Author: admin

ಭಾರತೀಯ ರಿಸರ್ವ್ ಬ್ಯಾಂಕ್ ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ ಇಂದು ಆರಂಭವಾಗಲಿದೆ. ಕಳೆದ ಸಭೆಯಲ್ಲಿ ಆರ್‌ಬಿಐ ರೆಪೊ ದರದಲ್ಲಿ ಬದಲಾವಣೆ ಮಾಡಿರಲಿಲ್ಲ. ಹಣದುಬ್ಬರ ನಿಯಂತ್ರಣದಲ್ಲಿರುವ ಮತ್ತು ಮತ್ತಷ್ಟು ಕಡಿಮೆಯಾಗುವ ಪರಿಸ್ಥಿತಿಯನ್ನು ಪರಿಗಣಿಸಿ ಈ ಸಭೆಯಲ್ಲೂ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯಾಗದಿರಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೆಕ್ಕಾಚಾರ ಮಾಡಿದೆ. 43ನೇ ಎಂಪಿಸಿ ಸಭೆಯ ನಿರ್ಧಾರವನ್ನು ಜೂನ್ 8ರಂದು ಪ್ರಕಟಿಸಲಾಗುವುದು. ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ಜೂನ್ 6 ರಿಂದ 8 ರವರೆಗೆ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ಏಪ್ರಿಲ್‌ನಲ್ಲಿ ಗ್ರಾಹಕ ಬೆಲೆ-ಆಧಾರಿತ (ಸಿಪಿಐ) ಹಣದುಬ್ಬರವು 18-ತಿಂಗಳ ಕನಿಷ್ಠ 4.7 ಪ್ರತಿಶತಕ್ಕೆ ಇಳಿಯುವ ಹಿನ್ನೆಲೆಯಲ್ಲಿ MPC ಭೇಟಿಯಾಗುತ್ತದೆ. ಈ ಹಣಕಾಸು ವರ್ಷದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯ ಎರಡನೇ ಸಭೆ ಇದಾಗಿದೆ. ಏಪ್ರಿಲ್‌ ನಲ್ಲಿ ನಡೆದ ಕೊನೆಯ ಸಭೆಯಲ್ಲಿ ದರ ಏರಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ರೆಪೊ ದರ…

Read More

ಸಚಿನ್ ಪೈಲಟ್ ಕಾಂಗ್ರೆಸ್ ತೊರೆದಿದ್ದಾರೆ. ರಾಜಸ್ಥಾನ ಕಾಂಗ್ರೆಸ್‌ ನಲ್ಲಿನ ವಿವಾದಗಳು ಬಗೆಹರಿಯದ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸಚಿನ್ ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅವರ ತಂದೆಯ ಪುಣ್ಯತಿಥಿಯಂದು ಘೋಷಣೆ ಮಾಡಲಾಗುವುದು. ಹೊಸ ಪಕ್ಷವನ್ನು ಪ್ರಕೃತಿ ಶೀಲ ಕಾಂಗ್ರೆಸ್ ಎಂದು ಕರೆಯಲಾಗುವುದು. ಸಚಿನ್ ಪೈಲಟ್ ವಿಭಾಗವು ಪಕ್ಷದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಯನ್ನು ಖೈರವಾಡ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲು ಮೆರವಣಿಗೆ ಮೂಲಕ ಮಹಾರಾಜರ ಮೂರ್ತಿ ಖಾನಾಪುರ ಪಟ್ಟಣಕ್ಕೆ ಆಗಮಿಸಿತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಭವ್ಯವಾಗಿ ಸ್ವಾಗತ ಮಾಡಿದರು. ಡಾಕ್ಟರ್ ಆಂಜನೇಯ ನಿಂಬಾಳ್ಕರ್ ಖೈರ್ವಾಡ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂಬ ಹಲವಾರು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿತ್ತು. ಆಗಿನ ಶಾಸಕಿ ಆಗಿದ್ದ ಅಂಜಲಿ ನಿಂಬಾಳ್ಕರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದರೂ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಗ ಈಡೇರಿಲಿದೆ. ಇದರಿಂದಾಗಿ ಗ್ರಾಮದ ಮುಖಂಡರುಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಖಾನಾಪುರ ಪಟ್ಟಣದ ಮುಖ್ಯ ರಸ್ತೆಗಳಿಂದ ಶಿವಾಜಿ ಮಹಾರಾಜರ ಮೂರ್ತಿಯನ್ನು ವಾದ್ಯಗಳ ಜಾನಪದ ಯುವಕರ ನೃತ್ಯಗಳ ಘೋಷಣೆಗಳು ಜೊತೆಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆದುಕೊಂಡು ಹೋದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಮುಖಂಡರುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಮಹಿಳೆಯರ ಉಚಿತ ಪ್ರಯಾಣಕ್ಕೆ ಕೇವಲ 6 ದಿನಗಳು ಮಾತ್ರ ಬಾಕಿ ಇದೆ. ಸಿಎಂ ಸಿದ್ದರಾಮಯ್ಯ  ಕಾರ್ಯಕ್ರಮದ ಸಮಯ ಘೋಷಣೆ ಮಾಡಲಿದ್ದಾರೆ. ಈಗಾಗಲೇ ನಾಲ್ಕು ನಿಗಮಗಳಲ್ಲೂ ‘0’ ದರದ ಟಿಕೆಟ್ ಪ್ರಿಂಟ್ ಮಾಡಿಸಲಾಗಿದೆ. ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕಿದೆ ರಾಜ್ಯಾದ್ಯಂತ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭವಾಗಲಿದೆ. ಇದೇ ತಿಂಗಳ 11ರ ಭಾನುವಾರ ಬೆಳಿಗ್ಗೆ ಹತ್ತು ಅಥವಾ ಹನ್ನೊಂದು ಗಂಟೆಗೆ ಶಕ್ತಿ ಯೋಜನೆಗೆ ಚಾಲನೆ ದೊರೆಯುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ಚಕ್ರವರ್ತಿ ಸೂಲಿಬೆಲೆ ತಿರುಗೇಟು ಕೊಟ್ಟಿದ್ದಾರೆ. ಪಶುಸಂಗೋಪನೆ ಸಚಿವರು ಅಂದ್ರೆ ಪಶುಗಳನ್ನು ಕಾಪಾಡುವುದು. ಪಶುಸಂಗೋಪನೆ ಸಚಿವರೇ ಹಸು ಕಡಿಯಬೇಕು ಅಂತಾ ಹೇಳ್ತಾರೆ. ಸಚಿವರು ಹಸು ಕಡಿಯುವುದಕ್ಕೆ ಬೇರೆ ಬೇರೆ ಕಾರಣ ಕೊಡ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಮೊದಲು 200 ಯೂನಿಟ್ ಕರೆಂಟ್ ಕೊಡಲಿ. ಯಾವುದೇ ಷರತ್ತು ಇಲ್ಲದೆ ಕರೆಂಟ್ ಕೊಡುವ ಕೆಲಸ ಮಾಡಲಿ. ಮುಸ್ಲಿಮರಿಂದ ಶೇ.80ರಷ್ಟು ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನರು ಸರ್ಕಾರದ ನಡೆಯನ್ನು ಸೂಕ್ಷ್ಮವಾಗಿ ಗಮನಿಸ್ತಿದ್ದಾರೆ. ಸರ್ಕಾರ ತನ್ನ ಅಸ್ತ್ರವನ್ನು ಹಿಟ್ಲರ್ ರೀತಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: 200 ಯುನಿಟ್ ಉಚಿತ ವಿದ್ಯುತ್ ಘೋಷಿಸಿ ಎರಡೆ ದಿನದಲ್ಲಿ ಪ್ರತಿ ಯುನಿಟ್ ಕ್ಕೆ ಸರಾಸರಿ 70 ಪೈಸೆ ವಿದ್ಯುತ್ ದರ ಹೆಚ್ಚಿಸಿರುವ ಹಾಗೂ ಆಧಾರ ಲಿಂಕ್ ಮಾಡದ ರೈತರ ಪಂಪಸೆಟ್ ಗಳ ಅನುದಾನ ಕಡಿತಗೊಳಿಸುವ, ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯವ ಬಗ್ಗೆ ಹಾಗೂ ಹಾಲು ಗ್ರಾಹಕರ ಅನುದಾನ ಕಡಿತ ಮಾಡಿರುವ ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವಿನ ಆದೇಶವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬೆಳಗಾವಿ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ಗೃಹ ಬಳಕೆದಾರ ಗ್ರಾಹಕರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವದಾಗಿ ಘೋಷಿಸಿ, ಜೂನ್ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತಗೆದುಕೊಂಡಿದ್ದರೆ ಆದರೆ, ಎಪ್ರಿಲ್ 1 ರಿಂದ ಪೂರ್ವಾನ್ವಯಿಸಿ ಎಲ್.ಟಿ ಮತ್ತು ಎಚ್ ಟಿ ಗ್ರಾಹಕರು ಬಳಸುವ ಪ್ರತಿ ಯುನಿಟ್‌ ವಿದ್ಯುತ್ ಗೆ ಸರಾಸರಿ 70ಪೈಸೆ ಹೆಚ್ಚಿಸಿ ಶೇ 8.31ರಷ್ಟು ಹೆಚ್ಚಳ…

Read More

ತುಮಕೂರು: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಸಮೀಪದ ಮಾರುಕಟ್ಟೆ ಶೌಚಾಲಯದಲ್ಲಿ ನಡೆದಿದೆ. ಬಿಹಾರ ಮೂಲದ ಯುವಕ ಲಖನ್ ಮಾನ್ಸಿ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದ್ದು, ಈತ ಕಳೆದ 6 ತಿಂಗಳುಗಳಿಂದ ಮಾರುಕಟ್ಟೆ ಶೌಚಾಲಯವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶೌಚಾಲಯದಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತುಮಕೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ತುಮಕೂರು ಪ್ರಾದೇಶಿಕ ಕೇಂದ್ರ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಕರಾಮುವಿಯ ಎಂ.ಎ. ಪ್ರಥಮ ವರ್ಷದ ಇತಿಹಾಸ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಿಸುವ ಮುಖಾಂತರ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು‌. ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ಲೋಕೇಶ ಆರ್. ಮಾತನಾಡಿ, ಈ ಆವರಣವನ್ನು ಹಸಿರೀಕರಣ ಮತ್ತು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಎಲ್ಲಾ ಸಿಬ್ಬಂದಿ  ಹಾಗೂ ಕರಾಮುವಿಯ ಎಂ.ಎ ಪ್ರಥಮ ವರ್ಷದ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬಾಗಲಕೋಟೆ: ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಾಹವಿದ್ಯಾಲಯದ ಆವರಣದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ಹಾಗೂ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಸಸಿ ನೆಡುವುದರ ಮೂಲಕ ಆಚರಣೆ ಮಾಡಲಾಯಿತು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ ಅವರು ನಾಗಲಿಂಗ ಪುಷ್ಪದ ಸಸಿ ನೆಟ್ಟು ನೀರೆರೆಯುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ, ವಿಶ್ರಾಂತ ಪ್ರಾಚಾರ್ಯ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ, ಎನ್ಎಸ್ಎಸ್ ಘಟಕದ ಕಾರ್ಯಕ್ರಮದ ಅಧಿಕಾರಿಗಳಾದ ಎಮ್.ಎಚ್ ವಡ್ಡರ, ಡಾ. ವೀರುಪಾಕ್ಷ.ಎನ್.ಬಿ ಸೇರಿದಂತೆ ಎಲ್ಲ ವಿಭಾಗದ ಪ್ರಾದ್ಯಾಪಕರುಗಳು, ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರನ್ನು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಗರಂ ಆದ್ರು. ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ, ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More