Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬಹು ನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಚಂದ್ರಯಾನ 3 ಈಗ ಚಂದ್ರನಿಂದ ಕೇವಲ 25 ಕಿಲೋಮೀಟರ್ ದೂರದಲ್ಲಿದೆ ಎಂದು ಇಸ್ರೋ ಹೇಳಿದ್ದು ಯಶಸ್ವಿ ಲ್ಯಾಂಡಿಂಗ್ ನಡೆಯಲಿ ಎಂದು ದೇಶಾದ್ಯಂತ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಉತ್ತರಾಖಂಡದ ಋಷಿಕೇಶದಲ್ಲಿ ಗಂಗಾರತಿ ಮಾಡಲಾಯ್ತು. ಋಷಿಕೇಶದ ಪರಮಾರ್ಥ ನಿಕೇತನ ಘಾಟ್ ನಲ್ಲಿ ಕೈಯಲ್ಲಿ ತ್ರಿವರ್ಣ ಧ್ವಜದೊಂದಿಗೆ ಗಂಗಾ ಆರತಿ ಮಾಡಿದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯಲಿ, ದೇಶದ ಕೀರ್ತಿ ಪತಾಕೆ ಮೇಲಕ್ಕೆ ಹಾರಲಿ ಅಂತಾ ಪ್ರಾರ್ಥಿಸಲಾಯ್ತು. ಮೈಸೂರು ಬಿಜೆಪಿ ಮುಖಂಡರು ಮಂತ್ರಾಲಯಕ್ಕೆ ತೆರಳಿ ಗುರು ರಾಘವೇಂದ್ರರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ಸಲ್ಲಿಸುವ ಸಲುವಾಗಿ ನಿನ್ನೆ(ಆ.22) ರಂದೇ 82 ಬಿಜೆಪಿ ಕಾರ್ಯಕರ್ತರು ಮೈಸೂರಿನಿಂದ ಮಂತ್ರಾಲಯಕ್ಕೆ ಹೋಗಿದ್ದಾರೆ. ಇಂದು ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಶಾಸಕ ಶ್ರೀವತ್ಸ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮತ್ತೊಂದೆಡೆ ಕೊಪ್ಪಳ ಜಿಲ್ಲೆ ಗಂಗಾವತಿಯ ಸೇಂಟ್ ಪಾಲ್ಸ್ ಶಾಲೆಯ ಮಕ್ಕಳು ಚಂದ್ರಯಾನ-3…
ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಹೃದಯಾಘಾತ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟೀ ಕುಡಿಯಲು ಆಟೋ ನಿಲ್ಲಿಸಿ ತೆರಳುತ್ತಿದ್ದ ಚಾಲಕ ತಿಮ್ಮೇಶ್, ಆಟೋದಿಂದಲೇ ಇಳಿಯುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ತಿಮ್ಮೇಶ್, ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈ ಸಂಬಂಧ ಸಂಪಂಗಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಮೇಲೆ ಕಳ್ಳತನ ಆರೋಪ ಹೊರಿಸಿದ್ದರಿಂದ ನೊಂದಿದ್ದರು ಎನ್ನಲಾದ ಜಿಮೋನ್ ವರ್ಗಿಸ್ (43)ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ಜಿಮೋನ್ ವರ್ಗಿಸ್, ಕೆಲಸ ಹುಡುಕಿಕೊಂಡು ವರ್ಷದ ಹಿಂದೆ ನಗರಕ್ಕೆ ಬಂದಿದ್ದರು. ಮಹಿಳಾ ಉದ್ಯಮಿಯೊಬ್ಬರ ಮನೆಯಲ್ಲಿ ಚಾಲಕರಾಗಿ ಕೆಲಸಕ್ಕೆ ಸೇರಿದ್ದರು. ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಶೌಚಾಲಯದ ಕಿಟಕಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಲಿದೆ. ರಾಜ್ಯವನ್ನು ಕಗ್ಗತ್ತಲಲ್ಲಿ ಮುಳುಗಿಸುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಮಂಡ್ಯದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಮಧ್ಯಮ ವರ್ಗದವರ ಕರೆಂಟ್ ಬಿಲ್ ಡಬಲ್ ಬರುತ್ತಿದೆ. ಇದರಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸ ಆಗ್ತಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ವಸ್ತುಗಳ ಬೆಲೆ ಏರಿಕೆಯಾಗಿ ಸಂಕಷ್ಟ ಎದುರಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ನೇಣು ಹಾಕಿಕೊಂಡು ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ ಮುದಗಲ್(56) ಆತ್ಮಹತ್ಯೆ ಮಾಡಿಕೊಂಡ ಪ್ರಿನ್ಸಿಪಾಲ್. ಇಂದು “ಜಾನಪದ ಜಾತ್ರೆ ಹೊನ್ನ ಸಂಭ್ರಮ ಎಂಬ ಕಾರ್ಯಕ್ರಮ ಇತ್ತು. ನಿನ್ನೆ ವಿವಿಧ ಕಡೆ ತೆರಳಿ ಆಮಂತ್ರಣ ಕೊಟ್ಟು ಬಂದಿದ್ದ ಪ್ರಿನ್ಸಿಪಾಲ್, ಇಂದು ಬೆಳಿಗ್ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು ನಡೆಸುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರ ಗೆಲ್ಲಲು ಡಿಸಿಎಂ ಡಿಕೆ ಶಿವಕುಮಾರ್ ತಂತ್ರ ರೂಪಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ 8 ವಿಧಾನಸಭೆ ಕ್ಷೇತ್ರಗಳಿದ್ದು, ಈ ಪೈಕಿ 3 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆದರೆ ಬಿಜೆಪಿಯ ಮೂವರು ಶಾಸಕರಾದ ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜು, ಕೆ.ಗೋಪಾಲಯ್ಯಗೆ ಕಾಂಗ್ರೆಸ್ ಗಾಳ ಹಾಕಿದ್ದು, ಘರ್ ವಾಪ್ಸಿ ಮಾಡಿಕೊಳ್ಳಲು ಕಾಂಗ್ರೆಸ್ ಸ್ಕೆಚ್ ಹಾಕಿದೆ. ಮೂವರು ಶಾಸಕರು ಕಾಂಗ್ರೆಸ್‍ಗೆ ಮರಳಿದರೆ ಕಾಂಗ್ರೆಸ್ ಬಲ ವೃದ್ಧಿಯಾಗಲಿದೆ. ಉಪಚುನಾವಣೆ ಮೂಲಕ ಹಾಲಿ 3:5 ಬಲವನ್ನು, 5:3 ಮಾಡಿಕೊಳ್ಳಲು ತಂತ್ರ ರೂಪಿಸಿದ್ದು, ಮೂವರ ಬಲದಿಂದ ಸುಲಭ ಜಯದ ಲೆಕ್ಕಾಚಾರವನ್ನು ಡಿಕೆಶಿ ಹೆಣೆದಿದ್ದಾರೆ ಎನ್ನಲಾಗಿದೆ. ಮಧ್ಯೆ ಈ ಬಾರಿ ಬಿಜೆಪಿಯಲ್ಲಿ ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಎಂಬ ಚರ್ಚೆಯೂ ಇದೆ. ಇದು ನಿಜವಾದರೆ, ಕಾಂಗ್ರೆಸ್‍ನಿಂದ ಸಮರ್ಥ ಒಕ್ಕಲಿಗ ಅಭ್ಯರ್ಥಿ ಕಣಕ್ಕಿಳಿಸಿ ಗೆಲ್ಲುವ…
ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2021-22ರ ಅವಧಿಯಲ್ಲಿ 63 ಕಿಮೀ ರಾಜಕಾಲುವೆಗೆ ಬಾಕ್ಸ್ ಮತ್ತು ಯೂ ಟೈಪ್ ಕಾಮಗಾರಿ ನಿರ್ವಹಿಸಲು 7454 ಕೋಟಿ ವೆಚ್ಚವಾಗಿದೆ ಎಂದು ತೋರಿಸಲಾಗಿದೆ. ವಾಸ್ತವದಲ್ಲಿ ಕಾಮಗಾರಿ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಸರ್ಕಾರ ರಚಿಸಿರುವ ಎಸ್‌ಐಟಿಗೆ ದೂರು ನೀಡಲಾಗಿದೆ. ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಎನ್, ಅಮರೇಶ್ ಅವರು ಎಸ್‌ಐಟಿಯ ಅಧ್ಯಕ್ಷ ಪಿ. ಸಿ. ಜಾಫರ್ ಅವರಿಗೆ ದಾಖಲೆಗಳ ಸಹಿತ ಪತ್ರ ಸಲ್ಲಿಸಿದ್ದಾರೆ.
ನಮ್ಮತುಮಕೂರು/ಗುಬ್ಬಿ: ಇತ್ತೀಚೆಗಷ್ಟೇ ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಊರಿನ ಹೊರಗಡೆ ಇಡಲಾಗಿದ್ದ ಬಾಣಂತಿಯ ಮಗು ಅನಾರೋಗ್ಯ ಪೀಡಿತವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದರೂ ಇನ್ನೂ ಕೂಡ ಗೊಲ್ಲ ಸಮುದಾಯದಲ್ಲಿ ಜಾಗೃತಿ ಮೂಡಿಲ್ಲ, ಇದೀಗ ಇಂತಹದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಗುಬ್ಬಿಯಿಂದ ಸುಮಾರು 6 ಕಿ.ಮೀ. ದೂರದಲ್ಲಿರುವ ವರದೇವನಹಳ್ಳಿ ಹಟ್ಟಿ ಗ್ರಾಮದಲ್ಲಿ ಬಾಣಂತಿ ಮತ್ತು ಮಗುವನ್ನು ಗ್ರಾಮದ ಹೊರಗೆ ಗುಡಿಸಲಿನಲ್ಲಿ ಅಮಾನವೀಯ ಸ್ಥಿತಿಯಲ್ಲಿ ಯಾವುದೇ ಮೂಲಭೂತ ಸೌಕರ್ಯವಿಲ್ಲದ ಗೂಡಿನಂತಹ ಗುಡಿಸಲಿನಲ್ಲಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ಗುಬ್ಬಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಹಾಗೂ ನ್ಯಾಯಾಲಯದ ಸಿಬ್ಬಂದಿ, ಆರಕ್ಷಕರು, ವಕೀಲರುಗಳ ಸಹಯೋಗದೊಂದಿಗೆ ಸ್ಥಳಕ್ಕೆ ತೆರಳಿ ಮಗು ಮತ್ತು ಬಾಣಂತಿಯನ್ನು ಸುರಕ್ಷಿತವಾಗಿ ಅವರ ಮನೆಗೆ ಕರೆತಂದು ಬಿಟ್ಟು ಅನಿಷ್ಠ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇನ್ನು ಯಾರು ಕೂಡ ಈ ತರಹದ ಅನಿಷ್ಠ ಪದ್ಧತಿಯನ್ನು ಆಚರಿಸದಂತೆ ತಿಳಿಹೇಳಿದ ನ್ಯಾಯಾಧೀಶರು, ಸಂವಿಧಾನಾತ್ಮಕವಾಗಿ ಮಗು ಹಾಗೂ ಬಾಣಂತಿ ಬದುಕಬೇಕು ಎಂದು ಗ್ರಾಮಸ್ಥರಿಗೆ…
ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗದಿದ್ದರೂ ಸಹ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಿದ್ದನ್ನ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರದ ನಡೆಯನ್ನ ಖಂಡಿಸಿ ಮಂಡ್ಯದ ಸಂಜಯ್ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿವಿಯ ಮೇಲೆ ಹೂವಿಟ್ಟುಕೊಂಡು ರಸ್ತೆಯಲ್ಲಿ ಉರುಳಿ ಧರಣಿ ನಡೆಸಿದ್ದಾರೆ. ರೈತರ ಕಿವಿ ಮೇಲೆ ಕಾಂಗ್ರೆಸ್ ಸರ್ಕಾರ ಹೂವು ಇಡುತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಬಾಯಿಬಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದು ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಪ್ರತಿಭಟನೆಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ಸಂಸದ ಪಿಸಿ ಮೋಹನ್ ಸೇರಿ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.
ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು ರೋಹಿತ್ ಶರ್ಮಾ ನಾಯಕರಾದರೇ , ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ. ಎಂದಿನಂತೆ ವಿರಾಟ್ ಕೊಹ್ಲಿ ತಂಡದಲ್ಲಿದ್ದಾರೆ. ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕಮ್ ಬ್ಯಾಕ್ ಮಾಡಿದ್ದಾರೆ. ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಈ ಮೊದಲೇ ಊಹಿಸಿದಂತೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ಸ್ಪಿನ್ ಬೌಲರ್ ಚಹಲ್ ರನ್ನ ಕೈಬಿಡಲಾಗಿದೆ. ಆದರೆ ಅಚ್ಚರಿಯ ಆಯ್ಕೆ ಎಂಬಂತೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡ ಹೀಗಿದೆ.. ರೋಹಿತ್ ಶರ್ಮಾ(ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೇಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್. ಹಾರ್ದಿಕ್ ಪಾಂಡ್ಯ(ಉಪನಾಯಕ),…