐಡಿ ಸಂಖ್ಯೆ ಬೇಡ ಎಂದು ಸಿಎಂ ಹೇಳಿದ್ದಾರೆ ಎಂದರು. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿದಾರರಾದರೂ ಆ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುವುದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಲಸಿಕೆ ಹಾಕಿದ ಒಂದು ಗಂಟೆಯೊಳಗೆ ಮಗು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ  ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿ ಮೂಲದ ಮಧು ಮತ್ತು ಶೃತಿ ದಂಪತಿಯ ಮಗು ಮೃತಪಟ್ಟ ಮಗುವಾಗಿದೆ. ಚುಚ್ಚು ಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ. ಘಟನೆ ಹಿನ್ನೆಲೆಯಲ್ಲಿ  ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಸಂಭವಿಸಿದೆ ಎಂದು ಆರೋಪಿಸಿ ಮಗುವಿನ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಈ ಬಗ್ಗೆ  ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವೈದ್ಯರ ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಡಾ.ಮಧು, ಸಿಬ್ಬಂದಿಗಳಾದ ಸಾನಿಯಾ, ಮಮತಾ, ಶೋಭಾ, ಲಕ್ಷ್ಮೀದೇವಿ, ಚಂದ್ರಪ್ರಭಾ ವಿರುದ್ಧ ಹುಳಿಯಾರು ಪೊಲೀಸ್  ಠಾಣೆಯಲ್ಲಿ ದೂರು…

Read More

ತುಮಕೂರು: ಕೆಲವರು ನನ್ನ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತಿನೋ ಇಲ್ಲವೋ ಇನ್ನು ತೀರ್ಮಾನ ಮಾಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದರು. ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆಯುತ್ತೇನೆ. ನನ್ನ ಗುರಿ ಇರೋದು ನಿಮ್ಮಗಳ ಸೇವೆ ಮಾಡೋದು. ಕುಣಿಗಲ್ ತಾಲೂಕನ್ನ ಒಂದು ಮಾದರಿ ತಾಲೂಕನ್ನಾಗಿ ಮಾಡಬೇಕೆನ್ನುವಂಥದ್ದು ನನ್ನ ಆಶಯ ಎಂದರು. ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರು ಸಮವಹಿಸಿದರೆ ಮಾತ್ರ ಸಾಧ್ಯವಿದೆ ಶೇಕಡ 95 ರಷ್ಟು ಯೋಜನೆಗಳು ಗ್ರಾಮ ಪಂಚಾಯಿತಿ ಸದಸ್ಯರ ಇಚ್ಛಾಶಕ್ತಿಯಿಂದ ತಲುಪಲು ಸಾಧ್ಯವಿದೆ ಎಂದು ಹೇಳಿದರು. ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ಗುತ್ತಿಗೆ ವಿಷಯದಲ್ಲೂ ಅಥವಾ ಮತ್ತೆ ಯಾವುದೋ ವಿಷಯದಲ್ಲಿಯೂ ಕಿತ್ತಾಡಿಕೊಂಡಿದ್ದರೆ ಮತ್ತೊಂದೆಡೆ ಜೆಡಿಎಸ್ ಹಾಗೂ…

Read More

ಬೆಂಗಳೂರು:  ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ಎದ್ದೇಳು ಕರ್ನಾಟಕ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ…

Read More

ಬೆಂಗಳೂರು: 2022-23 ಮುಂಗಾರು ಹಂಗಾಮಿನಲ್ಲಿ ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. 2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 198488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಇದರ ಪೈಕಿ ಮೊದಲ ಹಂತದಲ್ಲಿ 1/3 ಭಾಗದಷ್ಟು, ಅಂದರೇ 74 ಕೋಟಿ ರೂಪಾಯಿ ಪರಿಹಾರ ಹಣವನ್ನು ಸಾದಿಲ್ವಾರು ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ನೆಟೆರೋಗದಿಂದ ತೊಗರಿ ಬೆಳೆಹಾನಿಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರದ ಹಣ ವಿತರಿಸಲಾಗುವುದು. ಉಳಿದ ಪರಿಹಾರದ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ…

Read More

ಬೆಂಗಳೂರು:ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್ ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಮುಂದೆ ಏನೆಲ್ಲಾ ಮಾಬೇಕು ಎನ್ನುವ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೆಳಗಾವಿ: ಬಹಳಷ್ಟು ಜನರು ಮಹಾನಗರ ಪಾಲಿಕೆ ಸಿಬ್ಬಂದಿಯ ಕಾರ್ಯ ವೈಖರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಅಧಿಕಾರಗಳ ವಿರುದ್ಧ ಆರೋಪಗಳು ಕೇಳಿ ಬಂದಿದ್ದು ಮುಂಬರುವ ದಿನಗಳಲ್ಲಿ ಸುಧಾರಿಸದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಸಲಹೆ ಸೂಚನೆ ನೀಡಿದ್ದು, ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ಆಶಯವಿದೆ. ತಕ್ಷಣ ಎಲ್ಲರನ್ನೂ ಬದಲಾವಣೆ ಮಾಡಬೇಕು ಎಂಬ ಆಸೆಯೂ ಇಲ್ಲ, ಇಚ್ಚೆಯೂ ಇಲ್ಲ. ಮೂರು ತಿಂಗಳ ಬಳಿಕ ಬಂದಾಗ ಇದೇ ಸ್ಥಿತಿ ಇದ್ದರೆ ಅಂತಹ ಅಧಿಕಾರಿಗಳನ್ನು ತಪ್ಪದೇ ವರ್ಗಾವಣೆ ಮಾಡಿಸುತ್ತೇವೆ ಎಂದು ಎಚ್ಚರಿಸಿದರು. ಬೆಳಗಾವಿ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಪೂರೈಕೆ, ಪಿಡಬ್ಲ್ಯೂಡಿ, ಹೆಸ್ಕಾಂ ಸೇರಿದಂತೆ ಹಲವು ಇಲಾಖೆಗಳ ಬಗ್ಗೆ…

Read More