Author: admin

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಭೌತಿಕ ಅರ್ಜಿ ಸಲ್ಲಿಕೆಯ ಮಾದರಿಯ ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ ಮಾಡಿದೆ. ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಅರ್ಜಿಯಲ್ಲಿ ಸರ್ಕಾರ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗೋಕಾಕ: ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್‌ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚಕ್ರವರ್ತಿ ಸೂಲಿಬೆಲೆ ಒಬ್ಬ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ, ಪ್ರಧಾನಿ ಮೋದಿ ಹೇಳದಿರುವ ಭರವಸೆಗಳನ್ನು ಇವನೇ ಹೇಳುತ್ತಾನೆ. ಸೂಲಿಬೆಲೆ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದ ಅವರು, ಸಚಿವ ಎಂ.ಬಿ.ಪಾಟೀಲ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಚಿವ ಎಂ.ಬಿ.ಪಾಟೀಲ್‌ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ ಅಷ್ಟೇ ಎಂದರು. ಇನ್ನು ಗೋವು ಹತ್ಯೆ ನಿಷೇಧದ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಆತುರದ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ.…

Read More

ಬೆಳಗಾವಿ: ಟಿಪ್ಪು ಸುಲ್ತಾನ್, ಔರಂಗಜೇಬ್ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ. ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹಿಂಸಾಚಾರ ಹಿನ್ನೆಲೆ ಕಳೆದ ರಾತ್ರಿ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ದೀಪಕ್ ಕೇಸರಕರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಸರ್ವಪಕ್ಷ ನಾಯಕರು, ವಿವಿಧ ಸಮುದಾಯಗಳ ಪ್ರಮುಖ ನಾಯಕರ ಜೊತೆ ಶಾಂತಿ ಸಭೆ ನಡೆದಿದೆ. ಸಚಿವ ದೀಪಕ್ ಕೇಸರಕರ್, ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ರು. ಹಾಗೂ ಕೊಲ್ಲಾಪುರ ಡಿಸಿ ಭಗವಾನ್ ಕಾಂಬಳೆ, ಎಸ್ಪಿ ಮಹೇಂದ್ರ ಪಂಡಿತ್ ಸೇರಿ ಹಿರಿಯ ಅಧಿಕಾರಿಗಳ ಜೊತೆಗೂ ಸಭೆ ನಡೆಸಿದರೆ. ಸದ್ಯ ಈಗ ಜೂನ್ 19ರವರೆಗೆ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಮುಂದುವರಿಕೆಗೆ ಕೊಲ್ಲಾಪುರ ಜಿಲ್ಲಾಧಿಕಾರಿ ಭಗವಾನ್ ಕಾಂಬಳೆ ಆದೇಶ ಹೊರಡಿಸಿದ್ದಾರೆ. ಇಂದು ಮಧ್ಯರಾತ್ರಿ 12…

Read More

ಚುನಾವಣೆ ವೇಳೆ ಕಾಂಗ್ರೆಸ್ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೂ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಗೃಹ ಕಚೇರಿ ಬಳಿ ಕಿಕ್ಕಿರಿದು ಸೇರಿದ್ದ ಸಾರ್ವಜನಿಕರಿಂದ ಅವರ ಸಮಸ್ಯೆ, ಬೇಡಿಕೆಗಳ ಕುರಿತು ಅಹವಾಲು ಆಲಿಸಿ, ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು. ಇನ್ನಿತರ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಲ್ಲರೊಂದಿಗೂ ನಗು ನಗುತ್ತಲೇ ಮಾತನಾಡಿ ಬಂದವರ ಕಷ್ಟ ವಿಚಾರಿಸುತ್ತಿದ್ದ ದೃಶ್ಯ ಒಬ್ಬ ಮಗಳು, ಒಬ್ಬ ಸಹೋದರಿ, ಒಬ್ಬ ತಾಯಿಯ ಜೊತೆ ಸಮಸ್ಯೆಗಳನ್ನು ಹೇಳಿಕೊಂಡ ಅನುಭವ ಸಾರ್ವಜನಿಕರಿಗೆ ಉಂಟಾಗುವಂತಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಒಬ್ಬರಿಗೆ 1 ರೂ. ಕೊಡಬೇಕಾದ್ರೆ ಅಕೌಂಟೆಬಿಲಿಟಿ ಇಟ್ಟುಕೊಳ್ಳಬೇಕು. ಬಡವರಿಗೆ ಗ್ಯಾರಂಟಿ ಯೋಜನೆ ನೀಡಬೇಕೆಂದು ತೀರ್ಮಾನಿಸಿದ್ದೆವು ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಟ್ಯಾಕ್ಸ್ ಕಟ್ಟುವವರು $2 ಸಾವಿರ ಕೊಡಿ ಎಂದು ಕೇಳುವುದಿಲ್ಲ. 2 ಸಾವಿರ ಹಣ ಬೇಡ ಎಂದು ಬಹಳ ಜನ ಪತ್ರ ಬರೆದಿದ್ದಾರೆ. ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಕೊಡ್ತೀವಿ ಎಂದಿದ್ದರು. ಮೊದಲು ಬಿಜೆಪಿಯವರು ಎಲ್ಲರ ಖಾತೆ 15 ಲಕ್ಷ ರೂ. ಹಾಕಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಬೇಡಿ ಎನ್ನಲು ಆಗುತ್ತಾ? ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಚಿಗರಿ ಬಸ್ ಫ್ರೀ ಮಾಡುವಂತೆ ಸರಕಾರಕ್ಕೆ ಒತ್ತಾಯ ಕೇಳಿ ಬಂದಿದೆ. BRTS ಸಾರಿಗೆ ವ್ಯಾಪ್ತಿಯ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ ಚಿಗರಿ ಬಸ್ ಫ್ರೀ ಬಿಡುವಂತೆ BRTS ಎಮ್ ಡಿ ಭರತ್ ಆಗ್ರಹಿಸಿದ್ದಾರೆ. ಸರ್ಕಾರ ಆದೇಶ ಹೊರಡಸಿದಂತೆ ಹವಾನಿಯಂತ್ರಿತ ಬಸ್ ನಲ್ಲಿ ಫ್ರೀ ಇಲ್ಲ. BRTS ಸಾರಿಗೆಯನ್ನು ಶಕ್ತಿ ಸ್ಕೀಮ್ ನಲ್ಲಿ ಅನುಮತಿ ನೀಡಲು  ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು BRTS ಎಮ್ ಡಿ ಭರತ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು. ಜೂನ್ 15 ರಿಂದ ನೋಂದಣಿ ಆರಂಭವಾಗಿ, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು…

Read More

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರುನಗರ ಘಟಕದ ವತಿಯಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮೂರುವರೆ ಕೋಟಿ(3.5) ಅನುದಾನ ಮೀಸಲು ಇಡಬೇಕು ಎಂದು ಮನವಿ ಸಲ್ಲಿಸಿದರು. ಬೆಂಗಳೂರುನಗರ ಘಟಕದ ಅಧ್ಯಕ್ಷರಾದ ಕೆ.ಸತ್ಯನಾರಾಯಣ್ ರವರು, ಕಾರ್ಯಾಧ್ಯಕ್ಷರಾದ ಹುಲಿ ಅಮರ್ ನಾಥ್, ಸಂಘದ ಜಕ್ರಿಯ, ಕೆ.ಲಕ್ಷ್ಮಣ ಹರೀಶ್, ನಾಗರಾಜ್ ಶೆಟ್ಟಿ, ಬಿ.ಟಿ.ಎಸ್.ಶ್ರೀನಿವಾಸ್, ವಿಜಯಕುಮಾರ್, ಡಾ.ಸಿ.ಎಸ್.ರಘು, ಬಿ.ಕೆ.ಪ್ರಸನ್ನ, ಜೆ.ಹೆಚ್.ಆನಿಲ್ ಕುಮಾರ್, ಒಂಟಿ ಚಿರತೆ ಮಹದೇವ್,ಚಂದ್ರಶೇಖರ್, ರಾಮರಾವ್, ಹರೀಶ್, ವಿಜಯಕುಮಾರ್, ಶಿವಾನಂದ್, ವೆಂಕಟೇಶ್ ಪೈ, ಬಿ.ಕೆ.ಸುಂದರೇಶ್, ಮಹೇಶ್ , ಜೆಮ್ಸ್, ರಾಕೇಶ್, ಶ್ರೀನಿವಾಸ್, ಕವಿತಾ, ವೇದ, ಲಿಂಗರಾಜು, ಸಂತೋಷ್ ಕುಮಾರ್, ಮಸೂದ್ ,ಅದಿ, ಬೊಮ್ಮೆಗೌಡರವರು ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತುಷಾರ್ ಗಿರಿನಾಥ್ ರವರು ಮಾತನಾಡಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಬೆಳಸಲು ಪ್ರತಿ ವರ್ಷ 1ಕೋಟಿ ರೂಪಾಯಿ ಜಾಹಿರಾತು ನೀಡಲಾಗುತ್ತಿದೆ. ಈ ಬಾರಿ ಪತ್ರಕರ್ತರ ಸಂಘವು ಸಲ್ಲಿಸಿದ ಮನವಿ…

Read More