Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಶವಾಗಾರಗಳಲ್ಲಿ ಸಿಸಿಟಿವಿ ಅಳವಡಿಸಲು ಕರ್ನಾಟಕ ಹೈಕೋರ್ಟ್. ಆಸ್ಪತ್ರೆಯ ಪರಿಚಾರಕರು ಯುವತಿಯರ ಮೃತದೇಹಗಳನ್ನು ಸುಡುವುದನ್ನು ತಡೆಯಲು ಭದ್ರತೆಯನ್ನು ಹೆಚ್ಚಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಶವಾಗಾರಗಳಲ್ಲಿ ಸಿಸಿಟಿವಿ ಅಳವಡಿಸಲು ನ್ಯಾಯಾಲಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶ ನೀಡಿದೆ. ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ದುರದೃಷ್ಟವಶಾತ್, ದೇಶದಲ್ಲಿ ಶವರತಿ ವಿರುದ್ಧ ಯಾವುದೇ ಕಾನೂನು ಇಲ್ಲ ಮತ್ತು ಶವರತಿಯನ್ನು ಕ್ರಿಮಿನಲ್ ಅಪರಾಧ ಮಾಡುವ ಕಾನೂನನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಿದೆ. ಶವಾಗಾರಗಳನ್ನು ಸಿಸಿಟಿವಿಗಳೊಂದಿಗೆ ಸ್ವಚ್ಛವಾಗಿಡುವಂತೆಯೂ ಹೈಕೋರ್ಟ್ ಸೂಚಿಸಿದೆ. ಆತ್ಮಹತ್ಯೆ ಅಥವಾ ಏಡ್ಸ್ ನಿಂದ ಸಾವನ್ನಪ್ಪಿದರೆ ಅಂತಹ ರೋಗಿಗಳ ಮಾಹಿತಿಯನ್ನು ಆಸ್ಪತ್ರೆಗಳು ಗೌಪ್ಯವಾಗಿಡಬೇಕು. ಮರಣೋತ್ತರ ಪರೀಕ್ಷೆ ಕೊಠಡಿಯನ್ನು ಸಾರ್ವಜನಿಕರು ನೇರವಾಗಿ ನೋಡುವಂತೆ ಸಿದ್ಧಪಡಿಸಬೇಡಿ. ಮೃತ ದೇಹ ಮತ್ತು ಮೃತರ ಕುಟುಂಬವನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಸರಿಯಾದ ತಿಳುವಳಿಕೆ ಇರಬೇಕು ಎಂದು ನ್ಯಾಯಾಲಯ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ…
ಓಡುತ್ತಿರುವ ಸ್ಕೂಟರ್‌ನಲ್ಲಿ ಇಬ್ಬರು ಯುವಕರು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮೂರು ಜನರೊಂದಿಗೆ ಪ್ರಯಾಣಿಸುತ್ತಿದ್ದ ಹೋಂಡಾ ಆಕ್ಟಿವಾ ಹಿಂದೆ ಹುಡುಗರು ಲಿಪ್ ಲಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಉತ್ತರ ಪ್ರದೇಶದ ರಾಂಪುರದ್ದು ಎನ್ನಲಾಗಿದೆ. ಘಟನೆ ಗಮನಕ್ಕೆ ಬಂದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮೂವರು ಹುಡುಗರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವುದು ಕಂಡು ಬರುತ್ತಿದೆ. ‘ರಾಂಪುರ್ ವಿಕಾಸ್ ಅಧಿಕಾರ’ ಎಂದು ಬರೆದಿರುವ ಫಲಕದ ಬಳಿಯೇ ವಾಹನ ಸಾಗುತ್ತಿರುವುದು ಸ್ಪಷ್ಟವಾಗಿದೆ. ಅಷ್ಟರಲ್ಲಿ ಆಕ್ಟಿವಾ ಹಿಂದೆ ಇಬ್ಬರು ಯುವಕರು ಲಿಪ್ ಲಾಕ್ ಮಾಡಿದ್ದಾರೆ. ಇನ್ನೊಂದು ವಾಹನವೂ ಎದುರುಗಡೆಯಿಂದ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದ್ವಿಚಕ್ರ ವಾಹನದ ಹಿಂದೆ ವಾಹನದಲ್ಲಿದ್ದವರು ವಿಡಿಯೋ ಮಾಡಿದ್ದಾರೆ. ಸಂಸಾರ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಘಟನೆ ನಡೆದ ದಿನ ತಿಳಿದು ಬಂದಿಲ್ಲ ಎಂದ ಅವರು, ಯುವಕರು ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ…
ರಾಯಚೂರು: ಕುಡಿಯಲು ನೀರು ತರಲು ಹೋಗಿ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ ಹಾಗೂ ಮಗ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರ್ತಕುಂದಾ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಚಿಕ್ಕಪ್ಪ ಸಲೀಂ ಹುಸೇನಸಾಬ್ (32) ಹಾಗೂ ಅಣ್ಣನ ಮಗ ಯಾಸೀನ್ ರಫಿ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನರೇಗಾ ಕೆಲಸಕ್ಕೆ ಚಿಕ್ಕಪ್ಪನ ಜೊತೆಯಲ್ಲಿ ಹೋಗಿದ್ದ ಬಾಲಕ ಕೆರೆಯಲ್ಲಿ ಕುಡಿಯಲು ನೀರು ತುಂಬಿಕೊಂಡು ಬರಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ. ಬಾಲಕನ ಚೀರಾಟ ಕೇಳಿ ರಕ್ಷಣೆಗೆ ಹೋದ ಚಿಕ್ಕಪ್ಪನೂ ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ | ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬೆಂಗಳೂರು: ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಲು ಹಾಗೂ ಕನ್ನಡ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ. ಅವರು ಇಂದು ಕನ್ನಡ ಭವನದಲ್ಲಿರುವ ಅಂತರಂಗ ಸಭಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರ ವ್ಯಾಪ್ತಿಗೆ ಬರುವ ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ವಿಧಾನಮಂಡಲದಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಸೂಚಿಸಿದರು. ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಆಯೋಜಿಸುತ್ತಿರುವ ವಿವಿಧ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಆಯೋಜಿಸಲು ರೂಪುರೇಷೆ ಸಿದ್ಧಪಡಿಸಬೇಕೆಂದು ಹೇಳಿದರು.…
ತುರುವೇಕೆರೆ: ತಾಲೂಕಿನ ದಂಡಿನ ಶಿವರ ಹೋಬಳಿಯ ಕುರುಬರಹಳ್ಳಿ ಕೊಪ್ಪ ಗ್ರಾಮದ ನಿವಾಸಿಯಾದ ಪಂಕಜ ಕೋಂ ಲೇಟ್ ಸಿದ್ದರಾಮಯ್ಯ ಎಂಬ ಮಹಿಳೆಯ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಒಂಟಿ ಮಹಿಳೆಯ ಮೇಲೆ ದ್ವಿಚಕ್ರ ವಾಹನ ಸಮೇತ ನೆಲಕ್ಕೆ ಕೆಡವಿ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಶಿವಣ್ಣ, ಚಂದ್ರು. ಮಂಗಳ ಗೌರಮ್ಮ, ಜಯಂತ್, ಪೂಜಾ ಹಾಗೂ ರವಿ ಇವರು ಪಂಕಜ ಎಂಬವರ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳು ಎನ್ನಲಾಗಿದೆ. ಸದ್ಯ ಹಲ್ಲೆಗೊಳಗಾದ ಮಹಿಳೆಯು ತುರುವೇಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚಾಮರಾಜನಗರ: ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ. ಇದೊಂದು ತರಬೇತಿ ವಿಮಾನವಾಗಿದ್ದು ಭೂಮಿಕಾ ಹಾಗೂ ತೇಜ್ ಪಾಲ್ ಎಂಬವರು ಈ ವಿಮಾನವನ್ನು ಚಲಾಯಿಸುತ್ತಿದ್ದರು. ಪ್ಯಾರಚೂಟ್ ಮೂಲಕ ಇಬ್ಬರೂ ತಮ್ಮನ್ನು ಬಚಾವ್ ಮಾಡಿಕೊಂಡಿದ್ದು ವಿಮಾನ ಪತನಗೊಂಡ 2 ಕಿಮಿ ದೂರದಲ್ಲಿ ಇಬ್ಬರು ಬಿದ್ದಿದ್ದರು. ಸದ್ಯ, ಇಬ್ಬರನ್ನು ವಾಯುಸೇನೆಯವರು ಪತ್ತೆಹಚ್ಚಿ ರಕ್ಷಣೆ ಮಾಡಿದ್ದು ಬೆಂಗಳೂರಿಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಕರೆದೊಯ್ದಿದ್ದಾರೆ. ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲಾ ವಕೀಲರ ಸಂಘ ಇಲ್ಲಿ 2023—24, 2024—25ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ ಗುರುವಾರ ನಡೆಯಿತು. ಈ ಚುನಾವಣೆಯಲ್ಲಿ ಕಾರ್ಯಕಾರಣಿ ಮಂಡಳಿ ಸದಸ್ಯ (ಮಹಿಳಾ ಮೀಸಲು) ಸ್ಥಾನಕ್ಕೆ ಮಂಜುಳ ಹೆಚ್.ಎನ್. ಅವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಣಿ ಮಂಡಳಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುಳ ಹೆಚ್.ಎನ್.ಅವರು ಮಾತ್ರವೇ ಉಮೇದುವಾರರಾಗಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು. ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ, ಅದರಲ್ಲಿ ಎರಡನೇ ಮಾತಿಲ್ಲ. 5 ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ನೀಡುವಂತೆ ಮನವಿ ಮಾಡ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಕೊಡದಿದ್ರೆ ಟೆಂಡರ್ ಕರೆಯುತ್ತೇವೆ. ನಾವೇ ಟೆಂಡರ್ ಮೂಲಕ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy