Author: admin

40 ವರ್ಷದ ವ್ಯಕ್ತಿಯೊಬ್ಬ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದ ತನ್ನ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗಿ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈತನ ಆಪ್ತ ಸ್ನೇಹಿತ ನಾಗಲಾ ಖಂಗರ ಮೂಲದ ಅಶೋಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಶೋಕ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಯಮುನಾ ತೀರದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ನೆರವೇರಿಸಲಾಯಿತು. ಆನಂದ್ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜನರು ಸ್ಮಶಾನದಿಂದ ಹೊರಬರಲು ಪ್ರಾರಂಭಿಸಿದಾಗ, ಆನಂದ್ ಇದ್ದಕ್ಕಿದ್ದಂತೆ ಚಿತೆಯ ಮೇಲೆ ಹಾರಿದರು. ಇದನ್ನು ಕಂಡ ಕೆಲವರು ಆನಂದ್‌ನನ್ನು ಪೈರಿನಿಂದ ಹೊರತೆಗೆದು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ತಜ್ಞ ಚಿಕಿತ್ಸೆಗಾಗಿ ಆಗ್ರಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಆದರೆ ಸಿರ್ಸಗಂಜ್ ಸರ್ಕಲ್ ಆಫೀಸರ್ (ಸಿಒ) ಪ್ರವೀಣ್ ತಿವಾರಿ ಅವರು ಆಗ್ರಾಕ್ಕೆ ತೆರಳುವ ಮಾರ್ಗದಲ್ಲಿ ಆನಂದ್ ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಉತ್ತರ ಪಾಕಿಸ್ತಾನದಲ್ಲಿ ಹಿಮಪಾತ. ನಾಲ್ಕು ವರ್ಷದ ಬಾಲಕ ಸೇರಿದಂತೆ ಅಲೆಮಾರಿ ಬುಡಕಟ್ಟಿನ 11 ಜನರು ಸಾವನ್ನಪ್ಪಿದ್ದಾರೆ. ಪರ್ವತ ಪ್ರದೇಶದ ಆಸ್ಟರ್ ಜಿಲ್ಲೆಯ ಶಾಂಡರ್ ಟಾಪ್ ಪಾಸ್ ನಲ್ಲಿ ಈ ದುರಂತ ಸಂಭವಿಸಿದೆ. ಹಿಮಪಾತವಾದಾಗ ಗುಜ್ಜರ್ ಕುಟುಂಬವೊಂದು ಕುರಿ ಹಿಂಡಿನೊಂದಿಗೆ ಪರ್ವತ ಪ್ರದೇಶವನ್ನು ದಾಟುತ್ತಿತ್ತು. 25 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪಾಕ್ ಆಡಳಿತದ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಆಸ್ಟರ್ ಜಿಲ್ಲೆಯಿಂದ ಆಜಾದ್ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ಪಾಸ್ ಬಳಿ ಹಿಮಕುಸಿತ ಸಂಭವಿಸಿದೆ. ಸತ್ತವರಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ಕು ವರ್ಷದ ಬಾಲಕ ಸೇರಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಇದುವರೆಗೆ ಎಂಟು ಮೃತದೇಹಗಳು ಪತ್ತೆಯಾಗಿವೆ. ಒರಟಾದ ಭೂಪ್ರದೇಶದ ಕಾರಣ, ರಕ್ಷಕರು ಪ್ರದೇಶವನ್ನು ತಲುಪಲು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಪಾಕಿಸ್ತಾನಿ ಸೈನಿಕರೂ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು…

Read More

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್​​ ಪ್ರತಿಷ್ಠಾಪನೆ ನೆರವೇರಿತು. ಮಧ್ಯಾಹ್ನ 12 ಗಂಟೆ ನಂತರ ಎರಡನೇ ಹಂತದ ಕಾರ್ಯಕ್ರಮ ಆರಂಭವಾಗಲಿದೆ. ಎರಡನೇ ಹಂತದ ಕಾರ್ಯಕ್ರಮದಲ್ಲಿ ದೇಶದ ಹಲವು, ವಿವಿಧ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಎರಡನೇ ಹಂತದ ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಅಧಿಕೃತ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಎರಡು ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಇದಾದ ಬಳಿಕ ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳ ಸಂದೇಶವನ್ನು ರಾಜ್ಯಸಭೆಯ ಉಪಾಧ್ಯಕ್ಷರು ಓದಲಿದ್ದಾರೆ. ನಂತರ ಲೋಕಸಭೆ ಸ್ಪೀಕರ್ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 75ರೂ ಮುಖಬೆಲೆಯ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಾಗುತ್ತದೆ. ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮವು ಮಧ್ಯಾಹ್ನ 2:30 ರ ಸುಮಾರಿಗೆ ಸಂಪನ್ನವಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ   ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ನೂತನ ಸಚಿವರಿಗೆ ಅಧಿಕಾರ  ಪದ  ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್  ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್ ಸಿ ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್,  ಶರಣಬಸಪ್ಪ ಬಾಪೂ ಗೌಡ ದರ್ಶನಾಪುರ. ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ್  ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಾಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ…

Read More

ಬೆಂಗಳೂರು: ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಈ ಪಟ್ಟಿಯ ಬಗ್ಗೆ ಇದೀಗ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪಾಟ್ನಾ : ಮಧ್ಯಾಹ್ನದ ಬಿಸಿ ಊಟ ಸೇವಿಸಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್ ಸರ್ಕಾರಿ ಶಾಲೆಯಲ್ಲಿ ಇಂದು ನಡೆದಿದೆ. ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಕಿಚಿಡಿ ಬಡಿಸಿದರು. ಆಗ ವಿದ್ಯಾರ್ಥಿಯೊಬ್ಬನಿಗೆ ತನ್ನ ತಟ್ಟೆಯಲ್ಲಿ ಹಾವಿನ ಮರಿ ಸಿಕ್ಕಿತ್ತು ಕೂಡಲೇ ಊಟ ಮಾಡುದನ್ನು ನಿಲ್ಲಿಸಲಾಯಿತು  ಆದರೆ ಹೆಚ್ಚಿನ ಮಕ್ಕಳು ಆಗಲೇ ಊಟ ಮಾಡಿದ್ದರು ಎನ್ನಲಾಗಿದೆ. ಆಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಾಗ ಕೂಡಲೇ ಶಾಲಾ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಫೋರ್ಬ್ಸ್‌ಗಂಜ್‌ ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎಸ್‌ಡಿಎಂ, ಎಸ್‌ಡಿಒ, ಡಿಎಸ್‌ಪಿ ಸೇರಿದಂತೆ ಎಲ್ಲಾ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಅಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ವಿಷಯ ತಿಳಿಯುತಿದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಹಾಗೂ ಪೋಷಕರು ಶಾಲಾ ಸಿಬ್ಬಂದಿಯ ವಿರುದ್ಧ ವಾಗ್ದಾಳಿ ನಡೆಸಿದರು. ಮಾತ್ರವಲ್ಲದೆ ಶಾಲಾ ಮುಖ್ಯೋಪಾಧ್ಯಾಯರ…

Read More

ತುರುವೇಕೆರೆ  ಪಟ್ಟಣದ ವಿನೋಬ ನಗರದ ನಿವಾಸಿಯಾದ ಆಟೋ ಚಾಲಕ 40 ವರ್ಷದ ಖಲೀಲ್ ಬಿನ್ ಮೋಹಿಯುದ್ದೀನ್ ಸಾಬ್ ಎಂಬುವರು ಸುಮಾರು 20 ವರ್ಷಗಳಿಂದ ತುರುವೇಕೆರೆ ತಾಲೂಕಿನ ಮೂಲೆ ಮೂಲೆಗಳಲ್ಲಿ ಸಾವನ್ನಪ್ಪಿದ ಅನಾಥ ಶವಗಳಿಗೆ ಮುಕ್ತಿ ದೊರಕಿಸಿ ಅವುಗಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುತ್ತಿದ್ದಾರೆ. ಕಾಯಕವೇ ಕೈಲಾಸ ಎಂಬಂತೆ, ಎಲೆಮರೆ ಕಾಯಂತೆ, ತನ್ನ ಕೆಲಸವನ್ನು ಯಾರಿಗೂ ತೋರಿಸಿಕೊಳ್ಳದೆ, ಪ್ರಚಾರ ಪಡೆಯದೇ, ಖಲೀಲ್ ತನ್ನ ಕಾಯಕ ಮಾಡುತ್ತಿದ್ದಾರೆ. ಯಾವುದೇ ಮತ ಭೇದವಿಲ್ಲದೆ ಅನಾಥ ಶವಗಳನ್ನು ತನ್ನ ಆಟೋ ಮೂಲಕ ಸಾಗಿಸುತ್ತಾರೆ. ಶವ ಕೊಳೆತ ಸ್ಥಿತಿಯಲ್ಲಿಇದ್ದರೂ ಯಾವುದೇ ಬೇಸರವಿಲ್ಲದೆ, ಅಳುಕು ಅಂಜಿಕೆ ಇಲ್ಲದೆ ಅದನ್ನು ತಾನೇ ಎತ್ತಿಕೊಂಡು ಬಂದು ಸಾಗಿಸುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ತುರುವೇಕೆರೆ ಪೊಲೀಸ್ ಇಲಾಖೆಗೆ ಖಲೀಲ್ ತಮ್ಮದೇ ಆದ ರೀತಿಯಲ್ಲಿ ಸಹಾಯವನ್ನು ಮಾಡುತ್ತಾ ಕೊಟ್ಟಷ್ಟು ಹಣವನ್ನು ತೆಗೆದುಕೊಂಡು ಕಡು ಬಡತನದಲ್ಲಿ ಜೀವನ ನಿರ್ವಹಣೆಯನ್ನು ಮಾಡಿಕೊಂಡು ಹಾಗೂ ಈ ಮಧ್ಯದಲ್ಲಿ ಆಟೋ ಚಾಲನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುವ ಕಾಯಕವನ್ನು ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ…

Read More

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಲಾಗಿದೆ. ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ರೈತ ಪಡೆದ ಪರಿಹಾರದಿಂದ ವಂಚನೆ ಗ್ಯಾಂಗ್ ಲಕ್ಷಗಳನ್ನು ತೆಗೆದುಕೊಂಡಿದೆ. ಸರ್ಕಾರಿ ಅಧಿಕಾರಿಗಳು ಎಂಬ ನೆಪದಲ್ಲಿ ರೈತನ ಬಳಿ ತೆರಳಿದ ಗುಂಪು, ರೈತನಿಗೆ ಸುಳ್ಳು ಹೇಳಿ 60 ಲಕ್ಷ ಹಾಗೂ 15 ಲಕ್ಷ ರೂ.ಗಳ ಚೆಕ್ ತೆಗೆದುಕೊಂಡಿದೆ. ತಾನು ಮೋಸ ಹೋಗಿರುವುದು ರೈತನಿಗೆ ಆನಂತರವೇ ತಿಳಿಯಿತು. ನಂತರ ಶಾಂತಿನಗರ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಸಂಬಂಧ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬುಲೆಟ್ ರೈಲು ಯೋಜನೆಗೆ ಭೂಸ್ವಾಧೀನಪಡಿಸಿಕೊಂಡ ರೈತರಿಗೆ ಪರಿಹಾರವಾಗಿ ರೈಲ್ವೆ ಅಧಿಕಾರಿಗಳು 3.73 ಕೋಟಿ ರೂ.ನೀಡಿದ್ದರು.ಇದನ್ನು ತಿಳಿದ ಆರೋಪಿಗಳು ರೈತನನ್ನು ಭೇಟಿಯಾಗಿ ಶೇ.50ರಷ್ಟು ಪರಿಹಾರವನ್ನು ಕೂಡಲೇ ಖಾತೆಗೆ ಜಮಾ ಮಾಡುವಂತೆ ಹಾಗೂ ಇದಕ್ಕಾಗಿ ಮೊದಲು 75 ಲಕ್ಷ ರೂ.ನೀಡಬೇಕೆಂದು ಹೇಳಿ ವಂಚಿಸಿದ್ದರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ನಾಗರಿಕ ಅಶಾಂತಿ ತಾಂಡವವಾಡುತ್ತಿರುವ ಮಣಿಪುರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಜೀವನ ಮತ್ತೆ ದುಸ್ತರವಾಗಿದೆ. ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣ ತಗ್ಗಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್‌ನಿಂದ ಹಿಡಿದು ತರಕಾರಿಗಳವರೆಗೆ ಜನರು ದುಪ್ಪಟ್ಟು ಹೆಚ್ಚು ಪಾವತಿಸುತ್ತಿದ್ದಾರೆ. ಪೆಟ್ರೋಲ್, ಅಕ್ಕಿ, ಆಲೂಗಡ್ಡೆ ಮತ್ತು ಈರುಳ್ಳಿಯಂತಹ ಸರಕುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿದ್ದು, ಎರಡು ಪಟ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಸೂಪರ್ ಫೈನ್ ಅಕ್ಕಿ ಬೆಲೆ 900 ರೂ.ನಿಂದ 1,800 ರೂ.ಗೆ ಏರಿಕೆಯಾಗಿದೆ. ಆಲೂಗಡ್ಡೆ ಮತ್ತು ಈರುಳ್ಳಿ ಬೆಲೆ 20 ರಿಂದ 30 ರೂ. ಹಲವೆಡೆ ಪೆಟ್ರೋಲ್ ಗೆ 170 ರೂ.30 ಮೊಟ್ಟೆ ಇರುವ ಬಾಕ್ಸ್ ಗೆ 180ರಿಂದ 300 ರೂ. ಆಲೂಗಡ್ಡೆಯ ಬೆಲೆ ಸುಮಾರು ನೂರು ರೂಪಾಯಿ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಆಂತರಿಕ ಸಂಘರ್ಷದಿಂದ ಪ್ರಭಾವಿತವಾಗದ ಜಿಲ್ಲೆಗಳಲ್ಲಿಯೂ ಸಹ ಬೆಲೆ ಏರಿಕೆ ತೀವ್ರವಾಗಿ ತಟ್ಟಿದೆ. ತಂಬಾಕು ಉತ್ಪನ್ನಗಳ ಬೆಲೆಯೂ ದುಪ್ಪಟ್ಟಾಗಿದೆ. 18 ಆಹಾರ ಪದಾರ್ಥಗಳ ಸಗಟು ಮತ್ತು ಚಿಲ್ಲರೆ ಬೆಲೆಗಳ…

Read More

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಬೆಂಬಲಿಗರು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More