Author: admin

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಎಸ್.ಆರ್.ಬೊಮ್ಮಾಯಿ ಜನ್ಮ ಶತಮಾನೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ತಂದೆಯ ಸರಳತೆ ಮತ್ತು ಜೀವನ ನಡೆಸಿದ ಬಗೆಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾದರು. ತಂದೆಯವರು ಶಾಲೆಗೆ ಕೈ ಹಿಡಿದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭ, ಊಟ ಮಾಡುವಾಗ ಮಕ್ಕಳಿಗೆ ಸಮಾನತೆಯ ಪಾಠ ಮಾಡುತ್ತಿದ್ದದ್ದನ್ನು ನೆನೆದು ಕಣ್ಣೀರು ಹಾಕಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪದ್ಮವಿಭೂಷಣ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮತ್ತು ಎಸ್.ಆರ್.ಬೊಮ್ಮಾಯಿ ಗಾಡ್ ಫಾಧರ್ ಇಲ್ಲದೆ ರಾಜಕೀಯದಲ್ಲಿ ಬೆಳೆದವರು, ಅವರು ಹೊರಾಟದ ಮೂಲಕ ಜನರ ಮನದಲ್ಲಿ ಉಳಿದವರು ಎಂದು ಬೊಮ್ಮಾಯಿ ಹೇಳಿದರು. ಎಸ್.ಆರ್ ಬೊಮ್ಮಾಯಿಯವರ ಕಾಲದಲ್ಲಿ ತೆಗೆದುಕೊಂಡ ಕೆಲವು ತೀರ್ಮಾನಗಳು ಈಗಿನ ಕಾಲಘಟ್ಟದಲ್ಲಿ ಪ್ರಸ್ತುತ ಇರದಿರಬಹುದು ಆದರೆ ಆಗಿನ ಸಂದರ್ಭದಲ್ಲಿ ಅವುಗಳ ಪ್ರಾಮುಖ್ಯತೆ ಬೇರೆಯೇ ಇತ್ತು ಎಂದು ತಂದೆಯ ಆಡಳಿತದ ಶೈಲಿಯನ್ನು ಬೊಮ್ಮಾಯಿ ನೆನೆದರು. ಅವರು ದೊಡ್ಡವಕೀಲರಾಗಿದ್ದರೂ ಎಲ್ಲೂ ದೊಡ್ಡಸ್ತಿಕೆ ತೋರಲಿಲ್ಲ. ಜನ ಸೇವೆಯಲ್ಲೇ ಸಾರ್ಥಕತೆಯನ್ನು ಕಂಡರೂ, ರಾಜಕೀಯದಲ್ಲಿ ತಾವು ನಂಬಿದ ಸಿದ್ಧಾಂತಗಳಲ್ಲಿ ರಾಜಿಯಾಗಿದ್ದರೆ ಇನ್ನೂ…

Read More

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ತನಿಖೆಗಾಗಿ ಸಿಬಿಐ ಘಟನಾ ಸ್ಥಳಕ್ಕೆ ತಲುಪಿದೆ. ಜೂನ್ 2 ರಂದು ಸಂಭವಿಸಿದ ಬಾಲಸೋರ್ ರೈಲು ಅಪಘಾತದಲ್ಲಿ ಇದುವರೆಗೆ 278 ಜನರು ಸಾವನ್ನಪ್ಪಿದ್ದಾರೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಕ್ಕೂ ಮುನ್ನ ರೈಲ್ವೆ ಸುರಕ್ಷತಾ ಆಯುಕ್ತ ಶೈಲೇಶ್  ಕುಮಾರ್ ಪಾಠಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಹನಾಗಾ ಬಜಾರ್ ರೈಲು ನಿಲ್ದಾಣದ ಕಂಟ್ರೋಲ್ ರೂಂ, ಸಿಗ್ನಲ್ ರೂಂ ಹಾಗೂ ಸಿಗ್ನಲ್ ಪಾಯಿಂಟ್ ಗೂ ಭೇಟಿ ನೀಡಿದರು. ಜೂನ್ 3 ರಂದು, ರೈಲು ಅಪಘಾತದ ಬಗ್ಗೆ ಭಾರತೀಯ ದಂಡ ಸಂಹಿತೆ…

Read More

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಮೃತಪಟ್ಟ 5 ಮಂದಿ ಸಂಬಂಧಿಕರಾಗಿದ್ದಾರೆ. ಆಂಧ್ರಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ತಂದೆ ಮುನೀರ್ ಹಾಗೂ ಪುತ್ರ ಮುದ್ದಸಿರ್ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವೆಲುಗೋಡ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಕ್ರೂಸರ್, ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಬರುತ್ತಿತ್ತು. ಈ ವೇಳೆ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ, ಬಾಲಕ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. ನಿದ್ದೆ ಮಂಪರ್ ನಲ್ಲಿದ್ದ ಕ್ರೂಸರ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಯಾದಗಿರಿ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ ಯುವತಿಯಾಗಿದ್ದು, ಈಕೆಯನ್ನು ದೆಹಲಿ ಮೂಲದ ಅರ್ಪಿತ್ ಕೊಲೆ ಮಾಡಿದ್ದಾನೆ. ಈ ಹಿಂದೆ ಆಕಾಂಕ್ಷಾ ಹಾಗೂ ಅರ್ಪಿತ್ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸಮಾಡುತ್ತಿದ್ದರು. ಯುವತಿ ಬಿಕಾಂ ವ್ಯಾಸಂಗ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ಇಬ್ಬರು ಒಟ್ಟಿಗೆ ವಾಸ ಮಾಡುತ್ತಿದ್ದರು. ಇತ್ತೀಚೆಗೆ ಇವರಿಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ಇದಾದ ಬಳಿಕ ಸೋಮವಾರ ಇಬ್ಬರು ಮನೆಯಲ್ಲಿ ಇರುವಾಗ ಗಲಾಟೆ ಶುರುವಾಗಿದೆ. ಬಳಿಕ ಯುವತಿಯನ್ನು ಅರ್ಪಿತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಂದ ಬಳಿಕ ಯುವತಿಯ ಕುತ್ತಿಗೆಗೆ ಬಟ್ಟೆ ಕಟ್ಟಿ ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ…

Read More

ವಿಶ್ವ ಪರಿಸರ ದಿನಾಚರಣೆ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಅರಣ್ಯ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಬೆಳಗಾವಿ ವೃತ್ತದ ಮುಖ್ಯ ಸಂರಕ್ಷಣಾಧಿಕಾರಿಗಳು ಮಂಜುನಾಥ್ ಚೌವಾಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬೆಳಗಾವಿ ಹರ್ಷ ಬಾನು ಇವರು ಉಪಸ್ಥಿತಿಯಲ್ಲಿ ಬೆಳಗಾವಿ ಕೋರ್ಟ್ ಆವರಣದಲ್ಲಿ ಸಸಿ ನೆಡಲಾಯಿತು. ಸಾಮಾಜಿಕಾ ಅರಣ್ಯ ಇಲಾಖೆ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆ ವತಿಯಿಂದ ಖಾನಾಪುರ ಹಾಗೂ ಬೆಳಗಾವಿ ವಲಯಗಳ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಳು ಹಾಗೂ ಸಂಘ ಸಂಸ್ಥೆಗಳ ಉಪಸ್ಥಿತಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರದ ಸಂರಕ್ಷಣೆ ಹಾಗೂ ಜನರ ಸಹಭಾಗಿತ್ವದದಿಂದ ಅರಣ್ಯ ಸಂರಕ್ಷಣೆ ನಮ್ಮ ಹೊಣೆ ಎಂದು ಅರಣ್ಯ ಇಲಾಖೆ ಸಂದೇಶ ಸಾರಿತು. ಈ ಸಂದರ್ಭದಲ್ಲಿ ಖಾನಾಪುರ ಎಸಿಎಫ್ ಸಂತೋಷ್ ಚವಾನ , RFO ಕವಿತಾ ಈರನಟ್ಟಿ, ನಾಗರಾಜ್ ಬಾಳೆಹೊಸೂರ, ಉಪ ವಲಯ ಅರಣ್ಯ ಅಧಿಕಾರಿಗಳಾದ ಆರ್ ಎಂ ಬೀಡಿಕರ, ವಿನಾಯಕ ಪಾಟೀಲ್, ಅರಣ್ಯ…

Read More

ಮಂಗಳೂರಲ್ಲಿ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ ಎಂದರು. ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ.  ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ…

Read More

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೆ ಜಿಲ್ಲಾ ವಿಭಜನೆ ಆಗಬೇಕೆಂದು ಸಚಿವೆ ಒತ್ತಾಯಿಸಿದರು. ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ನಾನು ಹೇಳ್ತಿದ್ದೇನೆ ಎಂಬ ಕಾರಣಕ್ಕೆ ವಿಭಜನೆ ಬೇಡ. ಜಿಲ್ಲಾ ವಿಭಜನೆ ಸಂಬಂಧ ಸರ್ಕಾರ ಮಟ್ಟದಲ್ಲಿ ಹಂತಹಂತವಾಗಿ ಚರ್ಚೆ ನಡೆಯಲಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನಾಯಕರು ಕ್ರಮ ಜರುಗಿಸುತ್ತೇವೆ ಎಂದು ಹೆಬ್ಬಾಳ್ಕರ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್  ಬಳಕೆ ಮಾಡುವ  ಬಿಲ್ ಕಟ್ಟುವ ಅಗತ್ಯವಿಲ್ಲ.  ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ  ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡು ಕಂಡ ಮುತ್ಸದಿ ರಾಜಕಾರಣಿ ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ…

Read More

ತುರುವೇಕೆರೆ: ರಾಜಿ ಮಾಡಿಕೊಳ್ಳೋಣ ಎಂದು ಕರೆದು ತಂಡವೊಂದರ ಮೇಲೆ ಮತ್ತೊಂದು ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕರೇಕಲ್ಲು ಗ್ರಾಮದಲ್ಲಿ ನಡೆದಿದೆ. ಕ್ರಾಮಸಂದ್ರ ಪ್ರಸಾದಿ, ಅಬುಕನಹಳ್ಳಿ ಮಂಜ ಅಲಿಯಾಸ್ ಕೋಳಿಮಂಜ, ಮನು ಅಲಿಯಾಸ್ ಅಲ್ಲ ಇವರು ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಪ್ರಸಾದಿ ಹಾಗೂ ಕಿರಣ್ ಕುಮಾರ್ ನಡುವೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಳೆದ 29 ಮಾರ್ಚ್ ರಂದು ಗಲಾಟೆ ನಡೆದಿತ್ತು. ಈ ವಿಚಾರವಾಗಿ ಪ್ರಸಾದಿ ಮೇಲೆ ತುರುವೇಕೆರೆ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ಹಿನ್ನಲೆಯಲ್ಲಿ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಸದ್ಯ ಕಿರಣ್ ಕುಮಾರನ್ನ ರಾಜೀಗಾಗಿ ಪ್ರಸಾದಿ ಕರೆದಿದ್ದ. ಹೀಗಾಗಿ ಕಿರಣ್ ಜೊತೆ ತೆರಳಿದ್ದ ಸ್ನೇಹಿತರಾದ ದಿಲೀಪ್ ಕುಮಾರ್, ಸಂಜು, ಮೋಹನ್, ಮಂಜುನಾಥ್ ಕೂಡ 3ರಂದು ರಾತ್ರಿ ಯಲ್ಲಿ ಕರೆಕಲ್ಲು ಗ್ರಾಮದ ಬಳಿ ಹೋಗಿದ್ದರು. ಪ್ರಸಾದಿ ಹಾಗೂ ಕಿರಣ್ ಕುಮಾರ್ ಮಾತಾನಾಡುತ್ತಿದ್ದ ಸಂದರ್ಭದಲ್ಲಿ ಎರಡು ಕಾರಿನಲ್ಲಿ ಬಂದ ಐದಾರು ಜನರ ಗುಂಪು. ಕಾರಿನಲ್ಲಿ…

Read More

ಮಾದಕ ವ್ಯಸನಿಯಾಗಿದ್ದ ತಂದೆ ತನ್ನ ಎಂಟು ವರ್ಷದ ಮಗಳ ತಲೆಗೆ ಹೊಡೆದು ಕೊಂದಿದ್ದಾನೆ. ಮಗಳು ಚಾಕೊಲೇಟ್ ಮತ್ತು ಆಟಿಕೆಗಳಿಗೆ ಬೇಡಿಕೆಯ ನಂತರ ಕೊಲೆ ನಡೆದಿದೆ. ಈ ಪ್ರಕರಣದಲ್ಲಿ 37 ವರ್ಷದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಈ ಭೀಕರ ಹತ್ಯೆ ನಡೆದಿದೆ. ಶನಿವಾರ ರಾತ್ರಿ ಕೊಲೆ ನಡೆದಿದೆ. ಆರೋಪಿ ರಾಕೇಶ್ ತನ್ನ ಮಗಳನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದೊಯ್ದು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ತಾನು ಬಡವನಾಗಿದ್ದು, ಮಗಳು ಪ್ರತಿದಿನ ಚಾಕಲೇಟ್, ಆಟಿಕೆಗಳು ಮತ್ತು ಬಟ್ಟೆಗಳನ್ನು ಕೇಳಿ ತನಗೆ ತೊಂದರೆ ನೀಡುತ್ತಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಸಮಸ್ಯೆಯಿಂದ ಪಾರಾಗಲು ಮಗಳನ್ನು ಕೊಂದಿರುವುದಾಗಿ ಆರೋಪಿಯ ಹೇಳಿಕೆಯನ್ನು ಉಲ್ಲೇಖಿಸಿ ಉಪ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೂಲಿ ಕಾರ್ಮಿಕನಾದ ಆರೋಪಿ ರಾಕೇಶ್ ಮಾದಕ ವ್ಯಸನ ಹೊಂದಿದ್ದ ಎಂದು ಅವರು ತಿಳಿಸಿದ್ದಾರೆ. ಮೂರು ವರ್ಷಗಳ ಹಿಂದೆ ಮಗುವಿನ ತಾಯಿ ಅವರನ್ನು ಬಿಟ್ಟು ಹೋಗಿದ್ದರು. ಆರೋಪಿಯ…

Read More