Author: admin

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇಂದು ನಡೆದಿದೆ. ಗುಂಡ್ಲುಪೇಟೆಯ ಕುರುಬರಹುಂಡಿ ಮೂಲದ ರೈತ ಈಶ್ವರ್ (50) ಮೃತ ದುರ್ದೈವಿ. ಇಂದು ಫ್ರೀಡಂ ಪಾರ್ಕ್​​ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಇವರು ಆಗಮಿಸಿದ್ದರು. ರೈಲಿನ ಮೂಲಕ ಬಂದಿಳಿದಿದ್ದ ಈಶ್ವರ್, ಪ್ರತಿಭಟನಾ ಸ್ಥಳಕ್ಕೆ ತೆರಳುವ ಮಾರ್ಗಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಈಶ್ವರ್ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚೆನ್ನೈ: ಪುರಸಭೆಯ ಮಹಿಳಾ ಕೌನ್ಸಿಲರ್‌ ಒಬ್ಬರನ್ನು ಅವರ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ಅವರ ಮನೆಯ ಬಳಿಯಲ್ಲಿಯೇ ನಡೆದಿದೆ. ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿಂದ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್‌  ಎಸ್. ಗೋಮತಿ (38) ಹತ್ಯೆಗೀಡಾಗಿರುವ ಕೌನ್ಸಿಲರ್ ಆಗಿದ್ದಾರೆ. ಗೋಮತಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪುರಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ವೈಯಕ್ತಿಕ ಕಾರಣಗಳಿಂದಾಗಿ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ಅವರ ಮನೆಯ ಬಳಿ ಆಕೆಯ ಪತಿ ಸ್ಟೀಫನ್ ರಾಜ್ ಹಲ್ಲೆ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಸಾವನ್ನಪ್ಪಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಅಲ್ಲಿಯೇ ಸ್ಟೀಪನ್ ರಾಜ್ ಪೊಲೀಸರ ಮುಂದೆ ಶರಣಾಗಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ದಂಪತಿ ಸುಮಾರು ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ವಿಸಿಕೆ ಪಕ್ಷದ ಸದಸ್ಯರಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತಿಪಟೂರು: ಆರ್ಥಿಕ ಸಂಕಷ್ಟದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ಕಿಟ್ ವಿತರಣೆ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಿತು. ತಾಲೂಕಿನ ನೊಣವಿನಕೆರೆ  ಹೋಬಳಿ ನಾಗರಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಗರಹಳ್ಳಿ  ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ, ವರುಣ್, ಕಿಶೋರ್, ಉದಯ್ ಹರ್ಷಿಲ್ ತರುಣ್ ಕುಮಾರ್, ಇವರು ಬೆಳಗರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಡು ಬಡತನದಿಂದ ಕೂಡಿದವರಾಗಿದ್ದು, ಕೆಲವರು ತಂದೆಯನ್ನು ಕಳೆದುಕೊಂಡಿದ್ದು ಕೆಲವರು ತಾಯಿ ತಂದೆ ಇಬ್ಬರನ್ನು ಕಳೆದುಕೊಂಡಿರುತ್ತಾರೆ. ಹೀಗಾಗಿ ಇವರ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಇವರ ವಿದ್ಯಾಭ್ಯಾಸಕ್ಕಾಗಿ ನೋಟ್ ಬುಕ್ ಬ್ಯಾಗ್ ಪೆನ್ ಪೆನ್ಸಿಲ್ ರಬ್ಬರ್ ಚಾಮೆಟ್ರಿ ಇತ್ಯಾದಿ ಪರಿಕರಗಳು ಅವಶ್ಯಕತೆ ಇದ್ದು, ಈ ವಿಚಾರವನ್ನು ಅಂಬೇಡ್ಕರ್ ಸೇವಾ ಸಮಿತಿಯ ತಿಪಟೂರು ತಾಲೂಕು ಅಧ್ಯಕ್ಷರಾದ  ಶಿವಕುಮಾರ್  ಮತಿಘಟ್ಟ ಹಾಗೂ ರಾಘು ಯಗಚಿಕಟ್ಟೆ, ರಮೇಶ್ ಮಾರನಗೆರೆ ಅವರು ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಿಗೆ ತಿಳಿಸಿ, ವಿದ್ಯಾಭ್ಯಾಸಕ್ಕೆ ನೆರವು ನೀಡುವಂತೆ ಮನವಿಯನ್ನು ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿ ಈ ದಿನ…

Read More

ತಿಪಟೂರು: ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜುಲೈ 6ರಂದು ತಿಪಟೂರಿನಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ವನಿತಾ ಪ್ರಸನ್ನ ತಿಳಿಸಿದರು. ನಾನು ತಿಪಟೂರು ರೋಟರಿಯ 66ನೇ ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಂತಸ ತಂದಿದ್ದು, ರೋಟರಿ ನಗರಕ್ಕೆ ಸೀಮಿತವಾಗದೆ ಗ್ರಾಮೀಣ ಪ್ರದೇಶದ ಭಾಗದಲ್ಲೂ ಸರ್ಕಾರಿ ಶಾಲೆಗಳಿಗೆ ಅಗತ್ಯ ಉಪಕರಣ, ಶೌಚಾಲಯ ವ್ಯವಸ್ಥೆ, ಬಡ ಜನರ ಆರೋಗ್ಯ ಸೇವೆ, ವಿಶೇಷವಾಗಿ ಸೀಳು ತುಟಿ ಶಸ್ತ್ರ ಚಿಕಿತ್ಸೆ, ಹೀಗೆ ಹಲವಾರು  ಸೇವೆಗಳನ್ನು ಸಲ್ಲಿಸಲು ಬಯಕೆ ಇದೆ ಮತ್ತು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವುದು ಎಂದು ತಿಳಿಸಿದರು. ಬಡವರ್ಗದವರಿಗೆ ಡಯಾಲಿಸಿಸ್ ಯೂನಿಟ್ ಅನಾಥ ಮಕ್ಕಳನ್ನು ದತ್ತು ಪಡೆದು ಶಿಕ್ಷಣ ಕೊಡಿಸುವ ಉದ್ದೇಶ ನನ್ನದಾಗಿದೆ ಎಂದು ಇದೇ ವೇಳೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷಡಾಬಾ ಶಂಕ್ರಣ್ಣ, ಸದಸ್ಯ ವೇದ ಶಂಕರ್ ಇತರರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ರಾತ್ರಿ 8ರ ಸುಮಾರಿಗೆ ಸಂತೆ ಮೈದಾನ ಚೌಡೇಶ್ವರಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದ ಬಳಿ ಕರಡಿ ಸಂಚರಿಸಿದ್ದು, ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಜನರು ಗುಂಪು ಗುಂಪಾಗಿ ಮನೆಗಳಿಂದ ಹೊರ ಬಂದು ಏಕ ಕಾಲಕ್ಕೆ ಕರಡಿಯ ಗಾಬರಿಗೊಂಡು ಎತ್ತ ಹೋಗಲು ಸಾಧ್ಯವಾಗದೆ ಹಳೆಯ ಮನೆಯೊಳಗಡೆ ನುಗ್ಗಿತ್ತು. ಕೊನೆಗೂ ಆತಂಕದ ನಡುವೆಯೂ ಜನರು ಕರಡಿಯನ್ನು ಊರಿನಿಂದಾಚೆಗೆ ಓಡಿಸಲು ಯಶಸ್ವಿಯಾಗಿದ್ದಾರೆ. ಸದ್ಯ ಕರಡಿ ಆಗಮನದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವೈ ಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ  ನಡೆದಿದೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಗುರುವಾರ ತುಮಕೂರು ಜಿಲ್ಲೆಯ ಬುಕ್ಕಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ. ಮುತ್ತುಗದಹಳ್ಳಿ ಅಂಬರಪುರದ ಸರ್ವೆ ಸಂಖ್ಯೆ 46 ರಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಅರಣ್ಯ ಹಕ್ಕು ಕಾಯ್ದೆಯಡಿ 1926 ರಲ್ಲಿ ಅರಣ್ಯ ಭೂಮಿ ಎಂದು ಘೋಷಿಸಲಾಯಿತು. ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶಪಡಿಸಿಕೊಂಡ ಅರಣ್ಯ ಭೂಮಿಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತಿಪಟೂರು: ತಾಲ್ಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಪುಣ್ಯಕ್ಷೇತ್ರ ಗಂಗನಘಟ್ಟದ ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಯವರ ಬ್ರಹ್ಮ ರಥೋತ್ಸವವು ಜುಲೈ 7ರಂದು ಸಂಜೆ ಜರುಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಾತ್ರಾ ಮಹೋತ್ಸವು ಜುಲೈ 5 ರಂದು ಪ್ರಾರಂಭವಾಗಿ ಸಂಜೆ 6 ಗಂಟೆಗೆ ಭಗವದನುಜ್ಙೆ, ವಿಶ್ವೇಕ್ಸೇನಾರಾಧನೆ, ವಾಸುದೇವ ಪುಣ್ಯಾಹ ವಾಚನ, ರಕ್ಷಾ ಬಂಧನ, ಮೃತ್‌ಸಂಗ್ರಹಣೆ, ಅಂಕುರಾರ್ಪಣೆ, ಗರುಡಧ್ವಜ ಪ್ರತಿಷ್ಠೆ. ಜುಲೈ 6 ರಂದು ಬೆಳಗ್ಗೆ ಧ್ವಜಾರೋಹಣ, ಚತುಸ್ಥಾನಾರ್ಚನೆ, ಅಭಿಷೇಕ, ನಂದಾದೀಪ ಸ್ಥಾಪನೆ, ಅಗ್ನಿ ಪ್ರತಿಷ್ಠೆ, ಮಹಾಮಂಗಳಾರತಿ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 5 ಗಂಟೆಗೆ ರಥಕ್ಕೆ ಕಲಶ ಸ್ಥಾಪನೆ, ಚತುಸ್ಥಾನಾರ್ಚನೆ, ಗಜೇಂದ್ರ ಮೋಕ್ಷ, ಶ್ರೀಲಕ್ಷ್ಮೀ ಕಲ್ಯಾಣೋತ್ಸವ. ಜುಲೈ 7ರಂದು ಬೆಳಗ್ಗೆ ಚತುಸ್ಥಾನಾರ್ಚನೆ, ಸಹಸ್ರನಾಮಾರ್ಚನೆ, ಸಂಜೆ 4:30ಕ್ಕೆ ಬ್ರಹ್ಮ ರಥೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ. ನಂತರ ಸಂಜೆ 7 ಗಂಟೆಗೆ ಶಯನೋತ್ಸವ ಮತ್ತು ಜುಲೈ 8 ರ ಬೆಳಗ್ಗೆ ಬೆಳಗ್ಗೆ ಚತುಸ್ಥಾನಾರ್ಚನೆ, ಧ್ವಜ ಅವರೋಹಣ, ಮಹಾಪೂರ್ಣಾಹುತಿ, ಅಶ್ವವಾಹನೋತ್ಸವಗಳು ಜರುಗಲಿವೆ…

Read More

ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಬುಧವಾರ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರಿಂದ ಪ್ರದಾನ ಮಾಡಿದರು. ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಗೆ ಭಾಜನರಾಗಿರುವುದು ಗೌರವ ತಂದಿದೆ ಎಂದು ಪ್ರಧಾನಿ ಎಕ್ಸ್‌ ನಲ್ಲಿ ಹೇಳಿದ್ದಾರೆ. ತಮ್ಮ ಸ್ವೀಕಾರ ಭಾಷಣದಲ್ಲಿ, ಈ ಪ್ರಶಸ್ತಿ ತಮಗೆ ಅತ್ಯಂತ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಮೋದಿ ಹೇಳಿದರು. 140 ಕೋಟಿ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ ಅವರು, ಎರಡು ದೇಶಗಳ ಯುವಕರ ಆಕಾಂಕ್ಷೆಗಳು ಮತ್ತು ಉಜ್ವಲ ಭವಿಷ್ಯ, ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆಗೆ…

Read More

ಸರಗೂರು:  ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಂಧತ್ವ ನಿವಾರಣೆಗಾಗಿ ಇಂದಿನಿಂದ  ರಾಜ್ಯಾದ್ಯಂತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು  ಜುಲೈ 3ರಂದು ರಾಜ್ಯದಲ್ಲಿ ಒಟ್ಟು 393 ಕೇಂದ್ರಗಳಲ್ಲಿ ಏಕಕಾಲದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯ ಕ್ರಮದಲ್ಲಿ ಮೊದಲಿಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನ ನಿತ್ಯದ ಚಟುವಟಿಕೆಯಲ್ಲಿ ಮನೆ ಮನೆ ಭೇಟಿ ನೀಡಿ ಪ್ರಾಥಮಿಕ ತಪಾಸಣೆ ಮಾಡುತ್ತಾರೆ, ತಪಾಸಣೆಯಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳಿಸುವುದು, ಅಗತ್ಯ ಚಿಕಿತ್ಸೆಗೆ ನೆರವು ಮಾಡಿ ಕೊಡುವುದು ಎಂದರು. ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು  1,470 ಕನ್ನಡಕಗಳು ಬಂದಿರುತ್ತವೆ. ಇದರಲ್ಲಿ1,092 ಫಲಾನುಭವಿಗಳಿಗೆ…

Read More

ಮೈಸೂರು:  ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್  ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದರು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More