Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತುಮಕೂರು: ನಗರದ ಉದ್ಯಮಿಯೊಬ್ಬರಿಗೆ ಪ್ರಸಿದ್ಧ ಬಟ್ಟೆ ಬ್ರ್ಯಾಂಡ್ ‘ಸ್ನಿಚ್’ (Snitch) ಕಂಪನಿಯ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 8.75 ಲಕ್ಷ ರೂಪಾಯಿಗಳನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನಗರದ ಕೆ.ಆರ್. ಬಡಾವಣೆಯ ನಿವಾಸಿ ಹಾಗೂ ಉದ್ಯಮಿ ಚಂದನ್ ಕುಮಾರ್ ಅವರು ‘ಸ್ನಿಚ್’ ಕಂಪನಿಯ ಬಟ್ಟೆ ಮಳಿಗೆಯನ್ನು ಆರಂಭಿಸಲು ನಿರ್ಧರಿಸಿದ್ದರು. ಈ ಸಂಬಂಧ ಫ್ರಾಂಚೈಸಿ ಪಡೆಯುವ ಬಗ್ಗೆ ಗೂಗಲ್‌ನಲ್ಲಿ ಮಾಹಿತಿ ಹುಡುಕುತ್ತಿದ್ದಾಗ, ಅಪರಿಚಿತ ವ್ಯಕ್ತಿಗಳು ಅವರನ್ನು ಸಂಪರ್ಕಿಸಿದ್ದಾರೆ. ತಾವು ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಚಂದನ್ ಅವರಿಂದ ಮಳಿಗೆಯ ವಿಡಿಯೊ, ಫೋಟೊ ಮತ್ತು ಬ್ಯಾಂಕ್ ವಿವರಗಳನ್ನು ಪಡೆದುಕೊಂಡಿದ್ದಾರೆ. ಹಂತ ಹಂತವಾಗಿ ಹಣ ವಸೂಲಿ: ಫ್ರಾಂಚೈಸಿ ಮಂಜೂರು ಮಾಡುವುದಾಗಿ ನಂಬಿಸಿದ ಕಿಲಾಡಿಗಳು, ಆರಂಭದಲ್ಲಿ ನೋಂದಣಿ ಶುಲ್ಕವಾಗಿ ₹2.75 ಲಕ್ಷ ಪಾವತಿಸುವಂತೆ ಕೇಳಿದ್ದಾರೆ. ಅದನ್ನು ಪಾವತಿಸಿದ ನಂತರ, ಭದ್ರತಾ ಠೇವಣಿಯಾಗಿ ₹12 ಲಕ್ಷ ನೀಡಬೇಕು ಎಂದು ತಿಳಿಸಿ, ಮೊದಲ ಕಂತಿನ ರೂಪದಲ್ಲಿ ಮತ್ತೆ ₹6 ಲಕ್ಷ ವರ್ಗಾಯಿಸಿಕೊಂಡಿದ್ದಾರೆ. ಹೀಗೆ ಒಟ್ಟು ₹8.75 ಲಕ್ಷ…
ಬೆಂಗಳೂರು: ನರೇಗಾ (MNREGA) ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಂಗಳವಾರ ಸದನದಲ್ಲಿ ಅಂಕಿಅಂಶಗಳ ಸಮೇತ ತಿರುಗೇಟು ನೀಡಿದರು. 454 ಯೋಜನೆಗಳ ಸುದೀರ್ಘ ಪಟ್ಟಿ: ಕಾಂಗ್ರೆಸ್ ಅವಧಿಯಲ್ಲಿ ಕೇವಲ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೆಸರಿಡಲಾದ ಸುಮಾರು 454 ಯೋಜನೆಗಳು, ರಸ್ತೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಟ್ಟಡಗಳ ಪಟ್ಟಿಯನ್ನು ಅಶೋಕ್ ಸದನದಲ್ಲಿ ಪ್ರದರ್ಶಿಸಿದರು. ಅಂದಾಜು ಎರಡು ಮೀಟರ್ ಉದ್ದದ ಈ ಪಟ್ಟಿಯನ್ನು ಓದುವ ಮೂಲಕ ಅವರು ಸರ್ಕಾರದ ಗಮನ ಸೆಳೆದರು. ‘ನಕಲಿ ಗಾಂಧಿ’ಗಳ ವಾಗ್ದಾಳಿ: “ಮಹಾತ್ಮ ಗಾಂಧಿಯವರ ಪೂರ್ಣ ಹೆಸರು ಮೋಹನದಾಸ ಕರಮಚಂದ ಗಾಂಧಿ. ಆದರೆ ಕಾಂಗ್ರೆಸ್ ನಾಯಕರು ಮೊದಲ ಎರಡು ಹೆಸರುಗಳನ್ನು ಬಿಟ್ಟು ಕೇವಲ ‘ಗಾಂಧಿ’ ಹೆಸರನ್ನು ಮಾತ್ರ ಬಳಸಿಕೊಂಡು ರಾಜಕೀಯ ಅಸ್ತಿತ್ವಕ್ಕಾಗಿ ಅದನ್ನು ಹೈಜಾಕ್ ಮಾಡಿದ್ದಾರೆ. ಇವರೆಲ್ಲರೂ ನಕಲಿ ಗಾಂಧಿಗಳು” ಎಂದು ಅಶೋಕ್ ಟೀಕಿಸಿದರು. ಕಾಂಗ್ರೆಸ್‌ಗೆ ಪ್ರಶ್ನೆ: “ನಿಮ್ಮ…
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಅಂಕಿ–ಅಂಶಗಳ ಸಹಿತ ಸ್ಪಷ್ಟಪಡಿಸಿದರು. ಹಿಂದಿನ ಸರ್ಕಾರಗಳ ಅವಧಿಯ ಅಪರಾಧಗಳ ವಿವರ: ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ ಪರಮೇಶ್ವರ್, ಅವರ ಅವಧಿಯಲ್ಲಿ ನಡೆದ ಅಪರಾಧಗಳ ಪಟ್ಟಿಯನ್ನು ನೀಡಿದರು: ಆರ್. ಅಶೋಕ (2011-2013): 4,121 ಕೊಲೆಗಳು, 582 ಮಾದಕ ದ್ರವ್ಯ ಪ್ರಕರಣಗಳು ಹಾಗೂ 995 ಸೈಬರ್ ಅಪರಾಧಗಳು ದಾಖಲಾಗಿದ್ದವು. ಬಸವರಾಜ ಬೊಮ್ಮಾಯಿ (2019-2020): 2,554 ಕೊಲೆಗಳು, 8,317 ಮಾದಕ ದ್ರವ್ಯ ಪ್ರಕರಣಗಳು ಮತ್ತು 19,157 ಸೈಬರ್ ಅಪರಾಧ ಪ್ರಕರಣಗಳು ನಡೆದಿದ್ದವು. ಆರಗ ಜ್ಞಾನೇಂದ್ರ: ಇವರ ಅವಧಿಯಲ್ಲಿ 2,417 ಕೊಲೆಗಳು ಹಾಗೂ 24,486 ಸೈಬರ್ ಅಪರಾಧಗಳು ದಾಖಲಾಗಿದ್ದವು. “ನಾನು…
ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆಯ ಕುರಿತು ವಿವರಣೆ ನೀಡಿದರು: ರಾಜ್ಯಪಾಲರ ಆಕ್ಷೇಪ: ಈ ಮಸೂದೆಯಲ್ಲಿರುವ ಸುಮಾರು 28 ಅಂಶಗಳನ್ನು ಪ್ರಶ್ನಿಸಿರುವ ರಾಜ್ಯಪಾಲರು, ಬಿಲ್ ಅನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಮಸೂದೆ ನೆನೆಗುದಿಗೆ ಬೀಳುವಂತೆ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ದೂರಿದರು. ಮಸೂದೆಯ ಅಗತ್ಯತೆ: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಹರಡುವ, ಸಮುದಾಯಗಳನ್ನು ದೂಷಿಸುವ ಮತ್ತು ವೈಯಕ್ತಿಕ ನಿಂದನೆ ಮಾಡುವ ಭಾಷಣಗಳಿಗೆ ಕಡಿವಾಣ ಹಾಕಲು ಈ ಕಾಯ್ದೆ ಅನಿವಾರ್ಯವಾಗಿದೆ. ಕೆಲವು ಭಾಗಗಳಲ್ಲಿ ನಡೆದ ಪ್ರಚೋದನಾಕಾರಿ ಭಾಷಣಗಳ ಪರಿಣಾಮ ಏನಾಗಿದೆ ಎಂಬುದು ನಮಗೆ ತಿಳಿದಿದೆ ಎಂದು ಅವರು ಹೇಳಿದರು. ಮುಂದಿನ ನಡೆ: ಒಂದು ವೇಳೆ ರಾಷ್ಟ್ರಪತಿಗಳು…
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದ ಆಡಳಿತ ವ್ಯವಸ್ಥೆಯು ಸಂಪೂರ್ಣವಾಗಿ ‘ಕೋಮಾ’ ಸ್ಥಿತಿಗೆ ತಲುಪಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಅಶೋಕ್ ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ: ಸುಳ್ಳಿನ ಭಾಷಣ: ರಾಜ್ಯಪಾಲರ ಭಾಷಣವು ಸತ್ಯಕ್ಕೆ ದೂರವಾಗಿದೆ. ಸರ್ಕಾರವು ರಾಜ್ಯಪಾಲರ ಮೂಲಕ ಸುಳ್ಳನ್ನು ಹೇಳಿಸುತ್ತಿದೆ. ರಾಜ್ಯಪಾಲರ ಭಾಷಣಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ, ಆದರೆ ಸರ್ಕಾರ ಸಿದ್ಧಪಡಿಸಿದ ಭಾಷಣದ ಪಠ್ಯವನ್ನು ವಿರೋಧಿಸುತ್ತೇನೆ ಎಂದು ಅವರು ಹೇಳಿದರು. ಅಧಿಕಾರದ ಜಗಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಅಧಿಕಾರದ ಕಿತ್ತಾಟವು ರಾಜ್ಯದ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೈಕಮಾಂಡ್ ಓಲೈಕೆ ಮತ್ತು ರಾಜಕೀಯ ಪ್ರತಿಷ್ಠೆಗಾಗಿ ಸರ್ಕಾರವು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ ಎಂದು ಅಶೋಕ್ ಆರೋಪಿಸಿದರು. ಭ್ರಷ್ಟಾಚಾರದ ಆರೋಪ:…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಬಹುಚರ್ಚಿತ ‘ದ್ವೇಷ ಭಾಷಣ ಮಸೂದೆ’ (Hate Speech Bill) ಈಗ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ಮಸೂದೆಗೆ ಸಹಿ ಹಾಕಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಅಸ್ಪಷ್ಟ ವ್ಯಾಖ್ಯಾನ: ಮಸೂದೆಯಲ್ಲಿ ‘ದ್ವೇಷ ಭಾಷಣ’ ಎಂಬ ಪದದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಇದರಿಂದ ಧರ್ಮ, ಜಾತಿ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮ ಜರುಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರು ಆತಂಕ ವ್ಯಕ್ತಪಡಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಮಸೂದೆಯು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಭೀತಿ ಇದೆ. ಪ್ರಜಾಪ್ರಭುತ್ವದ ಮುಕ್ತ ಚರ್ಚೆಗಳಿಗೆ ಇದು ಅಡ್ಡಿಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಸಮರ್ಪಕ ಚರ್ಚೆ: ಉಭಯ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್ತು) ಈ ಮಸೂದೆಯ ಬಗ್ಗೆ ಸಮರ್ಪಕ ಮತ್ತು ಅರ್ಥಪೂರ್ಣ ಚರ್ಚೆ ನಡೆಯದೆ ಅಂಗೀಕರಿಸಲಾಗಿದೆ ಎಂದು ರಾಜ್ಯಪಾಲರು ಆಕ್ಷೇಪಿಸಿದ್ದಾರೆ. ದುರುಪಯೋಗದ…
ಸರಗೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ನಿರ್ದೇಶಕ ವಿ.ವಿಜಯ ಕುಮಾರ್ ನಾಗನಾಳ ತಿಳಿಸಿದರು. ಪಟ್ಟಣದ ಪಟ್ಟಣ 11 ನೇ ವಾರ್ಡಿನ ವ್ಯಾಪ್ತಿಯ ಪಡುವಲ ವಿರಕ್ತ ಮಠದ ಶ್ರೀ ಕಾಳ ಓಡಯ ಗುರುಗಳ ಮಹಾವಿಧ್ಯಾಪೀಠದಲ್ಲಿ ಶನಿವಾರದಂದು ಗುರುಕುಲೋತ್ಸವ 2026 ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು. ರಾಷ್ಟ್ರನಾಯಕರು, ಮಹಾನ್ ವ್ಯಕ್ತಿಗಳ ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆಯಾಗಬೇಕು’ ಎಂದರು…
ಸರಗೂರು: ಪಟ್ಟಣದಲ್ಲಿ ಶನಿವಾರ ಹಿಂದೂ ಸಮಾಜೋತ್ಸವದ ವತಿಯಿಂದ ಬೃಹತ್ ಶೋಭಾಯಾತ್ರೆ, ವಿಜೃಂಭಣೆಯಿಂದ ನೆರವೇರಿತು. ಸ್ನೇಹಸ್ತ್ರೀ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಸುಧಾ ಮೃತ್ಯುಂಜಪ್ಪ ಮಾತನಾಡಿ, ಇವಾಗ ಎಲ್ಲರು ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ವಿದೇಶಿಗಳು ನಮ್ಮ ಭಾರತ ಸಂಸ್ಕೃತಿ ಬಗ್ಗೆ ಮಾರು ಹೋಗಿ ನಮ್ಮ ಸಂಸ್ಕೃತಿ ದೊಡ್ಡದು ಎಂದು ತಿಳಿದು ಬರುತ್ತಿದ್ದಾರೆ. ಸಂಘಟನೆ ಮಾಡಬೇಕು, ದೇವಾಲಯಕ್ಕೆ ಹೋಗಬೇಕು, ಉಡುಗೆ ತೊಡುಗೆಯಿಂದ ನಮ್ಮ ಸಂಸ್ಕೃತಿ ಬಗ್ಗೆ ತಿಳಿಸುತ್ತದೆ ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಮಾತನಾಡಿ, ಹಿಂದೂಗಳಾದ ನಮ್ಮಲ್ಲಿ ನಮ್ಮ ದೇಶದ, ನಮ್ಮಗಳ ಶಕ್ತಿ ಸಾಮರ್ಥ್ಯ ಏನು ಎಂಬುದನ್ನು ಪರಿಚಯಿಸಲು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಲ್ಲೆಡೆ ಹಿಂದೂ ಸಮಾಜೋತ್ಸವ ಆಚರಿಲಾಗುತ್ತಿದೆ. ಮೊದಲು ಹಿಂದೂಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು. ಭಾರತಾಂಬೆ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಹಿಂದೂ ಸಮಾಜೋತ್ಸವದ ಉದ್ದೇಶವಾಗಿದೆ ಎಂದರು. ಹಂಚಿಪುರ…
ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ.24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಪ್ರಕೃತಿ ವೈಚಿತ್ರಗಳ ಗಿಡಮೂಲಿಕೆಗಳ ಔಷಧಿಯ ವೈವಿಧ್ಯ ಬರಹಗಳನ್ನು ಸುಂದರ ಲೇಖನಗಳನ್ನು ನಾಡಿನಾದ್ಯಂತ ಪತ್ರಿಕೆಗಳಲ್ಲಿ ಗ್ರಾಮೀಣ ಭಾಗದ ಹವ್ಯಾಸಿ, ವರದಿಗಾರರಾಗಿ ಅಲ್ಲವೇ ವಿನೂತನ ಪರಿಕಲ್ಪನೆ ಯೊಂದಿಗೆ ಸ್ವರ ಸಿಂಚನ ಕಲಾತಂಡ ದ ಸಂಗೀತವನ್ನು ಪ್ರಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕಲಾ ಪ್ರೋತ್ಸಾಹಕರಾಗಿ ಕಲಾ ನಿರ್ದೇಶಕರಾಗಿದ್ದು ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷರು ಶಾಸಕರು ಆದ ಅಶೋಕ್ ಕುಮಾರ್ ರೈ ಶಾಲು ಪೇಟ ಹೊದಿಸಿ ಸನ್ಮಾನ ಪತ್ರಗಳನ್ನಿತ್ತು ಸನ್ಮಾನಿಸಿದರು. ಕಂಬಳ…
ಬೆಂಗಳೂರಿನಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಮಾಲೀಕರ ವಿಶ್ವಾಸ ಗಳಿಸಿ, ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ನೇಪಾಳಿ ದಂಪತಿಯ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ. ಈ ಸಂಬಂಧ ಮಾರತಹಳ್ಳಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ದಿನೇಶ್ ಮತ್ತು ಕಮಲ (ಅಥವಾ ಸಲೀನಾ) ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಈ ದಂಪತಿ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ನಕಲಿ ಗುರುತಿನ ಚೀಟಿಗಳನ್ನು ನೀಡಿ ಮಾಲೀಕರನ್ನು ನಂಬಿಸಿದ್ದ ಇವರು, ಸಂಚು ರೂಪಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನು ಹೊತ್ತೊಯ್ದಿದ್ದಾರೆ. ತನಿಖೆಯ ವೇಳೆ ಈ ಜೋಡಿಯು ಈ ಹಿಂದೆ ಮಹಾರಾಷ್ಟ್ರದ ಪುಣೆಯಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಅಲ್ಲಿನ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಸುಮಾರು 16 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದರು. ಪ್ರಸ್ತುತ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಸೆರೆಹಿಡಿಯಲು ಪೊಲೀಸರು ಮುಂಬೈ, ಕೋಲ್ಕತ್ತಾ ಮತ್ತು ನೇಪಾಳದ ಗಡಿ ಭಾಗಗಳಲ್ಲಿ ಏಳು ವಿಶೇಷ…