Subscribe to Updates
Get the latest creative news from FooBar about art, design and business.
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
- ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
- ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
- ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
- ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು ಮಾಡಬೇಕು?
- ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
Author: admin
ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಸುಬ್ರಮಣಿಯನ್ (63) ಎಂಬುವರು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಜೂನ್ 10ರಂದು ಅಪಘಾತ ನಡೆದಿತ್ತು. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಬ್ರಮಣಿಯನ್ ಅವರಿಗೆ ತಲೆ, ಬಲಗೈ ಹಾಗೂ ಬಲ ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಈ ಬೆಂಕಿ ಅವಘಡ ಹಾಗೂ ಮಧುರೈನಲ್ಲಿ ಸಂಭವಿಸಿದ ಅನಾಹುತದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ. ಘಟನೆ ನಡೆದು 10 ದಿನ ಕಳೆದಿದೆ. ಆದರೆ ಘಟನೆಗೆ ಇನ್ನೂ ನಿಖರ ಕಾರಣ ಸಿಗದಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಪ್ರಕರಣದ ಹಿಂದೆ ಕಿಡಿಗೇಡಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣವನ್ನು ಆರ್‌ಪಿಎಫ್ ಡಿಜಿ ಮನೋಜ್ ಯಾದವ್ ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಅವಘಡವನ್ನು ಗಂಭೀರವಾಗಿ ಪರಿಗಣಿಸಿರುವ ಅವರು ಎರಡು ದಿನಗಳ ಹಿಂದೆ ರೈಲ್ವೇ ಕಚೇರಿಗೆ ಧಿಡೀರ್ ಭೇಟಿಕೊಟ್ಟಿದ್ದರು. ಈ ವೇಳೆ ನಗರ ಪೊಲೀಸ್ (Police) ಹಾಗೂ ಆರ್‌ಪಿಎಫ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು.
ಬೆಂಗಳೂರು : ಜಿಎಸ್‌ಟಿ ನಕಲಿ ರಸೀದಿ ಬಳಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ಅಧಿಕಾರಿಗಳು ಪತ್ತೆ ಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಚ್. ಎಂ. ಗುರುಪ್ರಸಾದ್ ಹಾಗೂ ಮಂಜುನಾಥಯ್ಯ ಬಂಧಿತ ಆರೋಪಿಗಳು. ವಂಚಕರು ತಮ್ಮ ಕುಟುಂಬದ ಸದಸ್ಯರು, ಸ್ನೇಹಿತರ ಹೆಸರಿನಲ್ಲಿ 30 ಕ್ಕೂ ಹೆಚ್ಚು ನಕಲಿ ಕಂಪನಿಗಳನ್ನು ತೆರೆದು 7 525 ಕೋಟಿ ವಹಿವಾಟು ನಡೆಸಿದ್ದಾರೆ. ಸರ್ಕಾರಕ್ಕೆ * 90 ಕೋಟಿ ತೆರಿಗೆ ನಷ್ಟ ಮಾಡಿದ್ದಾರೆ.
ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದ್ದು ಕಾಂಗ್ರೆಸ್ ಕ್ಷೇತ್ರದ ಶಾಸಕರಿಗೆ ಮನೆ ಮಂಜೂರು ಮಾಡಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕುಣಿಗಲ್ಗೆ ಶಿಫ್ಟ್ ಮಾಡಿದೆ. ಈ ಹಿನ್ನೆಲೆ ವಸತಿ ಇಲಾಖೆ ಸಚಿವ ಜಮೀರ್ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರ ಹಾಕಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ನಡೆದಿದೆ. ಮೃತವ್ಯಕ್ತಿಯನ್ನುಮುನಿರಾಜು(56) ಎಂದು ಗುರುತಿಸಲಾಗಿದೆ.ಮೃತ ಮುನಿರಾಜು ಕಳೆದ ಹಲವು ದಿನಗಳಿಂದ ಕಿಡ್ನಿ ವೈಪಲ್ಯವಾಗಿ ಡಯಾಲಸಿಸ್ ನಲ್ಲಿದ್ದರು. ಇತ್ತೀಚೆಗೆ ಅನಾರೋಗ್ಯ ತೀವ್ರವಾಗಿದ್ದು ಮನನೊಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲಿಗೆ ಸಿಲುಕಿದ ಪರಿಣಾಮ ದೇಹ ಎರಡು ತುಂಟಾಗಿದೆ. ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಬರುವ ಉಲ್ಲಾಳು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿರುವ ಹಿನ್ನೆಲೆಯಲ್ಲಿ ಕೆರೆಯನ್ನು ಸ್ವಚ್ಛಗೊಳಿಸಲು ಜೈವಿಕ ರಾಸಾಯನಿಕ ಹಾಕುವ ಕಾರ್ಯ ಆರಂಭಗೊಂಡಿದೆ. ಉದ್ಯಾನದ ಮಣ್ಣು, ಸೂಕ್ಷ್ಮ ಜೀವಾಣುಗಳು, ಕಾಕಂಬಿ, ಭತ್ತದ ತೌಡು ಮಿಶ್ರಣ ಮಾಡಿದ ಬೊಕಾಶಿ ಬಾಲ್ ಹಾಕಿ ಸ್ವಚ್ಛಗೊಳಿಸುವ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯಕುಮಾರ್ ಹರಿದಾಸ್ ತಿಳಿಸಿದ್ದಾರೆ. ಕೆರೆಯಲ್ಲಿ ನೀರು ಕಡಿಮೆಯಾಗಿ, ಇರುವ ನೀರು ಕಲುಷಿತಗೊಂಡು ಮೀನುಗಳು ಸತ್ತಿದ್ದವು. ಒಂದು ವಾರದಿಂದ ಮೀನು ಸಾಯುತ್ತಿದ್ದರೂ ಯಾರೂ ಭೇಟಿ ನೀಡಿ ಪರಿಶೀಲಿಸುವ, ಸತ್ತ ಮೀನು ತೆರವುಗೊಳಿಸುವ ಕಾರ್ಯ ಮಾಡಿರಲಿಲ್ಲ. ಇದರಿಂದ ದುರ್ವಾಸನೆ ಉಂಟಾಗಿತ್ತು. ಸತ್ತ ಮೀನುಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಲಾಯಿತು. ಕೆರೆಯ ಮಣ್ಣನ್ನು ಪರೀಕ್ಷೆಗೆ ಒಯ್ಯಲಾಯಿತು. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್, ಎಇಇ ಮಹೇಶ್, ಜಲಮಂಡಳಿ ಎಇಇ ಸೈಯದ್ ಇದ್ದರು.
ಬೆಂಗಳೂರು ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದಲ್ಲಿ ‘ಪೊಲೀಸ್ ಮಾರ್ಷಲ್’ಗಳಾಗಿ 700 ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಆರೋಹಣ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈಶಾನ್ಯ ವಿಭಾಗ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗಿದೆ. ಪೊಲೀಸ್ ಮಾರ್ಷಲ್’ಗಳಿಗೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್ ಸೈಟ್ ಎಂದು ಹೇಳಿಕೊಳ್ಳುವ ನಕಲಿ ವೆಬ್‌ಸೈಟ್. ನಕಲಿ ವೆಬ್ ಸೈಟ್ ಗಳಿಗೆ ಮರುಳಾಗಬೇಡಿ ಎಂದು, ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸಾರ್ವಜನಿಕ ಎಚ್ಚರಿಕೆಯನ್ನು ನೀಡಿದೆ. ಜನರ ವೈಯಕ್ತಿಕ ಮಾಹಿತಿಯನ್ನು ಕದಿಯಲು ಸುಪ್ರೀಂ ಕೋರ್ಟ್‌ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ನೋಟಿಸ್ ನಲ್ಲಿ ಹೇಳಲಾಗಿದೆ. http://cbins/scigv.com, https://cbins.scigv.com/offence ನಂತಹ ನಕಲಿ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ ಅಥವಾ ಹಂಚಿಕೊಳ್ಳಬೇಡಿ. ನೀವು ಸ್ವೀಕರಿಸುವ ಲಿಂಕ್ ಗಳ ದೃಢೀಕರಣವನ್ನು ಪರಿಶೀಲಿಸಿ. ವೈಯಕ್ತಿಕ ಮಾಹಿತಿ, ಹಣಕಾಸಿನ ವಿವರಗಳು ಅಥವಾ ಇತರ ಗೌಪ್ಯ ಮಾಹಿತಿಯನ್ನು ಸುಪ್ರೀಂ ಕೋರ್ಟ್ ಎಂದಿಗೂ ಕೇಳುವುದಿಲ್ಲ ಎಂಬುದನ್ನು ಗಮನಿಸಿ. ಮೇಲಿನ URL ಗಳಲ್ಲಿ ಯಾವುದೇ ವೈಯಕ್ತಿಕ ಮತ್ತು ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳದಂತೆ ಅಥವಾ ಬಹಿರಂಗಪಡಿಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ನೀವು ಮೇಲೆ ತಿಳಿಸಲಾದ ‘ಫಿಶಿಂಗ್’ ದಾಳಿಯ ಬಲಿಪಶುವಾಗಿದ್ದರೆ, ಎಲ್ಲಾ ಆನ್ ಲೈನ್ ಖಾತೆಯ ಪಾಸ್ ವರ್ಡ್‌ಗಳನ್ನು ಸಾಧ್ಯವಾದಷ್ಟು ಬೇಗ ಬದಲಾಯಿಸಬೇಕು. ಅನಧಿಕೃತ ಪ್ರವೇಶವನ್ನು ಬ್ಯಾಂಕ್ ಮತ್ತು ಕ್ರೆಡಿಟ್ ಕಾರ್ಡ್ ಕಂಪನಿಗೆ ವರದಿ…
2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಬಿಜೆಪಿ ಸುಳಿವು ನೀಡಿದೆ. ಟರ್ಮಿನೇಟರ್ ಚಿತ್ರದ ಪ್ರಮುಖ ಪಾತ್ರದ ಪೋಸ್ಟರ್ ನಲ್ಲಿ ನರೇಂದ್ರ ಮೋದಿ ಅವರ ಚಿತ್ರವನ್ನು ಎಡಿಟ್ ಮಾಡುವ ಮೂಲಕ ಬಿಜೆಪಿ ಪ್ರಚಾರ ಮಾಡುತ್ತಿದೆ. ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅವರ ಪ್ರಸಿದ್ಧ ಹಾಲಿವುಡ್ ಚಲನಚಿತ್ರ ದಿ ಟರ್ಮಿನೇಟರ್ ನ ಪೋಸ್ಟರ್ ನರೇಂದ್ರ ಮೋದಿ ಅವರು 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಪ್ರತಿಪಕ್ಷಗಳು ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಬಯಸಬಹುದು. ಆದರೆ ಅದು ಕೇವಲ ಕನಸು. “ಟರ್ಮಿನೇಟರ್ ಯಾವಾಗಲೂ ಗೆಲ್ಲುವ ಬಗ್ಗೆ,” ಪೋಸ್ಟ್ ಹೇಳುತ್ತದೆ. Ekis ನಲ್ಲಿ ಬಿಜೆಪಿಯ ಅಧಿಕೃತ ಪುಟದಿಂದ ಪೋಸ್ಟರ್ ಪ್ರಚಾರ. ವಿಪಕ್ಷಗಳ ಇಂಡಿಯಾ ಫ್ರಂಟ್‌ನ ಸಭೆ ನಾಳೆ ನಡೆಯಲಿರುವಂತೆಯೇ ಬಿಜೆಪಿಯ ಟ್ವೀಟ್ ಬಂದಿದೆ. ನಾಳೆ ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಕನಿಷ್ಠ 26 ವಿರೋಧ ಪಕ್ಷಗಳು ಭಾಗವಹಿಸಲಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಪ್ರಧಾನಿ ಮೋದಿ…