Author: admin

ಪಕ್ಷ, ಜಾತಿ, ಗಡಿಗಳ ಎಲ್ಲೆ ಮೀರಿ ರಾಜ್ಯದಲ್ಲಿ ಬೆಳೆಯುತ್ತಿರುವ ಅಪರೂಪದ ನಾಯಕಿ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳಕರ್. ಅವರ ನಡೆ, ನುಡಿ, ಚಾಣಾಕ್ಷತನ, ಅಭಿವೃದ್ಧಿ, ಎಲ್ಲರೊಂದಿಗಿನ ಸೌಹಾರ್ದಯುತ ಸಂಬಂಧಗಳನ್ನು ನೋಡಿದಾಗ ಪಕ್ಷಾತೀತವಾಗಿ, ಜಾತ್ಯತೀತವಾಗಿ, ಗಡಿ ಮೀರಿ ಎಲ್ಲರೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ನೆಚ್ಚಿಕೊಳ್ಳುತ್ತಾರೆ, ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಲಕ್ಷ್ಮಿ ಹೆಬ್ಬಾಳಕರ್ ಏಕಾ ಏಕಿ ಬೆಳೆದು ನಿಂತ ನಾಯಕಿಯಲ್ಲ. ನಾಯಕತ್ವ ಬೆಳೆಸಿಕೊಂಡಿರುವುದರ ಹಿಂದೆ ಸಾಕಷ್ಟು ಶ್ರಮವಿದೆ, ಹಿಡಿದ ಕೆಲಸ ಬಿಡದೆ ಸಾಧಿಸುವ ಛಲ ಅವರಲ್ಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಗುಣವಿದೆ. ತಮಗೆ ಅವಮಾನ ಮಾಡಿದವರಿಗೆ ಸಾಧನೆಯ ಮೂಲಕ ಉತ್ತರಿಸುವ ಜಾಣ್ಮೆ ಇದೆ. ಅನಗತ್ಯವಾಗಿ ಯಾರ ತಂಟೆಗೂ ಹೋಗದ, ಎಲ್ಲರನ್ನೂ ಗೌರವದಿಂದ ಕಾಣುವ ಅವರು ತಮ್ಮ ದಾರಿಗೆ ಅಡ್ಡ ಬರುವವರನ್ನು ಸುಮ್ಮನೆ ಬಿಡುವ ಜಾಯಮಾನದವರಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದ ಸಂದರ್ಭದಲ್ಲಿ ಹತಾಶರಾಗದೆ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಸಿದವರು, ಪಕ್ಷ ಮತ್ತೆ ಪುಟಿದೇಳುವಂತೆ ಮಾಡಿದವರು ಲಕ್ಷ್ಮಿ ಹೆಬ್ಬಾಳಕರ್. ಬಿಜೆಪಿ ಪ್ರಬಲವಾಗಿರುವ ಜಿಲ್ಲೆಯಲ್ಲಿ ಒನ್ ವುಮೆನ್…

Read More

ಬೆಂಗಳೂರು : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿಯವರು ಗಂಗಾವತಿ ಮತ ಕ್ಷೇತ್ರದಿಂದ ಪ್ರಚಂಡ ಬಹುಮತದಿಂದ ಗೆದ್ದು ಗಂಗಾವತಿಯಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗಂಗಾವತಿ ಮತ ಕ್ಷೇತ್ರದ ಪ್ರತಿ ನಾಗರಿಕರಿಗೆ ಧನ್ಯವಾದ ತಿಳಿಸುತ್ತ ಮಾತನಾಡಿರುವ ರೆಡ್ಡಿಯವರು ರಾಜಕೀಯವಾಗಿ ಪುನರಜನ್ಮ ನೀಡಿ ಗೆಲ್ಲಿಸಿ ತಂದಿರುವ ಗಂಗಾವತಿ ಜನತೆಗೆ ನಾನು ಚಿರಋಣಿಯಾಗಿರುತ್ತೇನೆ ಎಂದು ತಿಳಿಸಿದ್ದಾರೆ. ಉತ್ತರ ಕರ್ನಾಟಕದತ್ತ ಮುಖ ಮಾಡಿದ ರೆಡ್ಡಿ ಹೌದು ಉತ್ತರ ಕರ್ನಾಟಕ ಪಾಲಿಟಿಕ್ಸನತ್ತ ಮುಖ ಮಾಡಿರುವ ಜನಾರ್ಧನ ರೆಡ್ಡಿಯವರು ಉತ್ತರ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಹೆಮ್ಮರವಾಗಿ ಬೆಳೆಸುತ್ತೇನೆ ಎಂದು ತಿಳಿಸಿದ್ದಾರೆ. ಬೆಳಗಾವಿ ಮೇಲೆ ವಿಶೇಷ ಪ್ರೀತಿ ದಕ್ಷಿಣದ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿರುವ ಬೆಳಗಾವಿ ಜಿಲ್ಲೆಯ ಮೇಲೆ ರೆಡ್ಡಿಯವರು ವಿಶೇಷ ಪ್ರೀತಿ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ, ಬೆಳಗಾವಿಯಲ್ಲಿ ತಮ್ಮ ಛಾಪು ಮೂಡಿಸಲು ಸಜ್ಜಾಗಿರುವ ಜನಾರ್ಧನ ರೆಡ್ಡಿಯವರು ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೆ ಒಯ್ಯುತ್ತೇನೆ ಎಂದು ಹೇಳಿದ್ದಾರೆ. ಪ್ರವೀಣ್ ಹಿರೇಮಠ ಅವರನ್ನು ಕೊಂಡಾಡಿದ…

Read More

ಕೆಲಸ ಕೊಡಿಸುವುದಾಗಿ ಕೋಟಿಗಟ್ಟಲೆ ಸುಲಿಗೆ ಮಾಡಿದ್ದ ಬಿಜೆಪಿ ಮಹಿಳಾ ನಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ.ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಬಿಜೆಪಿ ಕಿಸಾನ್ ಮೋರ್ಚಾ ಕಾರ್ಯದರ್ಶಿ ಮೂನ್ ಇಂಗ್ಟಿಪ್ ಅವರನ್ನು ಬಂಧಿಸಲಾಗಿದೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ವಂಚನೆ ಮೂಲಕ ಚಂದ್ರು ಒಂಬತ್ತು ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕದ್ದಿದ್ದಾರೆ ಎಂಬುದು ಸಂತ್ರಸ್ತರಿಂದ ಬಂದಿರುವ ಮಾಹಿತಿಯಾಗಿದೆ ಬಿಜೆಪಿಯ ಹಿರಿಯ ನಾಯಕರೊಂದಿಗಿನ ಚಿತ್ರವನ್ನೂ ವಂಚನೆಗೆ ಬಳಸಿಕೊಂಡಿದ್ದಾರೆ.ಸರಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಕರಿಂದ ಮೂನ್ ಇಂಗ್ಟಿಪಿ ಹಣ ವಸೂಲಿ ಮಾಡಿದ್ದಾರೆ. ಮೂನ್ ಇಂಗ್ಟಿಪ್ ಅವರು ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಬಿಜೆಪಿಯ ಕಿಸಾನ್ ಮೋರ್ಚಾದ ಕಾರ್ಯದರ್ಶಿಯಾಗಿದ್ದರು. ಈ ಹುದ್ದೆಯನ್ನು ಬಳಸಿಕೊಂಡು ವಂಚನೆಯನ್ನೂ ಮಾಡಿದ್ದಾರೆ. ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಲಿರಾಮ್ ರೊಂಗ್‌ಹಾಂಗ್‌ನಿಂದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾವರೆಗೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ಅವರು ನಿಕಟವಾಗಿದ್ದಾರೆ ಎಂದು ತಪ್ಪು ಮಾಹಿತಿ ನೀಡಿ ಹಗರಣ ನಡೆಸಲಾಗಿದೆ. ಅವರ ಬಂಧನದ ನಂತರ ಪೊಲೀಸರಿಗೆ ಹಲವು ದೂರುಗಳು ಬಂದಿವೆ. ಘಟನೆ…

Read More

ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಖಮ್ಮಂ ಪಟ್ಟಣದ ಲಕ್ಕರಂ ಸರೋವರದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿ ರಾಮರಾವ್ (ಎನ್‌ಟಿಆರ್) ಪ್ರತಿಮೆ ಸ್ಥಾಪನೆಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎನ್‌ಟಿಆರ್‌ ಅವರನ್ನು ಕೃಷ್ಣನ ಪ್ರತಿಮೆಯಲ್ಲಿ ಚಿತ್ರಿಸಿರುವುದನ್ನು ವಿರೋಧಿಸಿ ಹಲವರು ಹರಿಹಾಯ್ದರು. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕೂಡ ಲಕ್ಕರಂ ಕೆರೆಯ ಮಧ್ಯದಲ್ಲಿ ಸ್ಥಾಪಿಸಲು ಅನುಮತಿ ನೀಡಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಚಳಕಣಿ ವೆಂಕಟ್ ಯಾದವ್, ಈ ಅನುಮತಿ ನೀಡಿರುವುದು ಕಾನೂನು ಉಲ್ಲಂಘನೆಯಾಗಿದೆ. ನಟ ಮತ್ತು ರಾಜಕಾರಣಿ ಎನ್‌ಟಿ ರಾಮರಾವ್ ಅವರ ಪ್ರತಿಮೆಯನ್ನು ಎನ್‌ಟಿ ರಾಮರಾವ್ ವಿಗ್ರಹ ಎರಪಟು ಸಮಿತಿಯು ಉತ್ತರ ಅಮೆರಿಕದ ತೆಲುಗು ಅಸೋಸಿಯೇಷನ್‌ನ ಸಹಾಯದಿಂದ ನಿರ್ಮಿಸಿದೆ. ಅರ್ಜಿದಾರರ ಪರ ವಕೀಲರು ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ನಿರ್ಮಿಸಲು ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿರುವ ವಿಗ್ರಹ ಸಮಿತಿ ಅನುಮತಿ ನೀಡುತ್ತದೆ. ಪ್ರತಿಮೆಯಲ್ಲಿ ಶ್ರೀಕೃಷ್ಣನ ಕಾಣಿಸಿಕೊಂಡಿದ್ದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.ಇದು ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಎನ್ ಟಿಆರ್ ಒಬ್ಬ ಮಹಾನ್ ಕಲಾವಿದ ಮತ್ತು ಎಲ್ಲರ ಪ್ರೀತಿಗೆ…

Read More

ಚಿಕ್ಕಮಗಳೂರು: ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ ನಾಯಕನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಶ್ರೀರಾಮ ಸೇನೆ ಮುಖಂಡ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬುವವರು ಯುಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಕೋಮು ದ್ವೇಷ ಹಾಗೂ ಜನಾಂಗದ ನೋವಿಗೆ ಪ್ರೀತೇಶ್ ಕಾರಣರಾಗಿದ್ದಾರೆ. ಈ ರೀತಿ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಕ್ಷದ ಐಟಿ ಸೆಲ್‍ನ ಜಿಲ್ಲಾ ಕಾರ್ಯದರ್ಶಿ ಎಂಎಲ್‍ಎ ಮಂಜು ಎಂಬುವವರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…

Read More

ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ. ಇದು 80% ಪರ್ಸೆಂಟ್ ಪಡೆಯುವ ಸರ್ಕಾರ. ನಮ್ಮ ವಿರುದ್ಧ ಕಾಂಗ್ರೆಸ್ನವರು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ತನಿಖೆ ನಡೆಸಲಿ. ಹಿಂದಿನ ಎಲ್ಲ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಕುಣಿಗಲ್ ತಾಲೂಕು ಕೊತ್ತಗೆರೆ ಹೋಬಳಿಯ ಕುಣಿಗಲ್ ವಡ್ಡರಕುಪ್ಪೆ ಗ್ರಾಮದ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ 5 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರಿನ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲ ಎಫ್ ಟಿ ಎಸ್ ಸಿ ತೀರ್ಪು ನೀಡಿದೆ. ದಿನಾಂಕ 20—11—2021ರಂದು ಶಿಕ್ಷಕ ದಯಾನಂದ್ ಎಂಬಾತ  ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುವ ಉದ್ದೇಶದಿಂದ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬಳಿಕ ಈ ವಿಚಾರ ಮನೆಯವರಿಗೆ ಹೇಳದಂತೆ ಪ್ರಾಣ ಬೆದರಿಕೆ ಕೂಡ ಹಾಕಿದ್ದ ಎಂದು ಕುಣಿಗಲ್ ಠಾಣಾ ಪೊಲೀಸ್ ತನಿಖಾಧಿಕಾರಿಗಳಾದ ಅಶೋಕ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ದಯಾನಂದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಅಶ್ಲೀಲ ಚಿತ್ರ ತೋರಿಸಿರುವುದು ಸಾಬೀತಾದ ಕಾರಣ ಪೋಕ್ಸೋ ಕಾಯ್ದೆಯಡಿಯಲ್ಲಿ 5…

Read More

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ತಡರಾತ್ರಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವನ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು…

Read More

ಲಂಡನ್ ನಲ್ಲಿ ನಡೆದ ಹರಾಜಿನಲ್ಲಿ ಟಿಪ್ಪು ಸುಲ್ತಾನ್ ಖಡ್ಗ 140 ಕೋಟಿ ರೂ ಹರಾಜನ್ನು ಆಯೋಜಿಸಿದ ಬೊನ್ಹಾಮ್ಸ್, ಕತ್ತಿಯು ಅದರ ಅಂದಾಜಿನ ಏಳು ಪಟ್ಟು ಹೆಚ್ಚು ಮಾರಾಟವಾಗಿದೆ ಎಂದು ಹೇಳಿದರು. ಈ ಖಡ್ಗವು ಟಿಪ್ಪು ಸುಲ್ತಾನನ ಶಸ್ತ್ರಾಗಾರದಲ್ಲಿ ಅತ್ಯಮೂಲ್ಯವಾದ ಆಯುಧವಾಗಿತ್ತು. ಖಡ್ಗಕ್ಕೆ ಟಿಪ್ಪುವಿನ ನಿಕಟತೆ ಮತ್ತು ಅದರ ತಯಾರಿಕೆಯ ಕೌಶಲ್ಯವು ಅದರ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಹರಾಜುದಾರ ಆಲಿವರ್ ವೈಟ್ ವಿವರಿಸಿದರು. ಟಿಪ್ಪು ಸುಲ್ತಾನ್ ಅರಮನೆಯ ಖಾಸಗಿ ಕೊಠಡಿಯಿಂದ ಖಡ್ಗವನ್ನು ವಶಪಡಿಸಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಅವರ ಆಯುಧಗಳಲ್ಲಿ ಈ ಖಡ್ಗವೇ ಅಚ್ಚುಮೆಚ್ಚಿನ ಅಸ್ತ್ರವಾಗಿತ್ತು ಎಂದು ಸಂಘಟಕರು ವಿವರಿಸಿದರು. 18ನೇ ಶತಮಾನದ ಉತ್ತರಾರ್ಧದಲ್ಲಿ ಅವರು ನಡೆಸಿದ ಅಭಿಯಾನಗಳೇ ಟಿಪ್ಪುವನ್ನು ಪ್ರಸಿದ್ಧಿಗೊಳಿಸಿದವು. 1775 ಮತ್ತು 1779 ರ ನಡುವೆ ಟಿಪ್ಪು ಮರಾಠ ದೊರೆಗಳೊಂದಿಗೆ ಹೋರಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More