Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಉಮ್ರಾ ಮಾಡಲು ಬಂದಿದ್ದ ಸಿಂಗಾಪುರದ ಮಹಿಳೆಯೊಬ್ಬರು ಮೆಕ್ಕಾದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಸಾಮಾನ್ಯವಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸಿಂಗಾಪುರದ 30 ವರ್ಷದ ಮಹಿಳೆಯೊಬ್ಬರು ಹರಮ್ ಮಸೀದಿಯ ತುರ್ತು ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಗೆ ಮಸ್ಜಿದ್-ಉಲ್-ಹರಾಮ್‌ನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಹರಮ್ ಎಮರ್ಜೆನ್ಸಿ ಸೆಂಟರ್ ನ ವೈದ್ಯಕೀಯ ತಂಡ ಅವರಿಗೆ ಅಗತ್ಯ ಆರೈಕೆಯನ್ನು ಒದಗಿಸಿದೆ. ಇದಾದ ಕೆಲವೇ ದಿನಗಳಲ್ಲಿ ಮಹಿಳೆ ಸಾಮಾನ್ಯ ಹೆರಿಗೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಹೆಚ್ಚಿನ ಆರೈಕೆಗಾಗಿ ತಾಯಿ ಮತ್ತು ಮಗುವನ್ನು ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ತಾಯಿ ಮತ್ತು ಮಗುವಿಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe…
ಅತಿ ದೊಡ್ಡ ಮೂಗಿಗೆ ಗಿನ್ನಿಸ್ ದಾಖಲೆ ಬರೆದಿರುವ ಮೆಹ್ಮೆತ್ ಓಝುರೆಕ್ ನಿಧನರಾಗಿದ್ದಾರೆ. ಅವರ ವಯಸ್ಸು 75 ವರ್ಷ. ಸ್ಥಳೀಯ ಟರ್ಕಿ. ಓಝುರೆಕ್ ಸಾವಿನ ಸುದ್ದಿಯನ್ನು ಗಿನ್ನೆಸ್ ವಿಶ್ವ ದಾಖಲೆಗಳು ಬಿಡುಗಡೆ ಮಾಡಿದೆ. ಹೃದಯಾಘಾತದಿಂದ ಸಾವು ಸಂಭವಿಸಿದೆ. ಒಸುರೆಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಮೆಹ್ಮೆತ್ ನ ಮೂಗಿನ ಉದ್ದ 8.8 ಸೆಂ.ಮೀ.ಶಾಲೆಯಲ್ಲಿ ಓದುವಾಗ, ಸ್ನೇಹಿತರು ಮತ್ತು ಸಹಪಾಠಿಗಳು ಅವರನ್ನು ನಿರಂತರವಾಗಿ ಗೇಲಿ ಮಾಡುತ್ತಿದ್ದರು. ಮೆಹ್ಮತ್ ಅವರ ಮೂಗು ಕಾರಣ. ಮೊದಮೊದಲು ಈ ಬಗ್ಗೆ ಚಿಂತಾಕ್ರಾಂತನಾಗಿದ್ದ ಮೆಹ್ಮತ್ ನಂತರದಲ್ಲಿ ಉದ್ದನೆಯ ಮೂಗು ಹೊಂದಿದ್ದೇ ವರವಾಗಿ ಕಂಡೆ ಎಂದು ಮೆಹ್ಮತ್ ಹೇಳಿಕೊಂಡಿದ್ದಾನೆ.ಸಾಮಾನ್ಯ ಜನರಿಗಿಂತ ಉತ್ತಮ ವಾಸನೆ ಮತ್ತು ಮೂಗಿನಿಂದ ಬಲೂನ್ ಊದುವ ಸಾಮರ್ಥ್ಯ ತನಗಿದೆ ಎಂದು ಮೆಹ್ಮತ್ ಹೇಳಿಕೊಂಡಿದ್ದಾರೆ. ದೊಡ್ಡ ಮೂಗುಗಳು ಅವರ ಕುಟುಂಬದಲ್ಲಿ ಆನುವಂಶಿಕವಾಗಿವೆ. ತಂದೆ ಮತ್ತು ಚಿಕ್ಕಪ್ಪನಿಗೂ ಈ ಮೂಗು ಇದೆ. ಆದರೆ ಅವರ ಮೂಗು ಅವುಗಳಲ್ಲಿ ದೊಡ್ಡದಾಗಿದೆ. ಆದರೆ ಮೆಹ್ಮೆತ್ ಜಗತ್ತಿನಲ್ಲಿ ವಾಸಿಸುವ ದೊಡ್ಡ ಮೂಗುದಾರನಲ್ಲ. 18 ನೇ…
ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಟೀಕಿಸಿದ ಕುಮಾರಸ್ವಾಮಿ, ಸಂಸತ್ ಭವನ ಒಂದು ಪಕ್ಷಕ್ಕೆ, ವ್ಯಕ್ತಿಗೆ ಸೀಮಿತವಲ್ಲ. ದೇಶದ ತೆರಿಗೆ ಹಣದಿಂದ ಕಟ್ಟಿರುವ ಭವನ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಧ್ವನಿ ಎತ್ತಿದ್ದಾರೆ. ರಾಷ್ಟ್ರಪತಿಯಾಗಿರುವ ಆದಿವಾಸಿ ಮಹಿಳೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಧ್ವನಿ ಎತ್ತಿದೆ. ಯಾವುದೇ ಭವನವನ್ನು ಉದ್ಘಾಟನೆ ಮಾಡಬೇಕಾದಾಗ ರಾಷ್ಟ್ರಪತಿ, ರಾಜ್ಯಪಾಲರನ್ನು ಕರೆದ ಉದಾಹರಣೆ ಇಲ್ಲ. ಛತ್ತೀಸ್ಗಢ ವಿಧಾನಸಭೆ ಅಡಿಗಲ್ಲಿಗೆ ಸೋನಿಯಾಗಾಂಧಿ, ರಾಹುಲ್ ಗಾಂಧಿಯನ್ನು ಕರೆದಿದ್ದರೂ. ರಾಜ್ಯಪಾಲರನ್ನು ಕರೆಸಿ ಅಡಿಗಲ್ಲು ಹಾಕಿಸಿರಲಿಲ್ಲ. ಕರ್ನಾಟಕದ ವಿಕಾಸಸೌಧವನ್ನು ಅಂದಿನ ಮುಖ್ಯಮಂತ್ರಿ ಉದ್ಘಾಟನೆ ಮಾಡಿದ್ದರು. ಕಾಂಗ್ರೆಸ್ ಪಕ್ಷ ಈಗ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ನಾನು ಮೂರನೇ ಬಾರಿ ಶಾಸಕನಾಗಿ ಆಯ್ಕೆ ಮಾಡಿರುವ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬಂತೆ ನಾನು ಶಾಸಕರ ನಡೆ ಜನರ ಮನೆಯ ಬಾಗಿಲಿಗೆ ಎಂಬ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇನೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ ಹೇಳಿದರು. ತಿಪಟೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸದೆ ನಿರ್ಲಕ್ಷ್ಯತನವನ್ನು ಬದಿಗಿಟ್ಟು ಕೆಲಸ ಮಾಡಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಎರಡು ಬಾರಿಶಾಸಕನಾಗಿ ಉತ್ತಮ ಆಡಳಿತ ನೀಡಿರುವ ನನಗೆ ಮತ್ತೊಂದು ಬಾರಿ ಜನತೆ ಆಶೀರ್ವದಿಸಿದ್ದಾರೆ. ಜನರ ಮನೆ ಬಾಗಿಲಿಗೆ ಆಡಳಿತ ನೀಡಬೇಕೆಂಬುದು ಕನಸು ಕಂಡಿರುವ ನನಗೆ, ನಿಮ್ಮೆಲ್ಲರ ಸಹಕಾರ ಬೇಕಿದೆ. ಸಾರ್ವಜನಿಕರು , ರೈತರು ತಮ್ಮ ಕೆಲಸ ಕಾರ್ಯಗಳಿಗೆ ಅಧಿಕಾರಿಗಳ ಬಳಿ ಬಂದಾಗ ಅವರದೊಂದಿಗೆ ಸೌಜನ್ಯದಿಂದ ವರ್ತಿಸಿ ಎಂದ ಅವರು, ಸಾರ್ವಜನಿಕರ ದೂರು ದೂರುಗಳು ಬಂದರೆ ನಾನು ಸುಮ್ಮನೆ ಇರುವ ವ್ಯಕ್ತಿಯಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಭೆಯಲ್ಲಿ…
ತುರುವೇಕೆರೆ: ಜಾತ್ಯತೀತ ಜನತಾದಳ ತುರುವೇಕೆರೆ ವಿಧಾನಸಭಾ ಕ್ಷೇತ್ರದ ನಗರ ಯುವ ಘಟಕದ ಹಿಂದುಳಿದ ವರ್ಗದ ಅಧ್ಯಕ್ಷರನ್ನಾಗಿ ಲೋಕೇಶ್ ಎಂ.ಎಚ್. ಬಿನ್. ಹುಚ್ಚೇಗೌಡ ಅವರನ್ನು ಮುಂದಿನ ಆದೇಶದವರೆಗೂ ತುರುವೇಕೆರೆ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ಆಯ್ಕೆ ಮಾಡಿ ಆದೇಶ ಹೊರಡಿಸಿ ಅದರ ಪ್ರತಿಯನ್ನು ನೀಡಿ ಅಭಿನಂದನೆ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೀದರ್: ಮಹರಾಷ್ಟ್ರದ ಸಾರಿಗೆ ಬಸ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಗಾಂಜಾಕೋರರನ್ನು ಬಂಧಿಸಿ ಸುಮಾರು 10 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಧುಕರ್ ಹಾಗೂ ಅಮರ್ ಬಂಧಿತ ಆರೋಪಿಗಳು. ಆರೋಪಿಗಳು ತೆಲಂಗಾಣದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಬೀದರ್ – ತೆಲಂಗಾಣ ಗಡಿಯಲ್ಲಿ ಬಸ್ ತಪಾಸಣೆ ಮಾಡಿದ್ದಾರೆ. ಈ ವೇಳೆ ತಲಾ 2 ಕೆಜಿಯ 5 ಪ್ಯಾಕೆಟ್ ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗಾಂಜಾಕೋರರನ್ನು ಬಂಧಿಸಿದ ಬೀದರ್ ಅಬಕಾರಿ ಪೊಲೀಸರು 10 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರು: ಪೂರ್ಣ ಪ್ರಮಾಣದ ಕ್ಯಾಬಿನೆಟ್ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದ್ದು ಶನಿವಾರ 24 ಸಂಭಾವ್ಯ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಬೆಳಗ್ಗೆ 11:45ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ರಾಜ್ಯಪಾಲರ ಕಚೇರಿಯಿಂದ ಸಿಎಂ ಕಚೇರಿ ಸಮಯ ಪಡೆದಿದೆ. ಮುಂದಿನ ಎರಡೂವರೆ ವರ್ಷ ಯಾವುದೇ ತಕರಾರುಗಳಿಲ್ಲದೇ ಸರ್ಕಾರ ನಡೆಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ. ಹೆಚ್.ಕೆ.ಪಾಟೀಲ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಕೆ.ವೆಂಕಟೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಇನ್ನು, ವಿಧಾನಸಭೆ ಉಪಸಭಾಪತಿ ಸ್ಥಾನ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ಉರಿಗೌಡರು ನಂಜೇಗೌಡರು ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಿದ್ದರಾಮಯ್ಯವಿರುದ್ಧ ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿಕೆಗೆ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಇದ್ದ ಟಿಪ್ಪು ಪ್ರೇಮವನ್ನು ಖಂಡಿಸಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಚಿಂತನೆಯಲ್ಲಿ ಹೇಳಿದ್ದೆ. ವೈಯಕ್ತಿಕವಾಗಿ ನನಗೆ ಸಿದ್ದರಾಮಯ್ಯ ಮೇಲೆ ಗೌರವ ಇದೆ. ಸೈದ್ದಾಂತಿಕವಾಗಿ ನಮಗೂ ಅವರಿಗೂ ಬಹಳ ವ್ಯತ್ಯಾಸ ಇದೆ. ನಾನು ಸದನದಲ್ಲಿ ಕೂಡಾ ಸ್ಪಷ್ಟವಾಗಿ ಹೇಳಿಕೆ ಕೊಟ್ಟಿದ್ದೇನೆ ಎಂದರು. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಯಾರಿಗೂ ಹಾನಿ ಮಾಡಿಲ್ಲ. ಸಿದ್ದರಾಮಯ್ಯ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿಯೂ ಹೇಳಿದ್ದೆ. ಇದ್ದಕ್ಕಿದ್ದಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನನ್ನ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಿಎಂ ಮತ್ತು ಡಿಸಿಎಂ ಸಭೆ ತೆಗೆದುಕೊಂಡು ಪೊಲೀಸರಿಗೆ ಯಾಕೆ ಕೇಸ್ ದಾಖಲು ಮಾಡಿಲ್ಲ ಎಂದು ಕೇಳಿದ್ದಾರೆ. ಅದನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದಾರೆ. ಅವರ ಗ್ಯಾರಂಟಿ ಅನುಷ್ಠಾನ ಮಾಡುವುದು ಬಿಟ್ಟು, ಸಮಯವನ್ನು ದ್ವೇಷದ ರಾಜಕಾರಣಕ್ಕೆ…
ಬೆಂಗಳೂರು: ಮೇ 28 ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲು ನಿರ್ಧರಿಸಿದ್ದಾರೆ. ಗುರುವಾರ ಜೆಡಿಎಸ್ ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ. ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣದೆರಡು ಕಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA