Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ತುಮಕೂರು: ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೇವರ ವಿಗ್ರಹಗಳನ್ನು ತಂದು ವಿಶೇಷ ಪೂಜೆ ಹಾಗೂ ಎಡೆಸೇವೆ ಸಲ್ಲಿಸಲಾಗಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಿಪಟೂರು ಪಟ್ಟಣದ ಶ್ರೀ ಭೂತ ರಾಯ ಸ್ವಾಮಿ, ಕೆಂಪಮ್ಮ ದೇವಿ ಮತ್ತು ಚಿಕ್ಕಮ್ಮ ದೇವಿ ದೇವರುಗಳನ್ನು ಮೆರವಣಿಗೆಯಲ್ಲಿ ಕರೆತಂದು ಪೊಲೀಸರು ಠಾಣೆಯಲ್ಲಿಯೇ ವಿಶೇಷ ಪೂಜೆಯನ್ನು ಸಲ್ಲಿಸಿದರು ಅದರಲ್ಲೂ ಮಹಿಳಾ ಪೊಲೀಸರಂತು ಆರತಿ ಬೆಳಗಿ ಪ್ರತಿಯೊಬ್ಬರಿಗೂ ಪ್ರಸಾದವನ್ನು ಹಂಚಿದರು. ಇನ್ನು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಎಲ್ಲಾ ಸಿಬ್ಬಂದಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಲಂಚ ಪಡೆದಿದ್ದ ಗುಬ್ಬಿ ತಾಲೂಕು, ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಲಾಗಿದೆ. ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಹಿನ್ನೆಲೆ. ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು.ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಮುದ್ರಾಂಕ ಇಲಾಖೆ ಆಯುಕ್ತರು ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆಗಾಲದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ತೆಗೆದುಕೊಳ್ಳಬೇಕಾಗಿರುವ ಯಂತ್ರೋಪಕರಣಗಳನ್ನು ಶಾಸಕ ಸತೀಶ್ ರೆಡ್ಡಿ ಪರಿಶೀಲಿಸಿದರು. ಮಳೆಯಾದ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಮುಂದಿನ ದಿನಗಳಲ್ಲಿ ಮಳೆಯಿಂದ ಯಾವುದೇ ಅನಾಹುತ ಜರುಗದಂತೆ ಕ್ರಮವಹಿಸಲು ಈಗಾಗಲೇ ಅಧಿಕಾರಿಗಳೊಂದಿಗೆ ಸಹ ಸಭೆ ನಡೆಸಿ ತಿಳಿಸಲಾಗಿದೆ ಮತ್ತು ಮುಂಜಾಗ್ರತೆಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ಕಾಟ್ಲೆಂಡ್‌ನ ಫೆಟ್ಲಾರ್ ದ್ವೀಪದಲ್ಲಿ ಅರಮನೆಯನ್ನು ಖರೀದಿಸಲು ಕೇವಲ 30 ಲಕ್ಷ ರೂ. 200 ವರ್ಷಗಳಷ್ಟು ಹಳೆಯದಾದ ಅರಮನೆಯು 40 ಎಕರೆ ಭೂಮಿಯಲ್ಲಿ ನಿಂತಿದೆ, ಇದರ ಬೆಲೆ ಕೇವಲ £ 30,000 (ಸರಿಸುಮಾರು ರೂ. 30 ಲಕ್ಷ, 71,872). ಆದರೆ, ಒಂದು ಸಣ್ಣ ಸಮಸ್ಯೆ. ಅರಮನೆ ನಿರ್ವಹಣೆಗೆ ಕೋಟಿಗಟ್ಟಲೆ ಖರ್ಚು ಮಾಡಬೇಕಿದೆ. ಶಿಥಿಲಗೊಂಡ ಕಟ್ಟಡಗಳ ನವೀಕರಣ ಮತ್ತು ನಿರ್ವಹಣೆಗೆ 12 ಮಿಲಿಯನ್ ಪೌಂಡ್‌ಗಳನ್ನು (ಸುಮಾರು ರೂ. 122 ಕೋಟಿ 95 ಲಕ್ಷ 57,129 ರೂ.) ಖರ್ಚು ಮಾಡಬೇಕು. ಅರಮನೆಯು ಬ್ರೋ ಲಾಡ್ಜ್ ಟ್ರಸ್ಟ್ ಅಡಿಯಲ್ಲಿದೆ. ಅರಮನೆಯನ್ನು ವಿಶ್ವ ದರ್ಜೆಯ ಹಿಮ್ಮೆಟ್ಟುವಿಕೆ ಕೇಂದ್ರವನ್ನಾಗಿ ಮಾಡಬಹುದು ಎಂದು ಅವರು ಹೇಳುತ್ತಾರೆ. ಅರಮನೆಯು ಯೋಗ ಹಿಮ್ಮೆಟ್ಟುವಿಕೆಗೆ ಸೂಕ್ತವಾದ ಸ್ಥಳವಾಗಿದೆ ಎಂದು ಅವರು ಹೇಳುತ್ತಾರೆ. ಈ ಅರಮನೆಯನ್ನು ಆರ್ಥರ್ ನಿಕೋಲ್ಸನ್ ನಿರ್ಮಿಸಿದ. ಫ್ರಾನ್ಸ್, ಸ್ವಿಟ್ಜರ್ಲೆಂಡ್ ಮತ್ತು ಇಟಲಿಯಂತಹ ದೇಶಗಳಿಗೆ ಭೇಟಿ ನೀಡಿದಾಗ ಪಡೆದ ಕಟ್ಟಡ ವಿಧಾನಗಳನ್ನು ಈ ಅರಮನೆ ನಿರ್ಮಾಣದಲ್ಲಿ ಬಳಸಲಾಗಿದೆ. 1980ರ ದಶಕದಲ್ಲಿ ಈ ಅರಮನೆಯಲ್ಲಿ ವಾಸವಿದ್ದು…
ಇಂಫಾಲ್: ಈಶಾನ್ಯ ರಾಜ್ಯಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಈಗಾಗಲೇ ಗ್ಯಾರಂಟಿ ಜಾರಿ ಬಗ್ಗೆ ಅಧಿಕಾರಿಗಳ ಜತೆ ಚರ್ಚೆಯಾಗಿದೆ. ಯಾವ ರೀತಿ ಗ್ಯಾರಂಟಿ ಜಾರಿ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸಚಿವ ಸಂಪುಟದಲ್ಲಿ ಅಂತಿಮವಾಗಿ ಎಲ್ಲವೂ ಗೊತ್ತಾಗಲಿದೆ. ವಿರೋಧ ಪಕ್ಷದವರು ಯಾವ ಆಧಾರದ ಮೇಲೆ ನಮಗೆ ಹೇಳ್ತಿದ್ದಾರೆ. ನಮಗೆ ಮತ ಹಾಕಿದ ಜನರ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಜೂ.1ರಂದು ಗ್ಯಾರಂಟಿ ಜಾರಿ ಮಾಡುತ್ತೇವೆ ಅಂತಾ ಯಾರು ಹೇಳಿದ್ದು 5 ಗ್ಯಾರಂಟಿ ಜಾರಿ ಮಾಡಲ್ಲ ಎಂದಿಲ್ಲ, ಜಾರಿ ಮಾಡೇ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೇರೆ ಬೇರೆ ರಾಜ್ಯಗಳಲ್ಲೂ ಬಸ್ ನಲ್ಲಿಉಚಿತ ಪ್ರಯಾಣ ಇದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲೂ ಉಚಿತ ಪ್ರಯಾಣ ಇದೆ. ಎಲ್ಲಾ ರಾಜ್ಯದ ಮಾದರಿಗಳನ್ನೂ ನಾವು ತರಿಸಿಕೊಂಡಿದ್ದೇವೆ. ಉಚಿತ ಪ್ರಯಾಣ ಬಗ್ಗೆ ಈಗಾಗಲೇ ಚರ್ಚೆ ಕೂಡ ಮಾಡಿದ್ದೇವೆ. ಚುನಾವಣೆ ವೇಳೆ ನಾವು ನೀಡಿದ ಭರವಸೆ ಈಡೇರಿಸಲು ಬದ್ಧ. ವಿಪಕ್ಷದವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಎಲ್ಲಾ ಮಾಹಿತಿ ನೀಡುತ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನ್ಯಾಯುಮೂರ್ತಿ ವೀರಪ್ಪ ಅವರು ಸುಮಾರು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿ ದಾಖಲೆ ನಿರ್ಮಾಣ ಮಾಡಿದ್ದಾರೆ.ಅನೇಕ ಐತಿಹಾಸಿಕ ತೀರ್ಪುಗಳನ್ನು ನೀಡಿದ್ದಾರೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಶ್ರದ್ಧೆ, ಕೃತಿ, ಆತ್ಮಸಾಕ್ಷಿ ಹಾಗೂ ಅನುಭವದ ಗುಣಗಳನ್ನು ವೀರಪ್ಪ ಅವರು ಹೊಂದಿದ್ದಾರೆ.ಅನುಭವದ ಜತೆಗೆ ಆತ್ಮಸಾಕ್ಷಿಯಿಂದ ತೀರ್ಪು ನೀಡಿ ಸಮಾಜದ ಹೃದಯ ಗೆದ್ದಿದ್ದಾರೆ.ವೀರಪ್ಪ ಅವರು ಜೈಲಿಗೆ ಹೋಗಿ ಖೈದಿಗಳ ಜತೆ ಊಟ ಮಾಡಿ ಅವರ ಹೇಳಿದ್ದನ್ನು ನೋಡಿದ್ದೇವೆ.ಮನಪರಿವರ್ತನೆ ಮಾಡಿದ್ದನ್ನೂ ನೋಡಿದ್ದೇವೆ. ಜತೆಗೆ ಅಲ್ಲಿ ಖೈದಿಗಳ ಬಳಿ ‘ನಿಮ್ಮನ್ನು ನೋಡಿ ವಿಧಾನಸೌಧದಲ್ಲಿರುವವರು ಕಲಿಯುವುದಿದೆ’ ಎಂದು ನಾವು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ,ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ,ಅರ್ಜುನನ ಗುರಿ, ಭೀಮನ ಬಲ, ವಿಧುರನ ನೀತಿ ಹಾಗೂ ಕೃಷ್ಣನ ತಂತ್ರ ಇರಬೇಕು. ಇದೆಲ್ಲವೂ ವೀರಪ್ಪ ಅವರಲ್ಲಿದೆ. ಅದಕ್ಕೆ ಅವರು ಯಶಸ್ಸು ಸಾಧಿಸಿದ್ದಾರೆ. ವೀರಪ್ಪ ಅವರು ತಮ್ಮಜೀವನದಲ್ಲಿ ಕೊಟ್ಟಿರುವ ತೀರ್ಪುಗಳು ಜನರ ಬಾಳಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ.ಮನುಷ್ಯನ ಹುಟ್ಟು ಆಕಸ್ಮಿಕ,ಸಾವು ಅನಿವಾರ್ಯ.ಜನನ…
ಹಲವು ದಶಕಗಳ ಕಾಲ ಕೆಂಗೇರಿ ಸುತ್ತಮುತ್ತ ನಾಗರಿಕರಿಗೆ ಜೀವಜಲವಾಗಿದ್ದ ಹೊಸಕೆರೆಯು ಈಗ ಒಳಚರಂಡಿ ನೀರು, ಹೂಳು, ಜೊಂಡು ಹಾಗೂ ತ್ಯಾಜ್ಯ ವಸ್ತುಗಳಿಂದ ಕಲುಷಿತಗೊಂಡಿದೆ. ಸುಮಾರು ಒಂದು ಕಿಲೋ ಮೀಟರಿಗೂ ಹೆಚ್ಚು ಉದ್ದನೆಯ ಅಚ್ಚುಕಟ್ಟು ಪ್ರದೇಶ ಹೊಂದಿರುವ ಕೆಂಗೇರಿ ಹೊಸಕೆರೆ, ನಿರ್ವಹಣೆ ಕೊರತೆಯಿಂದ ಅವಸಾನದತ್ತ ತಲುಪಿದೆ. ಕೆರೆಯ ಒಡಲು ಹೂಳಿನಿಂದ ಆವೃತವಾಗಿದೆ. ಕೆರೆ ತುಂಬೆಲ್ಲಾ ಜೊಂಡು ಬೆಳೆದು ನಿಂತಿದೆ. ಸಂಗ್ರಹ ಸಾಮರ್ಥ್ಯ ಕುಂಠಿತಗೊಂಡು, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ನೀರು ಕೂಡ ಪೋಲಾಗುತ್ತಿದೆ. ಇದರೊಂದಿಗೆ ಒಳಚರಂಡಿ ನೀರು ಸಹ ಕೆರೆಯ ಒಡಲು ಸೇರುತ್ತಿದೆ. ಕೆರೆಯ ನೀರಿನಲ್ಲಿ ನೊರೆ ಕಂಡು ಬರುತ್ತಿದ್ದು, ಇದು ಸುತ್ತಮುತ್ತ ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಕೆರೆ ಅಭಿವೃದ್ಧಿಗೆ ಈಗಾಗಲೇ ಎರಡು ಬಾರಿ ಅನುದಾನ ಬಿಡುಗಡೆಯಾಗಿದೆ. ಕೆಲ ವರ್ಷಗಳ ಹಿಂದೆ 13 ಕೋಟಿ ವೆಚ್ಚದಲ್ಲಿ ಕೆರೆಗೆ ಕಾಯಕಲ್ಪ ನೀಡಲಾಗಿತ್ತಾದರೂ ಯಾವುದೇ ಸುಧಾರಣೆಯಾಗಿರಲಿಲ್ಲ. ಕಳೆದ ಮಾರ್ಚ್ ತಿಂಗಳಲ್ಲಿ ಕೆ 8.8 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ನಿಧಾನಗತಿಯ…
ಸ್ವಂತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹರಿಹರ ತಾಲೂಕಿನ ದುರಗಪ್ಪ ಜೈಲು ಪಾಲಾದ ಅಪರಾಧಿ, ಈತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ. ಈ ವಿಚಾರ ಬೆಳಕಿಗೆ ಬಂದ ಬಳಿಕ ಹರಿಹರ ಗ್ರಾಂ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ ಸಂತ್ರಸ್ತೆಗೆ ಸರ್ಕಾರ 5 ಲಕ್ಷ ರೂ ಪರಿಹಾರ ನೀಡುವಂತೆ ಸೂಚಿಸಿದೆ. ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು…