Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್ ಹಾಲ್ ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ ಕ್ರೀಡಾಪಟುಗಳೊಂದಿಗೆ ಸಾರ್ವಜನಿಕರಲ್ಲಿ ದೌರ್ಜನ್ಯಗಳ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಟೌನ್ ಹಾಲ್ ವೃತ್ತದಲ್ಲಿ ಆಂಜನೇಯಸ್ವಾಮಿ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಕುಸ್ತಿ ಪಂದ್ಯಾವಳಿಯನ್ನು ನಡೆಸುವ ಮೂಲಕ ವಿನೂತನವಾಗಿ ಮಹಿಳಾ ಕ್ರೀಡಾಪಟುಗಳಿಗೆ ಬೆಂಬಲ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ ಅವರು, ತರಬೇತುದಾರ ಬ್ರಿಜ್ ಭೂಷಣ್ ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಅಮಾನವೀಯವಾಗಿ ಎಳೆದೊಯ್ದ ರೀತಿ ಖಂಡನೀಯ ಎಂದರು. ಮಹಿಳೆಯರು ಕ್ರೀಡಾ ಜಗತ್ತಿಗೆ ಬರುವುದೇ ಅಪರೂಪ. ಅಂತಹುದರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ಭಾರತದ ಹಿರಿಮೆ ಸಾರಿದ ಕುಸ್ತಿಪಟುಗಳಿಗೆ ನಮ್ಮ ನೆಲದಲ್ಲಿ ಅವಮಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.…
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಈಗಿದ್ದ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಎಂಎ ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ವರ್ಗಾವಣೆ ಮಾಡಲಾಗಿದೆ. ವರ್ಷದ ಹಿಂದೆಯಷ್ಟೇ (2022) ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಪ್ರತಾಪ್ ರೆಡ್ಡಿ ಅವರಿಗೆ ಈ ವರ್ಷದ(2023) ಆರಂಭದಲ್ಲಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಅಲ್ಲಿಯೇ ಮುಂದುವರೆಸಲಾಗಿತ್ತು. ಆದ್ರೆ, ಇದೀಗ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇವರ ಸ್ಥಾನಕ್ಕೆ 1994 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಬಿ ದಯಾನಂದ್ ಅವರನ್ನು ನೇಮಕ ಮಾಡಲಾಗಿದೆ. ದಯಾನಂದ ಈ ಹಿಂದೆ ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಸೇವೆ ಸಲ್ಲಿಸಿದ್ದರು. ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ದಯಾನಂದ ಹಾವೇರಿ ಜಿಲ್ಲೆಯ…
ಗುಜರಾತ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2023 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೆ ಉತ್ತರವಾಗಿ, ಬ್ಯಾಟಿಂಗ್‌ನ ಆರಂಭದಲ್ಲಿ ಮಳೆ ವಿಲನ್ ಆಗಿ ಬಂದಿತು, ಆದರೆ ಭಾರಿ ಹೊಡೆತಗಳೊಂದಿಗೆ ಚೆನ್ನೈ ಐದನೇ ಐಪಿಎಲ್ ಪ್ರಶಸ್ತಿಯನ್ನು ಮುದ್ರೆಯೊತ್ತಿತು. ಇದು ಧೋನಿಗೆ ಚೆನ್ನೈ ಸೂಪರ್ ಕಿಂಗ್ಸ್ ಸಮರ್ಪಣೆಯೂ ಆಯಿತು. ಎರಡನೇ ಬ್ಯಾಟಿಂಗ್‌ನಲ್ಲಿ ಮಳೆಯಿಂದಾಗಿ 15 ಓವರ್‌ಗಳಿಗೆ ಕಡಿತಗೊಂಡಿದ್ದ ಪಂದ್ಯದಲ್ಲಿ ಚೆನ್ನೈ ಗೆಲುವಿಗೆ 171 ರನ್‌ಗಳ ಅಗತ್ಯವಿತ್ತು. ಗೆಲುವಿಗೆ ಕೊನೆಯ ಎಸೆತದಲ್ಲಿ ನಾಲ್ಕು ರನ್‌ಗಳ ಅಗತ್ಯವಿತ್ತು. ಜಡೇಜಾ ಬೌಂಡರಿ ಬಾರಿಸಿ ಚೆನ್ನೈಗೆ ರೋಚಕ ಜಯ ತಂದುಕೊಟ್ಟರು. 215 ರನ್‌ಗಳ ಗುರಿಯೊಂದಿಗೆ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 4 ರನ್ ಗಳಿಸುವಷ್ಟರಲ್ಲಿ ಭಾರಿ ಮಳೆ ಸುರಿಯಿತು. ರುತುರಾಜ್ ಗಾಯಕ್ವಾಡ್ ನಾಲ್ಕು ರನ್ ಮತ್ತು ಡೆವೊನ್ ಕಾನ್ವೆ ಔಟಾಗದೆ ಕ್ರೀಸ್‌ನಲ್ಲಿದ್ದರು. ಆಟ ಪುನರಾರಂಭಗೊಂಡಾಗ, CSK ಗೆಲುವಿಗೆ 87 ಎಸೆತಗಳಲ್ಲಿ 167 ರನ್‌ಗಳ ಅಗತ್ಯವಿತ್ತು. ರುತುರಾಜ್ ಮತ್ತು ಕಾನ್ವೇ ನಾಲ್ಕು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52…
ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಹಿರೇಬಾಗೇವಾಡಿಗೆ ತೆರಳಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಿರೇಬಾಗೇವಾಡಿ ಗ್ರಾಮಕ್ಕೆ ತೆರಳಿದ ಅವರು ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು. ಶ್ರೀ ಪಡಿ ಬಸವೇಶ್ವರ ದೇವಸ್ಥಾನಕ್ಕೆ ಹಾಗೂ ಶಿವಾಲಯಕ್ಕೆ ಸಹ ತೆರಳಿ ದರ್ಶನ ಪಡೆದರು. ನಂತರ ಹಿರೇಬಾಗೇವಾಡಿಯ ಗೌಸಿಯಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿ, ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ದರ್ಗಾ ಅಜ್ಜನವರು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸತ್ಕರಿಸಿದರು.ಇದಾದ ನಂತರ ತಪೋಕ್ಷೇತ್ರ ಅರಳೀಕಟ್ಟಿ ಗ್ರಾಮದ ತೋಂಟದಾರ್ಯ ವಿರಕ್ತಮಠಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಶಿವಮೂರ್ತಿ ಅಜ್ಜನವರ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು ಸೆಳೆಯಬೇಕಿದೆ. ಅವರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಆರ್‌ಎಸ್‌ಎಸ್ ಮತ್ತು ಬಜರಂಗದಳ ನಿಷೇಧ ಚರ್ಚೆ ವಿಚಾರವಾಗಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‌ಎಸ್‌ಎಸ್‌ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಎಲ್ಲಾ ಕಾಯ್ದೆಗಳ ಬಗ್ಗೆ ಚರ್ಚೆ ಆಗಬೇಕು. ತಕ್ಷಣವೇ ನಿಷೇಧ ಕಾಯ್ದೆ ಜಾರಿ ಅಸಾಧ್ಯ. ಈ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸಂಪೂರ್ಣ ಚರ್ಚೆ ಆದ ಮೇಲೆಯೇ ಈ ಸಂಬಂಧ ಸರ್ಕಾರದಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ತುಮಕೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಸಚಿವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂತ್ರಿ ಆದಾಗೆಲ್ಲ ಸಿದ್ದಗಂಗಾ ಮಠಕ್ಕೆ ಬಂದು ನಾನು ಆಶೀರ್ವಾದ ಪಡೆಯುತ್ತೇನೆ. ಇಂದು ಕೂಡ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಓದಿಗೆ ಕಟ್ಟಡದ ಕೊರತೆಯಿದೆ. ಕೊರತೆ ಬಗ್ಗೆ ಶ್ರೀಗಳು ನನ್ನ ಗಮನಕ್ಕೆ ತಂದಿದ್ದಾರೆ. ಸರ್ಕಾರ ಸಿದ್ದಗಂಗಾ ಮಠದ ಅನುದಾನ ತಡೆ ಹಿಡಿದಿರುವ ಬಗ್ಗೆ ನಾನು ಸಿಎಂ ಗಮನಕ್ಕೆ ತರುತ್ತೇನೆ ಎಂದರು.ಅನುದಾನ ಮಂಜೂರು ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಐದು ಗ್ಯಾರಂಟಿಗಳು ಅನುಷ್ಠಾನ ಆಗೇ ಆಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇರಳ : ಕೇಂದ್ರ ಕೃಷಿ ಸಚಿವೆ ಶೋಭಾ ಕಾರಂತ್ಲಾಜೆ ಮಾತನಾಡಿ, ದೇಶವನ್ನು ವಿಶ್ವವಿಖ್ಯಾತಿಗೆ ಕೊಂಡೊಯ್ದ ಮೋದಿ ಸರ್ಕಾರದ ಒಂಬತ್ತು ವರ್ಷಗಳ ಆಡಳಿತ ನಡೆಸುತಿದೆ. ಎನ್‌ಡಿಎ ಸರ್ಕಾರದ ಒಂಬತ್ತನೇ ವರ್ಷಾಚರಣೆ ಸಂದರ್ಭದಲ್ಲಿ ತಿರುವನಂತಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಕೇಂದ್ರ ಸರ್ಕಾರದ ಪ್ರತಿಯೊಂದು ಸಾಧನೆಯನ್ನು ಸಚಿವರು ವಿವರಿಸಿದರು. ಕೇಂದ್ರ ಸಚಿವ ವಿ.ಮುರಳೀಧರನ್, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಉಪಸ್ಥಿತರಿದ್ದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ದೊರೆಯುತ್ತಿಲ್ಲ. ಫಲಾನುಭವಿಗಳ ಪಟ್ಟಿ ಮತ್ತು ಖಾತೆಗಳನ್ನು ಸರಿಯಾಗಿ ಹಸ್ತಾಂತರಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಅಡ್ಡಿ. ಕೇರಳದಿಂದ ಬಿಜೆಪಿಗೆ ಒಬ್ಬ ಎಂಪಿ, ಎಂಎಲ್ಎ ಸಿಗದಿದ್ದರೂ ಕೇಂದ್ರ ಸರ್ಕಾರ ಅಭಿವೃದ್ಧಿಯಲ್ಲಿ ಅನ್ಯಾಯ ಮಾಡಿಲ್ಲ. ಕೇಂದ್ರ ಸಚಿವೆ ಶೋಭಾ ಕಾರಂತ್ಲಾಜೆ ಮಾತನಾಡಿ, ಅಭಿವೃದ್ಧಿ ಎಲ್ಲ ಕಡೆಯೂ ಸಮಾನವಾಗಿ ತಲುಪಬೇಕು ಎಂಬ ನೀತಿಯೇ ಕಾರಣ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೋಲಾ ಅಹ್ಮದ್ ಟಿನುಬು ಅವರು 2023-2027 ರ ಅವಧಿಗೆ ಫೆಡರಲ್ ರಿಪಬ್ಲಿಕ್ ಆಫ್ ನೈಜೀರಿಯಾದ ಹೊಸ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಕಾಶಿಮ್ ಶೆಟ್ಟಿಮಾ ಉಪಾಧ್ಯಕ್ಷರಾಗಿದ್ದಾರೆ. ರಾಜಧಾನಿ ಅಬುಜಾದ ಈಗಲ್ ಸ್ಕ್ವೇರ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅರಿವೋಲಾ ಅವರು ಮುಖ್ಯ ನ್ಯಾಯಮೂರ್ತಿ ಒಲುಕಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಫೆಬ್ರವರಿ 25 ರ ಚುನಾವಣೆಯಲ್ಲಿ ಆಲ್ ಪ್ರೋಗ್ರೆಸ್ಸಿವ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಟಿನುಬು 8 ಮಿಲಿಯನ್ ಮತಗಳಿಂದ ಗೆದ್ದರು. 71 ವರ್ಷದ ಟಿನುಬು ಅವರು 1999 ರಲ್ಲಿ ಪ್ರಾರಂಭವಾದ ಪ್ರಸ್ತುತ ನಾಲ್ಕನೇ ಗಣರಾಜ್ಯದ 5 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನೈಜೀರಿಯಾ ಪ್ರಸ್ತುತ ಎದುರಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಶಿಕ್ಷಣ, ಕೃಷಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಾಗಿ ಅಧ್ಯಕ್ಷರು ಹೇಳಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತವನ್ನು ಪ್ರತಿನಿಧಿಸಿದ್ದರು.…
ಬಾಂದ್ರಾ-ವರ್ಸೋವಾ ಸಮುದ್ರ ಸೇತುವೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವೀರ್ ಸಾವರ್ಕರ್ ಸೇತು ಎಂದು ನಾಮಕರಣ ಮಾಡಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಬಾಂದ್ರಾ-ವರ್ಸೋವಾ ಸಮುದ್ರ ಸಂಪರ್ಕ ಸೇತುವೆಗೆ ವಿಡಿ ಸಾವರ್ಕರ್ ಹೆಸರಿಡಲಾಗುವುದು ಮತ್ತು ವೀರ್ ಸಾವರ್ಕರ್ ಸೇತು ಎಂದು ಕರೆಯಲಾಗುವುದು ಎಂದು ಹೇಳಿದರು. ವೀರ ಸಾವರ್ಕರ್ ಅವರ 140ನೇ ಜನ್ಮದಿನದ ಅಂಗವಾಗಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಂಧೆ ಈ ಘೋಷಣೆ ಮಾಡಿದರು. ವೀರ ಸಾವರ್ಕರ್ ಅವರ 140ನೇ ಜನ್ಮದಿನದಂದು ದೇಶದ ನೂತನ ಸಂಸತ್ ಭವನವನ್ನು ಉದ್ಘಾಟಿಸುತ್ತಿರುವುದು ದೇಶದ ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಹೇಳಿದರು. ಈ ಶುಭ ದಿನದಂದು ದೇಶದ ಸಂಸತ್ತಿನ ನೂತನ ಕಟ್ಟಡವನ್ನು ಉದ್ಘಾಟಿಸುವುದು ಪ್ರತಿಯೊಬ್ಬ ಮರಾಠಿಗರಿಗೂ ಹೆಮ್ಮೆಯ ಸಂಗತಿಯಾಗಿದೆ. ಆದರೆ ಕೆಲವರು ಕಾರ್ಯಕ್ರಮವನ್ನು ಬಹಿಷ್ಕರಿಸಲು ಪ್ರಯತ್ನಿಸಿದರು” ಎಂದು ಶಿಂಧೆ ಟ್ವೀಟ್ ಮಾಡಿದ್ದಾರೆ. 101ನೇ ಮನ್ ಕಿ ಬಾತ್ ನಲ್ಲಿ ವೀರ್ ಸಾವರ್ಕರ್ ಅವರ ಮೇಲೆ ಪ್ರಧಾನಮಂತ್ರಿಯವರ ಚರ್ಚೆ ಕೇಂದ್ರೀಕೃತವಾಗಿತ್ತು. ವೀರ ಸಾವರ್ಕರ್…
ಬೆಂಗಳೂರು: ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರಿಗೆ ಪಾಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ಜೂನ್ 1 ರಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗುತ್ತೆ. ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ. ಆದರೆ ಎಷ್ಟು ಜನ ಓಡಾಡ್ತಾರೆ ಅನ್ನೋ ಬಗ್ಗೆ ಮಾಹಿತಿ ಕೇಳಿದ್ದೇವೆ. ಸ್ಕೂಲ್ ಬಸ್ ಪಾಸ್ ನಂತೆ ಮಹಿಳೆಯರ ಬಸ್ ಪಾಸ್‍ಗೂ ಇಲಾಖೆಗಳಿಗೆ ಹಣ ಕೊಡ್ತೇವೆ ಎಂದರು. ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಮಕ್ಕಳಿಗೆ ಬಸ್ ಪಾಸ್ ನಂತೆ ಮಹಿಳೆಯರ ಲೆಕ್ಕದಂತೆ ದುಡ್ಡು ಕೊಡಬೇಕಾಗುತ್ತದೆ. ವಿರೋಧ ಪಕ್ಷದವರು ರಚನಾತ್ಮಕವಾಗಿ ಟೀಕೆ ಮಾಡಲಿ. ಒಟ್ಟಿನಲ್ಲಿ ಗ್ಯಾರಂಟಿ ಕಾರ್ಡ್ ಕೊಟ್ಟೆ ಕೊಡುತ್ತೇವೆ. ರಾಜ್ಯದ ಮಹಿಳೆಯರಿಗೆ ಮಾತ್ರ ಕೊಡುತ್ತೇವೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…