Author: admin

ಕಂದಾಯ ಇಲಾಖೆ ಅಧಿಕಾರಿಗಳು ಬಡ ಕುಟುಂಬಗಳ ಸಮಸ್ಯೆಯನ್ನು ಗಾಳಿಗೆ ತೂರುತ್ತಿದ್ದಾರಾ? ಎಂಬ ಪ್ರಶ್ನೆ ಕೇಳಿ ಬಂದಿದ್ದು, ತುರುವೇಕೆರೆ  ತಾಲೂಕಿನ ದಂಡಿನ ಶಿವರ ಹೋಬಳಿಯ ಅಕ್ಕಾಳಸಂದ್ರ ಗ್ರಾಮದ ನಿವಾಸಿ,  ಶಬಾನ ಬಾನು ಎಂಬವರ ಮನೆಗೆ ಸುಮಾರು ವರ್ಷದಿಂದ ಹಾದು ಹೋಗಲು ದಾರಿ ಇದ್ದು, ಕೆಲದಿನಗಳ ಹಿಂದೆ ಬಲಾಢ್ಯ ಹಣವಂತರು ಈ ಕುಟುಂಬ ಓಡಾಡುವ ದಾರಿಗೆ ಅಡ್ಡಲಾಗಿ ಬೇಲಿಯನ್ನು ಹಾಕಿದ್ದಾರೆ. ಇದರ ವಿಷಯವಾಗಿ ಶಬಾನ ಬಾನು ಅವರ ಕುಟುಂಬ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ . ಹೀಗಾಗಿ ಈ ಕುಟುಂಬ ಇದಕ್ಕೆ ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ಕೂಡ ಸಲ್ಲಿಸಿ, ಸಮಸ್ಯೆ ಬಗೆಹರಿಸಲು ಹೇಳಿದ್ದಾರೆ. ಇನ್ನು ಎಂಟು 10 ದಿನವಾದರೂ ತಾಲೂಕು ಕಚೇರಿ ಕಂದಾಯ ಇಲಾಖೆ ಅಧಿಕಾರಿಗಳು ಈ ಬಡ ಕುಟುಂಬದ ಸಮಸ್ಯೆಯನ್ನು ಆಲಿಸದೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಈ ಕುಟುಂಬ ನೇರ ಆರೋಪ ಮಾಡುತ್ತಿದೆ,   ಇದರ ಬಗ್ಗೆ…

Read More

ಜನಪ್ರಿಯ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರು ತುಮಕೂರಿನಿಂದ ವರ್ಗಾವಣೆಯಾಗಿದ್ದು,  ಕೃಷಿ ಆಯುಕ್ತರಾಗಿ ನಿಯೋಜನೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ತಂಡದ ಸದಸ್ಯರು ವೈ.ಎಸ್.ಪಾಟೀಲ್ ಅವರನ್ನು ಗೌರವಿಸಿ ನೆನಪಿನ ಕಾಣಿಕೆ ನೀಡಿ ಹಾರೈಸಿದರು. ನೊಂದವರ ಧ್ವನಿಯಾಗಿದ್ದ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್  ಅವರು,  ಅನೇಕ ವಸತಿ ನಿವೇಶನ ರಹಿತರಿಗೆ ನಮ್ಮ ತಂಡದ ಮನವಿಯ ಮೇರೆಗೆ ಭೂಮಿ ಮಂಜೂರು ಮಾಡಿ ನಿವೇಶನ ಕೊಡಿಸಿ ಅವರಿಗೆ ಆಶ್ರಯದಾತರಾಗಿದ್ದರು ಎಂದು ಸಮಿತಿಯ ಮುಖಂಡರು ನೆನಪಿಸಿಕೊಂಡರು. ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ಜಿಲ್ಲೆಯ ಜನರ ಪ್ರಾಣ ರಕ್ಷಿಸುವಲ್ಲಿ ಮುಂದಾಳಾಗಿದ್ದರು. ಹೀಗೆ ಬಡವರ ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಿ ಜಿಲ್ಲಾಧಿಕಾರಿಗಳು ಜನಾನುರಾಗಿಯಾಗಿದ್ದರು. ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕೂರದೆ ಜನರ ಕಷ್ಟಗಳಿಗೆ ಸ್ಪಂದಿಸುತ್ತ  ಜನಸಾಮಾನ್ಯರೊಂದಿಗೆ ಸೇರಿ ಅವರಿಗೆ ಜನಪರ ಸೇವೆ ಮಾಡಿ ಅಸಾಮಾನ್ಯ ಜಿಲ್ಲಾಧಿಕಾರಿಗಳಾಗಿದ್ದರು ಎಂದು ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದೆಯೂ ಇವರ ಸೇವಾ ಕೈಂಕರ್ಯ ಹೀಗೆ ಮುಂದುವರೆಯಲಿ ಮತ್ತು ಇವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು…

Read More

ಬೆಂಗಳೂರು: ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆನ್ನಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.…

Read More

ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದುಬ ದಿನ ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಬೆಂಗಳೂರಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಬೆಂಗಳೂರಿನ 57 ವರ್ಷದ ರೋಗಿಯೊಬ್ಬರಿಗೆ ವಿಶಿಷ್ಟವಾದ ಶ್ವಾಸಕೋಶದ ಕಸಿ ಯಶಸ್ವಿಯಾಗಿ ಮಾಡುವ ಮೂಲಕ ದಾಖಲೆ ಬರೆದಿದ್ದೇವೆ ಎಂದು ಹರ್ಯಾಣದ ಮರೆಂಗೋ ಏಷ್ಯಾ ಆಸ್ಪತ್ರೆಗಳ ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸಕ ಡಾ.ಕುಮುದ್ ಧಿತಾಲ್ ಹೇಳಿದರು. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡುತ್ತಿದೆ. ಇದರಿಂದಾಗಿ ಬಹುಮೂಲ್ಯವಾದ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತಿದೆ. ಮುಂದುವರಿದ ತಂತ್ರಜ್ಞಾನದ ಸದ್ಬಳಕೆ ಸಾಧ್ಯವಾಗುತ್ತಿದೆ. ನಗರದ ಅಪೋಲೊ ಆಸ್ಪತ್ರೆಗಳ ಶ್ವಾಸಕೋಶ ಶಾಸ್ತ್ರವಿಭಾಗದ ತಜ್ಞ ವೈದ್ಯರ ತಂಡ, ಚೆನ್ನೈನ ಕಾವೇರಿ ಆಸ್ಪತ್ರೆ ಮತ್ತು ಹರ್ಯಾಣದ ಫರಿದಾಬಾದ್‌ನ ಮರೆಂಗೋ ಏಷ್ಯಾ ಆಸ್ಪತ್ರೆಯ ವೈದ್ಯ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಅತ್ಯಂತ ಕ್ಲಿಷ್ಟಕರ, ಅಪರೂಪದ ಹಾಗೂ ತುಂಬಾ ನಾಜೂಕಾದ ಶಸ್ತ್ರಚಿಕಿತ್ಸೆ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ಸಹ ಮುಂಚೂಣಿಯಲ್ಲಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಸಫಲವಾಗಿದೆ ಎಂದರು. ಬೆಂಗಳೂರಿನ 57 ವರ್ಷದ ಮೀನಾಕ್ಷಿ (ಹೆಸರು ಬದಲಾಯಿಸಲಾಗಿದೆ) ಅವರು ಕಳೆದ ಎರಡು ವರ್ಷಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.ಉಸಿರುಗಟ್ಟುವಿಕೆ ಸಮಸ್ಯೆ ತೀರಾ…

Read More

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನರಿಗೆ ಅಭಯ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸಲಾಗುತ್ತದೆ. ಚುನಾವಣೆಗೂ ಮುನ್ನ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು. ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು. ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಈಗಾಗಲೇ…

Read More

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಮದುವೆಗೆ ಪೋಷಕರು ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ಈ ಹಿನ್ನೆಲಯಲ್ಲಿ ಜೋಡಿ ಈ ತೀರ್ಮಾನಕ್ಕೆ ಬಂದಿದೆ. ಸಾಯೋದಕ್ಕೂ ಮುನ್ನ ನಮಗೆ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗ್ತಾ ಇದ್ದೇವೆ ಎಂದು ಯುವತಿ ಫೋನ್ ಮಾಡಿ ಹೇಳಿದ್ದಳು. ಬಳಿಕ ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಕುಡಿದು ಮಲಗಿದ್ದಾರೆ. ಈ ನಡುವೆ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ನಲ್ಲಿದ್ದವರಿಗೆ ಅನುಮಾನ ಬಂದಿದೆ. ವಿಷದ ವಾಸನೆ…

Read More

ಯಮಕನಮರಡಿ: ಯಮಕನಮರಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಸಿದ್ಧವಾಗಿದ್ದೇನೆ. ಕ್ಷೇತ್ರವನ್ನು ಮತ್ತೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಮೂಲಕ ನಿಮ್ಮ ಆಶೋತ್ತರಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಶಹಾಬಂದರ್ ಕ್ರಾಸ್ ನ ವಾಲ್ಮೀಕಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮತಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಕಳೆದ 15 ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಕುಡಿಯಲು ನೀರು, ರಸ್ತೆಗಳು ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಿದ್ದರಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಕ್ಷೇತ್ರದಲ್ಲಿ ನನಗೆ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ಹಾಗೂ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದ ಕಾರ್ಯಕರ್ತರಿಗೂ ಇದೇ ವೇಳೆ ಧನ್ಯವಾದ ತಿಳಿಸಿದರು. ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಲೋಕೋಪಯೋಗಿ ಇಲಾಖೆಯ ಸಚಿವರಾಗಿ ಪ್ರಥಮ ಬಾರಿಗೆ ಶಹಾಬಂದರ್‌ಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಕಾರ್ಯಕರ್ತರು ಅದ್ದೂರಿ ರೋಡ್ ಶೋ…

Read More

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್ ಗೋಡೆ (42) ಸದ್ಯ ಬದುಕುಳಿದ ಚಾಲಕ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲಿಂದ ನದಿಗೆ ಕ್ಯಾಂಟರ್  ವಾಹನ ಉರುಳಿದ್ದು ಚಿಕ್ಕಮಗಳೂರಿನಿಂದ ಮಹಾರಾಷ್ಟ್ರಕ್ಕೆ ಕಟ್ಟಿಗೆ ಹೊತ್ತೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಗರದ ಪೊಲೀಸ್ ಇಲಾಖೆಯಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ರಾಣಿ ಚೆನ್ನಮ್ಮ ಪಡೆ ಹೆಸರಿನಲ್ಲಿ ತಂಡವೊಂದು ರಚನೆಯಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ಈ ಹಿಂದೆ ಡಿಸಿಪಿಯಾಗಿದ್ದ ಶ್ರೀನಾಥ್ ಜೋಶಿ ಈ ಚೆನ್ನಮ್ಮ ಪಡೆಗೆ ಚಾಲನೆ ಕೊಟ್ಟಿದ್ದರು. ಸದ್ಯ ಆಗ್ನೇಯ ವಿಭಾಗದ ಡಿಸಿಪಿಯಾಗಿರುವ ಸಿಕೆ ಬಾಬ ಈ ಪಡೆಗೆ ಹೊರ ರೂಪ ಮತ್ತು ಹುರುಪು ನೀಡಿದ್ದಾರೆ. ಪೊಲೀಸ್  ಇಲಾಖೆಯ ಮಹಿಳಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಿ ಆ ಸಿಬ್ಬಂದಿಯಿಂದ ಮಹಿಳೆ ಮತ್ತು ಮಕ್ಕಳಿಗೆ ತರಬೇತಿ ನೀಡಲಾಗುತ್ತೆ. ಮಹಿಳೆಯರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡುವ ಈ ಪಡೆಕಷ್ಟ ಅಂತಾ ಕರೆ ಮಾಡೋ ಹೆಣ್ಣು ಮಕ್ಕಳ ಸಹಾಯಕ್ಕೆ ಈ ತಂಡ ಧಾವಿಸುತ್ತದೆ. ಮಹಿಳೆಯರು ತಮ್ಮ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ತರಬೇತಿ ನೀಡಿ ದೈಹಿಕ ಸಾಮಾರ್ಥ್ಯ ಹೆಚ್ಚಿಸಿಕೊಳ್ಳುವ ಮಾರ್ಷಲ್  ಆರ್ಟ್ ನಂತಹ ಕೆಲ ಪಟ್ಟುಗಳನ್ನು ಈ ತಂಡ ಹೇಳಿಕೊಡುತ್ತದೆ. ಸುಮಾರು 40 ಸಿಬ್ಬಂದಿಗಳ ಈ…

Read More