Subscribe to Updates
Get the latest creative news from FooBar about art, design and business.
- ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
- ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
- ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
- ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
- ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
Author: admin
ಕರ್ತವ್ಯಲೋಪ, ದುರ್ನಡತೆಗೆ ತೋರಿದ ಹಿನ್ನೆಲೆ ಕಗ್ಗಲಿಪುರ ಪೊಲೀಸ್ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ DGP ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ವಿಜಯ್ ಕುಮಾರ್ ಅಧಿಕಾರ ದುರ್ಬಳಕೆ ಮಾಡಿ ಉದ್ಧಟತನ ತೋರುತ್ತಿದ್ದರು. ಇವರ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿತ್ತು, ದೂರು ಹಿನ್ನೆಲೆ ವಿಚಾರಣೆಗೆ ಆದೇಶಿಸಲಾಗಿತ್ತು. ವಿಚಾರಣೆಯಲ್ಲಿ ಕರ್ತವ್ಯಲೋಪ, ಅಶಿಸ್ತು ಸಾಬೀತಾಗಿದ್ದು, ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಮೈತ್ರಿ ಪಕ್ಷಗಳ ವೈಯಕ್ತಿಕ ವಿಚಾರ. ಅವರು ಏನೇ ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡರೂ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಂಸದ ಡಿ. ಕೆ. ಸುರೇಶ್ ಹೇಳಿದರು. ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದೆ. ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಜಾತ್ಯತೀತ ತತ್ವದ ಮೇಲೆ ಆಡಳಿತ ಮಾಡುತ್ತಿದೆ ಎಂದರು. ಯಾರು ಹೊಂದಾಣಿಕೆ ಮಾಡಿಕೊಂಡರೂ ನಮ್ಮ ಸಿದ್ಧಾಂತದ ಮೇಲೆ ನಾವು ಹೋರಾಟ ಮಾಡುತ್ತೇವೆ. ನಮ್ಮ ಒಕ್ಕೂಟ ವ್ಯವಸ್ಥೆ ಬಲಪಡಿಸಲು ಹೋರಾಟ ಮಾಡುತ್ತೇವೆ ಎಂದರು.
ಬಿಜೆಪಿ ನಾಯಕರು ನನ್ನ ಮೇಲೆ ನಂಬಿಕೆ, ಗೌರವ, ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಹೀಗಾಗಿಯೇ, ನಾನು ದೆಹಲಿಗೆ ಹೋದಾಗ ನನ್ನನ್ನು ಬಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಮಾತುಕತೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮೈತ್ರಿಯ ಬಗ್ಗೆ ಮಾತುಕತೆ ಆಡಿರುವ ಅವರು, ಬಿಜೆಪಿ ಹೈಕಮಾಂಡ್ ನಾಯಕರು ನನಗೆ ಗೌರವ ಕೊಟ್ಟಿದ್ದಾರೆ. ಅದನ್ನು ನಾನು ಉಳಿಸಿಕೊಳ್ಳಬೇಕು. ಹೀಗಾಗಿ, ಮೈತ್ರಿ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ನಾನೇ ಟೊಂಕ ಕಟ್ಟಿ ನಿಲ್ಲುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ಎದ್ದು ನಿಂತು ನಿಲ್ಲಲು ಆಗದೇ ಹೋದ್ರೂ ವೀಲ್ ಚೇರ್ ನಲ್ಲಿ ಕುಳಿತು ಪ್ರಚಾರ ಮಾಡುತ್ತೇನೆ. ನನ್ನ ಪಕ್ಷವನ್ನು ಉಳಿಸಿಕೊಳ್ಳುತ್ತೇನೆ. ನನ್ನನ್ನು ನಂಬಿರುವ ಕಾರ್ಯಕರ್ತರನ್ನು ನಾನು ಕೈ ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡ, ಪಕ್ಷದ ಕಾರ್ಯಕರ್ತರಿಗೆ ಈ ಮಾತನ್ನು ಹೇಳಿದ್ದಾರೆ.
ಯಡಿಯೂರಪ್ಪರಿಗೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಮಾತನ್ನು ಆಡದಂತೆ ಬಿಜೆಪಿ ಹೈಕಮಾಂಡ್ ನಾಯಕರು ಖಡಕ್ ಸೂಚನೆ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯನ್ನು ನಾವೇ ನಿಗಾವಹಿಸಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿಯ ಬಗ್ಗೆ ತುಟಿ ಬಿಚ್ಚಬೇಡಿ ಎಂದಿದ್ದಾರೆ. ಮೈತ್ರಿ ಬಗ್ಗೆ ನಾವೇ ತಿಳಿಸುತ್ತೇವೆ. ರಾಜ್ಯದಲ್ಲಿ ಮೈತ್ರಿ ನಿಶ್ಚಿತ. ಆದ್ರೆ, ಅದನ್ನು ನಿರ್ಧರಿಸುವುದು ನಾವೇ. ನೀವು ಮೈತ್ರಿ ಬಗ್ಗೆ ಮಾತನ್ನಾಡಬೇಡಿ ಎಂದು ಖಡಕ್ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ನಾಯಕರು ರವಾನೆ ಮಾಡಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ. ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣ ತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ಗೆ ಒಲಾ ಚಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಲಾ ಜೋನ್ ಗೆ ಟ್ಯಾಕ್ಸಿಗಳು ಬಂದಿಲ್ಲ. ಇನ್ನು ಟ್ಯಾಕ್ಸಿಗಳಿಗಾಗಿ ಜನರು ಕಾದು ಕುಳಿತಿದ್ದಾರೆ. ಬೆರಳಿಕೆಯಷ್ಟು ಟ್ಯಾಕ್ಸಿ ಚಾಲಕರು ಮಾತ್ರ ಆಗಮಿಸಿದ್ದಾರೆ. ಕೆಎಸ್ಟಿಡಿಸಿ ಟ್ಯಾಕ್ಸಿ ಓಡಾಟ ಹಿನ್ನಲೆಯಲ್ಲಿ ಕಾರ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಏರ್ಪೋರ್ಟ್ ರಸ್ತೆಯ…
ನಿಪ್ಪಾಣಿ: ಸಮಾಜದ ಯಾವುದೇ ಕೆಲಸದಲ್ಲಿ ನಾನು ಸಮಾಜದ ಮಗಳಾಗಿ ನಿರಂತರ ಇರುತ್ತೇನೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸ್ವಾಮಿಗಳ ಅಪೇಕ್ಷೆಯಂತೆ ಸಮಾಜ ಮತ್ತು ಸರಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಮಂಗಳವಾರ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಗ್ರವಾಗಿ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಭಾನುವಾರ 2 ಎ ಮೀಸಲಾತಿ ಸಂಬಂಧ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಮೀಸಲಾತಿ ಸಂಬಂಧ ಮೊದಲ ಹೋರಾಟದಿಂದ ಈಗ 6ನೇ ಹಂತದ ಹೋರಾಟದವರೆಗೂ ನಾನು ಪಾಲ್ಗೊಂಡಿದ್ದೇನೆ. ಹಾಗಾಗಿ ಈ ವಿಷಯದ ಕುರಿತು ನನಗೆ ಸಂಪೂರ್ಣಅರಿವಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ಏಕೆ ಅಗತ್ಯ ಎನ್ನುವ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಗೆ ಮಾಡಿಕೊಡುತ್ತೇನೆ ಎಂದು ಅರು ಭರವಸೆ ನೀಡಿದರು. ಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಚನ್ನಮ್ಮ ಎಂದು ಕರೆಯುತ್ತಾರೆ. ಆದರೆ ನಾನು ಚನ್ನಮ್ಮನ…
ನವದೆಹಲಿ: ಸೂರ್ಯನ ಅಧ್ಯಯನಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪತ್ರಿಕಾ ರಂಗದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ನಾಡಿನ ಹೆಸರಾಂತ ಪತ್ರಿಕೆಗಳಾದ ಕನ್ನಡಪ್ರಭ, ವಿಜಯವಾಣಿ , ವಿಜಯ ಕರ್ನಾಟಕ, ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ರಾಗಿರುವ ಇವರು ಪ್ರಗತಿ ವಾಹಿನಿ ಸುದ್ದಿ ಸಂಸ್ಥೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮೂಲತಃ ಶಿರಸಿ ತಾಲೂಕಿನ ಹೆಗಡೆಕಟ್ ಕಲ್ಮನಿ ಮೂಲದವರಾಗಿದ್ದಾರೆ. ಇವರು ಈಗ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಣಿಪುರದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಗೆ ಕೇಂದ್ರ ಸೇನೆಯೇ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್ ನಲ್ಲಿ ನಡೆದ ಗುಂಡಿನ ದಾಳಿಗೆ ಕೇಂದ್ರ ಪಡೆಗಳ ಪ್ರಚೋದನಕಾರಿ ಕ್ರಮವೇ ಕಾರಣ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಹ ನಾಗರಿಕರ ವಿರುದ್ಧ ಸೇನೆಯ ಅನಗತ್ಯ ಕ್ರಮಗಳನ್ನು ಖಂಡಿಸಿದರು. ಪಲ್ಲೇಲಿಯಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹೊಸ ದಾಳಿಯ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ಕೇಂದ್ರ ಸೇನೆಯ ವಿರುದ್ಧ ತೀವ್ರ ಟೀಕೆಗೆ ಗುರಿಯಾಗಿದೆ. ಶನಿವಾರ ಸಂಜೆ ರಾಜಧಾನಿ ಇಂಫಾಲದಲ್ಲಿ ಸಭೆ ನಡೆಯಿತು. ನಾಗರಿಕರ ವಿರುದ್ಧ ಕೇಂದ್ರ ಭದ್ರತಾ ಪಡೆಗಳ ಪ್ರಚೋದನಕಾರಿ ಕ್ರಮಗಳನ್ನು ರಾಜ್ಯ ಸರ್ಕಾರ ಖಂಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯಡಿ ‘ಡಿಸ್ಟರ್ಬ್ಡ್ ಏರಿಯಾ’…
ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ಅವರು ಭೇಟಿ ನೀಡಿದರು. ಅಕ್ಷರಧಾಮದಲ್ಲಿ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅತಿಥಿಗಳನ್ನು ಸ್ವಾಗತಿಸಿದರು. ಆತಿಥ್ಯದ ಸಂಕೇತವಾಗಿ ರುದ್ರಾಕ್ಷಿ, ಭಗವದ್ಗೀತೆಯ ಪ್ರತಿ ಮತ್ತು ಹನುಮಾನ್ ಚಾಲೀಸಾ ನೀಡಿ ಗೌರವಿಸಲಾಯಿತು. ರಿಷಿ ಸುನಕ್ ದಂಪತಿ, ದೇವಸ್ಥಾನದಲ್ಲಿ ಆರತಿ ಮಾಡಿದರು. ಅಕ್ಷರಧಾಮದ ಸಂತರನ್ನು ಭೇಟಿ ಮಾಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.