Subscribe to Updates
Get the latest creative news from FooBar about art, design and business.
- ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
- ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
- ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
- ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
- ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
Author: admin
ಬೆಂಗಳೂರು: ರಾಜ್ಯದ ಎಲ್ಲಾ ಸಂಸದರು ನರಸತ್ತವರು. ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶವನ್ನು ನಾವು ಧಿಕ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಧಿಮಾಕು ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಧಿಮಾಕು ಮಾಡಿಕೊಂಡು ನೀರು ಕೊಡಿ ಅಂತಾರೆ. ಹೀಗೆ ಹೇಳುತ್ತಿದ್ದರೆ ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು. ಬೆಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಇಂದು ಸಭೆ ಕರೆದಿದ್ದೇವೆ. ಶುಕ್ರವಾರ ಎಲ್ಲಾ ಡಿಸಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ ಪ್ರಕರಣದ ಕುರಿತು ಕಣ್ಣಾವಲು ಕಚೇರಿಗೆ ಮಾಹಿತಿ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್‌ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಉದ್ಯಮಿಯನ್ನು ವಂಚಿಸಿದ ಕೇಸ್ ಗೆ ಸಂಬಂಧಿಸಿದಂತೆ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿಂದೂ ಸಂಘಟನೆಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡುತ್ತಾ, ಸದಾ ವಿವಾದಕ್ಕೆ ಸಿಲುಕಿದ್ದ, ಚೈತ್ರಾ ಕುಂದಾಪುರ ಇದೀಗ ಸಿಕ್ಕಿಕೊಂಡಿರುವ ಪ್ರಕರಣ ಏನು? ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ… ಉದ್ಯಮಿ ಗೋವಿಂದ ಬಾಬು ಪೂಜಾರಿ 7 ವರ್ಷಗಳಿಂದ ‘ವರಲಕ್ಷ್ಮಿ, ಚಾರಿಟಬಲ್ ಟ್ರಸ್ಟ್’ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡಿದ್ದರು. ಬಿಜೆಪಿ ಕಾರ್ಯಕರ್ತ ಪ್ರಸಾದ್ ಬೈಂದೂರು ಅವರು ಹಿಂದೂ ಕಾರ್ಯಕರ್ತೆ ಎಂದು ಹೇಳಿಕೊಳ್ಳುತ್ತಿರುವ ಚೈತ್ರಾ ಕುಂದಾಪುರ ರವರನ್ನು ಪರಿಚಯಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಬೇಕು, ಸ್ಪರ್ಧಿಸಿದರೆ ಗೆಲ್ಲಿಸಿಕೊಡುವುದಾಗಿ ಗೋವಿಂದ ಬಾಬು ಪೂಜಾರಿ ಅವರನ್ನು ಮನವೊಲಿಸಿ “ನಾನು ಹಿಂದೂ ಸಂಘಟನೆಯಲ್ಲಿರುವುದರಿಂದ BJP RSS ವರಿಷ್ಠರಿಗೂ ಹತ್ತಿರವಿದ್ದೇನೆ. ಪ್ರಧಾನಿ ಕಚೇರಿಯಲೂ ಪ್ರಭಾವಿಯಾಗಿದ್ದು, ಸುಪ್ರೀಂ ಕೋರ್ಟ್ ಜಡ್ಜ್ ಗಳಿಗೂ ಆಪ್ತಳಾಗಿದ್ದು, ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುತ್ತೇನೆ” ಎಂದು ಚೈತ್ರಾ…
ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ. ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ. ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ. ಆರ್ ರಮೇಶ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ. ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಈ ಸೈಬರ್ ವಂಚಕರ ಹಾವಳಿಯಿಂದ ಜನರು ಪಾರಾಗುವುದು ಹೇಗೆಂದು ಜಾಗೃತಿ ಮೂಡಿಸಲು ನಗರ ಪೊಲೀಸ್ ಇಲಾಖೆ ವಿನೂತನ ಪ್ರಯತ್ನ ಆರಂಭಿಸಿದೆ. ‘ಸೈಬರ್ ವಂಚಕರಿಂದ ದೂರವಿರಲು, ದಿನಕ್ಕೊಂದು ಸೈಬರ್ ಸಲಹೆ’ ಅಭಿಯಾನ ಆರಂಭಿಸಲಾಗಿದೆ. ಪ್ರತಿನಿತ್ಯ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರೇ ಸಲಹೆ ನೀಡಲಿದ್ದಾರೆ. ಧ್ವನಿ ರೂಪದಲ್ಲಿ ಅದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಲಿದೆ.
ರಸ್ತೆ ಅಪಘಾತ ಸಂಭವಿಸಿದಾಗ ತುರ್ತಾಗಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ ಕ್ಯೂಆರ್ ಕೋಡ್’ ಅನ್ನು ಹೈವೇ ಡಿಲೈಟ್ ಸಂಸ್ಥೆ ಮಂಗಳವಾರ ಬಿಡುಗಡೆಗೊಳಿಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ರಾಜೇಶ್ ಘಟನಟ್ಟಿ, ‘ದೇಶದಲ್ಲಿ ಪ್ರತಿನಿತ್ಯ ನೂರಾರು ಅಪಘಾತಗಳು ಸಂಭವಿಸುತ್ತವೆ. ಅಪಘಾತಕ್ಕೆ ಒಳಗಾದವರ ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ. ಜಾತಿ, ಭಾಷೆ ಹಾಗೂ ಧರ್ಮದ ತಾರತಮ್ಯಗಳನ್ನು ಮೀರಿ ಮಕ್ಕಳಿಗೆ ಸಂಸ್ಕಾರಯುತ ಮತ್ತು ಜ್ಞಾನಾಧಾರಿತ ಶಿಕ್ಷಣವನ್ನು ಧಾರೆಯೆರೆಯುವವರೇ ನಿಜವಾದ ಶಿಕ್ಷಕರು ಎಂದು ತುಮಕೂರು ವಿಶ್ವವಿದ್ಯಾಲಯದ ಮಾಜಿ ಕುಲ ಸಚಿವ ಪ್ರೊ. ಕೆ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರೇವಾ ಕಾಲೇಜಿನಲ್ಲಿ ಆಯೋಜಿಸಿದ್ದ ಗುರುನಮನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಹಾಗೂ ಸಾರ್ವಜನಿಕರ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿ ನಿವಾಸಿ ವಾಹೀದ್ ಖಾನ್(25) ಬಂಧಿತ ಆರೋಪಿ. ಆರೋಪಿಯಿಂದ 14.64 ಲಕ್ಷ ಮೌಲ್ಯದ ವಿವಿಧ ಕಂಪನಿಗಳ ಆರು ದ್ವಿಚಕ್ರ ವಾಹನಗಳು ಹಾಗೂ 10 ಮೊಬೈಲ್ ಜಪ್ತಿ ಮಾಡಲಾಗಿದೆ. ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ.
ಬೆಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಪರಿಚಯಸ್ಥ ಗ್ರಾಹಕರಿಗೆ ಡ್ರಗ್ಸ್ ಪೂರೈಸುತ್ತಿದ್ದ ಒಬ್ಬ ವಿದೇಶಿಪ್ರಜೆ ಸೇರಿದಂತೆ, 34 ಅಂತರರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ 15, ಕರ್ನಾಟಕದ 10, ಬಿಹಾರದ ನಾಲ್ವರು, ಒಡಿಶಾದ ಇಬ್ಬರು, ಅಸ್ಸಾಂ ಹಾಗೂ ಹರಿಯಾಣದ ತಲಾ ಒಬ್ಬ, ನೈಜೀರಿಯಾದ ಒಬ್ಬ ಪೆಡ್ಲರ್ ಅನ್ನು ಬಂಧಿಸಲಾಗಿದೆ. ಬಂಧಿತರಿಂದ 72.42 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ನೌಕರರನ್ನು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ, ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಒಬ್ಬ ನೌಕರನನ್ನು ಯಾವುದೇ ಹುದ್ದೆಗೆ ಗರಿಷ್ಠ ಐದು ವರ್ಷಗಳವರೆಗೆ ನಿಯೋಜನೆ ಮಾಡಬಹುದು. ಬಳಿಕ ಆ ನೌಕರ ಎರಡು ವರ್ಷಗಳವರೆಗೆ ಮಾತೃ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯ. ಅನ್ಯ ಇಲಾಖೆಗಳಿಂದ ನಿಯೋಜನೆಗೆ ಅವಕಾಶ ಕಲ್ಪಿಸದ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ.