Author: admin

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ  ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ ನಡೆಸಿದಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮಾಧುಸ್ವಾಮಿ ಅವರ ಸಮಿತಿ ರಚಿಸಿ ಒಳ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿತ್ತು. ಅದನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು. ಮಾಡದೆ ಇದ್ದಲ್ಲಿ ಆಗಸ್ಟ್ 1ರಿಂದ ನಾವು ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡುತ್ತೇವೆ. ರಾಜ್ಯ ಸರಕಾರದ ವಿರುದ್ಧ ಅಸಹಕಾರ ಚಳವಳಿ ಮಾಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು. ಅಸ್ಪಶ್ಯರು ತಮ್ಮ ಬದುಕಿಗಾಗಿ– ಉಳಿವಿಗಾಗಿ ದೊಡ್ಡ ಆಂದೋಲನ ಮಾಡಲು ಸಿದ್ಧರಿದ್ದೇವೆ ಎಂದು ಪ್ರಕಟಿಸಿದರು. ಇದೇ 31ರೊಳಗೆ ಜಾರಿ ಆಗದಿದ್ದರೆ 30 ಜಿಲ್ಲೆಗಳಲ್ಲೂ ಅಸಹಕಾರ ಚಳವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವುದಾಗಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಒಂದು ದಿನ ಡಿ.ಕೆ.ಶಿವಕುಮಾರ್ ಶ್ರಮಕ್ಕೆ ಪ್ರತಿಫಲ ಸಿಗಲಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು , ಸಿಎಂ ಹೇಳಿರೋದ್ರಲ್ಲಿ ತಪ್ಪೇನಿದೆ? ಸಿಎಂ ಆಗಿರೋರು ಸಿಎಂ ಆಗಿ…

Read More

ಬೀದರ್:  ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಕಮಲನಗರ ಪೊಲೀಸ್ ಠಾಣಾ ಪೊಲೀಸರು,  ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 18 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ   ಪ್ರದೀಪ್ ಗುಂಟಿ ಮಾರ್ಗದರ್ಶನದಂತೆ ಕಮಲನಗರ ಪೊಲೀಸ್ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ–ಮಹಾರಾಷ್ಟ್ರ ಗಡಿಯ ಹತ್ತಿರ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಿ.ಎಸ್.ಐ ಚಂದ್ರಶೇಖರ,  ತಮ್ಮ ಸಿಬ್ಬಂದಿ ರವರೊಂದಿಗೆ  ಶಿವಾನಂದ, ಆಹಾರ ನಿರೀಕ್ಷಕರು, ತಹಸಿಲ್ ಕಛೇರಿ ಕಮಲನಗರ ರವರ ಸಮಕ್ಷಮ ದಾಳಿ ನಡೆಸಿದರು. 61,200 ಮೌಲ್ಯದ ಅಕ್ಕಿ ಹಾಗೂ 5,00,000 ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

*  ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಯೋಜನೆ *  ಉತ್ಪಾದನಾ ವಲಯ ಮತ್ತು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಿಗೆ ಪ್ರೋತ್ಸಾಹಧನ ನೀಡುವತ್ತ ಗಮನ ಹರಿಸಲಿದೆ *  ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರು ಎರಡು ಕಂತುಗಳಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ವೇತನವನ್ನು ಪಡೆಯಲಿದ್ದಾರೆ *  ಒಂದು ಲಕ್ಷ ಕೋಟಿ ರೂ. ನಿಧಿಯನ್ನು ಹೊಂದಿರುವ ಈ ಯೋಜನೆಯು ಎರಡು ವರ್ಷಗಳಲ್ಲಿ 3.5 ಕೋಟಿಗಿಂತ ಅಧಿಕ ಉದ್ಯೋಗಗಳ ಸೃಷ್ಟಿಗೆ ಬೆಂಬಲ ನೀಡಲಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಉದ್ಯೋಗ ಆಧರಿತ ಪ್ರೋತ್ಸಾಹಧನ'(ಇಎಲ್‌ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ: ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ  ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನ ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ ಎಂದಿದ್ದಾರೆ. ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ. ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ.…

Read More

ಬೆಂಗಳೂರು: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ BJP ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್.ಡಿ.ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ…

Read More

ಮಂಡ್ಯ:  ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ–ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ರಶ್ಮಿ (28) ಮತ್ತು ಆಕೆಯ 9 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ. ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶರಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ತಾಯಿ ಮತ್ತು ಮಗಳು ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಸಾಲ ಬಾಧೆಗೆ ಹೆದರಿ ಮನನೊಂದ ರೈತಯೊಬ್ಬರು ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ದಂದು ಬೆಳಕಿಗೆ ಬಂದಿದೆ. ತಾಲೂಕಿನ ಮುಳ್ಳೂರು ಗ್ರಾಮ ನಿವಾಸಿ ಚನ್ನನಾಯಕ ಎಂಬುವರು ಮಗನಾದ ಗೋವಿಂದನಾಯಕ (50) ವರ್ಷದ ಮೃತಪಟ್ಟಿರುವ ವ್ಯಕ್ತಿ. ಗೋವಿಂದನಾಯಕ ಎಂಬುವನು ಸುಮಾರು 25 ವರ್ಷಗಳ ಹಿಂದೆ ಹೆಗ್ಗಡಪುರ ಗ್ರಾಮದಲ್ಲಿ ವಾಸವಾಗಿದ್ದು.ಇವನ್ನು ಕೆಲಸ ಮುಗಿಸಿಕೊಂಡು ಜಾನುವಾರುಗಳಿಗೆ 8 ಗಂಟೆ ಸಮಯಕ್ಕೆ ಹುಲ್ಲನ್ನು ತರುತ್ತಾನೆ ಎಂದು ಹೇಳಿ ಹೊರಗೆ ಹೋದವರು 11 ಗಂಟೆಯಾದರೂ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಆದರೆ ನೆರವಾಗಿ ತಾಲೂಕಿನ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹೊಳೆಯ ಅಲ್ಲಿಂದ ತನ್ನ ಸ್ಕೂಟರ್‌ ನಲ್ಲಿ ತುಂಬಸೋಗೆ ಗ್ರಾಮದಲ್ಲಿರುವ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ. ಕಬಿನಿ ಹೊಳೆಯ ಸೇತುವೆಯಿಂದ ಹೊಳೆಗೆ ಹಾರಿ ಕಬಿನಿ ಜಲಾಶಯದ ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಳೆಯ ದಡದಲ್ಲಿ…

Read More

ನವದೆಹಲಿ: ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಹಲವು ವೈಜ್ಞಾನಿಕ ಅಧ್ಯಯನಗಳು ಸಾಬೀತು ಮಾಡಿವೆ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಕೋವಿಡ್ ಲಸಿಕೆಯನ್ನು ಆತುರದ ಅನುಮೋದನೆಯೊಂದಿಗೆ ಸಾರ್ವಜನಿಕರಿಗೆ ವಿತರಣೆ ಮಾಡಿದ್ದು ಕೂಡ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಹಠಾತ್​ ಆಗಿ ಸಂಭವಿಸುತ್ತಿರುವ ಸಾವುಗಳ ಬಗ್ಗೆ ದೇಶದ ಹಲವಾರು ಆರೋಗ್ಯ ಸಂಸ್ಥೆಗಳು ತನಿಖೆ ಮಾಡಿವೆ. ಇದರಲ್ಲಿ ಅಂತಹ ಯಾವುದೇ ಅಂಶವಿಲ್ಲ ಎಂದು ಹೇಳಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳಲ್ಲಿ ಕೋವಿಡ್–19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿವೆ. ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ ಉಂಟಾಗಿದ್ದು ಅಪರೂಪ. ಹೀಗಾಗಿ, ಹೃದಯಾಘಾತಕ್ಕೂ– ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸಾರ್ವಜನಿಕ ಮತ್ತು ಪ.ಜಾತಿ, ಪ.ಪಂಗಡ ಸ್ಮಶಾನಕ್ಕೆ ಸರ್ಕಾರ ಭೂಮಿ ಮಂಜೂರು ಮಾಡಿದ್ದರೂ, ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸ್ಮಶಾನ ಅಭಿವೃದ್ಧಿಯಾಗದೆ ಅಂತ್ಯ ಸಂಸ್ಕಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಸರ್ವೇ.ನಂ.43ರಲ್ಲಿ ಪ.ಜಾತಿ ಮತ್ತು ಪ.ಪಂಗಡ ಸ್ಮಶಾನಕ್ಕೆ 10 ಗುಂಟೆ, ಸಾರ್ವಜನಿಕ ಸ್ಮಶಾನಕ್ಕೆ 10 ಗುಂಟೆ ಜಮೀನು 2018ರಲ್ಲಿ ಮಂಜೂರು ಮಾಡಿದೆ. 2023–24ರಲ್ಲಿ ಗ್ರಾ.ಪಂಚಾಯ್ತಿಗೆ ಕಂದಾಯ ಇಲಾಖೆಯಿಂದ ಹಸ್ತಾಂತರವಾಗಿದೆ. ಆದರೂ ಈವರೆಗೂ ಗ್ರಾ.ಪಂ. ಅಧಿಕಾರಿಗಳು ಸಾರ್ವಜನಿಕ ಸ್ಮಶಾನವನ್ನು ಅಭಿವೃದ್ಧಿ ಮೀನಾಮೇಷ ಎಣಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲು ಗ್ರಾ.ಪಂ. ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೃತ ದೇಹವಿಟ್ಟು ಪ್ರತಿಭಟನೆ: ಬೈಚಾಪುರ ಗ್ರಾಮದಲ್ಲಿ ಕಳೆದ 2018ರಲ್ಲಿ ದಲಿತ ಕುಟುಂಬ ಒಂದರಲ್ಲಿ ಸಾವಿನ ಘಟನೆ ನಡೆದಾಗ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಮೃತದೇಹವನ್ನು ಗ್ರಾ.ಪಂ. ಎದುರು ಇಟ್ಟು ಪ್ರತಿಭಟನೆ ನಡೆಸಿದರು.…

Read More