Subscribe to Updates
Get the latest creative news from FooBar about art, design and business.
- ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
- ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
- ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
- ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
- ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
Author: admin
ಬೆಂಗಳೂರು: ವಿದೇಶಿ ಪ್ರಜೆ ಸೇರಿದಂತೆ 34 ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. 24 ಪ್ರಕರಣಗಳ ಸಂಬಂಧ 34 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ 15, ರಾಜ್ಯದ 10, ಬಿಹಾರದ ನಾಲ್ವರು ಆರೋಪಿಗಳು, ಒಡಿಶಾದ ಇಬ್ಬರು, ಅಸ್ಸಾಂ ಮತ್ತು ಹರ್ಯಾಣ ಮೂಲದ ತಲಾ ಒಬ್ಬರು, ನೈಜೀರಿಯಾ ಪ್ರಜೆಯನ್ನು ಬಂಧಿಸಿ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಮರ್ಯಾದೆಯಿಂದ ಕೆಲಸ ಮಾಡಲಿ ಅಂತಾ 135 ಸ್ಥಾನ ಗೆಲ್ಲಿಸಿದ್ದಾರೆ. ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ಡಿ.ಸುಧಾಕರ್ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳುತ್ತೀರಾ? ನಿಮಗೇನಾದ್ರೂ ಮಾನಮರ್ಯಾದೆ ಇದೆಯಾ ಸಿದ್ದರಾಮಯ್ಯನವರೇ? ಅಧಿಕಾರಿಗಳಿಗೆ ಎಷ್ಟು ಗಂಟೆಯಲ್ಲಿ ನೀವು ದೂರವಾಣಿ ಕರೆ ಮಾಡಿದ್ದೀರಿ? ಆ ಅಧಿಕಾರಿಯನ್ನು ಮೊದಲು ಅಮಾನತು ಅಂತಾ ಮಾತನಾಡಿದ್ದೀರಿ. ಇದೇನಾ ನೀವು ದಲಿತರ ಪರ ಅಂತಾ ಹೇಳುವುದು? ದಲಿತರ ರಕ್ಷಣೆ ಅಂತಾ ಹೇಳುತ್ತೀರಿ, ಇದೇ ನೀವು ಮಾಡುವ ಕೆಲಸ ಎಂದು ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ. ವ್ಯವಹಾರ ಮಾಡುವಾಗ ಆ ಮಂತ್ರಿ ಯಾವ ಪಕ್ಷದಲ್ಲಿದ್ದರೋ ಗೊತ್ತಿಲ್ಲ. ಆ ಮಂತ್ರಿ ಬಿಜೆಪಿಯಲ್ಲಿದ್ದರೋ, ಕಾಂಗ್ರೆಸ್ನಲ್ಲಿ ಇದ್ದರೋ ಗೊತ್ತಿಲ್ಲ. ಇಬ್ಬರು ದಲಿತ ಮಹಿಳೆಯರ ಮೇಲೆ ಮಚ್ಚು ಹಿಡಿದು ಹೋಗಿದ್ದೀರಿ.…
ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ, ದೇವೇಗೌಡರು, ಕುಮಾರಸ್ವಾಮಿ, ಇಬ್ರಾಹಿಂ ತೀರ್ಮಾನಕ್ಕೆ ತಾನು ಬದ್ಧನಾಗಿರೋದಾಗಿ ತಿಳಿಸಿದ್ದಾರೆ. ಕೋಮುವಾದಿಗಳನ್ನು ದೂರ ಇಡಬೇಕು ಅಂತಾ ಹೇಳುತ್ತಾರೆ. ತುಮಕೂರಿನಲ್ಲಿ ಅವರ ಜೊತೆ ಸೇರಿ ದೇವೇಗೌಡರನ್ನು ಸೋಲಿಸಿದರು. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಕೇಳಿರಲಿಲ್ಲ. ದೇವೇಗೌಡರು ಮೈಸೂರು, ಮಂಡ್ಯ ಕ್ಷೇತ್ರಗಳನ್ನು ಕೇಳಿದ್ದರು. ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು ಎಂದು ರೇವಣ್ಣ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು. ದೇವೇಗೌಡರಿಗೆ ಶಕ್ತಿ ಇಲ್ಲ ಅಂತಾ ಇಂಡಿಯಾ ಮೈತ್ರಿಕೂಟ ಸಭೆಗೆ ಕರೆದಿಲ್ಲ ಎಂದು ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಈ ವೇಳೆ ಮಾತನಾಡಿದ ಅವರು, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಅವರು ತಿಳಿಸಿದರು. ಎಸ್ ಸಿ, ಎಸ್ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದ್ದಾರೆ. ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ…
ಬೆಂಗಳೂರು: ಪಕ್ಷದೊಳಗಿನ ಆಂತರಿಕ ಕಲಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಆಡಳಿತಕ್ಕೆ ಬಂದು 3 ತಿಂಗಳಲ್ಲಿ ಇಷ್ಟು ಜನವಿರೋಧಿ ಸರಕಾರವನ್ನು ಕರ್ನಾಟಕ ಮಾತ್ರವಲ್ಲದೆ ದೇಶದ ಯಾವುದೇ ರಾಜ್ಯದಲ್ಲಿ ನಾನು ಕಂಡಿಲ್ಲ ಎಂದರು. ‘ಅಂತೂ ಇಂತೂ ಕರ್ನಾಟಕದಲ್ಲಿ ಅತಿ ಶೀಘ್ರವಾಗಿ ಅವರ ಆಂತರಿಕ ಗೊಂದಲಗಳಿಂದಲೇ ಆಡಳಿತಕ್ಕೆ ಇತಿಶ್ರೀ ಆಗಲಿದೆ ಎಂಬ ಬಲವಾದ ನಂಬಿಕೆ ನನ್ನದು’ ಎಂದು ನುಡಿದರು.
ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್ ಗಳ ಮೇಲೆ ಬೆಂಗಳೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ಟರ್ಮಿನಲ್ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಬಸ್ ಚಾಲಕ ಗುಣಶೇಖರನ್ ದೂರು ದಾಖಲಿಸಿದ್ದರು. ದುಷ್ಕರ್ಮಿಗಳು ಬಸ್ಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ. ಘಟನೆ ನಡೆದಾಗ ಭಾರತ್ ಪೆಟ್ರೋಲ್ ಬಂಕ್ ಬಳಿ ಬಸ್ ಗಳು ನಿಂತಿದ್ದವು. ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಬೆಂಗಳೂರು ನಗರದಲ್ಲಿ ನಡೆದ ಖಾಸಗಿ ಸಾರಿಗೆ ಸಂಸ್ಥೆಗಳ ಬಂದ್ ಹಿಂಪಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಪ್ರತಾಪ್ ಸಿಂಹ, ಭಾನುವಾರ ಆದಿಚುಂಚನಗಿರಿ ಶಾಖಾ ಮಠಕ್ಕೆ ದೇವೇಗೌಡರು ಭೇಟಿ ನೀಡಿದ ವೇಳೆ ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಆದಿಚುಂಚನಗಿರಿ ಶ್ರೀಗಳು, ಜಿ.ಟಿ. ದೇವೇಗೌಡ ಕೂಡ ಇದ್ದರು. ಮೈಸೂರು, ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಾಬಲ್ಯ ಹೊಂದಿದ್ದು, ಈಗಿನಿಂದಲೇ ಜೆಡಿಎಸ್ ಮತ ಬ್ಯಾಂಕ್ ಗೆ ಪ್ರತಾಪ್ ಸಿಂಹ ಕೈ ಹಾಕಿದ್ದಾರೆ. ಜೆಡಿಎಸ್ ನಾಯಕರೊಂದಿಗೆ ಪ್ರತಾಪ್ ಸಿಂಹ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. “ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ” ಎಂದು ತಿಳಿಸಿದರು. ಬಿಜೆಪಿ ನಿಮ್ಮ ಮೇಲೆ ಪದೇ, ಪದೇ ಆರೋಪ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗೆ “ಅಧಿಕಾರ ಕೈ ಬಿಟ್ಟು ಹೋಗಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಉತ್ತರಿಸಿದರು.
ನಾಡಿನ ಅರಣ್ಯ ಮತ್ತು ವನ್ಯಜೀವಿಗಳ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹುತಾತ್ಮತರಿಗೆ ಇಂದು ಅರಣ್ಯ ಇಲಾಖೆ ಗೌರವ ನಮನಗಳನ್ನು ಸಲ್ಲಿಸಿತು. ಹಾಗೂ ಉಪಸ್ಥಿತ ಅತಿಥಿಗಳು ಹಾಗೂ ಮುಖ್ಯ ಅತಿಥಿಗಳು ಇಲಾಖೆಯ ಅಧಿಕಾರಿ ವರ್ಗ, ಅರಣ್ಯ ಹುತಾತ್ಮರವರಿಗೆ ಹೂ ಗುಚ್ಚ ಅರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಖಾನಾಪುರ್ ಉಪ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿಗಳು ಹಾಗೂ ಎಸಿಎಫ್ ಬೈಲ್ಹೊಂಗಲ್ ಸಾಮಾಜಿಕ , ವಲಯ ಅಧಿಕಾರಿಗಳು ಖಾನಾಪುರ್ ನಾಗರಾಜ್ ಬಾಳೆಹೊಸೂರ್ ವಲಯ ಅರಣ್ಯ ಅಧಿಕಾರಿ ಲೋಂಡಾ, ನಾಗರಾಜ್ ಭೀಮಗೋಳ ಹಾಗೂ ಅರಣ್ಯ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಇ-ಕಾಮರ್ಸ್ ಸಂಸ್ಥೆಗಳಾದಂತ ಅಮೆಜಾನ್, ಫ್ಲಿಪ್ ಕಾರ್ಟ್, ಬಿಗ್ ಬ್ಯಾಸ್ಕೆಟ್ ಹಾಗೂ ಅರೆಕಾಲಿಕ ಡಿಲಿವರಿ ನೌಕರರರಾಗಿ ಸ್ವಿಗ್ಗಿ, ಜೊಮ್ಯಾಟೋ ಸೇರಿದಂತೆ ವಿವಿಧ ವಲಯಗಳಲ್ಲಿ ಗಿರ್ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ನೌಕರರಿಗೆ ರಾಜ್ಯ ಸರ್ಕಾರ ಈಗ ಜೀವ ವಿಮಾ ಸೌಲಭ್ಯ ಹಾಗೂ ಅಪಘಾತ ಪರಿಹಾರ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿ ನೀಡಿದೆ.